Hassan
ರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕು ಬೆಂಗಳೂರು-ಮಂಗಳೂರು NH 75ರ 222+900ರಲ್ಲಿ ಮಂಜ್ರಾಬಾದ್ ಕೋಟೆಯ ಸಮೀಪ ದೋಣಿಗಲ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದು ಪಕ್ಕದ ಭೂಮಾಲಿಕರುಗಳು ಕಾಮಗಾರಿಯನ್ನು ತಡೆದು ನಿಲ್ಲಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಹಾಸನ ಬೈ ಪಾಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ವಿಭಾಗದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಫೆಬ್ರವರಿ .9 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು-ಮಂಗಳೂರು NH-75ರ 222+900 ರಿಂದ 223+700 ದೋಣಿಗಾಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆವರೆಗೆ ಕಾಮಗಾರಿ ನಡೆಯಲಿದ್ದು ಸದರಿ ಕಾಮಗಾರಿ ನೆಡೆದಿದ್ದು, ಕಾಮಗಾರಿ ನಡೆಯುವ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಪ್ರದೇಶ ಅವಧಿಯಲ್ಲಿ 5 ಜನರಿಗಿಂತ ಹೆಚ್ಚು ಗುಂಪಾಗಿ ಸೇರುವಂತ್ತಿಲ್ಲ, ಈ ಅವಧಿಯಲ್ಲಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತ್ತಿಲ್ಲ, ಯಾವುದೇ ರೀತಿಯ ಪ್ರಚಾರ ಸಾಮಾಗ್ರಿಗಳನ್ನು ಹಿಡಿದುಕೊಂಡು ಘೋಷಣೆ ಕೂಗಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ. ಈ ಆದೇಶವು ಕಾಮಗಾರಿ ನಡೆಸುವ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತ್ತಿಲ್ಲ ಹಾಗೂ ಮೇಲ್ಕಂಡ ನಿಬಂಧನೆಗಳನ್ನು ಉಲಂಘಿಸಿದಲ್ಲಿ ಸಂಭಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Hassan
ಹಾಸನ ಬಸ್ ನಿಲ್ದಾಣದಲ್ಲಿ ಬಸ್ ಚಾಲಕರ ನಡುವೆ ವಾಗ್ವಾದ; ಬಳಿಕ ಹೆದ್ದಾರಿಯಲ್ಲಿ ಮತ್ತೆ ಜಗಳ
Hassan
ಮರ ಕಡಿಯುವ ವೇಳೆ ಮರ ಬಿದ್ದು ವ್ಯಕ್ತಿ ಸಾ*ವು
ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ಮರ ಕಡಿಯುವ ಕೆಲಸ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ದಾಟೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಮರ ಕಡಿಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ನಾಗಪ್ಪ ಅವರು, ಹೊಸಕೋಟೆಯ ಗುರುಪಾದಪ್ಪ ಅವರ ಕಾಫಿ ತೋಟದಲ್ಲಿ ಮರಕಟ್ಟು ಮಾಡುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಮರ ಕಡಿಯುವ ವೇಳೆ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಆಲೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪ್ರಕರಣವನ್ನು ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
Hassan
ಹಿರಿಯ ಪತ್ರಕರ್ತ ಜಯಕುಮಾರ್ ನಿಧನ
-
State18 hours agoತೆಂಗು ಬೆಳೆಗಾರರಿಗೆ ಸಿಹಿಸುದ್ದಿ: ಹೊಸ ತೋಟ ಸ್ಥಾಪನೆಗೆ ₹56 ಸಾವಿರ ಸಹಾಯಧನ!!
-
Chikmagalur15 hours agoಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000 ನಕಲಿ ಹಣ ವಶ!
-
National15 hours agoನೀಟ್ ವಿವಾದ: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೇಮಕ
-
National11 hours agoನೀಟ್ ಪ್ರಕರಣ: ಎರಡು ಬೇಡಿಕೆ ಒಪ್ಪಿದ ಕೇಂದ್ರ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪಟ್ಟು
-
Kodagu8 hours agoನಾಪೋಕ್ಲು ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ನೂತನ ಪದಾಧಿಕಾರಿಗಳ ಆಯ್ಕೆ -ಅಧ್ಯಕ್ಷರಾಗಿ ಅನೀಫ್ ನೇಮಕ
-
Kodagu8 hours ago₹24 ಲಕ್ಷ ವೆಚ್ಚದ 3 ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆಗೊಳಿಸಿದ ಎ.ಎಸ್.ಪೊನ್ನಣ್ಣ
-
Chamarajanagar9 hours agoಹೊಂಗನೂರಿನಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳ ಪರದಾಟ: ಸಮಯಕ್ಕೆ ಬಸ್ ಇಲ್ಲದೆ ನಿತ್ಯ ಸಂಕಷ್ಟ
-
Mysore17 hours ago“ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ”: ಶಾಸಕ ಗಣಿಗ ರವಿಕುಮಾರ್ ಸ್ಪಷ್ಟನೆ
