Mandya
ವಿದೇಶಿ ಸಂಸ್ಕೃತಿ ಬದಿಗೊತ್ತಿ ದೇಶೀ ಸಂಸ್ಕೃತಿ ಉಳಿಸಿಕೊಳ್ಳೋಣ

ಮಂಡ್ಯ: ‘ದೇಶೀಯ ಸಂಸ್ಕೃತಿ ಉಳಿಸುವ ಜಾನಪದ ಜಾತ್ರೆಯಂತಹ ಹಬ್ಬಗಳು ಹೆಚ್ಚಾಗಿ ನಡೆಸುವ ಮೂಲಕ ವಿದೇಶಿ ಸಂಸ್ಕೃತಿ ಬದಿಗೊತ್ತಿ ನಮ್ಮ ಸಂಸ್ಕೃತಿ ಉಳಿಸಿಕೊಳ್ಳೋಣ’ ಎಂದು ಸಂಸ್ಕೃತಿ ಚಿಂತಕ ಪ್ರೊ.ಎಂ.ಕೃಷ್ಣೆಗೌಡ ಕರೆ ನೀಡಿದರು.
ನಗರದ ಮಹಿಳಾ ಸರ್ಕಾರಿ ಕಾಲೇಜಿ(ಸ್ವಾಯತ್ತ)ನ ವನರಂಗದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಾನಪದ ಜಾತ್ರೆಗೆ ಭತ್ತ-ರಾಗಿಯ ರಾಶಿ ಪೂಜೆ ನೆರವೇರಿಸಿ ಮಾತನಾಡಿದರು.
ವಿದೇಶಿ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಬೇಕು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಅನ್ನು ಅತಿ ಹೆಚ್ಚಾಗಿ ಬಳಸುತ್ತಿದ್ದು, ಅದನ್ನು ಕಡಿಮೆ ಮಾಡಬೇಕು. ಸ್ವಲ್ಪ ಸಮಯವಾದರೂ ನಮ್ಮ ತನಕ್ಕೆ ಆಧ್ಯತೆ ನೀಡಬೇಕು. ಈಚಿನ ದಿನಗಳಲ್ಲಿ ವಿದೇಶಿ ವಸ್ತುಗಳ ಉತ್ಪನ್ನಗಳಿಗೆ ರಾಜಮಾರ್ಗ ತೋರಿಸಿರುವ ನಾವು, ನಮ್ಮ ಉತ್ಪನ್ನಗಳನ್ನು ಹುಡುಕಿಕೊಂಡು ಹೋಗುವಂತಹ ಸ್ಥಿತಿಯಲ್ಲಿಟ್ಟಿದ್ದೇವೆ ಎಂದು ವಿಷಾದಿಸಿದರು.
ಆಹಾರ, ಬಟ್ಟೆ ಇತ್ಯಾದಿ ಮೂಲಭೂತ ಅಂಶಗಳಲ್ಲಿ ವಿದೇಶಿಯ ಶೈಲಿಯನ್ನು ಅನುಸರಿಸುತ್ತಿದ್ದು, ಅವುಗಳು ನಮ್ಮ ಆರೋಗ್ಯ ಮತ್ತು ಸಂಸ್ಕೃತಿಗೆ ಒಳ್ಳೆಯದಲ್ಲ. ಆದ್ದರಿಂದ ದೇಸಿ ಉತ್ಪನ್ನಗಳನ್ನು ಬಳಸಬೇಕು. ಜಾನಪದ ಜಾತ್ರೆ ಕಾರ್ಯಕ್ರಮದಂತಹ ಇನ್ನಷ್ಟು ದೇಸಿಯ ಹಬ್ಬಗಳು ನಡೆಯಬೇಕು. ನಮ್ಮ ಸಂಸ್ಕೃತಿಯನ್ನು ಉಳಿಸುವಂತಹ ಕೆಲಸಗಳು ಆಗಬೇಕು ಎಂದು ಸಲಹೆ ನೀಡಿದರು.
ಹಂಪಿ ವಿವಿ ವಿಶ್ರಾಂತ ಕುಲಪತಿ ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ಅತೀ ಹೆಚ್ಚು ಜನಪದ ಕಲೆಗಳನ್ನು ಹೊಂದಿರುವ ಮಂಡ್ಯ ಜಿಲ್ಲೆ, ಹೆಚ್ಚಿನ ಜನಪದ ಸಂಸ್ಕೃತಿ ಹೊಂದಿದೆ. ಇದು ಜನಪದದ ತವರೂರು ಸಹ ಹೌದು, ಪೂರ್ವಜರುಗಳು ಯಾವುದೇ ವಿದ್ಯಾಭ್ಯಾಸವನ್ನು ಪಡೆಯದೇ, ಓದಲು, ಬರೆಯಲು ಬರದೆ ಇದ್ದರೂ ಅನೇಕ ಜನಪದ ಕಾವ್ಯಗಳನ್ನು ರಚಿಸಿದ್ದಾರೆ. ಅವರು ಜನಪದ ಕಲೆಗಳನ್ನು ಪ್ರದರ್ಶನ ಮಾಡುವಲ್ಲಿ ಪರಿಣಿತರಾಗಿದ್ದರು ಎಂದರು.
ರಾಜ್ಯದಲ್ಲಿ ಇಲ್ಲಿವರೆಗೆ ಸುಮಾರು 186 ಜನಪದ ಕಲೆಗಳು ಸಿಕ್ಕಿದ್ದು, ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ಜನಪದ ಕಲೆಗಳಿರುವ ನಾಡು ಕರ್ನಾಟಕ ಕನ್ನಡ ಭಾಷೆಯಲ್ಲಿ ಸಿಕ್ಕಿರುವಷ್ಟು, ಜನಪದ ಕಲೆಗಳು ಬೇರೆ ಯಾವ ಭಾಷೆಯಲ್ಲೂ ಸಿಕ್ಕಿಲ್ಲ. ಜನಪದ ಕಲೆಗಳಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ಜನಪದ ಸಂಸ್ಕೃತಿಯು ಕಣ್ಮರೆಯಾಗುತ್ತಿದ್ದು, ಪ್ರತಿಯೊಬ್ಬರು ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಗಮನ ವಹಿಸಬೇಕು ಎಂದು ಸಲಹೆ ನೀಡಿದರು.
ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಕುಮಾರ್ ಬೆಳಲೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಕೆ.ಹೇಮಲತಾ, ಜಾನಪದ ಜಾತ್ರೆಯ ಸಹ ಸಂಚಾಲಕರು ಕೆಂಪಮ್ಮ, ಸಾಂಸ್ಕೃತಿಕ ವೇದಿಕೆ ಖಜಾಂಚಿ ಜ್ಯೋತ್‌ಸ್ನಾ ಕಾರಂತ್, ಪತ್ರಾಂಕಿತ ವ್ಯವಸ್ಥಾಪಕ ಕೆ.ಪಿ.ರವಿಕಿರಣ್ ಭಾಗವಹಿಸಿದ್ದರು.
ಮೇಳೈಸಿದ ಜನಪದ ಕಲೆ, ಸ್ಪರ್ಧೆಗಳು: ಜಾನಪದ ವಸ್ತುಗಳ ವಸ್ತು ಪ್ರದರ್ಶನ ಹಾಗೂ ದೇಸಿ ತಿಂಡಿ- ತಿನಿಸುಗಳನ್ನೊಳಗೊಂಡ ಆಹಾರ ಮಳಿಗೆ(ಸ್ಟಾಲ್)ಗಳನ್ನು ವ್ಯವಸ್ಥಿತವಾಗಿ ಆಯೋಜಿಸಲಾಗಿತ್ತು. ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳೆಲ್ಲರೂ ಸಾಂಪ್ರದಾಯಿಕ ಉಡುಗೆಯಲ್ಲಿ ಬಂದಿದ್ದರು.
ಡೊಳ್ಳು ಕುಣಿತ, ಪೂಜಾ ಕುಣಿತ, ಕಂಸಾಳೆ, ವೀರಗಾಸೆ ಸೇರಿದಂತೆ 5ಕ್ಕೂ ಹೆಚ್ಚು ಕಲಾ ತಂಡಗಳಿಂದ ಕಾರ್ಯಕ್ರಮಕ್ಕೆ ಮೆರಗು ನೀಡಿದವು. ಎತ್ತಿನಗಾಡಿಯ ಮೆರವಣಿಗೆಯಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮಿಂಚಿದರು. ಇನ್ನುಳಿದ ವಿದ್ಯಾರ್ಥಿಗಳು ಕುಂಭ ಹಿಡಿದು ಸಂಭ್ರಮಿಸಿದರು.
ಜಾನಪದ ಚೆಲುವೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಅಲಂಕೃತಗೊಂಡ ಎತ್ತಿನ ಗಾಡಿ ಮೆರವಣಿಗೆ ಸ್ಪರ್ಧೆ, ಗಾದೆ ಹೇಳಿ ಒಗಟು ಬಿಡಿಸಿ ಹಾಗೂ ಗ್ರಾಮೀಣ ಕ್ರೀಡೆಗಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
Mandya
ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.
Mandya
ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
Mandya
ಜೆ.ಡಿ.ಎಸ್ ತೆಕ್ಕೆಗೆ ಹುಲಿಕೆರೆ ಪಂಚಾಯಿತಿ

ನಾಗಮಂಗಲ : ಹುಲಿಕೆರೆ ಗ್ರಾಮ ಪಂಚಾಯಿತಿಯ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವರಾಮು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ನಾಮಪತ್ರ ಸಲ್ಲಿಕೆಯಾಗಿದ್ದು ಕಾಂತರಾಜು ಗೆ ಮೂರು ಮತಗಳು ಹಾಗೂ ಸುಮಾ ಚೇತನ್ ಕುಮಾರ್ ರವರಿಗೆ 9 ಮತಗಳ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ಸತೀಶ್ ರವರು ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮ ಚೇತನಕುಮಾರ್ ರವರು ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ ಹುಲಿಕೆರೆ ಗ್ರಾಮ ಪಂಚಾಯಿತಿಯು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಪಡೆದಿರುವಂತಹ ಪಂಚಾಯಿತಿ. ಇಲ್ಲಿ ನಾನು ಅಧ್ಯಕ್ಷರಾಗಿರುವುದಕ್ಕೆ ಸಂತಸದ ವಿಚಾರ ನನ್ನ ಆಯ್ಕೆ ಮಾಡಿದ ಪಂಚಾಯತಿ ಆತ್ಮೀಯ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಈ ಹುದ್ದೆಯನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಗ್ರಾಮೀಣ ಪ್ರದೇಶದ ಕುಡಿಯುವ ನೀರು ರಸ್ತೆ ಮತ್ತು ವಿದ್ಯುತ್ ದೀಪಕ್ಕೆ ಮೊದಲನೇ ಆದ್ಯತೆ ನೀಡಿ ಮಹಾತ್ಮ ಗಾಂಧಿಯ ನರೇಗಾ ಯೋಜನೆಗೆ ಉತ್ತಮ ರೀತಿ ನಿರ್ವಹಣೆ ಮಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತೆ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು
ಗ್ರಾಮ ಪಂಚಾಯತಿ ಸದಸ್ಯರಾದ ತಿಮ್ಮೇಗೌಡ. ಲಕ್ಷ್ಮೀದೇವಮ್ಮ. ಶಿವಲಿಂಗಯ್ಯ. ಮಂಜುಳ. ತಿಮ್ಮೇಗೌಡ. ದಿನೇಶ್ ಕಲ್ಲೇನಹಳ್ಳಿ. ನರಗನಹಳ್ಳಿ ದೇವೇಗೌಡ.ಪುರಸಭೆ ಸದಸ್ಯ ಶಂಕರ್ಲಿಂಗೇಗೌಡ. ಪಡುವಲ ಪಟ್ಟಣ ಪುಟ್ಟರಾಜು.ಎಂ ಎನ್ ಸುರೇಶ್ ಜವರೇಗೌಡ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
-
Hassan20 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Kodagu15 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Kodagu12 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu12 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Mysore20 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan16 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State13 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan20 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ