Connect with us

Mandya

ಜಿಲ್ಲೆಯಲ್ಲಿ ಹರಡುತ್ತಿರುವ ಡೆಂಗ್ಯೂ ರೋಗವನ್ನು ನಿಯಂತ್ರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Published

on

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚುತ್ತಿದ್ದು, ಡೆಂಗ್ಯೂ ರೋಗ ನಿಯಂತ್ರಣ ಮಾಡಲು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅಂತರ ಇಲಾಖೆಯ ಸಮನ್ವಯ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳಿಗೆ ಮಕ್ಕಳಿಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸುವಂತೆ ತಿಳಿಸಿ, ಹಾಸ್ಟಲ್ ಗಳ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 189 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹಳೆಯ ಟೈರ್, ತೆಂಗಿನ ಚಿಪ್ಪುಗಳು ಮುಂತಾದ ವಸ್ತುಗಳನ್ನು ತೆರವುಗೊಳಿಸಿ. ಶುದ್ಧ ಕುಡಿಯುವ ನೀರನ್ನು ಬಳಸಿ ಎಂದರು.

ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳನ್ನು ಪರಿಶೀಲಿಸಿ, ಎಲ್ಲಿಯೋ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗದಂತೆ ನೋಡಿಕೊಳ್ಳಿ ಎಂದರು.

ಡೆಂಗ್ಯೂ ಪ್ರಕರಣಗಳು ಹೆಚ್ಚು ವರದಿಯಾಗುವ ಸ್ಥಳಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಡೆಂಗ್ಯೂ ರೋಗ ಹರಡದಂತೆ ನಿಯಂತ್ರಿಸಿ ಎಂದರು.

ಸಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಲು ಸಾರ್ವಜನಿಕರಿಗೆ ಶುದ್ಧ, ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವುದು ಮುಖ್ಯ. ಸ್ಥಳೀಯ ಸಂಸ್ಥೆಗಳು ನೀರನ್ನು ಪರೀಕ್ಷಿಸಿ ವರದಿ ಪಡೆದ ತಕ್ಷಣ ಆರೋಗ್ಯ ಇಲಾಖೆಯೊಂದಿಗೆ ಹಂಚಿಕೊಂಡು ವಿಶ್ಲೇಷಣೆ ನಡೆಸಿ, ನೀರಿನಲ್ಲಿ ರೋಗವಾಹಕ ಅಂಶಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದರು.

ಶಾಲೆಯ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ

ಜಿಲ್ಲೆಯಲ್ಲಿರುವ ಶಾಲಾ, ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ, ಅಂಗಡಿಗಳ ಪರವಾನಗಿ ರದ್ದು ಪಡಿಸುವಂತೆ ತಿಳಿಸಿದರು.

ಕೆಲವು ಶಾಲೆಯ ಸುತ್ತಮುತ್ತ ತಂಬಾಕು ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿದೆ. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ತಮ್ಮ ಶಾಲೆಯ ಸುತ್ತಮುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟವಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಹೇಳಿದರು.

ತಂಬಾಕು ಮಾರಾಟ ಮಾಡುವವರು ಇನ್ನೂ ಮುಂದೆ ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತಿಗಳಲ್ಲಿ ತಂಬಾಕು ಮಾರಾಟ ರಹದಾರಿ ಪಡೆಯಬೇಕಿರುತ್ತದೆ. ಇದಕ್ಕೆ ನಗರ ಸ್ಥಳೀಯ ಸಂಸ್ಥೆಗಳು ಸಮಿತಿ ರಚಿಸಿಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶವು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ 2023 ರ ಏಪ್ರಿಲ್ ಮಾಹೆಯಿಂದ ಮಾರ್ಚ್ 2024 ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 88 ಕಡೆ ಕೋಟ್ಪಾ ದಾಳಿ ನಡೆಸಿ ರೂ 1,34,860 ಹಣ ದಂಡ ವಿಧಿಸಿದೆ. 1,031 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ರಕ್ತದಾನ ಶಿಬಿರ ಹೆಚ್ಚು ಆಯೋಜಿಸಿ

ಜಿಲ್ಲೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎನ್.ಎಸ್.ಎಸ್ ಅಧಿಕಾರಿಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚು, ಸಾರ್ವಜನಿಕರು ನಾಯಿ ಕಡಿತಕ್ಕೆ ಒಳಗಾದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಇಲ್ಲವಾದಲ್ಲಿ ರೇಬಿಸ್ (rabies) ಗೆ ತಿರುಗಿ ಸಾವು ಸಂಭವಿಸಬಹುದು ಎಂದರು.

ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಬೇಕು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಮಾಂಸ ಮಾರಾಟ ಮಾಡುವ ಅಂಗಡಿಗಳಲ್ಲಿನ ತ್ಯಾಜ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವಂತೆ ಸೂಕ್ತ ಕ್ರಮ ವಹಿಸಿ ಎಂದು ತಿಳಿಸಿದರು.

ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೆ ರೇಬಿಸ್ ಕಾಯಿಲೆ ಬಗ್ಗೆ ಅರಿವು ಮೂಡಿಸಿ. ನಾಯಿ ಕಚ್ಚಿದ ನಂತರ ಚಿಕಿತ್ಸೆ ಪಡೆಯದಿದ್ದರೆ ಸಾವು ಖಚಿತ ಎಂಬ ಬೋರ್ಡ್ ಅನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್.ರಾಜಮೂರ್ತಿ, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

 ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ

Published

on

ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು

ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.

ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

Continue Reading

Mandya

ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ

Published

on

ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.

Continue Reading

Mandya

ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

Published

on

ಮದ್ದೂರು:  ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.


ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.

ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.

ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.

ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.

Continue Reading

Trending

error: Content is protected !!