Connect with us

Mandya

ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ಡೆಂಗ್ಯೂ ಜಾಗೃತಿ ಸಭೆ

Published

on

ಶ್ರೀರಂಗಪಟ್ಟಣ: ಡೆಂಗ್ಯೂ ಮತ್ತು ಚಿಕ್ಕುಂ ಗುನ್ಯಾ ಜ್ವರ ನಿಯಂತ್ರಣ ನಿಮ್ಮ ಕೈಯಲ್ಲಿದೆ. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವದರಿಂದ ಸೊಳ್ಳೆ ಕಡಿತದಿಂದ ಬರುವ ರೋಗಗಳಿಂದ ಪಾರಾಗಬಹುದೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.

ಅವರು ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಡೆಂಗ್ಯೂ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಡೆಂಗ್ಯೂ ಹಾಗೂ ಚಿಕ್ಕುo ಗುನ್ಯ ಜ್ವರಗಳು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಡಿತದಿಂದ ಬರುತ್ತವೆ. ನಿಂತ ಸ್ವಚ್ಚ ನೀರಿನಲ್ಲಿ ಹುಟ್ಟುವ ಈ ಸೊಳ್ಳೆ ಸಾಧಾರಣವಾಗಿ ಹಗಲಿನಲ್ಲಿ ಕಚ್ಚುತ್ತವೆ. ಕಡಿತ ಚಿಕ್ಕದಾದರೂ ಭೀತಿ ದೊಡ್ಡದು ನಿರ್ದಿಷ್ಟ ಚಿಕಿತ್ಸೆ ಇಲ್ಲದ ಈ ಖಾಯಿಲೆಗೆ ಮುಂಜಾಗ್ರತೆಯೆ ಮದ್ದು ಎಂದ ಅವರು ಸೊಳ್ಳೆಯ ಜೀವನ ಚಕ್ರ ಕುರಿತು ಮಾಹಿತಿ ನೀಡಿ ಸೊಳ್ಳೆ ಉತ್ಪತ್ತಿ ತಡೆಗಟ್ಟಿ ರೋಗ ನಿಯಂತ್ರಣ ಮಾಡಬೇಕು. ಇದ್ದಕ್ಕಿದ್ದಂತೆ ಜ್ವರ, ಕಣ್ಣಿನ ಹಿಂಭಾಗ ನೋವು, ಸ್ನಾಯು ಮತ್ತು ಕೀಲುಗಳಲ್ಲಿ ನೋವು, ಹೊಟ್ಟೆ ನೋವು ಮುಂತಾದವು ರೋಗ ಲಕ್ಷಣಗಳಾಗಿದ್ದು ಇಂತಹ, ಲಕ್ಷಣಗಳು ಕಂಡು ಬಂದಾಗ ತಕ್ಷಣ ಸರಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಮುದಾಯದೊಂದಿಗೆ ಸೇರಿ ಡೆಂಗಿ ನಿಯಂತ್ರಣ ಮಾಡೋಣ ಎಂದು ಸಲಹೆ ನೀಡಿದರು.

ನಂತರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿ, ಸೊಳ್ಳೆ ಕಡಿತದಿಂದ ಪಾರಾಗಲು ಮೈತುಂಬ ಬಟ್ಟೆ ಧರಿಸುವುದು, ಸೊಳ್ಳೆ ಪರದೆ ಉಪಯೋಗಿಸುವುದು,ನೀರಿನ ಶೇಖರಣೆಗಳನ್ನು ಮುಚ್ಚಿಡುವುದು, ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸುವದು ಮತ್ತು ಪರಿಸರವನ್ನು ಶುಚಿಯಾಗಿಟ್ಟು ಕೊಳ್ಳವದು. ಪ್ರತಿ ಶುಕ್ರವಾರ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿ ಒಣ ದಿನ ಆಚರಿಸುವ ಮೂಲಕ ಮುಂತಾದ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸರಿಸಬೇಕು ಒಟ್ಟಾರೆ ಸೊಳ್ಳೆ ಕಡಿತದಿಂದ ಜಾಗೃತರಾಗಿರೆಂದು ಸಲಹೆ ನೀಡಿದರು.

ನಂತರ ಪುರಸಭೆ ಸದಸ್ಯ ಎಂ.ಶ್ರೀನಿವಾಸ ಮಾತನಾಡಿ, ಪುರಸಭೆ ವಾರ್ಡ್ ಗಳಲ್ಲಿ ಇಂತಹ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಿ ಎಂದರು.

ಪುರಸಭೆ ಮುಖ್ಯಾಧಿಕಾರಿ ರಾಜಣ್ಣ ಮಾತನಾಡಿ, ಸ್ವಚ್ಚ ಪರಿಸರ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪುರಸಭೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕು‌ ಎಂದರು.

ಈ ವೇಳೆ ಪುರಸಭೆ ಸದಸ್ಯರುಗಳಾದ ಕೃಷ್ಣಪ್ಪ , ಎಸ್ ಟಿ ರಾಜು, ಗಂಜಾಂ ಶಿವು, ಪೂರ್ಣಿಮಾ, ವಸಂತ ಕುಮಾರಿ, ನಿರ್ಮಲಾ ಪಿ,ಎಸ್ ನಂದೀಶ್, ಪರಿಸರ ಇಂಜನಿಯರ ಸಹನ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳ, ಪುರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಸಭೆಯಲ್ಲಿ ಹಾಜರಿದ್ದರು.

Continue Reading

Mandya

 ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ

Published

on

ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು

ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.

ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

Continue Reading

Mandya

ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ

Published

on

ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.

Continue Reading

Mandya

ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

Published

on

ಮದ್ದೂರು:  ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.


ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.

ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.

ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.

ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.

Continue Reading

Trending

error: Content is protected !!