Manglore
ಈಜುಕೊಳದಲ್ಲಿ ರಾರಾಜಿಸಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಈಜುಪಟುಗಳು: ಮುಡಿಗೇರಿದ ಚಾಂಪಿಯನ್ಸ್ ಪಟ್ಟ
ಪುತ್ತೂರು : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಪುತ್ತೂರಿನ ಬಾಲವನ ಈಜುಕೊಳದಲ್ಲಿ ಸೆ.4 ರಂದು ನಡೆದ
ಮಂಗಳೂರು ವಿಶ್ವ ವಿದ್ಯಾನಿಲಯ ಅಂತರ್- ಕಾಲೇಜು ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು
ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 42 ಪದಕಗಳನ್ನು ಗಳಿಸುವುದರ ಮೂಲಕ ಚಾಂಪಿಯನ್ ಗಳಾಗಿ
ಹೊರ ಹೊಮ್ಮಿದ್ದಾರೆ.
ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ನಂದನ್ ನಾಯ್ಕ್ ರವರು ಮೂರು ಚಿನ್ನ,ಮೂರು ಬೆಳ್ಳಿ, ಐದು ಕಂಚು, ತೃತೀಯ ಬಿಎ
ವಿದ್ಯಾರ್ಥಿ ಶಿಶಿಲ್ ಗೌಡ ರವರು ಮೂರು ಚಿನ್ನ ,ಆರು ಬೆಳ್ಳಿ , ಎರಡು ಕಂಚು, ಪ್ರಥಮ ಎಂಕಾಂನ ತನ್ವಿರ್ ಪಿಂಟೋ ಮೂರು
ಚಿನ್ನ, ಆರು ಕಂಚು, ಪ್ರಥಮ ಎಂಎಸ್ ಡಬ್ಲ್ಯೂನ ತ್ರಿಶುಲ್ ಗೌಡ ಅವರು ಮೂರು ಚಿನ್ನ,ಏಳು ಬೆಳ್ಳಿ ,ಒಂದು ಕಂಚು ಪದಕಗಳನ್ನು
ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ.ಆ್ಯಂಟನಿ ಪ್ರಕಾಶ್ ಮೊಂತೆರೋ ಅವರು ವಿದ್ಯಾರ್ಥಿಗಳ ಕಠಿಣ
ಪರಿಶ್ರಮ ಮತ್ತು ತರಬೇತುದಾರರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ. ಇದು ನಮ್ಮ ಕಾಲೇಜಿಗೆ ಹೆಮ್ಮೆಯ
ವಿಷಯ. ಈ ಸಾಧನೆಯು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿ ನೀಡಲಿದೆ ಎಂದು ಕಾಲೇಜು
ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಲ್ಯಾಸ್ ಪಿಂಟೋರವರು ಹೇಳಿದ್ದಾರೆ.
Manglore
ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ
ಉಜಿರೆ: ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಎಂ. ಭಾಸ್ಕರ ಚಕ್ರವರ್ತಿ ಹೇಳಿದರು.
ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಶುಕ್ರವಾರ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರಾಯೋಗಿಕವಾಗಿ ಉಜಿರೆಯಲ್ಲಿ ಆರಂಭಿಸಿದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ ಮಾದರಿಯಾಗಿದ್ದು ಕೇಂದ್ರಸರ್ಕಾರವೂ ಇದಕ್ಕೆ ಮಾನ್ಯತೆ ನೀಡಿದ್ದು, ದೇಶದೆಲ್ಲೆಡೆ ಇಂದು ೬೭೦ ಸಂಸ್ಥೆಗಳು ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡುತ್ತಿದ್ದು ದೇಶದ ಆರ್ಥಿಕ ಪ್ರಗತಿಯಲ್ಲಿ ಇವುಗಳ ತ್ಯಾಗ, ಸೇವೆ ಮತ್ತು ಸಾಧನೆ ಅಮೂಲ್ಯವಾಗಿದೆ ಎಂದು ಶ್ಲಾಘಿಸಿ ಅಭಿನಂದಿಸಿದರು.
ಕೌಶಲಾಭಿವೃದ್ಧಿ ಇಂದು ಅಗತ್ಯವಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಗೃಹನಿರ್ಮಾಣ ಕಾರ್ಮಿಕರು ಹಾಗೂ ಇತರ ಕುಶಲಕರ್ಮಿಗಳ ಬೇಡಿಕೆ ಹೆಚ್ಚಾಗುತ್ತಿದ್ದು ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಬೇಕು, ಎಲ್ಲಾ ನಿರ್ದೇಶಕರುಗಳು ಪ್ರತಿದಿನ ರುಡ್‌ಸೆಟ್ ಸಂಸ್ಥೆಗಳ ಸ್ವಚ್ಛತೆ ಮತ್ತು ನಿರ್ವಹಣೆ ಬಗ್ಯೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ರುಡ್‌ಸೆಟ್ ಸಂಸ್ಥೆಗಳ ರಾಷ್ಟೀಯ ನಿಯಂತ್ರಕ ಬೆಂಗಳೂರಿನ ಆರ್.ಆರ್. ಸಿಂಗ್ ಮಾತನಾಡಿ, ತರಬೇತಿ ನೀಡುವಾಗ ನಿರುದ್ಯೋಗಿಗಳಲ್ಲಿ ನಾಯಕತ್ವ ಗುಣವನ್ನೂ ಬೆಳೆಸಬೇಕು.

ರುಡ್‌ಸೆಟ್ ಸಂಸ್ಥೆಗಳ ಮಹಾನಿರ್ದೇಶಕ ರಾಜು ಎನ್. ಕೋರಿ ಮಾತನಾಡಿ ಗ್ರಾಮೀಣ ಪ್ರದೇಶದ ಬೇಡಿಕೆಗೆ ಅನುಗುಣವಾಗಿ ಹೊಸತನದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು. ಉನ್ನತ ಸಾಧನೆ ಮಾಡಿದ ರುಡ್‌ಸೆಟ್ ಸಂಸ್ಥೆಗಳನ್ನು ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಉತ್ತಮ ಸೇವೆ, ಸಾಧನೆಗೆ ಎಲ್ಲಾ ನೌಕರರನ್ನು ಅಭಿನಂದಿಸಿದರು.
ಸಂಸ್ಥೆಗಳ ಪ್ರಗತಿ, ಸಾಧನೆ ಗುರುತಿಸಿ ಹೊಸ ಯೋಜನೆಗಳನ್ನು ರೂಪಿಸುವುದೇ ವಾರ್ಷಿಕ ಸಮ್ಮೇಳನದ ಉದ್ದೇಶವಾಗಿದೆ ಎಂದರು.
ಬ್ಯೂಟಿ ಪಾರ್ಲರ್, ಹೊಲಿಗೆ ಮೊದಲಾದ ವೃತ್ತಿಗಳನ್ನು ಮನೆಯಲ್ಲೇ ಮಾಡಬಹುದು .ನಿರ್ದೇಶಕರುಗಳು ಮತ್ತು ಸಿಬ್ಬಂದಿ ಉತ್ತಮ ಗುಣಮಟ್ಟದ ತರಬೇತಿಗೆ ವೈಯಕ್ತಿಕ ಗಮನ ಹರಿಸಬೇಕೆಂದು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.
ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿದರು. ಉಜಿರೆ ಸಂಸ್ಥೆಯ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.
Manglore
ಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ ವಿಜ್ಞಾನ, ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್, ಮಂದಿರಾ ಕಜೆ ಪ್ರಥಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ, ಮಹೇಶ್ ಕಜೆ ಹಾಗೂ ದೀಪಿಕಾ ಕಜೆ ದಂಪತಿಯ ಪುತ್ರಿ
ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಇವರಿಬ್ಬರೂ ಮುಂದೆ ನಡೆಯುವ ಝೋನಲ್ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಅಂತೆಯೇ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ೧೦ನೇ
ತರಗತಿ ವಿದ್ಯಾರ್ಥಿಗಳಾದ, ಪ್ರವೀಣ್ ರಾವ್ ಮತ್ತು ಸುಗಂಧಿನಿ ದಂಪತಿ ಪುತ್ರ ಪ್ರಿಯಾಂಶು ರಾವ್, ಸುರೇಶ್ ಎಸ್ ಶೆಟ್ಟಿ ಮತ್ತು ನೈನಾ ದಂಪತಿ ಪುತ್ರ ಕನಿಷ್ಕ್ ಎನ್ ಶೆಟ್ಟಿ ಹಾಗೂ 9ನೇ ತರಗತಿ ವಿದ್ಯಾರ್ಥಿ, ಮಧುಸೂದನ್ ಸಾಲೆ ಮತ್ತು ವಿನುತಾ ಎಮ್ ಸಾಲೆ ದಂಪತಿ ಪುತ್ರ ಅನಿತೇಜ್ ಎಮ್ ಸಾಲೆ ಅವರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
Manglore
ಜಿಲ್ಲಾಮಟ್ಟದ ಖೋ-ಖೋ ಪಂದ್ಯಾವಳಿ: ವಿವೇಕಾನಂದ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು, ಕಟೀಲು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಭಾಗವಹಿಸಿ
ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ತಂಡದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಭವಿಷ್, ತೇಜಸ್ ಪಿ.ಕೆ., ಸೃಜನ್, ಗೌತಮ್, ತರುಣ್, ಮನ್ವಿತ್ ಬಿ.ಎಲ್, ವನೀಶ್,
ಮಿಥುನ್ ಶೆಟ್ಟಿ, ಪ್ರೇಕ್ಷಿತ್ ಹಾಗೂ ಪ್ರಥಮ ಪಿಯುಸಿಯ ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಘನಶ್ಯಾಮ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್ ಭಾಗವಹಿಸಿದ್ದು , ದ್ವಿತೀಯ ವಿಜ್ಞಾನ ವಿಭಾಗದ ಭವಿಷ್ ಉತ್ತಮ ರಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಭವಿಷ್, ಗೌತಮ್ ಹಾಗೂ ವನೀಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
Hassan7 hours agoರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಭೇಟಿ
-
Chamarajanagar22 hours agoಚಾಮರಾಜನಗರ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರ ಮುಂದುವರೆಸಲು ಸಂಸದ ಸುನೀಲ್ ಬೋಸ್ ಮಾಡಿದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ
-
Mandya6 hours agoಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ
-
Manglore3 hours agoಜಿಲ್ಲಾಮಟ್ಟದ ಖೋ-ಖೋ ಪಂದ್ಯಾವಳಿ: ವಿವೇಕಾನಂದ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
-
Manglore30 minutes agoಅಂಬಿಕಾ ಸಿಬಿಎಸ್‌ಇ ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ಝೋನಲ್ ಹಂತಕ್ಕೆ ಆಯ್ಕೆ ವಿಜ್ಞಾನ, ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್, ಮಂದಿರಾ ಕಜೆ ಪ್ರಥಮ
-
Hassan6 hours agoಮದ್ದೂರು ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಗಲಾಟೆ ಕೇಸ್: ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್
-
Hassan3 hours agoಹಾಸನ: ಸಾಹಸಸಿಂಹ ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ಅಭಿಮಾನಿಗಳ ಸಂಭ್ರಮ
-
Hassan7 hours agoತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ
