Mandya
ಸಂಘಟನಾ ಚತುರ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ನಿಧನ

ಮಂಡ್ಯ: ಅತ್ಯಂತ ಸಂಘಟನಾ ಚತುರ ಹಾಗೂ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿ.ಕೆ.ರವಿಕುಮಾರ ಚಾಮಲಾಪುರ(53) ಅವರು ಸೋಮವಾರ ಬೆಳಿಗ್ಗೆ ನಿಧನರಾದರು, ಇವರಿಗೆ ಹಲವು ಜನಪ್ರತಿನಿಧಿಗಳು ಹಾಗೂ ಸಾಹಿತಿಗಳು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ಪತ್ನಿ ಚಂದ್ರಕಲಾ, ಪುತ್ರ ಸಿ.ಆರ್. ಚಂದನ್, ಪುತ್ರಿ ಸಿ.ಆರ್.ರಚನಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಇವರು,
ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಚಾಮಲಾಪುರ ಗ್ರಾಮದ ಶ್ರೀಮತಿ ಸಣ್ಣಮ್ಮ ಮತ್ತು ಶ್ರೀ ಸಿ.ಕಾಳೇಗೌಡ ದಂಪತಿ ಮಗನಾಗಿ 14/07/1970 ರಲ್ಲಿ ಜನಿಸಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೂ, ಪ್ರೌಢ ಶಿಕ್ಷಣವನ್ನು ಹುಲಿವಾನದಲ್ಲಿ ಮುಗಿಸಿ, ಪಿ.ಯು.ಸಿ ಮತ್ತು ಪದವಿ ಶಿಕ್ಷಣವನ್ನು ಮಂಡ್ಯದ ಪಿ.ಇ.ಎಸ್. ವಿಜ್ಞಾನ ಕಾಲೇಜಿನಲ್ಲಿ ಐಚ್ಛಿಕ ಕನ್ನಡ ವಿಷಯದೊಂದಿಗೆ ಪೂರೈಸಿದರು.
ಪಿ.ಯು.ಸಿ. ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿ ನಾಯಕರಾಗಿ ಹಲವಾರು ಕನ್ನಡ ಪರ ಕಾರ್ಯಕ್ರಮಗಳನ್ನು ರೂಪಿಸುತ್ತಾ ಸಂಘಟನೆಗೆ ಮುನ್ನುಡಿ ಬರೆದ ಇವರು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟದ ಮುಂಚೂಣಿ ನಾಯಕರೆಂದು ಹೆಸರಾದರು.
1997 ರಲ್ಲಿ ಮೈಸೂರು ವಿ.ವಿ.ಯಿಂದ ಎಂ.ಎ ಪದವಿಯನ್ನು ಕನ್ನಡ ವಿಷಯದಲ್ಲಿ ಪ್ರಥಮ ದರ್ಜೆಯೊಂದಿಗೆ ಪಡೆದಿರುತ್ತಾರೆ. ಮೈಸೂರು ವಿ.ವಿ.ಯ ವಿದ್ಯಾರ್ಥಿ ಸೆನೆಟ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ಕೀರ್ತಿ ಇವರದು.
1997 ರಿಂದ 2002 ರವರೆಗೆ ಮಂಡ್ಯದ ಪಿ.ಇ.ಎಸ್. ಸಂಜೆ ಪದವಿ ಕಾಲೇಜಿನಲ್ಲಿ, 2003-2007 ರವರೆಗೆ ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ 2007 ರಿಂದ ಮಾಂಡವ್ಯ ವಿದ್ಯಾಸಂಸ್ಥೆ ಹಾಗೂ ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಮನ ಗೆದ್ದಿದ್ದರು.
ಇನ್ನೂ ಸಂಘಟಕರಾಗಿ ಕಾರ್ಯದರ್ಶಿ, ಉನ್ನತಿ ಟ್ರಸ್ಟ್ (ರಿ) ಮಂಡ್ಯ1998, ಕಾರ್ಯದರ್ಶಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ 1998-2000 ಅಧ್ಯಕ್ಷರು, ಮೈಸೂರು ವಿ.ವಿ. ಪದವೀಧರರ ಹಿತರಕ್ಷಣಾ ಸಮಿತಿ(ರಿ) ಮಂಡ್ಯ 2003 ಪ್ರಾಧ್ಯಾಪಕರು, ಕನ್ನಡ ವಿಭಾಗ, ಮಾಂಡವ್ಯ ಶಿಕ್ಷಣ ಸಂಸ್ಥೆ, ಮಂಡ್ಯ. ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ 2012-2015 ಅಧ್ಯಕ್ಷರು, ಸಾಹಿತ್ಯ ಲಯನ್ಸ್ ಕ್ಲಬ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇದಕ್ಕೆ ಸಾಕ್ಷಿ ಎಂಬಂತೆ ನಿರಂತರವಾದ ಕನ್ನಡಪರ ಚಟುವಟಿಕೆಗಳಲ್ಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಹಲವಾರು ವಿಚಾರ ಸಂಕಿರಣಗಳನ್ನು ಏರ್ಪಡಿಸುವ ಮೂಲಕ ಕನ್ನಡದ ಸೇವೆಯಲ್ಲಿ ನಿರತರಾಗಿದ್ದರು.
ಮಂಡ್ಯ ಸಾಹಿತ್ಯ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಉಚಿತ ಬೃಹತ್ ಆರೋಗ್ಯ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು, ಕೆರಗೋಡು. ಚಾಮಲಾಪುರ, ಮಂಡ್ಯ ಮತ್ತು ಬಸರಾಳುವಿನಲ್ಲಿ ಆಯೋಜಿಸಿ ಸಾವಿರಾರು ಬಡರೋಗಿಗಳಿಗೆ ನೆರವಾಗಿರುವುದು ಇವರ ಸಾಧನೆಯ ಮತ್ತೊಂದು ಗರಿಮೆಯಾಗಿದೆ.
2015 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿ ಹಲವು ಸಮ್ಮೇಳನಗಳನ್ನು ನಡೆಸಿ ಯುವ ಸಾಹಿತಿಗಳಿಗೆ ಹಾಗೂ ಜಲಾವಿದರನ್ನು ಪರಿಚಯಿಸುವ ಕೆಲಸ ಮಾಡಿದ್ದರು, ಮತ್ತೆ 2021 ರಲ್ಲಿ ನಡೆದ ಕಸಾಪ ಚುನಾವಣೆಯಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿ ಒಂದು ವರ್ಷ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿದ್ದರು.
ತದನಂತರ ಅನಾರೋಗ್ಯಕ್ಕೀಡಾಗಿ ಹಲವು ತಿಂಗಳುಗಳ ಕಾಲ ಹಾಸಿಗೆ ಹಿಡಿದರು. ಇವರ ಈ ಅನಾರೋಗ್ಯವು ಇನ್ನಲ್ಲದಂತೆ ಬಾಧಿಸ ತೊಡಗಿತು. ಆದರೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಅತ್ಯುತ್ಸಕರಾಗಿ ಸಮ್ಮೇಳನವನ್ನು ಮಂಡ್ಯಕೆ ತರಲು ಯಶಸ್ವಿಯಾಗಿದ್ದ ರವಿಕುಮಾರ ಚಾಮಲಾಪುರ ಅವರು ದುರಂತದ ನಾಯಕರಾಗಿ ಇವರ ಸಾಹಿತ್ಯ ಪ್ರೇಮಿಗಳು ಹಾಗೂ ಅಭಿಮಾನಿಗಳಿಗೆ ಹೆಗಲು ಕೊಡಲು ಹೇಳದೇ ಹೋದದ್ದು ಮೋಸವೇ ಸರಿ.
ಅಂತ್ಯಕ್ರಿಯೆ- ಸೋಮವಾರ ಮಧ್ಯಾಹ್ನ 3 ಗಂಟೆಗೆ ಹುಟ್ಟೂರಾದ ಚಾಮಲಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲ ತಿಳಿಸಿದೆ.
(ಮಧ್ಯಾಹ್ನದವರೆಗೆ ಕಾವೇರಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡ ಲಾಗಿದೆ).
— ಮೋಹನ್ ರಾಗಿಮುದ್ದನಹಳ್ಳಿ (ಪತ್ರಕರ್ತರು)
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ