Mandya
ಕುಡಿಯುವ ನೀರಿಗೆ ಬೋರ್‌ವೆಲ್ ಕೊರೆಯಲು ಮೊದಲ ಆದ್ಯತೆ: ಜಿಲ್ಲಾಧಿಕಾರಿ
ಮಂಡ್ಯ: ಬೋರ್ ಕೊರೆಯುವ ನೊಂದಣಿಯಾಗಿರುವ ರಿಗ್ ಮಾಲೀಕರು ಮೊದಲ ಆದ್ಯತೆಯನ್ನು ಕುಡಿಯುವ ನೀರಿಗೆ ಸಂಬಂಧಿಸಿದಂತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಿಗ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಡ್ಯ ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳು ಬರ ಪೀಡಿತವಾಗಿದ್ದು, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬೋರ್‌ವೆಲ್ ರಿಫ್ಲಶಿಂಗ್ ಮತ್ತು ರಿಡ್ರಿಲಿಂಗ್‌ಗಳ ಕೆಲಸಗಳನ್ನು ಮೊದಲು ಮಾಡಬೇಕು. ಜಿಲ್ಲೆಯಲ್ಲಿ ನೊಂದಣಿಯಾಗಿರುವ 13 ರಿಗ್ ಮಾಲೀಕರು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ನೊಂದಾಯಿತ ರಿಗ್ ಮಾಲೀಕರು ಮಾತ್ರ ಬೋರ್ ವೆಲ್ ಕೊರೆಯುವ ಕೆಲಸ ಮಾಡಬೇಕು. ಅದನ್ನು ಹೊರತುಪಡಿಸಿ ಬೇರೆಯವರು, ಹೊರ ಜಿಲ್ಲೆ ಹಾಗೂ ರಾಜ್ಯದವರು ಬೋರ್ ವೆಲ್ ಕೊರೆಯುತ್ತಿರುವುದು ಹಾಗೂ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ಜಿಲ್ಲೆಯಲ್ಲಿ ದೂರು ಕೇಳಿಬರುತ್ತಿದೆ, ಇದನ್ನು ಸರಿಪಡಿಸಿ ಎಂದು ಸೂಚನೆ ನೀಡಿದರು.
ಕಂಟ್ರೋಲ್ ರೂಂ ನೊಂದಾಯಿತ ರಿಗ್ ಮಾಲೀಕರು ಹೊರತುಪಡಿಸಿ ಬೇರೆಯವರು ಅನಧಿಕೃತವಾಗಿ ಬೋರ್‌ವೆಲ್ ಕೊರೆಯುವುದು ಕಂಡುಬಂದಲ್ಲಿ ಅಥವಾ ನಿಗಧಿ ಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಬೋರ್ ವೆಲ್ ಕೊರೆಯಲು ಪಡೆಯುತ್ತಿದ್ದಲ್ಲಿ ದೂರು ಸಲ್ಲಿಸಲು ಕಂಟ್ರೋಲ್ ರೂಂ ಸ್ಥಾಪಿತವಾಗಿದ್ದು, ಸಾರ್ವಜನಿಕರು ದೂ.ಸಂ.08232-220704 ಹಾಗೂ 08232-200704 ಕ್ಕೆ ಕರೆ ಮಾಡಿ ದೂರು ಸಲ್ಲಿಸಿ ಎಂದರು.
ಬೋರ್ ಕೊರೆಯುವ ದರ
ಗ್ರಾಮೀಣ ಕುಡಿಯುವ ನೀರಿನ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವರಾಜು ಅವರು, ರಿಗ್ ಮಾಲೀಕರು ಅವರು ಬೋರ್ ವೆಲ್ ಕೊರೆಯುವ ಮೊದಲು ಸ್ಥಳೀಯ ಸಂಸ್ಥೆಗಳಿಂದ ಎನ್.ಒ.ಸಿ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು. ವಿಫಲವಾದ ಬೋರ್ ವೆಲ್‌ಗಳನ್ನು ಸರಿಯಾದ ರೀತಿಯಲ್ಲಿ ಮುಚ್ಚಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಕೊಳವೆಬಾವಿ ಕೊರೆಯಲು ನಿಗದಿಪಡಿಸಿರುವ ದರದ ವಿವರವು 165 ಮಿ.ಮೀ ವ್ಯಾಸದ ಬೋರ್ ವೆಲ್ ಕೊರೆಯಲು 0 ಯಿಂದ 300 ಅಡಿ ಪ್ರತಿ ಅಡಿಗೆ ರೂ 126/-, 300 ರಿಂದ 400 ಅಡಿಗೆ 148 ರೂ. 400 ರಿಂದ 500 ಅಡಿಗೆ 153 ರೂ, 500 ರಿಂದ 600 ಅಡಿಗೆ 175 ರೂ, 600 ರಿಂದ 700 ಅಡಿಗೆ 188 ರೂ. 700 ರಿಂದ 800 ಅಡಿಗೆ ರೂ 205 ರೂ. ನಿಗದಿಯಾಗಿರುತ್ತದೆ.
ಎಂ.ಎಸ್. ಕೇಸಿಂಗ್ ಪೈಪ್ ಗೆ 1.60 ಮಿ.ಮೀಟರ್ ದಪ್ಪದ ಪ್ರತಿ ಅಡಿಗೆ 420 ರೂ, 1.80 ಮಿ.ಮೀಟರ್ ದಪ್ಪದ ಪ್ರತಿ ಅಡಿಗೆ 450 ರೂ, 2.00 ಮಿ.ಮೀಟರ್ ದಪ್ಪದ ಪ್ರತಿ ಅಡಿಗೆ 480 ರೂ ನಿಗದಿಯಾಗಿರುತ್ತದೆ. ಎಂ.ಎಸ್.ಕೇಸಿಂಗ್ ಕ್ಯಾಪ್ ಒಂದಕ್ಕೆ 164 ರೂ.ನಿಗದಿಯಾಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹಿರಿಯ ಭೂ ವಿಜ್ಞಾನಿ ಎಸ್.ಆರ್.ರಾಜಶ್ರೀ ಇದ್ದರು.
Mandya
ನಾನು ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೇನೆ, ಸರಿ
ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ ಮೆಂಟ್ ಕೊಡುತ್ತಾರೋ ನೋಡೋಣ ಎಂದ ಕೇಂದ್ರ ಸಚಿವರು
ಮಂಡ್ಯ : ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ ಎಂದು ಟಾಂಗ್ ನೀಡಿದರು.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತದ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿ, ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಹೇಳಿಕೆ ನೀಡಿದರು.
ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು, ಇರಲಿ. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟರು.
ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ.. ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ತುಂಗಭದ್ರ ಕ್ರಸ್ಟ ಗೇಟ್ ಬಗ್ಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಆರ್.ಎಸ್ ಜಲಾಶಯ ಸೇರಿದಂತೆ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.
ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.
70 ವರ್ಷಗಳ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.
ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.
ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.
ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.
ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.
Mandya
ಕುಸಿಯುವ ಭೀತಿಯಲ್ಲಿ ಪ್ರಯಾಣಿಕರ ತಂಗುದಾಣ
ಮದ್ದೂರು : ತಾಲೂಕು ಕೊಪ್ಪ ಹೋಬಳಿಯ ಪ್ರಯಾಣಿಕರ ತಂಗು ನಿಲ್ದಾಣದ ಕುಸಿಯುವ ಹಂತದಲ್ಲಿದ್ದು, ದುರಸ್ಥಿ ಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ತಂಗುನಿಲ್ದಾಣದ ಯಾವಾಗ ಬಿಳುತ್ತಾದೋ ಎಂಬ ಭೀತಿ ಪ್ರಯಾಣಿಕರಲ್ಲಿ ಶುರುವಾಗಿದ್ದು, ಮಳೆ ಸುರಿದಾಗ ನಿಲ್ದಾಣದ ಮೇಲ್ಛಾವಣಿಯಿಂದ ನೀರು ಸೋರುತ್ತಿದೆ.
ಇದೀಗ ಮಳೆಗಾಲ ಶುರುವಾಗಿರುವುದರಿಂದ ಸಾರ್ವಜನಿಕ ಕುಳಿತು ಕೊಳ್ಳಲು ಭಯ ಭೀತರಾಗುತ್ತಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಇದರ ಕಡೆ ಗಮನಹರಿಸಿ ದುರಸ್ಥಿಗೆ ಮುಂದಾಗಬೇಕೆಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದ್ದಾರೆ.
Mandya
ಶುದ್ದ ಕುಡಿಯುವ ನೀರಿನ ಘಟಕಕ್ಕೆ ಶಾಸಕರ ಭಾವಚಿತ್ರ ಅಳವಡಿಕೆ – ಕಂಪನಿಯಿಂದ ಬೀಗ
ಭಾರತೀನಗರ : ಟಯೋಟಾ ಕಂಪನಿಯಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣ ಮಾಡಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಅವರ ಭಾವಚಿತ್ರ ಅಳವಡಿಸಿದ್ದ ಹಿನ್ನೆಲೆ ಕಂಪನಿಯಿಂದ ಘಟಕಕ್ಕೆ ಬೀಗ ಜಡಿಯಲಾಗಿದೆ.
ಕಳೆದ ಜುಲೈ 30 ರಂದು ಟಯೋಟಾ ಖಂಪನಿಯವರು ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಶಾಸಕ ಕೆ.ಎಂ.ಉದಯ್ ಅವರ ಭಾವಚಿತ್ರ ಅಳವಡಿಸಲಾಗಿತ್ತು. ಈ ಸಂಬಂಧ ಜೆಡಿಎಸ್, ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.
ಜೊತೆಗೆ ಟಯೋಟಾ ಕಂಪನಿಯ ಅಧಿಕಾರಿ ವರ್ಗದವರಿಗೂ ವಿಷಯ ಮುಟ್ಟಿಸಿದ್ದರು. ಆನಂತರವೂ ಕೆಲ ದಿನಗಳು ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲು ಮುಂಚಿದಂತೆಯೇ ಇತ್ತು. ಇದೀಗ ಟಯೋಟಾ ಕಂಪನಿಯ ಉನ್ನತಾಧಿಕಾರಿಗಳ ಸೂಚನೆಯ ಮೇರೆಗೆ ಕಂಪನಿಯ ಸಿಬ್ಬಂದಿ ಆಗಮಿಸಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೀಗ ಜಡಿದು ಹೋಗಿದ್ದಾರೆ.
ಈ ಘಟನೆಯಿಂದ ಸಾರ್ವಜನಿಕರಿಗೆ ಲಭ್ಯವಾಗುತ್ತಿದ್ದ ಶುದ್ಧ ಕುಡಿಯುವ ನೀರಿಗೂ ಕಲ್ಲು ಬಿದ್ದಂತಾಗಿದೆ. ಟಯೋಟಾ ಕಂಪನಿ ನಿರ್ಮಿಸಿದ್ದ ಘಟಕದ ಮೇಲೆ ಶಾಸಕರ ಭಾವಚಿತ್ರ ಅಳವಡಿಸುವ ಅಗತ್ಯವೇನಿತ್ತು ಎಂದ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.
-
Mysore4 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan4 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.