Connect with us

Hassan

ದೆಹಲಿ ನೋಟಿಸ್‌, ಕಾರ್ಟಿಯರ್ ವಾಚ್‌ ವಿವಾದದ ಬಗ್ಗೆ ಆತ್ಮವಿಶ್ವಾಸದ ನಿಲುವು ಘೋಷಿಸಿದ ಡಿಸಿಎಂ ಡಿಕೆಶಿ

Published

on

ಹಾಸನ: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ನಮಗೆ ಕಿರುಕುಳ ನೀಡಲು ಈ ಸಮನ್ಸ್ ನೀಡಲಾಗಿದೆ. ಇದು ಸರಿಯಲ್ಲ, ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಭಾಗದ ದೆಹಲಿ ಪೊಲೀಸರು ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಇದು ನಮಗೆ ಆಘಾತ ತಂದಿದೆ. ನನಗೆ ಹಾಗೂ ಸಹೋದರ ಸುರೇಶ್ ಅವರಿಗೆ ನೋಟೀಸ್ ನೀಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಇಡಿ ನಮಗೆ ಸಮನ್ಸ್ ನೀಡಿತ್ತು ಎಂದರು.

ನಾವು ಮೊದಲಿನಿಂದಲೂ ಇಡಿ ತನಿಖೆಗೆ ಸಹಕಾರ ನೀಡಿ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇವೆ. ಇದು ನಮ್ಮ ಪಕ್ಷದ ಸಂಸ್ಥೆ, ಕಾಂಗ್ರೆಸಿಗರಾಗಿ ಆ ಸಂಸ್ಥೆಗೆ ಬೆಂಬಲ ನೀಡಲು ದೇಣಿಗೆ ನೀಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಸಂಸ್ಥೆ ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ನೆರವು ನೀಡಿದ್ದು, ನನ್ನಂತೆ ಅನೇಕರು ದೇಣಿಗೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ನಮ್ಮ ಹೆಸರನ್ನು ಸೇರಿಸಿರಲಿಲ್ಲ. ನಮ್ಮ ಬಳಿ ಹೇಳಿಕೆ ಪಡೆದು, ಬಿಟ್ಟಿದ್ದರು. ಹೀಗಿರುವಾಗ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ನಾವು ನ್ಯಾಯಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ. ನಾವು ಸರಿಯಾಗಿ ತೆರಿಗೆ ಕಟ್ಟಿದ್ದು, ನಮ್ಮ ಹಣವನ್ನು ನಾವು ಇಷ್ಟಪಡುವ ಯಾರಿಗೆ ಬೇಕಾದರೂ ನೀಡಬಹುದು” ಎಂದು ಹೇಳಿದರು.

ನನ್ನ ವಿರುದ್ಧ ಪಿಎಎಲ್ಎ ಪ್ರಕರಣ ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಇಷ್ಟಾದ ಮೇಲೂ ಯಾವ ಕಾರಣಕ್ಕೆ ಸಮನ್ಸ್ ನೀಡಿದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವುದು ಇದರ ಉದ್ದೇಶ ” ಎಂದು ತಿಳಿಸಿದರು.

ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ, ನಾನು ಬಗ್ಗುವುದಿಲ್ಲ

“ನನಗೆ ಶುಕ್ರವಾರ ನೋಟೀಸ್ ಸಿಕ್ಕಿದ್ದು, ಇದನ್ನು ವಕೀಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಸಹೋದರ ಕೂಡ ಸಂಸದನಾಗಿದ್ದಾಗ ಈ ಸಂಸ್ಥೆಗೆ ದೇಣಿಗೆ ನೀಡಿದ್ದ. ದೆಹಲಿ ಪೊಲೀಸರು ಡಿ.19 ರ ಒಳಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ನಾನು ಸಮಯ ನೋಡಿಕೊಂಡು ಒಂದು ದಿನ ಹೋಗಿ, ಅವರ ನೋಟೀಸ್ ಗೆ ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇನೆ. ಅವರು ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ ನಾನು ಬಗ್ಗುವುದಿಲ್ಲ” ಎಂದು ಹೇಳಿದರು

 

Continue Reading

Hassan

ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ: ಶಾಸಕ ಸಿಮೆಂಟ್ ಮಂಜು

Published

on

ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ  ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು, ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್‌ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ. ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.

Continue Reading

Hassan

ಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ

Published

on

ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ

Continue Reading

Hassan

ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್

Published

on

ನವದೆಹಲಿ: ಹಾಸನ ಜಿಲ್ಲೆಯಲ್ಲಿ ದಶಕಗಳಿಂದಲೂ ರೈತರನ್ನು ಕಾಡುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

​ಶೀಘ್ರದಲ್ಲೇ ಹಾಸನಕ್ಕೆ ಕೇಂದ್ರ ತಂಡ ಭೇಟಿ ​ಸಚಿವರೊಂದಿಗಿನ ಭೇಟಿಯ ನಂತರ, ಅರಣ್ಯ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ರಮೇಶ್ ಕೆ. ಪಾಂಡೇ (IFS) ಅವರನ್ನು ಸಂಸದರು ಭೇಟಿ ಮಾಡಿದರು. ಸಚಿವರ ನಿರ್ದೇಶನದಂತೆ, ಹಾಸನ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII) ತಂಡವು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಸಂಸದರು ತಿಳಿಸಿದರು.

ಈ ತಂಡವು ಜಿಲ್ಲೆಯ ಆನೆ ಕಾರಿಡಾರ್‌ಗಳ ಸ್ಥಿತಿಗತಿ ಮತ್ತು ಸಂಘರ್ಷ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ. 7 ಗ್ರಾಮಗಳ ರೈತರಿಂದ ಸ್ವಯಂಪ್ರೇರಿತ ಜಮೀನು ಹಸ್ತಾಂತರ ಹಿಂದೆ ನಡೆದ ಟಾಸ್ಕ್‌ಫೋರ್ಸ್ ಕಮಿಟಿ ಸಭೆಯ ನಿರ್ಧಾರಗಳನ್ನು ಸಚಿವರ ಗಮನಕ್ಕೆ ತಂದ ಶ್ರೇಯಸ್ ಪಟೇಲ್ ಅವರು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮತ್ತು ಆನೆಗಳ ಸಂಚಾರ ಅಧಿಕವಾಗಿರುವ ಕೆಳಕಂಡ 7 ಗ್ರಾಮಗಳನ್ನು ಯೋಜನೆಗೆ ಒಳಪಡಿಸುವಂತೆ ಒತ್ತಾಯಿಸಿದರು.

​ಅರಣಿ, ​ಬೋರನಮನೆ, ​ಬಾಳೆಹಳ್ಳ,  ಬೆಟ್ಟಕುಮರಿ, ​ಮಂಕನಹಳ್ಳಿ, ಯತ್ತಹಳ್ಳ, ಬಾಜಿ ಮನೆ ಎಸ್ಟೇಟ್ ಈ ಗ್ರಾಮಗಳಲ್ಲಿನ 416 ರೈತರು ತಮ್ಮ ಒಟ್ಟು 2261.21 ಎಕರೆ ಹಿಡುವಳಿ ಪ್ರದೇಶವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಸಿದ್ಧರಿದ್ದಾರೆ.

​ಪರಿಹಾರಕ್ಕೆ ಆಗ್ರಹ

“ಈ 7 ಗ್ರಾಮಗಳ ರೈತರು ಆನೆಗಳ ಕಾಟದಿಂದ ಬೇಸತ್ತಿದ್ದು, ಸರ್ಕಾರವು ಪ್ರತಿ ಎಕರೆಗೆ ಕನಿಷ್ಠ 15 ಲಕ್ಷ ರೂ. ಪರಿಹಾರ ನೀಡಿದಲ್ಲಿ ತಕ್ಷಣವೇ ಜಮೀನು ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆ ಜಾರಿಯಾದಲ್ಲಿ ಆನೆಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ರೈತರ ಪ್ರಾಣ-ಹಾನಿ ತಪ್ಪಿಸಬಹುದು,” ಎಂದು ಶ್ರೇಯಸ್ ಪಟೇಲ್ ತಿಳಿಸಿದರು.


​ಹಾಸನ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

Continue Reading

Trending

error: Content is protected !!