Connect with us

Kodagu

ದಸರಾ ಸಾಂಸ್ಕೃತಿಕ ಕಾರ್ಯಕ್ರಮ – ಎರಡನೇ ದಿನ ನೃತ್ಯ ವೈವಿಧ್ಯಗಳೊಂದಿಗೆ ಮನರಂಜಿಸಲಿರುವ ಸಂಗೀತ

Published

on

ಜನಮಿತ್ರ ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಎರಡನೇ ದಿನವಾದ ಮಂಗಳವಾರ ವೈವಿಧ್ಯಮಯ ಕಾರ್ಯಕ್ರಮಗಳು ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲ್ಪಟ್ಟಿದೆ.
ಮಡಿಕೇರಿಯ ನಾಟ್ಯ ನಿಕೇತನ ಸಂಗೀತ ನೃತ್ಯಶಾಲಾ ತಂಡದಿoದ ನೃತ್ಯ ವೈವಿಧ್ಯ,

  • ಕುಶಾಲನಗರದ ಕುಂದನ ನಾಟ್ಯಾಲಯ ತಂಡದಿoದ , ಶ್ರೀ ಮಂಜುನಾಥ ಮಹಿಮೆ ನೃತ್ಯ ರೂಪಕ,
  • ವಿರಾಜಪೇಟೆಯ ಜಗನ್ಮೋಹನ ನಾಟ್ಯಾಲಯ ತಂಡದಿoದ ಭಾರತೀಯ ಶಾಸ್ತ್ರೀಯ ನೃತ್ಯ,
  • ಕುಶಾಲನಗರದ ಟೀಮ್ ಅ್ಯಟಿಟ್ಯೂಡ್ ತಂಡದಿoದ ನೃತ್ಯ ವೈವಿಧ್ಯ ,
  • ಕುಶಾಲನಗರದ ಮಂಜುಭಾರ್ಗವಿ ಮತ್ತು ತಂಡದಿoದ ನೃತ್ಯ 
  • ಮಡಿಕೇರಿಯ ಮುತ್ತಿನ ಹಾರ ತಂಡದಿoದ ಸಂಗೀತ ರಸಮಂಜರಿ ಕಾರ್ಯಕ್ರಮ

ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜಿತವಾಗಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ

Published

on

 

ವರದಿ:ಝಕರಿಯ ನಾಪೋಕ್ಲು

 

ನಾಪೋಕ್ಲು :ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರೂರು ಗ್ರಾಮದ ಲೈನ್ ಮನೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆಯಾಗಿರುವ ಘಟನೆ ಶನಿವಾರ ರಾತ್ರಿ ವರದಿಯಾಗಿದೆ.

 

ಬಲ್ಲಮಾವಟಿ ಪೇರೂರು ಗ್ರಾಮದ ತೋಳಂಡ ಪೂಣಚ್ಚ ಎಂಬುವವರ ಲೈನ್ ಮನೆಯಲ್ಲಿ ಶನಿವಾರ ರಾತ್ರಿ (ದಿನಾಂಕ:15/03/2025/ 8.ಗಂಟೆಗೆ )ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿ ಬಳಿಕ ಬಿಟ್ಟುಪರಾರಿ ಯಾಗಿದ್ದಾಳೆ.

ಜನರು ವಾಸವಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿದ ಸ್ಥಳೀಯರು ಮನೆ ಮಾಲೀಕ ಪೂಣಚ್ಚ ಎಂಬುವರಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದ ಮಾಲಿಕ ಪೂಣಚ್ಚ ಎಂಬುವವರು ಮಗುವಿನ ಬಳಿ ಯಾರು ಇಲ್ಲದಿರುವುದನ್ನು ಕಂಡು 112 ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ

ಸ್ಥಳಕ್ಕೆ ಧಾವಿಸಿದ 112 ಸಿಬ್ಬಂದಿಗಳಾದ ಮುಖ್ಯಪೇದೆ ರಾಜೇಶ್, ಮತ್ತು ಮೊಣ್ಣಪ್ಪ ರವರು ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಆಂಬುಲೆನ್ಸಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ರಕ್ತದ ಮಡುವಿನಲ್ಲಿ ಇರುವೆಗಳೊಂದಿಗೆ ಜೀವ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಗುವಿನ ಅರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Kodagu

ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ

Published

on

ಮಡಿಕೇರಿ: ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.

ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.

ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.

Continue Reading

Kodagu

ಮಾ.16 ಹಾಗೂ 17ರಂದು ಕೊಳಕೇರಿ ಬೊಮ್ಮಂಜಿ ಭದ್ರಕಾಳಿ ಉತ್ಸವ

Published

on

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು: ನಾಪೋಕ್ಲು ಬಳಿಯ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುವ ಶ್ರೀ ಭದ್ರಕಾಳಿ ದೇವರ ಉತ್ಸವವು ಮಾ.16ಮತ್ತು17ರಂದು ನಡೆಯಲಿದೆ.

ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

Trending

error: Content is protected !!