Connect with us

Hassan

ಪ್ರಜ್ವಲ್ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಣೆ

Published

on

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ ೩೦ ಅಧಿಕಾರಿ, ಸಿಬ್ಬಂದಿಗೆ ೨೫ ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ.

ಪ್ರಕರಣದ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸೇರಿದಂತೆ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ಒಟ್ಟು ಒಟ್ಟಾರೆ ೩೫ ಲಕ್ಷ ರೂ. ಬಹುಮಾನ ಘೋಷಿಸಿದೆ.


ಯಾರ‍್ಯಾರಿಗೆ ಎಷ್ಟು ಹಣ?

ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್‌ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ.ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ ಈ 25 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ.

ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ)ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರೂ. ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರೂ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?

ಪುಜ್ವಲ್ ಮತ್ತು ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪುಕರಣಗಳ ತನಿಖೆ ಕುರಿತು ರಚಿಸಿರುವ ವಿಶೇಷ ತನಿಖಾ ತಂಡವು, ಇಬ್ಬರ ವಿರುದ್ಧ ಒಟ್ಟು 4 ಪಕರಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ 1 ಪ್ರಕರಣದ ತನಿಖಾ ಕಾಲದಲ್ಲಿ ಸಮರ್ಪಕವಾಗಿ ತನಿಖೆ ಕೈಗೊಂಡು ಸಾಕ್ಷ್ಯಾಧಾರ ಸಂಗ್ರಹಿಸಿ, ಒಟ್ಟು 5 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಿದ್ಧಪಡಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸದರಿ ಪ್ರಕರಣಗಳ ಪೈಕಿ ಸಿ.ಐ.ಡಿ. ಸೈಬರ್ ಕ್ರೈಂ ಪೊಲೀಸ್ ಠಾಣಾ ಮೊ.ಸಂ.02/2024ರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಪೂರ್ಣಗೊಂಡು ಪ್ರಕರಣದ ಆರೋಪಿ ಪ್ರಜ್ವಲ್ ಕೃತ್ಯ ಸಾಬೀತಾಗಿದ್ದರಿಂದ ಅಪರಾಧಿಗೆ ಅಜೀವ ಸೆರೆವಾಸ ಮತ್ತು 11,60,000 ರೂ. ದಂಡ ವಿಧಿಸಿ ದಂಡದ ಮೊತ್ತದಲ್ಲಿ 11,25,000 ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸದ್ಯ ಪ್ರಕರಣದ ಆರೋಪಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಪಡೆಯಲ್ಲಿ ವೃತ್ತಿ ಪರತೆ, ಹೊಣೆಗಾರಿಕೆ ಮತ್ತು ಶ್ರೇಷ್ಠತೆ ಉತ್ತೇಜಿಸುವ ಉದ್ದೇಶದೊಂದಿಗೆ ನಗದು ಪ್ರಶಸ್ತಿ ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.

Continue Reading

Hassan

ಅರಸೀಕೆರೆಯಲ್ಲಿ ಬಕ್ರೀದ್ ಹಿನ್ನೆಲೆ ಪೊಲೀಸ್ ರೂಟ್ ಮಾರ್ಚ್

Published

on

ಅರಸೀಕೆರೆ:  ಮೇ.  28 ರಂದು ಬಕ್ರೀದ್ ಹಬ್ಬ ಇರುವ ಪ್ರಯುಕ್ತ ಸಾರ್ವಜನಿಕರಲ್ಲಿ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ವಿಶ್ವಾಸ ಮೂಡಿಸಲು ನಗರದಲ್ಲಿ ಇಂದು ಜಿಲ್ಲಾ ಎಸ್‌ಪಿ ಶುಭನ್ವಿತಾ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು.

ನಗರದ ಹುಳಿಯಾರ್ ರಸ್ತೆ, ಶಾನುಭೋಗರ ಬೀದಿ ಹಾಗೂ ಬಿ.ಎಚ್. ರಸ್ತೆಯಲ್ಲಿ ನಡೆದ ಈ ರೂಟ್ ಮಾರ್ಚ್‌ನಲ್ಲಿ ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸದಾ ಸನ್ನದ್ಧರಾಗಿದ್ದಾರೆ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಿದರು.

ಹಬ್ಬಗಳು ಹಾಗೂ ಸೂಕ್ಷ್ಮ ಸಂದರ್ಭಗಳಲ್ಲಿ ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು, ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಭದ್ರತೆಯ ಭಾವನೆ ಮೂಡಿಸುವುದು ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರಿಗೆ ಎಚ್ಚರಿಕೆ ನೀಡುವುದು ರೂಟ್ ಮಾರ್ಚ್‌ನ ಮುಖ್ಯ ಉದ್ದೇಶವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Continue Reading

Hassan

ಹಿರೇಮಠದಲ್ಲಿ 9 ದಿನಗಳ ಮೌನ ಶಿವಾನುಷ್ಠಾನ: ಜೂ.5ರಂದು ಮಹಾಮಂಗಳೋತ್ಸವ, ಭಕ್ತರಿಗೆ ದರ್ಶನ ನಿರ್ಬಂಧ

Published

on

ವರದಿ: ಸತೀಶ್‌ ಚಿಕ್ಕಕಣಗಾಲು

ಆಲೂರು: ತಾಲೂಕಿನ ಕಾರ್ಜುವಳ್ಳಿ ಶ್ರೀ ಸಂಸ್ಥಾನ ಹಿರೇಮಠದಲ್ಲಿ ಶ್ರೀಮದ್ ರಂಭಾಪುರಿ ವೀರಸಿಂಹಾಸನ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಷ|| ಬ್ರ|| ಸದಾಶಿವ ಶಿವಾಚಾರ್ಯ ಸ್ವಾಮಿಗಳವರ ಅಧಿಕ ಜೇಷ್ಠ ಮಾಸದ ಅಂಗವಾಗಿ 9 ದಿನಗಳ ಮೌನ ಶಿವಾನುಷ್ಠಾನ ನಡೆಯಲಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ಎಸ್. ಶಿವಮೂರ್ತಿ ತಿಳಿಸಿದ್ದಾರೆ.

ಅವರು ನೀಡಿರುವ ಪತ್ರಿಕಾ ಹೇಳಿಕೆಯ ಪ್ರಕಾರ, ಈ ಮೌನ ಶಿವಾನುಷ್ಠಾನವು ಮೇ 27 (ಬುಧವಾರ) ರಿಂದ ಜೂನ್ 4ರವರೆಗೆ ನಡೆಯಲಿದೆ.

ಜೂನ್ 5ರಂದು ಮೌನಾನುಷ್ಠಾನ ಮಹಾಮಂಗಳದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ಸಂಕಲ್ಪಪೂರ್ವಕ ಗಂಗಾ-ಗೋಪೂಜೆ, ಶ್ರೀ ದುರ್ಗಾ ನವಾಕ್ಷರಿ ಮಂತ್ರ ಹೋಮ ಮತ್ತು ಪೂರ್ಣಾಹುತಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ದುರ್ಗಾ ಸಪ್ತಶತಿ ಪಾರಾಯಣ ಹಾಗೂ ಮಹಾಮಂಗಳಾರತಿ ನಡೆಯಲಿದೆ.

ನಂತರ ಶ್ರೀಗಳು ಮೌನಾನುಷ್ಠಾನವನ್ನು ಮಂಗಲಗೊಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತರಿಗೆ ಆಶೀರ್ವಾದ ನೀಡುವರು. ಬಳಿಕ ಮಹಾಪ್ರಸಾದ ವಿನಿಯೋಗವೂ ಇರಲಿದೆ.

ವಿಶೇಷವಾಗಿ, ಮೌನಾನುಷ್ಠಾನ ಅವಧಿಯಲ್ಲಿ ಭಕ್ತರಿಗೆ ಶ್ರೀಗಳ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಮಠದ ಆಡಳಿತಾಧಿಕಾರಿ ತಿಳಿಸಿದ್ದಾರೆ.

Continue Reading

Hassan

ಅರಸೀಕೆರೆ ನಗರದಲ್ಲಿ ಗುಡುಗು ಸಹಿತ ಭಾರಿ ಮಳೆ

Published

on

ಅರಸೀಕೆರೆ: ನಗರದಲ್ಲಿ ಇಂದು ಮಧ್ಯಾಹ್ನ ಸುಮಾರು 4 ಗಂಟೆಗೆ ಆರಂಭವಾದ ಗುಡುಗು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಭಸವಾಗಿ ಸುರಿದ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಯಿತು.

ಚರಂಡಿಗಳು ಕಸ ಮತ್ತು ಗಿಡಗಂಟುಗಳಿಂದ ತುಂಬಿದ್ದರಿಂದ ಮಳೆ ನೀರು ಸರಿಯಾಗಿ ಹರಿಯದೆ ತಗ್ಗು ಪ್ರದೇಶಗಳಿಗೆ ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಡಿಪೋ ಸಮೀಪದ ಬಸ್ ನಿಲ್ದಾಣವು ಕೆಸರುಮಯವಾಗಿದ್ದು ಪ್ರಯಾಣಿಕರಿಗೆ ಬಸ್ ಹತ್ತಲು ಮತ್ತು ಇಳಿಯಲು ಕಷ್ಟವಾಯಿತು. ಬಸ್ ಸಂಚಾರವೂ ನಿಧಾನಗತಿಯಲ್ಲಿ ನಡೆಯಿತು.

ಮಳೆಯ ಸಮಯದಲ್ಲಿ ವಿದ್ಯಾರ್ಥಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಸ್ತೆ ಪಕ್ಕದ ಅಂಗಡಿಗಳ ಮುಂದೆ ಆಶ್ರಯ ಪಡೆದುಕೊಂಡ ದೃಶ್ಯಗಳು ಕಂಡುಬಂದವು. ರಸ್ತೆ ಬದಿಯ ತ್ಯಾಜ್ಯ ನೀರಿನಲ್ಲಿ ತೇಲಿ ದುರ್ವಾಸನೆ ಹರಡಿದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವಿರುದ್ಧವಾಗಿ, ಬೇಸಿಗೆ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಈ ಮಳೆ ತಾತ್ಕಾಲಿಕ ನೆಮ್ಮದಿ ನೀಡಿದ್ದು, ರೈತರು ಮುಂಗಾರು ಪೂರ್ವ ಮಳೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

Continue Reading

Trending

error: Content is protected !!