Crime
ಸಾವು ಗೆದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ : ರದ್ದಾದ ಮರಣದಂಡನೆ
ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಯೆಮನ್‌ನಲ್ಲಿ ಮರಣದಂಡನೆಯನ್ನು ಎದುರಿಸುತ್ತಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಗಲ್ಲು ಶಿಕ್ಷೆಯಿಂದ ಮುಕ್ತಿಗೊಳಿಸಲಾಗಿದೆ. ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ. ಈ ಸಂಬಂಧದ ಮಾಹಿತಿಯನ್ನು ಭಾರತೀಯ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕ್ಕರ್ ಮುಸ್ಲೈಯರ್ ಅವರ ಕಚೇರಿ ಹಂಚಿಕೊಂಡಿದೆ. ಇದಕ್ಕೂ ಮೊದಲು, ಯೆಮನ್‌ನಲ್ಲಿನ ಅಧಿಕಾರಿಗಳು ರಾಜತಾಂತ್ರಿಕ ಮಧ್ಯಸ್ಥಿಕೆಗಳ ನಂತರ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಿದ್ದರು. ನಿಮಿಷಾ ಪ್ರಿಯಾ ಪ್ರಕರಣ ಇಡೀ ಜಗತ್ತಿನಾದ್ಯಂತ ಚರ್ಚೆಯಾಗಿತ್ತು.

ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ನೇಣಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿತ್ತು. ಭಾರತ ಸರ್ಕಾರ ಮತ್ತು ಗ್ರ್ಯಾಂಡ್ ಮುಫ್ತಿ ಅಬು ಬಕರ್ ಅಹ್ಮದ್ ಸೇರಿದಂತೆ ಹಲವಾರು ಧಾರ್ಮಿಕ ಮುಖಂಡರು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದರು. ಯೆಮನ್‌ನ ಹೌತಿ ಅಧಿಕಾರಿಗಳು ಈ ಹಿಂದೆ ಗಲ್ಲು ಶಿಕ್ಷೆಯನ್ನು ಅಮಾನತುಗೊಳಿಸಿದ್ದರು. ಈಗ ಅದನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಇದರಿಂದಾಗಿ ನಿಮಿಷಾ ಅವರಿಗೆ ಮರುಜೀವ ಸಿಕ್ಕಿದೆ.
ಈ ಹಿಂದೆ ಅಮಾನತುಗೊಂಡಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಂಡಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಯಿತು” ಎಂದು ಗ್ರ್ಯಾಂಡ್ ಮುಫ್ತಿ ಹೇಳಿಕೆಯನ್ನು ಉಲ್ಲೇಖಿಸಿ ANI ವರದಿ ಮಾಡಿದೆ.
ಶೇಖ್ ಅಬು ಬಕರ್ ಅಹ್ಮದ್ ಒಬ್ಬ ಪ್ರಸಿದ್ಧ ಇಸ್ಲಾಮಿಕ್ ವಿದ್ವಾಂಸರಾಗಿದ್ದು, ಷರಿಯಾ ಕಾನೂನಿನ ಬಗ್ಗೆ ಅವರ ಆಳವಾದ ಜ್ಞಾನಕ್ಕಾಗಿ ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ.

ನಿಮಿಷಾ ಪ್ರಿಯಾ ಯಾರು?
ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ತಮ್ಮ ದೈನಂದಿನ ಕೂಲಿ ಕಾರ್ಮಿಕರಾದ ಪೋಷಕರಿಗೆ ಆರ್ಥಿಕ ಸಹಾಯ ನೀಡಲು ಯೆಮೆನ್ಗೆ ತೆರಳಿದ್ದರು. ಯೆಮೆನ್‌ನಲ್ಲಿ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ 2014ರಲ್ಲಿ ಭರವಸೆ ನೀಡಿದ್ದರು.
ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ ಅಲ್ಲಿ ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಸ್ವಲ್ಪ ದಿನದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನಿಂದ ನಿಮಿಷಾ ತನ್ನ ಪಾಸ್‌ಪೋರ್ಟ್ ಮರಳಿ ಪಡೆದು ಭಾರತಕ್ಕೆ ಹಿಂತಿರುಗಲು ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.
ನಿಮಿಷಾ ಪ್ರಿಯಾಳನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು. ಆದರೆ, ಆಕೆಯ ಕುಟುಂಬ ಮೃತ ವ್ಯಕ್ತಿಯ ಕುಟುಂಬದ ಜೊತೆ ಬ್ಲಡ್ ಮನಿ ಒಪ್ಪಂದಕ್ಕೆ ಹೆಚ್ಚಿನ ಸಮಯವನ್ನು ಪಡೆಯಲು ಭಾರತವು ಒತ್ತಡ ಹೇರಿದ ನಂತರ ಯೆಮೆನ್ ಅಧಿಕಾರಿಗಳು ಆಕೆಯ ಮರಣದಂಡನೆಯನ್ನು ಮುಂದೂಡಿದರು. ಕೇರಳದ ಧರ್ಮಗುರು ಶೇಖ್ ಅಬು ಬಕರ್ ಅಹ್ಮದ್ ಮಧ್ಯಪ್ರವೇಶಕ್ಕಾಗಿ ಪ್ರಮುಖ ಯೆಮೆನ್ ಧಾರ್ಮಿಕ ಗುರುಗಳನ್ನು ಸಂಪರ್ಕಿಸಿದರು. ಭಾರತದ ಸುಪ್ರೀಂ ಕೋರ್ಟ್ನಲ್ಲಿ ಕೂಡ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆದಿತ್ತು. ಆಗ ಭಾರತ ಸರ್ಕಾರ ತನ್ನ ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವುದಾಗಿ ಹೇಳಿತ್ತು.
ಇನ್ನೊಂದೆಡೆ, ಷರಿಯಾ ಕಾನೂನಿನಲ್ಲಿ ಅವಕಾಶವಿರುವಂತೆ ಬ್ಲಡ್ ಮನಿ ಪಡೆದು ಕೇಸ್ ಹಿಂಪಡೆಯಲು ಮೃತ ವ್ಯಕ್ತಿಯ ಕುಟುಂಬಸ್ಥರು ಒಪ್ಪಲಿಲ್ಲ. ಇದು ನಿಮಿಷಾಳ ಕುಟುಂಬಕ್ಕೆ ದೊಡ್ಡ ಹಿನ್ನಡೆಯಾಯಿತು. ನಿಮಿಷಾಳ ಮರಣದಂಡನೆಯನ್ನು ಮುಂದೂಡಿರುವುದನ್ನು ಮೃತ ವ್ಯಕ್ತಿ ತಲಾಲ್ ಮಹ್ದಿ ಅವರ ಸಹೋದರ ಅಬ್ದೆಲ್‌ಫತ್ತಾ ಮಹ್ದಿ ಟೀಕಿಸಿದ್ದಾರೆ. ಮೃತರ ಕುಟುಂಬದಿಂದ ನಿಮಿಷಾಗೆ ಕ್ಷಮೆ ಪಡೆಯುವ ಪ್ರಯತ್ನಗಳನ್ನು ಮತ್ತು ಭಾರತ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳಿಂದ ಮಧ್ಯಸ್ಥಿಕೆಯ ಮಾತುಕತೆಗಳನ್ನು ಅವರು ಬಲವಾಗಿ ತಿರಸ್ಕರಿಸಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್ ಫತ್ತಾಹ್, ಇಸ್ಲಾಮಿಕ್ ಶರಿಯಾ ಕಾನೂನಿನ ಪ್ರಕಾರ ಕ್ವಿಸಾಸ್ (ಪ್ರತೀಕಾರ)ಗಾಗಿ ನಮ್ಮ ಬೇಡಿಕೆ ದೃಢವಾಗಿದೆ. ಮರಣದಂಡನೆ ಜಾರಿಯಾಗುವವರೆಗೆ ಕಾನೂನು ಕ್ರಮಗಳನ್ನು ಮುಂದುವರಿಸುತ್ತೇವೆ. ಮರಣದಂಡನೆಯನ್ನು ಮುಂದೂಡಿದ ಮಾತ್ರಕ್ಕೆ ಆಕೆ ಗಲ್ಲಿಗೇರುವುದು ತಪ್ಪುವುದಿಲ್ಲ ಎಂದು ಹೇಳಿದ್ದರು. ಆದರೆ, ಕೊನೆಗೂ ನಿಮಿಷಾ ಗಲ್ಲು ಶಿಕ್ಷೆಯಿಂದ ಪಾರಾಗಿ ಸಾವನ್ನು ಗೆದ್ದಿದ್ದಾರೆ
Crime
ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು
ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಮತ್ತೋರ್ವ ಯುವಕನಿಗೆ ಗಂಭೀರ ಗಾಯ
ಚಂದನ್ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ
ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್‌ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್
ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್‌ನ ಜೀಪ್ ನಡುವೆ ಸಂಭವಿಸಿದ ಅಪಘಾತ
ಸ್ಥಳದಲ್ಲೇ ಬೈಕ್‌ನಲ್ಲಿದ್ದ ಚಂದನ್ ಸಾವು
ಗಾಯಾಳು ಭರತ್ ಆಸ್ಪತ್ರೆಗೆ ರವಾನೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ
ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.
Crime
ಚಿನ್ನದಂಗಡಿ ಕ್ಳಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹ*ತ್ಯೆ..
ಮಂಡ್ಯ: ಚಿನ್ನದಂಗಡಿಗೆ ಕನ್ನ..ಕಳ್ಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹತ್ಯೆ..ಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ
ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಕೊಲೆಯಾದ ವ್ಯಕ್ತಿ. ಹೋಟೆಲ್ ಪಕ್ಕದಲ್ಲೆ ಇದ್ದ ಮಹಾಲಕ್ಷ್ಮಿ ಜ್ಯುವೆಲರ್ಸ್ ಗೆ ಬೆಳಗ್ಗಿನ ಜಾವ 3 ಗಂಟೆ ವೇಳೆ ಕಳ್ಳರ ಗ್ಯಾಂಗ್ ಒಂದು ಎಂಟ್ರಿ ಕೊಟ್ಟು ಗ್ಯಾಸ್ ಕಟರ್ ಮೂಲಕ ಚಿನ್ನದಂಗಡಿ ಶಟರ್ ಓಪನ್ ಮಾಡಿ
ಚಿನ್ನಾಭರಣ ದೋಚಿದ್ದಾರೆ.

ಶಬ್ದ ಕೇಳಿ ಹೋಟೆಲ್ ನಿಂದ ಹೊರಬಂದ ಮಾದಪ್ಪ ಕಳ್ಳರ ಗ್ಯಾಂಗ್ ಅನ್ನು ನೋಡಿದ್ದಾರೆ.
ಈ ವೇಳೆ ಮಾದಪ್ಪನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಣ ದೋಚಿ ಸಿಸಿ ಕ್ಯಾಮರಾ ಡಿವಿಆರ್ ಅನ್ನು ಖಾದಿಮರು ಹೊತ್ತೊಯ್ದಿದ್ದಾರೆ
ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಳದಂಡಿ ಹಾಗೂ ಕಿರುಗಾವಲು ಠಾಣಾ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಭಂದ ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲೂಗೊಂಡಿದ್ದು ಕಳ್ಳರಿಗಾಗಿ ಹುಡುಕಾಟ ನಡೆಸಲಾಗಿದೆ.
-
State14 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan11 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan13 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya9 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur16 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan15 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore14 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore8 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
