Connect with us

Chikmagalur

ಅ. 19 ರಿಂದ 24ರ ವರೆಗೆ ಕಾಫಿ ನಾಡಿನಲ್ಲಿ ನಿಷೇದಾಜ್ಞೆ ಜಾರಿ

Published

on

ಚಿಕ್ಕಮಗಳೂರು : ಮಹಿಷ ದಸರಾ ಸಂಬಂಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾದ ಹಿನ್ನೆಲೆಯಲ್ಲಿ ಹಾಗೂ ಮಹಿಷ ದಸರಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮುಂಜಾಗ್ರತ ಕ್ರಮವಾಗಿ ಅ.19ರಿಂದ 24 ರವರೆಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮಹಿಷ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರಚೋದನಾತ್ಮಕ ಭಾಷಣ, ಪೋಸ್ಟರ್, ಫ್ಲೆಕ್ಸ್ ಹಾಕಬಾರದು. ಈ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ‌.
ನಿಷೇದಾಜ್ಞೆ ಅವಧಿಯಲ್ಲಿ ಘೋಷಣೆಗಳನ್ನು ಕೂಗುವುದು, ಆವೇಶಭರಿತರಾಗಿ ಭಾಷಣ ಮಾಡುವುದು, ಸಂಗೀತ ಕಾರ್ಯಕ್ರಮ ನಡೆಸುವುದನ್ನು ನಿಷೇಧಿಸಲಾಗಿದೆ. ಯಾರಾದರೂ ನಿಷೇದಾಜ್ಞೆ ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಅ. 20ರಂದು ಮಹಿಷ ದಸರಾ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮುಂದಾಗಿತ್ತು. ಜೊತೆಗೆ ಮಹಿಷ ದಸರಾದ ಸಭಾ ಕಾರ್ಯಕ್ರಮವನ್ನು ಚಿಂತಕ ಪ್ರೊ.ಭಗವಾನ್ ನೆರವೇರಿಸಲಿದ್ದರು. ಆದರೆ ನಿಷೇದಾಜ್ಞೆ ಜಾರಿಯಿಂದಾಗಿ ಮಹಿಷ ದಸರಾ ಅಂಗವಾಗಿ ನಡೆಯಬೇಕಿದ್ದ ಮೆರವಣಿಗೆ ರದ್ದಾದಂತಾಗಿದೆ.
ಮಹಿಷ ದಸರ ಕಾರ್ಯಕ್ರಮಕ್ಕೆ ಚಿಂತಕ ಪ್ರೊಫೆಸರ್ ಭಗವಾನ್ ಆಗಮಿಸುವುದಕ್ಕೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಪ್ರಮುಖವಾಗಿ ಒಕ್ಕಲಿಗರ ಸಂಘ, ಶ್ರೀರಾಮ ಸೇನೆ ಕಾರ್ಯಕರ್ತರು ಭಗವಾನ್ ಚಿಕ್ಕಮಗಳೂರಿಗೆ ಬಂದಲ್ಲಿ ಅವರಿಗೆ ಮಸಿ ಬಳಿಯುವುದಾಗಿ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಭಗವಾನ್ ಚಿಕ್ಕಮಗಳೂರಿಗೆ ಬಾರದಂತೆ ಗಡಿಪಾರು ಮಾಡಬೇಕು ಎಂದು ಡಿಸಿಗೆ ಮನವಿಯನ್ನು ಸಲ್ಲಿಸಲಾಗಿತ್ತು.
ಮಹಿಷ ದಸರಾಗೆ ಭಗವಾನ್ ಬಂದಲ್ಲಿ ಮಸಿಬಳಿಯುವುದಾಗಿ ಕೆಲ ಸಂಘಟನೆಗಳು ಹೇಳಿಕೆ ನೀಡಿದ್ದ ಬೆನ್ನಲ್ಲೇ ದಲಿತ ಸಂಘಟನೆಗಳು ಭಗವಾನ್ ಅವರನ್ನು ಕರೆಯಿಸುತ್ತೇವೆ. ಅವರಿಗೆ ಮಸಿ ಬಳಿಯಲು ಬಂದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ ಭಗವಾನ್ ಅವರಿಗೆ ಮಹಿಳಾ ಕಾರ್ಯಕರ್ತರಿಂದ ಮಸಿ ಬಳಿಸುವ ಸಾಧ್ಯತೆಯಿರುವುದರಿಂದ ಭಗವಾನ್ ಅವರಿಗೆ ನಾವು ಮಹಿಳೆಯರಿಂದಲೇ ರಕ್ಷಣೆ ಕೊಡಿಸುತ್ತೇವೆ ಎಂದು ಹೇಳಿದ್ದರು.
ಈ ಎಲ್ಲ ಘಟನಾವಳಿಗಳನ್ನು ಅವಲೋಕಿಸಿದ ಎಸ್ ಪಿ ವಿಕ್ರಮ್ ಅಮಟೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಜಾಗ್ರಾತಾ ಕ್ರ‌ಮವಾಗಿ ಅ.19 ರಿಂದ 24ರವರೆಗೆ ನಿಷೇದಾಜ್ಞೆ ಜಾರಿಗೊಳಿಸುವಂತೆ ಡಿಸಿ ಮೀನಾ ನಾಗರಾಜ್ ಅವರಿಗೆ ಶಿಫಾರಸ್ಸು ಮಾಡಿದ್ದರು. ಎಸ್ ಪಿ ಶಿಫಾರಸ್ಸಿನ ಮೇಲೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಚಿಕ್ಕಮಗಳೂರು : ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವಪ್ಪಿರುವ ದುರಂತ ಘಟನೆ

Published

on

ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು,ಆಕಾಶ್ (13) ಮೃತ ದುರ್ದೈವಿ
ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ
ನೇರಳೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು
ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದ ಬಾಲಕನ ಆಸ್ಪತ್ರೆಗೆ ದಾಖಲು ಮಾಡಿದ್ದು,ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading

Chikmagalur

ನಗರಸಭೆ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Published

on

ಚಿಕ್ಕಮಗಳೂರು : ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟ‌ರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿಕ್ಕಮಗಳೂರು ನಗರಸಭೆ ವಾರ್ಡ್ 2 ರ ಬಿಲ್ ಕಲೆಕ್ಟರ್ ಪ್ರದೀಪ್ ಸಿಕ್ಕಿಬಿದ್ದ ಭ್ರಷ್ಟ

ಸದಾಶಿವಮೂರ್ತಿ ಎಂಬುವವರ ಬೈಪಾಸ್‌ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಚಿಕ್ಕಮಗಳೂರು ನಗರಸಭೆ ವಾರ್ಡ್2 ಬಿಲ್ ಕಲೆಕ್ಟರ್ ಪ್ರದೀಪ್‌ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾನೆ.

ಸದಾಶಿವಮೂರ್ತಿ ಮಗ ರಾಕೇಶ್ ನೀಡಿದ ದೂರಿನ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾ ಇನ್ಸ್‌ಪೆಕ್ಟ‌ರ್ ಅನಿಲ್‌ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್ ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ

Continue Reading

Chikmagalur

ರೈಲು‌ ನಿಲ್ದಾಣದಲ್ಲೇ ಅಪರಿಚಿತ ಆತ್ಮಹತ್ಯೆ

Published

on

ಚಿಕ್ಕಮಗಳೂರು : ಅಪರಿಚಿತ ವ್ಯಕ್ರಿಯೋರ್ವ ರೈಲು ನಿಲ್ದಾಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ..

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ರೈಲು ನಿಲ್ದಾಣದ ಮೇಲ್ಸೇತುವೆಯ ಕಂಬಕ್ಕೆ ಮಧ್ಯ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.. ಘಟನೆ ಕುರಿತು ತರೀಕೆರೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು.. ಮೃತನ‌ ಗುರುತು ಪತ್ತೆಗಾಗಿ ತಲಾಶ್ ನಡೆಸಿದ್ದಾರೆ.

Continue Reading

Trending

error: Content is protected !!