Mandya
ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಗೆ ಬೆಂಬಲ ಘೋಷಣೆ

ಮಂಡ್ಯ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಈ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ತೀರ್ಮಾನ ತೆಗೆದುಕೊಂಡಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆಂಪಯ್ಯ ಸಾಗ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ತೀರ್ಮಾನವನ್ನು ಸಂಘಟನೆಯು ತೆಗೆದುಕೊಂಡಿದ್ದು, ಅದೇ ರೀತಿಯಲ್ಲಿ ಮಂಡ್ಯದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ವಿಶ್ವ ವಿಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂವಿಧಾನ ರಚಿಸಲು ಐತಿಹಾಸಿಕ ಅವಕಾಶ ಒದಗಿದ ಹಿನ್ನೆಲೆಯಲ್ಲಿ ಸಮ ಸಮಾಜ ತರಲು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನಿರ್ಮಾಣ ಮಾಡಲು, ಭಾರತ ಸಂವಿಧಾನ ರಚಿಸಿ ಜಾರಿಗೊಳಿಸಿದ್ದರು. ಆದರೆ ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮಹಿಳೆಯರು, ರೈತರು, ಅಲ್ಪಸಂಖ್ಯಾತರು, ಹಾಗು ಕೃಷಿ ಕಾರ್ಮಿಕರು ತಲೆ ಎತ್ತಿ ನಿಲ್ಲುವ ಸಮಯದಲ್ಲಿ ಮನುವಾದಿ ಆರ್ ಎಸ್ಸೆಸ್ ಮುಖವಾಣಿ ಬಿಜೆಪಿ ರಾಜ್ಯಾಧಿಕಾರದ ಮೂಲಕ ಈ ಎಲ್ಲಾ ಭಾರತೀಯರ ಬದುಕಿಗೆ ಕಂಟಕವಾಗಿ ನಿಂತಿದೆ. ಭಾರತವನ್ನು, ಭಾರತೀಯತೆಯನ್ನು, ಭಾರತದ ಸಂವಿಧಾನ, ಪ್ರಜಾಪ್ರಭುತ್ವವನ್ನು ಅಪಾಯದಂಚಿಗೆ ತಂದು ನಿಲ್ಲಿಸಿದೆ. ಆದಕಾರಣ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಅನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘಟನೆಯ ರಾಮಾನಂದ ತರೀಕೆರೆ, ಸೋಮಶೇಖರ, ಚಂದ್ರಶೇಖರ, ಸುರೇಶ ಉಪಸ್ಥಿತರಿದ್ದರು.
Mandya
ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ, ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ಎಂ.ಉದಯ್

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ ಹಾಗೂ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮ ನಿಯಮಿತದ ಕೆರಗೋಡು ಶಾಖಾ ನಾಲೆಯಡಿಯಲ್ಲಿ ಬರುವ ಬೆಸಗರಹಳ್ಳಿ ಕೆರೆಯ ಹೆಚ್‌ಎಲ್‌ಸಿ ಕಾಲುವೆ ಅಭಿವೃದ್ಧಿ ಮತ್ತು 21ನೇ ನಾಲೆಗೆ ಹೋಗುವ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 499.50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಸದರಿ ನಾಳೆ ಮತ್ತು ರಸ್ತೆ ಅಭಿವೃದ್ಧಿಯಿಂದ ಈ ಭಾಗದ ರೈತರಿಗೆ ನೀರಿನ ಸುಗಮ ಲಭ್ಯತೆ, ಜಲಾನಯನ ವ್ಯವಸ್ಥೆಯ ಸುಧಾರಣೆ, ರೈತೋದ್ಯಮಕ್ಕೆ ನೆರವು, ಸ್ಥಳೀಯರ ಸಂಚಾರಕ್ಕೆ ಉತ್ತಮ ರಸ್ತೆ ವ್ಯವಸ್ಥೆ ದೊರಕುವುದಾಗಿ ಎಂದರು.
ನಮ್ಮ ಗ್ರಾಮ ನಮ್ಮ ಅಭಿವೃದ್ಧಿ ಎಂಬ ಧ್ಯೇಯದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ಗ್ರಾಮದ ಎಲ್ಲಾ ಮುಖ್ಯಸ್ಥರು ಹಾಗೂ ರೈತರುಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಕಿವಿಮಾತು ಹೇಳಿದರು.
ಈ ವೇಳೆ ಮನಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ. ಗ್ರಾ.ಪಂ.ಸದಸ್ಯ ಬಾಬು ಸೇರಿದಂತೆ ಮುಖಂಡರುಗಳು ಹಾಜರಿದ್ದರು.
Mandya
ಅಕ್ರಮವಾಗಿ ಮಧ್ಯ ಮಾರಾಟ, ಗ್ರಾಮಸ್ಥರಿಂದ ಪ್ರತಿಭಟನೆ.

ಕೆ.ಆರ್.ಪೇಟೆ : ತಾಲ್ಲೂಕಿನ ಚೌಡಸಮುದ್ರ ಗ್ರಾಮದಲ್ಲಿ ಎಗ್ಗಿಲ್ಲದೆ, ಅಕ್ರಮವಾಗಿ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ನಡೆಯುತ್ತಿದ್ದು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು.
ಗ್ರಾಮದಲ್ಲಿ ಅಕ್ತಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಕುಡಿತದ ಚಟಕ್ಕೆ ಬಿದ್ದು ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ಗ್ರಾಮದಲ್ಲಿ ಜನರ ಅಶಾಂತಿಗೆ ಕಾರಣವಾಗಿರುವ ಅಕ್ರಮ ಮದ್ಯದಂಗಡಿಯನ್ನು ಮುಚ್ಚಿಸಿ, ಗ್ರಾಮಸ್ಥರ ವಿರೋಧದ ನಡುವೆಯೂ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ಕಿಡಿಗೇಡಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲೂಕು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಪ್ರಭಾವಿ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಮದಲ್ಲಿ ಹಲವು ಬಾರಿ ನ್ಯಾಯ ಮಾಡಿ, ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರೂ ಅಕ್ರಮ ಮಧ್ಯ ಮಾರಾಟ ನಿಂತಿಲ್ಲ. ಅಬಕಾರಿ ಅಧಿಕಾರಿಗಳು ಹಾಗೂ ಪೋಲೀಸರ ಕುಮ್ಮಕ್ಕಿನಿಂದಲೇ ಅಕ್ರಮವಾಗಿ ಮಧ್ಯ ಮಾರಾಟ ನಡೆಯುತ್ತಿದೆ ಎಂದು ಗ್ರಾಮಸ್ಥರು ಕಿಡಿ ಕಾರಿದರು.
ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದಿಂದ ಕುಡಿತದ ಚಟಕ್ಕೆ ಗ್ರಾಮದ ಕೆಲ ಜನರು ಹಾಗೂ ಯುವಕರು ದಾಸರಾಗಿ, ಪ್ರತಿನಿತ್ಯವೂ ಗ್ರಾಮದಲ್ಲಿ ಗಲಾಟೆ ಗದ್ದಲಗಳು ನಡೆಯುತ್ತಿವೆ. ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಅಕ್ರಮ ಮದ್ಯ ಮಾರಾಟದ ಅಡ್ಡೆಯ ಮೇಲೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಮಧ್ಯದ ಮಾರಾಟವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕಂಡಕ್ಟರ್ ಶಿವಮೂರ್ತಿ, ರೇವಣ್ಣ, ಚಂದ್ರು, ಗೀತಾ, ಶಿವಪ್ಪ, ಗ್ರಾ.ಪಂ ಸದಸ್ಯ ಶಿವಕುಮಾರ್, ಬಿ.ಎಸ್. ಕುಮಾರಿ, BSNL ಶಿವಣ್ಣ, ಟೈಲರ್ ಲೋಕೇಶ್, ರಾಜಣ್ಣ, ಪುಟ್ಟರಾಜು, ರವಿ, ಅಣ್ಣಯ್ಯಣ್ಣ, ಮಹೇಶ್, ಮಂಜುನಾಥ್,ರತ್ನಮ್ಮ, ಅಕ್ಕಯಮ್ಮ, ಮಧು, ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
Mandya
ಬಾಲಕಿ ಮೇಲೆ ̇ಲೈಂ*ಗಿಕ ದೌರ್ಜನ್ಯ : ಅಪರಾಧಿಗೆ ಜೀವಾವಧಿ ಶಿಕ್ಷೆ

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗ್ರಾಮವೊಂದರಲ್ಲಿ ಮೂರುವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಂಡ್ಯ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಣ್ಣ ಬಿನ್ ಲೇಟ್ ಚಿಕ್ಕಣ್ಣ (59 ವರ್ಷ) ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದು, ಆತ ಡಿ.11, 2023 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಅಮ್ಮನಿಗೆ ಹೇಳಬಾರದು ಎಂದು ಬೆದರಿಕೆ ಹಾಕಿದ್ದ ಎನ್ನುವುದು ಸಾಬೀತಾಗಿದೆ.
ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯಿದೆ ಅಡಿ ಅಂದಿನ ಪಿ.ಎಸ್.ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದರು.
ಈ ಹಿಂದೆ ಕೆ.ಆರ್.ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆ.ಆರ್.ಸಾಗರ ಠಾಣೆಯ ಪಿ.ಎಸ್.ಐ ರಮೇಶ್ ಕರಕೀಕಟ್ಟಿ ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಸತೀಶ್, ಹೆಚ್.ಸಿ. ಯವರಾದ ಯಧುರಾಜ್, ಸಿ.ಪಿ.ಸಿಯವರಾದ ರೇಣುಕುಮಾರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ಈ ತನಿಖಾ ತಂಡದಲ್ಲಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಅವರು ಇಂದು (ಜೂ11) ಆರೋಪಿಗೆ ಜೀವಿತಾವಧಿ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸಂತ್ರಸ್ಥರ ಪರ ವಾದ ಮಂಡಿಸಿದ್ದು, ಕೆ.ಆರ್.ಸಾಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
State24 hours ago
ಹಾರ್ಟ್ ಅಟ್ಯಾಕ್ ನ ಈ ಕೆಲವು ಲಕ್ಷಣಗಳನ್ನು ನಿರ್ಲಕ್ಷ ಮಾಡಬೇಡಿ : ಈ 3C ಗಳನ್ನು ನೆನಪಿಟ್ಟರೆ ಜೀವ ಉಳಿಸಿಕೊಳ್ಳಬಹುದು
-
Special9 hours ago
ಸೃಷ್ಟಿಯ ನಿಯಮವನ್ನು ಮೀರುವುದೆಂದರೆ ಇದೇ….?
-
Chamarajanagar10 hours ago
ಮಹಿಳಾ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
-
Chamarajanagar4 hours ago
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ
-
Mysore6 hours ago
ಮುಖ್ಯಮಂತ್ರಿ ಬದಲಾವಣೆ ವಿಚಾರ| ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ: ಎಚ್.ಸಿ.ಮಹದೇವಪ್ಪ
-
Hassan5 hours ago
ಮುಸುಕಿನ ಜೋಳಕ್ಕೆ ಬಿಳಿ ಸುಳಿ ರೋಗ: ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ ಎ.ಎಸ್.ಪಾಟೀಲ್ ನಡಹಳ್ಳಿ
-
Mysore6 hours ago
ಸರ್ಕಾರದ ಸಾಧನೆಗಳ ಸಮಾವೇಶ, ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಎಚ್.ಸಿ.ಮಹದೇವಪ್ಪ
-
Kodagu24 hours ago
4 ಕಾಡಾನೆಗಳ ಗುಂಪನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ