Chikmagalur
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷದ 10 ಸಾವಿರ ಹಣ ಸೀಜ್
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷದ 10 ಸಾವಿರ ಹಣ ಸೀಜ್
ಕಾರಿನಲ್ಲಿ 13 ಲಕ್ಷದ 10 ಸಾವಿರ ಹಣ ಸಾಗಿಸುತ್ತಿದ್ದ ವೇಳೆ ಸೀಜ್
ಕಡೂರು ಪಟ್ಟಣದ ಜೈನ್ ರಸ್ತೆಯಲ್ಲಿ ಘಟನೆ
ರಾತ್ರಿ ಜೈನ್ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡಿದ್ದ ಇಬ್ಬರು
ಕಾರನ್ನ ತಪಾಸಣೆ ನಡೆಸಿದ ವೇಳೆ 13 ಲಕ್ಷದ 10 ಸಾವಿರ ಹಣ ಪತ್ತೆ
ಹಣವನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿರುವ ಪೊಲೀಸರು
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣ
Chikmagalur
ಬಣಕಲ್ ಶ್ಯಾಮಣ್ಣ ವಿಧಿವಶ*
:ಮೂಡಿಗೆರೆ : ಬಣಕಲ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಣಕಲ್ ಶ್ಯಾಮಣ್ಣ ಇಂದು ಬೆಳಗ್ಗೆ 7. 00 ಗಂಟೆಗೆ ವಿಧಿವಶರಾಗಿದ್ದಾರೆ.
ಶ್ಯಾಮಣ್ಣ ಮೂಡಿಗೆರೆ ತಾಲೋಕಿನ ಬಣಕಲ್ ಹೋಬಳಿ ಬಿಜೆಪಿ ಪಕ್ಷದಿಂದ ಒಂದು ಅವಧಿಗೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬುಧವಾರ ಸಂಜೆ 7:00 ಗಂಟೆ ಸಮಯದಲ್ಲಿ ಬಣಕಲ್ ಪಟ್ಟಣದಲ್ಲಿ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ಸ್ಥಳೀಯ ಖಾಸಗಿ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಕೂಡಲೇ ತಾಲೂಕು ಆಸ್ಪತ್ರೆಗೆ ರವಾನಿಸಿ ಅಲ್ಲಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲೂ ಕೂಡ ಚಿಕಿತ್ಸೆ ಕೊಡಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮಾನ್ಸ್ ಹಾಸ್ಪಿಟಲ್ ಗೆ ಕರೆದೊಯ್ಯಲಾಗಿತ್ತು ಆದರೆ ವಿಧಿ ಆಟ ನಿಮಾನ್ಸ್ ತಲುಪಿದ ಕೂಡಲೆ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಶ್ಯಾಮಣ್ಣ ಅವರು ಭಾರತೀಯ ಜನತಾ ಪಾರ್ಟಿ ಪಕ್ಷದಲ್ಲಿ ಸುಧೀರ್ಘ ಅನನ್ಯ ಸೇವೆ ಸಲ್ಲಿಸಿದ್ದು ಉನ್ನತ ವ್ಯಾಸಂಗವನ್ನು ಕೂಡ ಮಾಡಿದ್ದರು ಶಾಮಣ್ಣ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಚಿಕ್ಕಮಗಳೂರಿನ ಸಂಗಮೇಶ್ವರಪೇಟೆಯಲ್ಲಿ 2004ನೇ ಸಾಲಿನಲ್ಲಿ ಪ್ರಾಥಮಿಕ ಶಿಕ್ಷಣ ವರ್ಗವನ್ನು ಮುಗಿಸಿದ್ದರು ಎಲ್ಲಾ ಸಂಘ ಸಂಸ್ಥೆಗಳ ಸಕ್ರಿಯವಾಗಿ ತೊಡಗಿಕೊಂಡಿದ್ದರು ಹಾಗೂ ಅವರು ಜಿಲ್ಲಾ ಪಂಚಾಯತ್ ಸದಸ್ಯರಾದ ಅವಧಿಯಲ್ಲಿ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಕೂಡ ಆಗಿದ್ದರು. ಬಣಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ, ಬಣಕಲ್ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಪ್ರಸ್ತುತ ಸೇವೆ ಸಲ್ಲಿಸಿದರು. ಶಾಮಣ್ಣ ಅವರು ಇಂಗ್ಲೀಷ್ ಭಾಷೆಯಲ್ಲಿ ಹೆಚ್ಚಿನ ಪ್ರಾವೀಣ್ಯತೆಯನ್ನು ಹೊಂದಿದ್ದರು.
ಶಾಮಣ್ಣ ಅವರ ಮೃತ ದೇಹವು ಇಂದು ಸ್ವಗ್ರಾಮಕ್ಕೆ ತರಲಾಗುತ್ತಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಬಣಕಲ್ ಸಮೀಪದ ಸಬ್ಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದ್ದು ಮೃತ ಶ್ಯಾಮಣ್ಣ ಅಪಾರ ಬಂಧು ಬಳಗವನ್ನು ಅಗಲಿದ್ದು ಇವರ ವಿಧಿವಶಕ್ಕೆ ಕಂಬನಿ ಮಿಡಿದಿದೆ.
Chikmagalur
13 ವರ್ಷದ ಬಾಲಕಿಯ ಹತ್ಯೆ ಪ್ರಕರಣ ಆರೋಪಿ ಬಂಧನ- ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ
ಮಂಗಳೂರು: 13 ವರ್ಷದ ಬಾಲಕಿಯ ಹತ್ಯೆ ಪ್ರಕರಣ ಆರೋಪಿ ಬಂಧನ- ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ
ಮಂಗಳೂರು: ಮಂಗಳವಾರ ಜೋಕಟ್ಟೆಯಲ್ಲಿ13 ವರ್ಷದ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ವಿರೋಧ ವ್ಯಕ್ತಪಡಿಸಿದಾಗ ಆತ ಹತ್ಯೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆ ಮೂಲದ ಪ್ರಸ್ತುತ ಮಂಗಳೂರಿನ ತೋಕೂರು ಗ್ರಾಮದ ಜೋಕಟ್ಟೆ ಬಾಡಿಗೆ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ(51) ಬಂಧಿತ ಆರೋಪಿ.
ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸ್ತವ್ಯವಿದ್ದರು. ಕೈನೋವಿನ ಚಿಕಿತ್ಸೆಗೆಂದು ಬೆಳಗಾವಿಯಿಂದ ಬಂದಿದ್ದ ಅವರ ಸಹೋದರನ ಪುತ್ರಿ 13ವರ್ಷದ ಬಾಲಕಿ ಕಳೆದ 4ದಿನಗಳಿಂದ ಅವರ ಮನೆಯಲ್ಲಿ ವಾಸ್ತವ್ಯವಿದ್ದಳು. ಆಗಸ್ಟ್ 6ರಂದು ಎಂದಿನಂತೆ ಮನೆಯಲ್ಲಿದ್ದ ಎಲ್ಲರೂ ಕೆಲಸಕ್ಕೆ ಹೋಗಿದ್ದರು. ಬೆಳಗ್ಗೆ 10.30ರ ವೇಳೆಗೆ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದಾರೆ. ಅದರಂತೆ ಅವರು ಫೋನ್ ಕೊಡಲು ಬಂದಾಗ ಬಾಡಿಗೆ ಮನೆಯಲ್ಲಿ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಕಂಡುಬಂದಿದೆ. ವಿಚಾರ ತಿಳಿದು ಹನುಮಂತ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಫಕೀರಪ್ಪನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿ ಫಕೀರಪ್ಪ ಕಳೆದ ಆರು ತಿಂಗಳಿನಿಂದ ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಈತ ಮೃತ ಬಾಲಕಿಯ ಚಿಕ್ಕಪ್ಪನಿಗೆ ಪರಿಚಿತನಾಗಿದ್ದ. ಆದ್ದರಿಂದ ಜೋಕಟ್ಟೆಯ ಬಾಡಿಗೆ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಅದೇ ರೀತಿ ಆಗಸ್ಟ್ 6ರಂದು ಬೆಳಗ್ಗೆ ಮನೆಯಲ್ಲಿ ಬಾಲಕಿ ಒಬ್ಬಳೆ ಇದ್ದಾಗ ಬಂದಿದ್ದಾನೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ.
Chikmagalur
ಮಲೆಮನೆ: ಮರ ಬಿದ್ದು ಮನೆ ಜಖಂ.
ಕೊಟ್ಟಿಗೆಹಾರ: ಜಾವಳಿ ಸಮೀಪದ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ.
ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ.ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ.ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ.ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.