Connect with us

Hassan

ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ: ಮೋಹನ್ ವಿಶ್ವ ಆಗ್ರಹ

Published

on

ಹಾಸನ: ರಾಜ್ಯದಲ್ಲಿ ದಿನೆ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಸರಿಯಾದ ಸಮಯದಲ್ಲಿ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಸಭೆ ಕರೆಯುವಲ್ಲಿ ವಿಳಂಬ ಮಾಡಿದ್ದಾರೆ. ಕೂಡಲೇ ಸರ್ಕಾರ ಮೆಡಿಕಲ್ ಎಮರ್ಜೆನ್ಸಿ ಘೋಷಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಮೋಹನ್ ವಿಶ್ವ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಜಿಲ್ಲೆಯ ಸಮಸ್ಯೆಗಳ ನಿವಾರಣೆಗೆ ವಿಫಲರಾಗಿದ್ದು, ಇತ್ತೀಚಿಗೆ ಹಾಸನಕ್ಕೆ ಭೇಟಿ ನೀಡಿ ಡೆಂಗ್ಯೂ ಪ್ರಕರಣದ ಬಗ್ಗೆ ಸಭೆ ನಡೆಸುವ ಬದಲಾಗಿ ವಯಕ್ತಿಕ ಕಾರ್ಯಕ್ರಮ ಮುಗಿಸಿ ತೆರಳಿದ್ದಾರೆ. ಇನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಪರಿಸ್ಥಿತಿ ನಿಯಂತ್ರಿಸಲು ವಿಫಲರಾಗಿ ಈಜುಕೊಳದಲ್ಲಿ

ಆರಾಮಾಗಿ ವಿಶ್ರಮಿಸುತ್ತಿದ್ದಾರೆ. ಡೆಂಗ್ಯೂ ಬಗ್ಗೆ ವಿಪಕ್ಷಗಳು ದ್ವನಿ ಎತ್ತಿದ ಬಳಿಕ ಇದೀಗ ಟಾಸ್ಕ್ ಫೋರ್ಸ್ ಸಮಿತಿ ಸಚಿಸಲು ಸರ್ಕಾರ ಮುಂದಾಗಿದೆ ಎಂದರು. ಮಳೆ ಬರುವ ಮುನ್ನವೇ ಎಚ್ಚೆತ್ತುಕೊಳ್ಳುವ ಬದಲಾಗಿ ಡೆಂಗ್ಯೂ ಹರಡುವಿಕೆ ತನ್ನ ನಿಯಂತ್ರಣ ಕಳೆದುಕೊಂಡ ಬಳಿಕ ಇದೀಗ ಎಚ್ಚೆತ್ತುಕೊಂಡಿದೆ, ಕೆಲ ಸಚಿವರು ಕೇವಲ ಸಮುದಾಯಕ್ಕೆ ಅನುಗುಣವಾಗಿ ಡಿಸಿಎಂ ಕೇಳುವ ಮೂಲಕ

ರಾಜಕೀಯ ಕೆಸರು ಎರಚಾಟ ಮಾಡುತ್ತಿದ್ದಾರೆ ಎಂದು ದೂರಿದರು. ಇದುವರೆಗೂ ರಾಜ್ಯದಲ್ಲಿ ೭೫೪೭ ಪ್ರಕರಣಗಳು ದಾಖಲಾಗಿದ್ದು, ಒಂಬತ್ತು ಮಂದಿ ಸಾವನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ದಿನೇ ದಿನೇ ಪ್ರಕರಣಗಳು ಏರಿಕೆಯಾಗುತ್ತಿದ್ದು, ಆರು ಮಂದಿ ಮೃತ ಪಟ್ಟಿದ್ದಾರೆ. ಸಣ್ಣ ಮಕ್ಕಳೇ ಹೆಚ್ಚಾಗಿ ಡೆಂಗ್ಯೂವಿಗೆ ತುತ್ತಾಗಿದ್ದಾರೆ. ಜಿಲ್ಲೆಯ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ ರಾಜಕೀಯ

ಮಾಡಿಕೊಂಡು ಮೂವರು ಉಪಮುಖ್ಯಮಂತ್ರಿಗಳು ಬೇಕೆಂಬ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಾ ಸಮಯ ವ್ಯರ್ಥ ಮಾಡುತ್ತದ್ದಾರೆ. ಹಾಸನ ಜಿಲ್ಲಾಡಳಿತದ ವತಿಯಿಂದ ಕನಿಷ್ಟ ಪಕ್ಷ ಮನೆಗಳಿಗೆ ಸೊಳ್ಳೆ ಪರದೆ ನೀಡುವ ಕಲಸವನ್ನೂ ಮಾಡಿರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಭ್ರಷ್ಟಾಚಾರ, ಹಗರಣ, ಶೂನ್ಯ ಅಭಿವೃದ್ದಿಯೊಂದೆ ರಾಜ್ಯದಲ್ಲಿ ಕಾಣುತ್ತಿದೆ ಎಂದು ಗಂಭೀರವಾಗಿ ದೂರಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಆಳುವ ಸರ್ಕಾರದ ಜನ ಪ್ರತಿನಿಧಿಗಳು ಡೆಂಗ್ಯೂ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬದಲಾಗಿ ಒಬ್ಬರ ಮೇಲೆ ಮತ್ತಿಬ್ಬರು ಕಾಲು ಎಳೆಯುವ ಕೆಲಸ ಮಾಡುತ್ತಿದ್ದಾರೆ. ದಲಿತರಿಗೆ ಸೇರಿದ ೧೧,೦೦೦ ಕೋಟಿ ಹಣವನ್ನು ಬೇರೆಡೆಗೆ ಬಳಸಿಕೊಂಡರು. ವಾಲ್ಮೀಕಿ ನಿಗಮದ ಹಗರಣದಲ್ಲಿ ೧೮೭ ಕೋಟಿ ದಲಿತರ ಹಣವನ್ನು ಲೂಟಿ

ಮಾಡಿದರು. ಬಿ.ಜೆ.ಪಿಯ ಹೋರಾಟಕ್ಕೆ ಮಣಿದು ನಾಗೇಂದ್ರ ಅವರ ರಾಜೀನಾಮೆ ಪಡೆದರು. ಈಗ ಅವರನ್ನು ತನಿಖೆಗೆ ಒಳಪಡಿಸಲು ಮೀನಾಮೇಷ ಎಣಿಸಿ, ಈಗ ತನಿಖೆಗೆ ಒಳಪಡಿಸಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಹಗರಣಗಳನ್ನು ಮಾಡುವ ಮೂಲಕ ಅಭಿವೃದ್ದಿ ಬಗ್ಗೆ ಗಮನ ಹರಿಸುವಲ್ಲಿ ವಿಫಲರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಕೂಡ ಹೆಚ್ಚಾಗಿದ್ದು, ಕಾಡಾನೆ ಹಾವಳಿ ನಿಯಂತ್ರಣಕ್ಕೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಗಿರೀಶ್, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಮಂಜು ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಡಿ. 22 ಹಾಗೂ 23ರಂದು ಶಾಂತಲಾ ಮಹೋತ್ಸವ

Published

on

ಹಾಸನ: ಬೇಲೂರು ತಾಲ್ಲೂಕು ಹಳೇಬೀಡಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಡಿ. 22 ಹಾಗೂ 23ರಂದು ಶಾಂತಲಾ ಮಹೋತ್ಸವ ಹಾಗೂ ಆಳ್ವಾಸ್ ಸಾಂಸ್ಕೃತಿಕ ವೈಭವ ಹಮ್ಮಿಕೊಳ್ಳಲಾಗಿದೆ ಎಂದು ಶಾಂತಲ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ಲಿಂಗೇಶ್‌ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ, ಡಿ. 22 ರಂದು ಶಾಂತಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ‌

ಅಂಬೇಡ್ಕರ್ ವೃತ್ತದಿಂದ ಹೊಯ್ಸಳ ವೃತ್ತದ ವರೆಗೆ ಮೆರವಣಿಗೆ ನಡೆಯಲಿದೆ. ಮಿಮಿಕ್ರಿ ಗೋಪಿ ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.

ಡಿ. 23ರ ಮಂಗಳವಾರ ಸಂಜೆ 5 ಗಂಟೆ ವರೆಗೆ ರೈತ ದಿನಾಚರಣೆ ಬಳಿಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನೆರವೇರಲಿದೆ ಎಂದರು.

10 ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ‌ ಇದೆ. ಸುತ್ತಲಿನ ಹಳ್ಳಿಗಳಿಂದ ಬರುವ ಜನರಿಗೆ ಅನುಕೂಲವಾಗಲು ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕೃಷಿ ವಸ್ತು ಪ್ರದರ್ಶನ ಇರಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.

ಹಾಸನ ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಹೊಯ್ಸಳೋತ್ಸವ ಹಮ್ಮಿಕೊಳ್ಳುವಂತೆ ಸರ್ಕಾರಕ್ಕೆ ಎಷ್ಟೇ ಭಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಪಕ್ಷಾತೀತವಾಗಿ ಶಾಂತಲಾ ಮಹೋತ್ಸವ ಆಯೋಜಿಸಿದ್ದೇವೆ. ಸರ್ಕಾರ ಇನ್ನಾದರೂ ನಮ್ಮ ಮನವಿಗೆ ಸ್ಪಂದಿಸಬೇಕು ಎಂದರು.

ಶಾಂತಲಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಕುಮಾರ್, ಗಂಗೂರು ಶಿವಕುಮಾರ್, ಶಿವಣ್ಣ, ಶಂಕರ್ ನಾಗ್, ಭಾನು ಪ್ರಕಾಶ್ ಇದ್ದರು.

Continue Reading

Hassan

ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ

Published

on

ಹಾಸನ:  ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಹಂಪಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.

ಚಿರತೆ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ.

 

ಗ್ರಾಮದ ಸುತ್ತಮುತ್ತ ಚಿರತೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ನಿರಂತರ ದಾಳಿಯಿಂದ ರೈತರು ಜಮೀನುಗಳಿಗೆ ಹೋಗಲು ಎದುರಿಸುತ್ತಿದ್ದಾರೆ.

ನಷ್ಟಕ್ಕೀಡಾದ ರೈತರಿಗೆ ಪರಿಹಾರ ವಿತರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

Hassan

ಟಿಕೆಟ್ ಪರಿಶೀಲನೆ ವೇಳೆ ಭೀಕರ ಅಪಘಾತ: ಲಾರಿ ಗುದ್ದಿ KSRTC ಟಿಕೆಟ್ ತನಿಖಾಧಿಕಾರಿ ಸ್ಥಳದಲ್ಲೇ ಸಾ*ವು

Published

on

ಹಾಸನ : ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ KSRTC ಟಿಕೆಟ್ ತಪಾಸಣಾ ಇನ್ಸ್‌ಪೆಕ್ಟರ್‌ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣಾ ಇನ್ಸ್‌ಪೆಕ್ಟರ್ ಶಕುನಿಗೌಡ (57) ಮೃತ ಅಧಿಕಾರಿ. ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಅವರು ರಸ್ತೆ ದಾಟುತ್ತಿದ್ದ ವೇಳೆ, ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಶಕುನಿಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.

Continue Reading

Trending

error: Content is protected !!