Mysore
ಅಧಿಕೃತ ಆ್ಯಪ್ ಸ್ಟೋರ್‌ಗಳಿಂದ ಮಾತ್ರ ಆ್ಯಪ್‌ಗಳನ್ನು ಡೌನ್ಲೋಡ್ ಮಾಡಿಕೊಳ್ಳಿ: ಕ್ರೈಂ ಇನ್ಸ್‌ಪೆಕ್ಟರ್ ನಂದೀಶ್ ಕುಮಾರ್
ಮೈಸೂರು: ಕೃತಕ ಬುದ್ಧಿಮತ್ತೆ ಜೀವನವನ್ನು ಹೆಚ್ಚು ಚತುರ, ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿಯಾಗಿಸುವ ಯುಗದಲ್ಲಿ ನಾವಿದ್ದೇವೆ. ಅದು ಮೋಸವನ್ನೂ ಹಿಂದಿನಿಗಿಂತ ಹೆಚ್ಚು ನಂಬಿಕೆ ಮೂಡಿಸುವಂತೆ ಮಾಡಬಹುದು ಎಂದು ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ನಂದೀಶ್ ಕುಮಾರ್ ಅವರು ಹೇಳಿದರು.
ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಇಂಟರ್ನೆಟ್ ದಿನ ಸ್ಮಾರ್ಟ್ ತಂತ್ರಜ್ಞಾನ, ಸುರಕ್ಷಿತ ಆಯ್ಕೆಗಳು, Al ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯನ್ನು ಅನ್ವೇಷಿಸುವುದರ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದರು.
ಇನ್ಸ್ಟಾಗ್ರಾಮ್, ಫೇಸ್ ಬುಕ್ ಅಂತಹ ಸೋಶಿಯಲ್ ಮೀಡಿಯಾ ಫ್ಲಾಟರ್ಮ್ಸ್‌ನಲ್ಲಿ ಕೂಡ ಅತಿ ಹೆಚ್ಚು ಜನರು ಮೋಸ ಹೋಗುತ್ತಿದ್ದಾರೆ. ಆದ್ದರಿಂದ ಜನರಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಸೈಬರ್ ಕ್ರೈಂ ಬಗ್ಗೆ ಶಾಲಾ ಮಟ್ಟದಿಂದಲೂ ಸೋಷಿಯಲ್ ಮೀಡಿಯಾ ಎಐನ ಬಗ್ಗೆ ಮಾಹಿತಿಯನ್ನು ತಿಳಿಸಬೇಕು ಎಂದು ಅಭಿಪ್ರಾಯ ಪಟ್ಟರು.

ಸೋಶಿಲ್ ಮೀಡಿಯಾ ಫ್ಲಾಟರ್ಮ್ಸ್‌ನಲ್ಲಿ ಪರ್ಸನಲ್ ವಿಷಯಗಳನ್ನು ಹಂಚಿಕೊಳ್ಳಬಾರದು, ಎಐ ನಿಂದ ಇನ್ಸ್ಟಾಗ್ರಾಮ್ ನಲ್ಲಿ ಬರುವ ರೀಲ್ಸ್ ಗಳ ಮೂಲಕ ಲಿಂಕ್ ಗಳನ್ನು ಅತಿ ಹೆಚ್ಚು ಫಾರ್ ವರ್ಡ್ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಜಾಸ್ತಿ ಆಗುತ್ತಿದೆ ಎಂದು ಹೇಳಿದರು.
ಪ್ಲೇಯಸ್ಟೋರ್ ಮತ್ತು ಆಪಲ್ ಸ್ಟೋರ್ ಮೂಲಕ ಆಪ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಬೇರೆ ಇನ್ಯಾವುದೇ ಅಪ್ಲಿಕೇಶನ್ ಗಳಲ್ಲಿ ಅಪ್ ಡೌನ್ಲೋಡ್ ಮಾಡಬಾರದು ಎಂದು ತಿಳಿಸಿದರು.

ದೇಶದಲ್ಲಿ ಕಡಿಮೆ ಸೈಬರ್ ಕ್ರೈಂ ಅಪರಾಧದಲ್ಲಿ ತಮಿಳುನಾಡು 1 ಸ್ಥಾನದಲ್ಲಿದೆ. ಕರ್ನಾಟಕ 5 ನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ 48 ಕೋಟಿ ವಂಚನೆಯಾಗಿದೆ, ಆದರಿಂದ ಯಾವುದೇ OTP ಅಥವಾ ರಹಸ್ಯ ಮಾಹಿತಿಯನ್ನು ಎಂದಿಗೂ ಹಂಚಿಕೊಳ್ಳಬಾರದು. ಆನ್‌ಲೈನ್‌ನಲ್ಲಿ ಅತಿಯಾದ ಹಂಚಿಕೆಯನ್ನು ತಪ್ಪಿಸುವುದು, ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಗೌಪ್ಯತಾ ಸೆಟ್ಟಿಂಗ್ಗಳನ್ನು ಬಳಸಬೇಕು ಎಂದು ಸೂಚನೆ ನೀಡಿದರು.

ಸಹಾಯಕ ಪ್ರಧ್ಯಾಪಕಿ ಶಿಲ್ಪಾ ಮಾತನಾಡಿ, ಇಂಟರ್‌ನೆಟ್ ಮತ್ತು ಅದರ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯ ಬಗ್ಗೆ ಬಳಕೆದಾರರನ್ನು ಜಾಗೃತಗೊಳಿಸಬೇಕು ಎಂದರು.
ಸೈಬರ್ ನೈರ್ಮಲ್ಯಕ್ಕಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸಿ ಪ್ರಮುಖ ಸೈಬರ್ ಬೆದರಿಕೆಗಳು ಮತ್ತು ತಗ್ಗಿಸುವಿಕೆ ತಂತ್ರಗಳ ಬಗ್ಗೆ ಬಳಕೆದಾರರಿಗೆ ಶಿಕ್ಷಣ ನೀಡಬೇಕು ಎಂದು ತಿಳಿದರು.
ಪ್ರಮುಖ ಕೈಗಾರಿಕಾ ಸಂಶೋಧನಾ ಸಂಸ್ಥೆಯ ಅಧ್ಯಯನದ ಪ್ರಕಾರ, ಎಲ್ಲಾ ಸೈಬರ್ ದಾಳಿಗಳಲ್ಲಿ 90% ಮಾನವ ನಿರ್ಲಕ್ಷ್ಯದಿಂದಲೇ ಉಂಟಾಗುತ್ತವೆ ಎಂದರು.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಫೆಬ್ರವರಿ 10, 2026 ರಂದು ಐಎಸ್‌ಇಎ ಯೋಜನೆಯಡಿಯಲ್ಲಿ ಎನ್‌ಐಸಿ ಮತ್ತು ರಾಷ್ಟ್ರವ್ಯಾಪ್ತಿ ಇತರ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಆಚರಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತ ಉಪಕಾರ್ಯದರ್ಶಿ ಸವಿತ ಬಿ. ಎಂ., ಅಭಿವೃದ್ಧಿ ಉಪಕಾರ್ಯದರ್ಶಿ ಭೀಮಪ್ಪ, ಮುಖ್ಯ ಯೋಜನಾ ಅಧಿಕಾರಿ ಕೆ.ಬಿ.ಪ್ರಭುಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಮಹೇಶ್, ಕುಮಾರ್, ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Mysore
ಕಳ್ಳತನ ಮಾಡಿದ್ದ ಕಾರು ವಶ: ಆರೋಪಿ ಬಂಧನ
ಮೈಸೂರು: ಕಾರು ಕಳವು ಆರೋಪಿಯನ್ನು ಬಂಧಿಸಿರುವ ಮೈಸೂರು ನಗರ ಸಿಸಿಬಿ ಪೊಲೀಸರು 14 ಲಕ್ಷ ರೂ. ಮೌಲ್ಯದ ಕಾರೊಂದನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಾಣಿ ಗ್ರಾಮದ ಅರುಣ್ ಕುಮಾರ್ (33) ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಈತನಿಂದ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ಕಾರನ್ನು ವಶಕ್ಕೆ ಪಡೆದಿದ್ದು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಪಿಎಸ್‌ಐ ಎನ್. ಅನಿಲ್‌ಕುಮಾರ್, ಎಎಸ್‌ಐ ಆರ್. ಸುರೇಶ್, ಸಿಬ್ಬಂದಿ ಜಗದೀಶ್, ಸಿಹೆಚ್‌ಸಿ ಟಿ. ಪ್ರಕಾಶ್, ಜಯರಾಮ್, ರಾಘವೇಂದ್ರ ಇತರರಿದ್ದರು.
Mysore
ಫೆ.14ಕ್ಕೆ ಬೃಹತ್ ‘ಸಾಮೂಹಿಕ ಹನುಮಾನ್ ಚಾಲೀಸಾ’ ಪಾರಾಯಣ: ಭಕ್ತರಿಗೆ ಭಾಗವಹಿಸಲು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮನವಿ
ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇದೇ ಫೆಬ್ರವರಿ 14ರಂದು ‘ಸಾಮೂಹಿಕ ಹನುಮಾನ್ ಚಾಲೀಸಾ’ ಪಾರಾಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ತಿಳಿಸಿದರು.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಗಳು, ಹನುಮಾನ್ ಚಾಲೀಸಾ ಪಾರಾಯಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದ ವಿಶೇಷ:
ಫೆ. 14ರಂದು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಒಗ್ಗೂಡಿ ಹನುಮಾನ್ ಚಾಲೀಸಾ ಪಾರಾಯಣ ಮಾಡಲಿದ್ದಾರೆ. ತುಳಸಿದಾಸರು ರಚಿಸಿರುವ ಹನುಮಾನ್ ಚಾಲೀಸಾ ಅತ್ಯಂತ ಪವಿತ್ರವಾದದ್ದು ಹಾಗೂ ಸುಂದರಕಾಂಡ ಮತ್ತು ಸಂಪೂರ್ಣ ರಾಮಾಯಣದ ಸಾರವನ್ನು ಒಳಗೊಂಡಿದೆ ಎಂದು ತಿಳಿಸಿದರು.
ಈ ಹಿಂದೆ ತೆನಾಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷದಷ್ಟು ಭಕ್ತರು ಪಾಲ್ಗೊಂಡು ವಿಶ್ವ ದಾಖಲೆ ನಿರ್ಮಿಸಿದ್ದರು ಎಂದು ಅವರು ಸ್ಮರಿಸಿದರು.

ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ:
“ಹನುಮಾನ್ ಚಾಲೀಸಾ ಎಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ಹಾಡಬಹುದಾದ ಸುಲಭ ಹಾಗೂ ಶಕ್ತಿಶಾಲಿ ಸ್ತೋತ್ರ. ಹನುಮಂತನು ರಕ್ಷಕನಾಗಿದ್ದು, ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತಾನೆ. ಲೋಕ ಕಲ್ಯಾಣಕ್ಕಾಗಿ ಮತ್ತು ಜಗತ್ತಿನ ಒಳಿತಿಗಾಗಿ ಈ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಶಿವರಾತ್ರಿಯ ಮಹತ್ವ:
ಮರುದಿನವೇ ಶಿವರಾತ್ರಿ ಹಬ್ಬವಿರುವುದು ಈ ಕಾರ್ಯಕ್ರಮದ ವಿಶೇಷತೆಯನ್ನು ಹೆಚ್ಚಿಸಿದೆ. ಹನುಮಂತನು ಶಿವನ ಅಂಶ ಹಾಗೂ ರಾಮನ ಪ್ರಿಯ ಭಕ್ತನಾಗಿದ್ದು, ಈ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಮಾಡುವುದು ಅತ್ಯಂತ ಫಲಪ್ರದ ಎಂದು ವಿವರಿಸಿದರು.

ಸಾಮೂಹಿಕ ಪ್ರಾರ್ಥನೆಯ ಶಕ್ತಿ: ಒಬ್ಬರೇ ಪ್ರಾರ್ಥಿಸುವುದಕ್ಕಿಂತ ಸಾಮೂಹಿಕವಾಗಿ ಪ್ರಾರ್ಥಿಸುವುದರಲ್ಲಿ ಅಪಾರ ಶಕ್ತಿಯಿದೆ. ಪುರಾಣಗಳ ಪ್ರಕಾರ, ರಾಮಾವತಾರಕ್ಕೆ ಮುನ್ನ 33 ಕೋಟಿ ದೇವತೆಗಳು ಒಗ್ಗೂಡಿ ಪ್ರಾರ್ಥಿಸಿದಾಗ ಭಗವಂತನು ಪ್ರತ್ಯಕ್ಷನಾಗಿ ರಾವಣ ಸಂಹಾರದ ಭರವಸೆ ನೀಡಿದ್ದನು. ಅದೇ ರೀತಿ, ಲಕ್ಷಾಂತರ ಜನರು ಒಟ್ಟಾಗಿ ಸೇರಿ ಹನುಮಾನ್ ಚಾಲೀಸಾ ಪಾರಾಯಣ ಮಾಡಿದಾಗ ಪ್ರತಿಯೊಬ್ಬರಿಗೂ ಆ ಸಂಪೂರ್ಣ ಪಾರಾಯಣದ ಪುಣ್ಯ ಲಭಿಸುತ್ತದೆ ಎಂದು ಶ್ರೀಗಳು ಸಾಮೂಹಿಕ ಪ್ರಾರ್ಥನೆಯ ಮಹತ್ವವನ್ನು ವಿವರಿಸಿದರು.
ಭಕ್ತರಿಗೆ ಆಹ್ವಾನ:
ಕರ್ನಾಟಕವು ಹನುಮನ ನಾಡು. ಇಲ್ಲಿನ ಭಕ್ತರೆಲ್ಲರೂ ಈ ಪವಿತ್ರ ಕಾರ್ಯದಲ್ಲಿ ಪಾಲ್ಗೊಂಡು ಹನುಮಂತನ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಕರೆ ನೀಡಿದರು.
“ನಿಮ್ಮ ಜೊತೆಯಲ್ಲಿ ನಾನೂ ಇರುತ್ತೇನೆ, ನಾನೂ ಹಾಡುತ್ತೇನೆ. ಹನುಮಂತನ ರಕ್ಷೆ ಎಲ್ಲರಿಗೂ ಸಿಗಲಿ,” ಎಂದು ಆಶೀರ್ವದಿಸಿದರು.

“ಸಾಮೂಹಿಕವಾಗಿ ಎಲ್ಲರೂ ಸೇರಿದಾಗ, ಒಬ್ಬೊಬ್ಬರ ಪ್ರಾರ್ಥನೆಯ ಫಲವೂ ಎಲ್ಲರಿಗೂ ದೊರೆಯುತ್ತದೆ. ಇದುವೇ ಸಾಮೂಹಿಕ ಪ್ರಾರ್ಥನೆಯ ವಿಶೇಷ ಎಂದು ಅವರು ತಿಳಿಸಿದರು.
ಎಲ್ಲರೂ ಸೇರಿ ಹನುಮಾನ್ ಚಾಲೀಸಾ ಪಾರಾಯಣ ಮಾಡೋಣ ಎಂದು ಶ್ರೀಗಳು ನಾಡಿನ ಜನತೆಗೆ ಕರೆ ನೀಡಿದರು.

ಫೆಬ್ರವರಿ 14ರ ದಿನದಂದೇ ಹನುಮಾನ್ ಚಾಲೀಸಾ ಪಾರಾಯಣ ಮಹಾ ಯಜ್ಞಕ್ಕೆ ಏಕೆ ಆದ್ಯತೆ ನೀಡಿದ್ದೇವೆ ಎಂದರೆ ಆ ದಿನ ಸೀತಾರಾಮರು ಒಂದಾದ ದಿನ ಹಾಗಾಗಿ ಆ ದಿನವನ್ನು ಆಯ್ಕೆ ಮಾಡಲಾಗಿದೆ.
ಹನುಮಾನ್ ಚಾಲೀಸಾ ಸಂದರ್ಭದಲ್ಲಿ ಪ್ರತಿಯೊಬ್ಬ ಭಕ್ತರಿಗೂ ಅಂದು ಪ್ರಸಾದ ವಿನಿಯೋಗವನ್ನು ಸಹ ಏರ್ಪಡಿಸಿದ್ದೇವೆ ಎಂದು ಹೇಳಿದರು.
ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞಕ್ಕೆ ನಮ್ಮೊಂದಿಗೆ ಮೈಸೂರಿನ ಹಲವಾರು ಸಂಘ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ತಿಳಿಸಿದರು.
Mysore
ರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ
ಮೈಸೂರು: ರಾಜ್ಯ ಸರ್ಕಾರದ ಆಡಳಿತದಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ ವಿಚಾರದಲ್ಲಿ, ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಯತೀಂದ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ.ಅನಧಿಕೃತವಾಗಿ ವರ್ಗಾವಣೆ ಸಚಿವರಾಗಿದ್ದಾರೆ. ಸಿದ್ದರಾಮಯ್ಯಗೆ ಯತೀಂದ್ರ ಕೆಟ್ಟ ಹೆಸರು ತರುತ್ತಿದ್ದಾರೆ. ಸಿದ್ದರಾಮಯ್ಯ ತಲೆ ತಗ್ಗಿಸುವ ಕೆಲಸವನ್ನು ಯತೀಂದ್ರ ಮಾಡುತ್ತಿದ್ದಾರೆ.
ಸಿಎಂ ಮೊದಲ ಪುತ್ರ, ರಾಕೇಶ್ ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯಗೆ ಯಾವತ್ತೂ ಮುಜುಗರ ಆಗಿರಲಿಲ್ಲ. ರಾಕೇಶ್ ಸಿದ್ದರಾಮಯ್ಯ ಬದುಕಿದ್ದರೆ ಸಿದ್ದರಾಮಯ್ಯಗೆ ತಗ್ಗಿಸುವ ಸ್ಥಿತಿ ತರುತ್ತಿರಲಿಲ್ಲ. ಅಪ್ಪನ ಅಧಿಕಾರವನ್ನು ಅತಿ ಹೆಚ್ಚು ಯತೀಂದ್ರ ದುರುಪಯೋಗ ಮಾಡಿ ಕೊಂಡಿದ್ದಾರೆ.

ಮಗನಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯವಾಗಿದೆ.
ಯತೀಂದ್ರ ಅವರೇ ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ? ಮನೆ, ತೋಟ, ಆಸ್ತಿ ಎಲ್ಲಾ ಇದೆ. ನಿಮ್ಮ ಅಣ್ಣನ ಕುಟುಂಬ ಆರ್ಥಿಕವಾಗಿ ಸದೃಢವಾಗಿದೆ. ಇನ್ನೂ ಯಾರಿಗಾಗಿ ಇಷ್ಟು ಆಸ್ತಿ ಮಾಡುತ್ತಿದ್ದೀರಿ ಹೇಳಿ. ಎಲ್ಲರಿಗೂ ಗದರಿಸುವ ಸಿದ್ದರಾಮಯ್ಯ ತಮ್ಮ ಮಗನಿಗೆ ಈ ವಿಚಾರದಲ್ಲಿ ಗದರಿಸಲು ಆಗುತ್ತಿಲ್ಲ, ಮೈಸೂರು ಉಸ್ತುವಾರಿ ಸಚಿವರು ವರ್ಷದಲ್ಲಿ ಮೂರು ದಿನ ಮಾತ್ರ ಕಾಣುತ್ತಾರೆ.
ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ಹಾಗೂ ದಸರಾದಲ್ಲಿ ಅಷ್ಟೆ ಜಿಲ್ಲಾ ಉಸ್ತುವಾರಿ ಸಚಿವರು ಕಾಣುತ್ತಾರೆ. ಇಡೀ ಮೈಸೂರು ಅಭಿವೃದ್ಧಿ ಸತ್ತು ಹೋಗಿದೆ. ವರ್ಗಾವಣೆ ದಂಧೆ ಮೈಸೂರಲ್ಲಿ ದೊಡ್ಡ ಮಟ್ಟದಲ್ಲಿ ಸಾಗಿದೆ. ಯತೀಂದ್ರ ಬಾಯಲ್ಲಿ ಒಂದು ದಿನವಾದರೂ ಮೈಸೂರು ಅಭಿವೃದ್ಧಿ ಮಾತು ಬಂದಿದ್ಯಾ? ನಾಳೆ ಬೆಳಗ್ಗೆ ಬಿಬಿಎಂಪಿ, ಮೈಸೂರು ಪಾಲಿಕೆ ಚುನಾವಣೆ ನಡೆದೆ ಕಾಂಗ್ರೆಸ್ ಧೂಳೀಪಟ ಆಗುತ್ತದೆ.

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ಕಾಂಗ್ರೆಸ್‌ಗೆ ಧೈರ್ಯ ಇಲ್ಲ, ಅಧಿಕಾರ ಹಸ್ತಾಂತರ ಇಲ್ಲ ಎಂಬ ಯತೀಂದ್ರ ಹೇಳಿಕೆ ಅವರ ತಂದೆಯ ಮನದ ಮಾತು. ಸಿದ್ದರಾಮಯ್ಯ ಹೇಳಲು ಆಗದ್ದನ್ನು ಮಗನ ಮೂಲಕ ಹೇಳಿಸುತ್ತಿದ್ದಾರೆ.
ವೀರೇಂದ್ರ ಪಾಟೀಲ್ ನಂತರ ಕಾಂಗ್ರೆಸ್ ಗೆ ರಾಜ್ಯದಲ್ಲಿ ಯಾವ ಸ್ಥಿತಿ ಬಂತೋ ಅದೇ ಸ್ಥಿತಿ ಈಗಲು ಕಾಂಗ್ರೆಸ್ ಗೆ ಬರುತ್ತದೆ.
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭವಿಷ್ಯ ನುಡಿದಿದ್ದಾರೆ.
-
Hassan24 hours agoರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ
-
Mysore6 hours agoರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ
-
Mandya23 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Mysore43 minutes agoಕಳ್ಳತನ ಮಾಡಿದ್ದ ಕಾರು ವಶ: ಆರೋಪಿ ಬಂಧನ
-
Special20 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya51 minutes agoಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು :ಡಾ. ಬಿ.ವಿ. ನಂದೀಶ್
-
Kodagu2 hours ago104 ಮೊಬೈಲ್ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಲಾಗಿದೆ: ಎಸ್ಪಿ ಬಿಂದುಮಣಿ
-
Mysore21 hours agoಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ.ಲಕ್ಷ್ಮೀಕಾಂತ್ ರೆಡ್ಡಿ
