Connect with us

Hassan

ಅರ್ಹರಿಗೆ ಸರ್ಕಾರಿ ಸೌಲಭ್ಯವನ್ನು ಒದಗಿಸಿ : ಡಿಸಿ ಲತಾ ಕುಮಾರಿ

Published

on

ಹಾಸನ: ಪೌತಿ ಖಾತೆ ಆಂದೋಲನದ ಜೊತೆಗೆ ಪಿಂಚಣಿ ಆಂದೋಲನ ಕೂಡಾ ನಡೆಸಿ ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಅರ್ಹರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು  ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕ್ರಮವಹಿಸುವಂತೆ ಉಪ ವಿಭಾಗಾಧಿಕಾರಿಗೆ ಸೂಚಿಸಿದರು.
ದುರಸ್ತಿಗಾಗಿ ಸ್ವೀಕೃತವಾದ ಅರ್ಜಿಗಳಲ್ಲಿ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಅಂತಹವುಗಳನ್ನು ಮಿಸ್ಸಿಂಗ್ ಕಮಿಟಿಯಲ್ಲಿಡಲು ತಿಳಿಸಿದರಲ್ಲದೆ, ಆಲೂರು ತಾಲ್ಲೂಕಿನ ಬಂಡಿ ತಿಮ್ಮನಹಳ್ಳಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಳವೆ ಬಾವಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಲು ತಿಳಿಸಿದರು.
ಇಂದು ಸ್ವೀಕೃತವಾಗಿರುವ ಒಟ್ಟು 140 ಅರ್ಜಿಗಳನ್ನು ಆದಷ್ಟೂ ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಯವರು ಪ್ರತಿ ಮಾಹೆಯ ಮೊದಲ ಶನಿವಾರ ಕಡ್ಡಾಯವಾಗಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಿಗಧಿತ ಅವಧಿಯೊಳಗೆ ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಪ್ರತಿನಿತ್ಯ ದಿನಪತ್ರಿಕೆಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಕುರಿತು ಪ್ರಕಟವಾಗುವ ಸುದ್ದಿಗಳಿಗೆ ಸಂಬಂಧಿಸಿದಂತೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸುವಂತೆ ಸೂಚಿಸಿದರಲ್ಲದೆ, ಯಾವುದೇ ದೂರುಗಳು ಬಂದಂತಹ ಸಂದರ್ಭದಲ್ಲಿ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.
ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಸುರಕ್ಷತವಾಗಿರುವಂತೆ ನೋಡಿಕೊಳ್ಳಿ, ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಕಟ್ಟಡಗಳ ದುರಸ್ಥಿಗೆ ಹೆಚ್ಚು ಒತ್ತು ನೀಡಿ, ಸರ್ಕಾರಿ ಆಸ್ತಿಗಳನ್ನು ಸಂರಕ್ಷಣೆಗೆ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಡಿತರ ಪದಾರ್ಥಗಳ ವಿತರಣೆಯಲ್ಲಿ ಮಾಹೆಗೆ ಪ್ರತಿ ವ್ಯಕ್ತಿಗೆ 10 ಕೆ.ಜಿ.ಅಕ್ಕಿ ನೀಡಲಾಗುತ್ತದೆ ಅದರ ಬದಲಾಗಿ 5 ಕೆ.ಜಿ.ಅಕ್ಕಿ ಹಾಗೂ ಇತರೆ ಆಹಾರ ಪದಾರ್ಥಗಳನ್ನು ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಒಂದು ತಂಡ ರಚನೆ ಮಾಡಿ ಪ್ರತಿ ತಾಲೂಕಿನ ಒಂದೊಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಿಕೊಂಡು ಖುದ್ದು ಭೇಟಿ ನೀಡಿ ಸಾರ್ವಜನಿಕರ ಅಭಿಪ್ರಾಯ ಪಡೆದುಕೊಂಡು ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಅರ್ಹ ಬಡ ಕುಟುಂಬಗಳಿಗೆ ಪಡಿತರ ಪದಾರ್ಥಗಳು ದೊರಕಬೇಕು ಈ ನಿಟ್ಟಿನಲ್ಲಿ ತಹಸೀಲ್ದಾರ್ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡಿ ಸವಲತ್ತುಗಳನ್ನು ಕಲ್ಪಿಸುವಂತೆ ಸೂಚಿಸಿದರು. ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದಂತೆ ನಿಗಧಿತ ಅವಧಿಯೊಳಗೆ ಸವಲತ್ತುಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆ ರೆಂಬೆಗಳು ಬಿದ್ದು, ಅವಘಡಗಳು  ಸಂಭವಿಸದಂತೆ ಎಚ್ಚರವಹಿಸಿ, ಅಂತಹವುಗಳನ್ನು ಕಡಿಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಒಂದು ತಂಡವಾಗಿ ಕೆಲಸ ಮಾಡಿದರೆ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಸಾರ್ವಜನಿಕರು 944899422 ಕರೆ ಮಾಡಬಹುದಾಗಿದೆ. ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಕಂಬದಲ್ಲಿ ನಮೂದಿಸಿರುವ ಸಂಖ್ಯೆಯನ್ನು ದೂರು ನೀಡುವ ಸಂದರ್ಭದಲ್ಲಿ ತಿಳಿಸಿದರೆ ತಕ್ಷಣ ಬಂದು ಚೆಸ್ಕಾಂ ಸಿಬ್ಬಂದಿ ಸಮಸ್ಯೆ ಬಗೆಹರಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ದುರಸ್ತಿ, ಹಕ್ಕು ಪತ್ರ, ಸಾಗುವಳಿ ಚೀಟಿ, ಆರ್.ಟಿ.ಸಿ.ತಿದ್ದುಪಡಿ, ಜಮೀನಿಗೆ ಓಡಾಡಲು ರಸ್ತೆ, ರೈಲ್ವೆ ಯೋಜನೆಗೆ ಭೂಸ್ವಾಧೀನಕ್ಕೆ ಹೆಚ್ಚಿನ ಪರಿಹಾರ ನೀಡಲು ಮನವಿ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಅವರು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಅವರು ಮಾತನಾಡಿ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಉಪ ವಿಭಾಗಾಧಿಕಾರಿಗಳಾದ ಶೃತಿ, ಮಾರುತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
Continue Reading

Hassan

ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ: ಶಾಸಕ ಸಿಮೆಂಟ್ ಮಂಜು

Published

on

ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ  ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು, ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್‌ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ. ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.

Continue Reading

Hassan

ಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ

Published

on

ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ

Continue Reading

Hassan

ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್

Published

on

ನವದೆಹಲಿ: ಹಾಸನ ಜಿಲ್ಲೆಯಲ್ಲಿ ದಶಕಗಳಿಂದಲೂ ರೈತರನ್ನು ಕಾಡುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

​ಶೀಘ್ರದಲ್ಲೇ ಹಾಸನಕ್ಕೆ ಕೇಂದ್ರ ತಂಡ ಭೇಟಿ ​ಸಚಿವರೊಂದಿಗಿನ ಭೇಟಿಯ ನಂತರ, ಅರಣ್ಯ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ರಮೇಶ್ ಕೆ. ಪಾಂಡೇ (IFS) ಅವರನ್ನು ಸಂಸದರು ಭೇಟಿ ಮಾಡಿದರು. ಸಚಿವರ ನಿರ್ದೇಶನದಂತೆ, ಹಾಸನ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII) ತಂಡವು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಸಂಸದರು ತಿಳಿಸಿದರು.

ಈ ತಂಡವು ಜಿಲ್ಲೆಯ ಆನೆ ಕಾರಿಡಾರ್‌ಗಳ ಸ್ಥಿತಿಗತಿ ಮತ್ತು ಸಂಘರ್ಷ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ. 7 ಗ್ರಾಮಗಳ ರೈತರಿಂದ ಸ್ವಯಂಪ್ರೇರಿತ ಜಮೀನು ಹಸ್ತಾಂತರ ಹಿಂದೆ ನಡೆದ ಟಾಸ್ಕ್‌ಫೋರ್ಸ್ ಕಮಿಟಿ ಸಭೆಯ ನಿರ್ಧಾರಗಳನ್ನು ಸಚಿವರ ಗಮನಕ್ಕೆ ತಂದ ಶ್ರೇಯಸ್ ಪಟೇಲ್ ಅವರು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮತ್ತು ಆನೆಗಳ ಸಂಚಾರ ಅಧಿಕವಾಗಿರುವ ಕೆಳಕಂಡ 7 ಗ್ರಾಮಗಳನ್ನು ಯೋಜನೆಗೆ ಒಳಪಡಿಸುವಂತೆ ಒತ್ತಾಯಿಸಿದರು.

​ಅರಣಿ, ​ಬೋರನಮನೆ, ​ಬಾಳೆಹಳ್ಳ,  ಬೆಟ್ಟಕುಮರಿ, ​ಮಂಕನಹಳ್ಳಿ, ಯತ್ತಹಳ್ಳ, ಬಾಜಿ ಮನೆ ಎಸ್ಟೇಟ್ ಈ ಗ್ರಾಮಗಳಲ್ಲಿನ 416 ರೈತರು ತಮ್ಮ ಒಟ್ಟು 2261.21 ಎಕರೆ ಹಿಡುವಳಿ ಪ್ರದೇಶವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಸಿದ್ಧರಿದ್ದಾರೆ.

​ಪರಿಹಾರಕ್ಕೆ ಆಗ್ರಹ

“ಈ 7 ಗ್ರಾಮಗಳ ರೈತರು ಆನೆಗಳ ಕಾಟದಿಂದ ಬೇಸತ್ತಿದ್ದು, ಸರ್ಕಾರವು ಪ್ರತಿ ಎಕರೆಗೆ ಕನಿಷ್ಠ 15 ಲಕ್ಷ ರೂ. ಪರಿಹಾರ ನೀಡಿದಲ್ಲಿ ತಕ್ಷಣವೇ ಜಮೀನು ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆ ಜಾರಿಯಾದಲ್ಲಿ ಆನೆಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ರೈತರ ಪ್ರಾಣ-ಹಾನಿ ತಪ್ಪಿಸಬಹುದು,” ಎಂದು ಶ್ರೇಯಸ್ ಪಟೇಲ್ ತಿಳಿಸಿದರು.


​ಹಾಸನ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

Continue Reading

Trending

error: Content is protected !!