Chikmagalur
ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ನಿದನ
ಚಿಕ್ಕಮಗಳೂರು : ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ..
Chikmagalur
ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ
ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡವರ ಬದುಕು ದುಸ್ತರ
“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.
ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.
Chikmagalur
ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.

ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
Chikmagalur
ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ
ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಗಂಧದ ಬೆಳೆಗಾರ ವಿಶುಕುಮಾರ್ ರಿಂದ ಅಧಿಕಾರಿಗಳಿಗೆ ಆಹ್ವಾನ ಮಾಡಿದರು.ವಾರದ ಹಿಂದೆ ದಯಾಮರಣಕ್ಕೆ ಮನವಿ ಮಾಡಿದ್ದ ಬೆಳೆಗಾರ ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ.

ನಾಳೆ ಬೆಳಗ್ಗೆ 10ಕ್ಕೆ ಸಂತಾಪ ಸಭೆ, ಮಧ್ಯಾಹ್ನ 1 ಗಂಟೆಗೆ ಊಟಕ್ಕೆ ಕರೆದ ಬೆಳೆಗಾರ,ಸಿಸಿಎಫ್ ರನ್ನ ಭೇಟಿ ಮಾಡಿಸಿ, ಇಲ್ಲ ಶಿವಮೊಗ್ಗ ಸಿಸಿಎಫ್ ಕಚೇರಿ ಬಳಿ ಕಾರಿನಲ್ಲೇ ಆತ್ಮಹತ್ಯೆ ಬೆದರಿಕೆ.

ಸಂತಾಪ ಸಭೆಯಲ್ಲಿ ಭಾಗವಹಿಸುವವರು ಎನ್.ಎಚ್.ಎ.ಐ.ನ ಅಧಿಕಾರಿಗಳು, ಅರಣ್ಯ ಇಲಾಖೆಯ ಭಷ್ಟ ಅಧಿಕಾರಿಗಳು, ಪೊಲೀಸ್ ಇಲಾಖೆಯ ಒಳ್ಳೆಯ ಅಧಿಕಾರಿಗಳು, ವಿಶೇಷ ಭೂಸ್ವಾದೀನ ಅಧಿಕಾರಿಗಳು, ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತು ವಿಭಿನ್ನ ರೀತಿ ಆಕ್ರೋಶ.

ಗಂಧದ ಬೆಳೆಗೆ ಸೂಕ್ತ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಬೆಳೆಗಾರನ ಆಕ್ರೋಶ. ರಾಷ್ಟ್ರೀಯ ಹೆದ್ದಾರಿಗೆ ಇವರ ಜಮೀನು, ಗಂಧದ ಮರಗಳು ಹೋಗುತ್ತಿವೆ. ಸೂಕ್ತ ಪರಿಹಾರ ನೀಡದಿದ್ದಕ್ಕೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ.
ಒಂದು ಗಂಧದ ಮರಕ್ಕೆ 420 ರೂ ನಿಗದಿ ಮಾಡಿರುವ ಅರಣ್ಯಾಧಿಕಾರಿಗಳು, 1 ಮಾವಿನ ಮರಕ್ಕೆ 63 ಸಾವಿರ, ತೆಂಗಿಗೆ 37 ಸಾವಿರ, ಬೇವಿಗೆ 2200, ನಿಂಬೆ ಗಿಡಕ್ಕೆ 3400 ರೂ , ಒಂದು ಶ್ರೀಗಂಧದ ಮರಕ್ಕೆ ಕೇವಲ 420 ರೂ ನಿಗದಿ ಮಾಡಿರುವ ಅಧಿಕಾರಿಗಳು ಕೋರ್ಟ್ 25 ಸಾವಿರ ನಿಗಧಿ ಮಾಡಿ ವೈಜ್ಞಾನಿಕ ದರ ನೀಡುವಂತೆ ಸೂಚಿಸಿದ್ದರು ಮಾಡದ ಆರೋಪ , ಬೆಳೆಗಾರ ಅಧಿಕಾರಿಗಳ ನಡೆಗೆ ಬೇಸತ್ತು ವಿಭಿನ್ನ ಶೈಲಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
-
Mandya17 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya18 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan15 hours agoರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ
-
Hassan18 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Mysore23 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya15 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Mandya16 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Hassan23 hours agoಚಿರತೆ ದಾಳಿ: ಗೌತವಳ್ಳಿಯಲ್ಲಿ ಇಬ್ಬರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
