Chamarajanagar
ಪ್ರಥಮ ದರ್ಜೆ ಕಾಲೇಜು ನಲ್ಲಿ ದೀನ್ ದಯಾಳ್ ತರಬೇತಿ ಕೌಶಲ್ಯ
ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಯಳಂದೂರು ಹಾಗೂ ದೀನ್ ದಯಾಳು ತರಬೇತಿ ಕೌಶಲ್ಯ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಬಲೀಕರಣದತ್ತ ಕರ್ನಾಟಕ ವಿಶ್ವ ಶಕ್ತಿಯಾಗುವಂಥ ಭಾರತ ಎಂಬ ಶೀರ್ಷಿಕೆಡಿಯಲ್ಲಿ ಇಂದು ಉದ್ಯೋಗ ಕೋಶ ಮತ್ತು ಐಕ್ಯೂ ಎಸಿ ಯು ಅಡಿಯಲ್ಲಿ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಈ ವರ್ಷ ಓದುತ್ತಿರುವ ಪ್ರಥಮ ದ್ವಿತೀಯ ತೃತೀಯ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಯೋಜಿತ ಎನ್ ಆರ್ ಎಲ್ ಎಮ್ ಸಂಜೀವಿನಿ ಯೋಜನೆಯ ಅಡಿಯಲ್ಲಿ ಅನುಷ್ಠಾನವಾಗುತ್ತಿರುವ ಮಹತ್ವಾಕಾಂಕ್ಷಿ ಯೋಜನೆಯದ ಡಿಡಿ ಯು ಜಿ ಕೆ ವೈ ಯೋಜನೆಯಲ್ಲಿ ವಿದ್ಯಾವಂತ ನಿರುದ್ಯೋಗಿ ಗ್ರಾಮೀಣ ಬಡ ಯುವಕ ಯುವತಿಯರ ಸ್ವಾವಲಂಬಿಗಳಾಗಿ ಆರ್ಥಿಕ ಸಬಲೀಕರಣ ಹೊಂದಲು ಉಚ್ಚಾರಾಗಿರುವ ಅಭ್ಯರ್ಥಿಗಳಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸದರಿ ಸಂಸ್ಥೆಯ ತರಬೇತುದಾರರಾದ ಶ್ರೀ ಸುನಿಲ್ ಅವರು ಕಾರ್ಯಕ್ರಮದ ಯೋಜನೆಯಂತೆ ನಮ್ಮ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸುವ ಮೂಲಕ ನಡೆಸಿಕೊಟ್ಟರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಈ ಕಾರ್ಯಕ್ರಮವು ಆಯೋಜನೆಗೊಳ್ಳುತ್ತಿದ್ದು ವಿದ್ಯಾವಂತ ನಿರುದ್ಯೋಗಿ ವಿದ್ಯಾರ್ಥಿಗಳನ್ನು ಗುರುತಿಸಿ ಅಂತವರು ಸ್ವಾವಲಂಬಿಗಳಾಗಿ ಜೀವನ ಕಟ್ಟಿಕೊಳ್ಳುವಲ್ಲಿ ಅವಶ್ಯವಾದ ಕೌಶಲ್ಯ ತರಬೇತಿಯನ್ನು ನಮ್ಮ ಸಂಸ್ಥೆಯು ನೀಡುತ್ತಿದೆ ಈಗಾಗಲೇ ಒಂದುವರೆ ವರ್ಷಗಳಲ್ಲಿ ಸುಮಾರು ಮೂರು ವರೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪ್ಲೇಸ್ಮೆಂಟ್ ಅನ್ನು ಮಾಡಲಾಗಿದೆ ಹೆತ್ತವರಿಗೆ ಭಾರವಾಗ ದಿನದಂತೆ ಮಕ್ಕಳು ಸ್ವತಂತ್ರ ಜೀವನವನ್ನು ಕಟ್ಟಿಕೊಳ್ಳಲು ದುಡಿಯುವಂತಹ ಉದ್ಯೋಗವನ್ನು ಅವರೇ ನಿರ್ಮಾಣ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ಈ ಬಗೆಯ ತರಬೇತಿ ಕಾರ್ಯಕ್ರಮಗಳನ್ನು ನಾವು ಆಯೋಜಿಸುತ್ತಿದ್ದೇವೆ ಇದರ ಸಂಪೂರ್ಣ ಲಾಭವನ್ನು ವಿದ್ಯಾರ್ಥಿಗಳಾದ ತಾವು ಪಡೆಯಲೇಬೇಕು ಎಂಬ ಮಹತ್ವಕಾಂಕ್ಷೆಯನ್ನು ಹೊಂದಿದ ಮಾನ್ಯ ಪ್ರಾಂಶುಪಾಲರು ಈ ಕಾರ್ಯಕ್ರಮವನ್ನು ಆಯೋಜಿಸಲು ನಮ್ಮ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು ಅದರಂತೆ ಮೊದಲ ಭಾಗವಾಗಿ ಇಂದು ನಮ್ಮ ಸಂಸ್ಥೆಯ ಜೈಯೋದ್ದೇಶಗಳನ್ನು ಮತ್ತು ನೀಡಲಾಗುವ ಉಚಿತ ತರಬೇತಿಗಳು ಯಾವುವು ಅದರಿಂದ ಏನೆಲ್ಲಾ ಅನುಕೂಲಗಳಾಗುತ್ತದೆ ಎಂಬ ಸಾಮಾನ್ಯ ಮಾಹಿತಿಗಾಗಿ ಈ ಕಾರ್ಯವನ್ನು ಆಯೋಜಿಸಲಾಗಿದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡುತ್ತಾ ಇಂದಿನ ಯುಗದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವ ಮಾಡುತ್ತಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಇಂಥ ಅನುದಾನಿತ ಸಂಸ್ಥೆಯೊಂದಿಗೆ ನಮ್ಮ ಕಾಲೇಜು ಒಡಂಬಡಿಕೆ ಮಾಡಿಕೊಂಡಿದೆ ಅದರ ಮೊದಲ ಭಾಗವಾಗಿ ಈ ಕಾರ್ಯಕ್ರಮವನ್ನು ನಮ್ಮ ವಿದ್ಯಾರ್ಥಿಗಳಿಗೆ ಆಯೋಜಿಸುವ ಮೂಲಕ ಕೌಶಲ್ಯ ಕೇಂದ್ರಿತ ತರಬೇತಿಯನ್ನು ಆಯೋಜಿಸಿ ಲಾಗಿದೆ ಎಂದು ವಿವರಿಸಿದರು ಸದರಿ ಸಂಸ್ಥೆಯ ಈ ಬಗೆಯ ಕಾರ್ಯಕ್ರಮಗಳನ್ನು ಶ್ಲಾಘಿಸಿದ ಪ್ರಾಂಶುಪಾಲರು ಇಂಥ ಕಾರ್ಯಕ್ರಮಗಳನ್ನು ಸದರಿ ಸಂಸ್ಥೆಯ ವತಿಯಿಂದ ಹೆಚ್ಚು ಹೆಚ್ಚು ಆಯೋಜಿಸಲಾಗುತ್ತದೆ ಎಂಬ ಮಾಹಿತಿಯನ್ನು ಹಂಚಿಕೊಂಡರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯಾದ ನೀಲಮ್ಮ ಎಲ್ಲರನ್ನೂ ಸ್ವಾಗತಿಸಿದರು ಅಂತೆಯೇ ಉದ್ಯೋಗ ಕೋಶದ ಸಂಚಾಲಕರಾದ ಕುಮಾರಿ ದಾಕ್ಷಾಯಿಣಿಯವರು ಈ ಕಾರ್ಯಕ್ರಮದ ಆಶಯವನ್ನು ಕುರಿತು ವಿವರಿಸಿದರು ಸದರಿ ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು ಅಧ್ಯಾಪಕಿತರರು ಎಲ್ಲರೂ ಭಾಗವಹಿಸಿದ್ದರು ಎಲ್ಲರಿಗೂ ವಂದಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು
Chamarajanagar
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಚಾಮರಾಜನಗರ ಜಿಲ್ಲೆಯಲ್ಲಿರುವ ವಿವಿಧ ವಸತಿ ಶಾಲೆಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿಗಳು ಹತ್ತಿರದ ವಸತಿ ಶಾಲೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಜನವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
Chamarajanagar
ಮೂರು ಚಕ್ರದ ಸ್ಕೂಟರ್ಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
ಚಾಮರಾಜನಗರ:- ಕೊಳ್ಳೇಗಾಲ ನಗರಸಭೆಯ ೨೦೨೦-೨೧ ಮತ್ತು೨೦೨೧-೨೨ನೇ ಸಾಲಿನ ಎಸ್.ಎಫ್.ಸಿ ಸಾಲಿನ ಶೇ.೫ರ ಅನುಮೋದಿತ ಕ್ರಿಯಾ ಯೋಜನೆಯಂತೆ ಯಂತ್ರಚಾಲಿತ ಕಂಪನಿಯ ಮೂರು ಚಕ್ರದ ಸ್ಕೂಟರ್ಗಳನ್ನು ನೀಡಲು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ಶೇ.೭೫ರಷ್ಟು ಮೇಲ್ಪಟ್ಟ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಗರಸಭಾ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದೃಢೀಕರಿಸಿ ಜನವರಿ ೩೦ ರೊಳಗೆ ಕಚೇರಿಗೆ ಸಲ್ಲಿಸಬೇಕು.
Chamarajanagar
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ.ನಾಳೆ ನವೋದಯ ಪರೀಕ್ಷೆ
ಪಟ್ಟಣದ ಪಬ್ಲಿಕ್ ಶಾಲೆಯಲ್ಲಿ ನಡೆದ ನವೋದಯ ಪರೀಕ್ಷೆಯ ಪೂರ್ವ ಸಿದ್ಧತೆಯನ್ನು ಶಿಕ್ಷಕರಿಗೆ ತಿಳಿಸಿದ್ದಾರೆ
ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ರವರು ನವೋದಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು
ಮಾತನಾಡಿದ ಶಾಖೆಯ ಉಪ ಪ್ರಾಂಶುಪಾಲರಾದ ನಂಜುಂಡಯ್ಯ ರವರು ನಮ್ಮ ಶಾಲೆಯಲ್ಲಿ ನಡೆಯುವ ನವೋದಯ ಪರೀಕ್ಷೆಯು ಯಶಸ್ವೀಯಾಗಿ ನಡೆಸಿ ಕೋಡಿ ಎಂದು ಶಿಕ್ಷಕರಿಗೆ ತಿಳಿಸಿದ್ದಾರೆ
ಈ ಸಂದರ್ಭದಲ್ಲಿ ಶಶಿಧರ, ಮಹೇಶ್ ಕುಮಾರ್, ಪುಟ್ಟರಾಜು, ಹಾಜರಿದ್ದರು,
-
Kodagu20 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu19 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech17 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports21 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
National - International23 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Cinema23 hours ago
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣ: ಪತ್ನಿ ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್!
-
Mysore20 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore19 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು