Mandya
ಚುನಾವಣಾ ಮಸ್ಟರಿಂಗ್ ಕೆಲಸ ವೀಕ್ಷಿಸಿದ ಡಿಸಿ
ಮಂಡ್ಯ: ಇಲ್ಲಿನ ವಿಶ್ವವಿದ್ಯಾಲಯದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮಸ್ಟರಿಂಗ್ ಕೆಲಸ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪರಿಶೀಲನೆ ನಡೆಸಿದರು.
ಚುನಾವಣಾ ಪ್ರಕ್ರಿಯೆಗೆ ತಕ್ಕಂತೆ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಹಾಗೂ ಅಗತ್ಯ ಸೇವಾ ವಲಯ ಮತದಾರರಿಗೆ ಮತ ಚಲಾಯಿಸಲು ತೆರೆಯಲಾಗಿರುವ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Mandya
ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ ನೀರು ಹೊರಕ್ಕೆ
*ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ ನೀರು ಹೊರಕ್ಕೆ : ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ*
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿರುವುದರಿಂದ ತಗ್ಗು ಪ್ರದೇಶದ ಜನತೆ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಅವರು ಮನವಿ ಮಾಡಿದ್ದಾರೆ.
Mandya
ಅಪಘಾತದಲ್ಲಿ ಪತ್ರಕರ್ತ ಸಾವು
ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರು.
ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ;ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ.
ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
Mandya
ಕಾರ್ಗಿಲ್ ವೀರ ಯೋಧರ ತ್ಯಾಗ ಬಲಿದಾನ ಸ್ಮರಿಸೋಣ
ಶ್ರೀರಂಗಪಟ್ಟಣ : ವಿಶ್ವಕ್ಕೆ ಶಾಂತಿ ಬಯಸುವ ನಮ್ಮ ಭಾರತ ದೇಶಕ್ಕೆ ಎಸಗಿದ ನಂಬಿಕೆ ದ್ರೋಹದ ಪರಿಣಾಮ ನಮ್ಮ ಹೆಮ್ಮೆಯ ಸೈನಿಕರು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ, ವಿಜಯ ಸಾಧಿಸಿದ ಕಾರ್ಗಿಲ್ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಪ್ರತಿಯೊಬ್ಬ ಭಾರತೀಯರು ಸ್ಮರಿಸಿಕೊಳ್ಳುವ ಹೆಮ್ಮೆಯ ದಿನ ಎಂದು ಪಟ್ಟಣದ ಓಂ ಶ್ರೀನಿಕೇತನ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ತಿಳಿಸಿದರು..
ಪಟ್ಟಣದ ಪುರಸಭಾ ವೃತ್ತದಲ್ಲಿ ಓಂ ಶ್ರೀನಿಕೇತನ ವಿದ್ಯಾಸಂಸ್ಥೆಯು ಕಾರ್ಗಿಲ್ ವಿಜಯ ದಿವಸದ ಸಂಭ್ರಮ ದಿನಾಚರಣೆಯ ಅಂಗವಾಗಿ ಆಯೋಜನೆ ಮಾಡಿದ್ದ’ ರಜತ ಸಂಭ್ರಮ’ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ 1998 ರಲ್ಲಿ ಪಾಕಿಸ್ತಾನಕ್ಕೆ ಬಸ್ಸು ಹಾಗೂ ರೈಲು ಸಂಚಾರವನ್ನು ಆರಂಭಿಸಿ ಶಾಂತಿ ಬಯಸಿದ ಪ್ರತಿಫಲವಾಗಿ, ಭಯೋತ್ಪಾದನೆ, ಹಿಂಸೆ ಹರಡವಿಕೆ, ಮುಂಚೂಣಿಯಲ್ಲಿರುವ ನೆರೆಯ ರಾಷ್ಟ್ರ ಪಾಕಿಸ್ತಾನ 1999 ಕಾರ್ಗಿಲ್ ಪ್ರದೇಶವನ್ನು ತನ್ನದಾಗಿಸಿಕೊಳ್ಳಲು ಹವಣಿಸಿತು.
ಇದಕ್ಕೆ ಪ್ರತಿಯಾಗಿ ನಮ್ಮ ಸೈನಿಕರು ದಿಟ್ಟ ಉತ್ತರ ನೀಡಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಮುಖವಾಡವನ್ನು ಬಯಲು ಮಾಡಿ,ವಿಜಯದ ಪತಾಕೆ ಹಾರಿಸಿ 25 ವರ್ಷಗಳಾಗಿದ್ದು, ದೇಶದ ಸಂರಕ್ಷಣೆಯಲ್ಲಿ ವೀರ ಯೋಧರ ಸೇವೆ ಸ್ಮರಣೀಯ ಎಂದು ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆಶಾಲತಾ ಪುಟ್ಟೇಗೌಡ ಮಾತನಾಡಿ, ಕಾರ್ಗಿಲ್ ಯುದ್ಧ ರಾಷ್ಟ್ರ ಭಕ್ತಿ ಹಾಗೂ ಭಾವೈಕ್ಯತೆಯನ್ನು ಜಾಗೃತಗೊಳಿಸಿದೆ ಎಂದರು. ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಾಬುರಾಯನಕೊಪ್ಪಲ್ ಗ್ರಾಮದ ಅಭಿಜಿತ್ ಅವರನ್ನು ಗೌರವಿಸಲಾಯಿತು.
ಮಂಜು ರಾಮ್ ಪುಟ್ಟೇಗೌಡ, ಸಂಕ್ರಾಂತಿ ಮಂಜೂರಾಮ್, ಉದ್ಯೋಗದಾತ ರುಕ್ಮಾಂಗದ, ವಕೀಲ ಪುಟ್ಟಸ್ವಾಮಿ, ನಾರಾಯಣ್, ಕೂಡಲಕುಪ್ಪೆ ಗೋಪಾಲ್ ಗೌಡ, ಶಿಕ್ಷಕರಾದ ಪುನೀತ್, ಕೃಷ್ಣ ಹಾಗೂ ಸಗುಪ್ತ ಸೇರಿದಂತೆ ಇತರರು ಹಾಜರಿದ್ದರು.ಇದಕ್ಕೂ ಮುನ್ನ ವಿದ್ಯಾರ್ಥಿಗಳು ಡಾ, ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪುರಸಭೆ ವೃತ್ತದವರೆಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಭಾವಚಿತ್ರವನ್ನು ಪ್ರದರ್ಶಿಸಿ ವಿಜಯದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಹೊರಟರು
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.