Connect with us

State

ದರ್ಶನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಂದ ದವಸ ಧಾನ್ಯಗಳ ಕೊಡುಗೆ!!! ದರ್ಶನ ಮನೆಗೆ ಧಾನ್ಯಗಳ ವಿತರಣೆ!!

Published

on

ಬೆಂಗಳೂರು: ಈ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 47ನೇ ಹುಟ್ಟುಹಬ್ಬವನ್ನು ಫೆಬ್ರವರಿ 16 ರಂದು ಆಚರಿಸಿಕೊಳ್ಳುತ್ತಿದ್ದಾರೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸಲಿದ್ದಾರೆ.

ದರ್ಶನ್ ಅವರ ಹುಟ್ಟುಹಬ್ಬ ತುಂಬಾ ದಿನ ಇರುವಾಗಲೇ ಅಭಿಮಾನಿಗಳು ಹೇಗೆಲ್ಲಾ ಬರ್ತಡೆಯನ್ನು ಸೆಲೆಬ್ರೇಟ್ ಮಾಡಬೇಕು, ಎಂಬುದರ ಸಿದ್ಧತೆಯಲ್ಲಿದ್ದಾರೆ. ದರ್ಶನ್ ಮನೆ ಮುಂದೆ ಒಂದು ಪೋಸ್ಟರ್ ಹಾಕಲಾಗಿದೆ.

ಅಷ್ಟಕ್ಕೂ ಆ ಪೋಸ್ಟರ್ ಅಲ್ಲಿ ಏನಿದೆ?

ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿರುವ ದರ್ಶನ್ ಪೋಸ್ಟರ್ ಮೂಲಕ ನನ್ನ ಬರ್ತಡೇಗೆ ಕೇಕ್ ,ಹಾರ, ಮುಂತಾದವುಗಳನ್ನು ತರದೆ ತರುವುದಾದರೆ ರೇಷನ್ ದವಸ ಧಾನ್ಯಗಳನ್ನು ತಂದುಕೊಡಿ ಎಂದು ಕೇಳಿಕೊಂಡಿದ್ದಾರೆ. ನೀವು ತಂದ ಆಹಾರವನ್ನು ಸೇರಿಸಿ ಆಶ್ರಮಗಳಿಗೆ ನೀಡುತ್ತೇನೆ. ನೀವು ಇಲ್ಲಿಗೆ ಬಂದು ಪಟಾಕಿ ಘೋಷಣೆಗಳನ್ನು ಹೋಗುವುದರಿಂದ ಅಕ್ಕಪಕ್ಕದ ಮನೆಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಇಂತಹ ಯಾವುದೇ ಸಮಸ್ಯೆಗಳ ನಡೆಯುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಕಳೆದ ಐದು ಆರು ವರ್ಷಗಳಿಂದಲೂ ದರ್ಶನ್ ಹುಟ್ಟು ಹಬ್ಬದ ದಿನ ಅಭಿಮಾನಿಗಳು ದವಸ ಧಾನ್ಯಗಳನ್ನು ತಂದುಕೊಡುತ್ತಿದ್ದಾರೆ. ಅದು ಈಗಲೂ ಮುಂದುವರೆಯಲಿ. ಈಗಾಗಲೇ ಅಭಿಮಾನಿಗಳು ಮೂಟೆಗಟ್ಟಲೆ ಅಕ್ಕಿಯನ್ನು ತಂದು ನೀಡುತ್ತಿದ್ದಾರೆ.

ದರ್ಶನ್ ಹುಟ್ಟು ಹಬ್ಬಕ್ಕೆ ಅಕ್ಕಿ ಮೂಟೆ ತರುತ್ತಿರುವ ಅಭಿಮಾನಿಗಳು.

ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್ ಮನೆಗೆ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಕ್ಕಿ ಮೂಟೆಯನ್ನುತಂದಾಕುತಿದ್ದಾರೆ. ತಮಗೆ ಏನು ಇಷ್ಟವೋ ಅದನ್ನು ತಂದು ಹಾಕುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ಕಣ್ಣಾರೆ ಕಂಡು ಕೈಕುಲಿಕಿ ಫೋಟೋ ತೆಗೆಸಿಕೊಂಡು ಹೋಗುತ್ತಿದ್ದಾರೆ.

ದರ್ಶನ ನ್ಯೂ ಸಿನಿಮಾ ತೆರೆ ಕಾಣುವ ಸಾಧ್ಯತೆ.

ಕಾಟೇರದ ಚಿತ್ರದ ತರುವಾಯ ದರ್ಶನ್ ಡೆವಿಸ್ ಚಿತ್ರವನ್ನು ಮಾಡುತ್ತಿದ್ದಾರೆ. ಮಿಲನ ಪ್ರಕಾಶನ ನಿರ್ದೇಶನದ ಈ ಚಿತ್ರ ಈಗಾಗಲೇ ಶುರುವಾಗಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇದರ ಶೂಟಿಂಗ್ ವೇಗದಿಂದ ಸಾಗುತ್ತಿದೆ. ಈ ಸಿನಿಮಾದ ಫಸ್ಟ್ ಲುಕ್ ಅನ್ನು ಫೆಬ್ರವರಿ 16ರಂದು ಬಿಡುಗಡೆಗೊಳಿಸಲಾಗುತ್ತದೆ. ಇದು ದರ್ಶನ್ ಹುಟ್ಟು ಹಬ್ಬಕ್ಕೆ ಮತ್ತಷ್ಟು ಕಳೆಯನ್ನು ತಂದಿದೆ.

ದರ್ಶನ್ ತಮ್ಮ ಅಭಿಮಾನಿಗಳಲ್ಲಿ ಯಾವುದೇ ಬ್ಯಾನರ್ ಗಳನ್ನ ಕಟ್ಟಬೇಡಿ ಎಂದು ಮನವಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

 

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ.  ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.

Continue Reading

Special

ನಮ್ಮ ಮೆಟ್ರೋ ದರ ಏರಿಕೆ: ಕೇಂದ್ರ ಸಚಿವ ಎಂ.ಎಲ್​​. ಖಟ್ಟರ್ ಭೇಟಿ ಮಾಡಿದ ತೇಜಸ್ವಿ ಸೂರ್ಯ

Published

on

ಬೆಂಗಳೂರು: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆ. 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​. ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್.​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

 

ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಅನೇಕ ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Continue Reading

Special

ಕೊನೆಗೂ ಬಂತು ಯುಪಿಎಸ್‌ಸಿ ನೇಮಕಾತಿ: 933 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವಿಕೆ ಆರಂಭ!

Published

on

ದೇಶದ ಅತ್ಯುನ್ನತ ಆಡಳಿತಾತ್ಮಕ ಸೇವೆಗಳಾದ ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ವಿದೇಶಾಂಗ ಸೇವೆ (IFS), ಭಾರತೀಯ ಆದಾಯ ಸೇವೆ (IRS) ಸೇರಿದಂತೆ ವಿವಿಧ Civil Services ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗ (UPSC) ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 933 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Any Degree) ಪಡೆದ ಅಭ್ಯರ್ಥಿಗಳು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
24-02-2026 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪುರುಷ ಅಭ್ಯರ್ಥಿಗಳಿಗೆ ಮಾತ್ರ 100 ರೂಪಾಯಿಯ ಶುಲ್ಕವಿರುತ್ತದೆ.

ಅಧಿಕೃತ ಅರ್ಜಿ ವೆಬ್‌ಸೈಟ್: https://upsconline.nic.in/

ಈ ವರ್ಷದ ಅರ್ಜಿ ಪ್ರಕ್ರಿಯೆಯಲ್ಲಿ ಬದಲಾವಣೆಗಳು:

* ಅರ್ಜಿ ಸಲ್ಲಿಸುವ ಮೊದಲು ನೊಂದಣಿ ಮಾಡಿ ನೋಂದಣಿ ಸಂಖ್ಯೆ ಪಡೆಯುವುದು ಅಗತ್ಯ, ಈ ಸಂಖ್ಯೆ ಎಲ್ಲಾ ಯುಪಿಎಸ್ಸಿ ಪರೀಕ್ಷೆಗಳಿಗೆ ಒಂದೇ ಆಗಿರುತ್ತದೆ.

* ಅರ್ಜಿ ಸಲ್ಲಿಸಿದ ನಂತರ ಪ್ರತಿ ವರ್ಷವೂ ತಿದ್ದುಪಡಿಗೆ ಅವಕಾಶ ಕೊಟ್ಟಂತೆ, ಈ ವರ್ಷ ತಿದ್ದುಪಡಿ ಮಾಡಲು ಅವಕಾಶವಿಲ್ಲ.

* ಪ್ರೀಲಿಮ್ಸ್ ಪರೀಕ್ಷೆ ಮೊದಲೇ ನಿಗದಿಯಾದ ದಿನವಾದ ಮೇ. 24 ರಂದೇ ನಡೆಯುತ್ತದೆ.

ವಯೋಮಿತಿ, ವರ್ಗಾವಾರು ಮೀಸಲಾತಿ, ಪರೀಕ್ಷಾ ಮಾದರಿ, Prelims ಮತ್ತು Mains ಪಠ್ಯಕ್ರಮ, ಅರ್ಜಿ ಶುಲ್ಕ ಹಾಗೂ ಇತರೆ ಸಂಪೂರ್ಣ ಮಾಹಿತಿಗಾಗಿ UPSC ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ನಲ್ಲಿ ಪಡೆಯಬಹುದು.

ರಾಷ್ಟ್ರ ಸೇವೆ ಮಾಡಬೇಕೆಂಬ ಕನಸು ಹೊಂದಿರುವ ಯುವ ಅಭ್ಯರ್ಥಿಗಳಿಗೆ ಇದು ಒಂದು ಮಹತ್ವದ ಅವಕಾಶವಾಗಿದ್ದು, ಯುವಕರು ಈ ಮೂಲಕ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವತ್ತ ಹೆಜ್ಜೆ ಇಡಬೇಕು.

Continue Reading

Trending

error: Content is protected !!