Mandya
ಅರ್ಹ ಮಕ್ಕಳು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಿರಲಿ: ಡಾ. ಶ್ರೀಧರ್
ಶ್ರೀರಂಗಪಟ್ಟಣ: ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದಡಿಯಲ್ಲಿ ಯಾವುದೇ ಮಗು ಜಂತು ನಿವಾರಕ ಮಾತ್ರೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕೆಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ್ ಸಿ ಎಂ ಹೇಳಿದರು.
ಅವರು ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳು ಮತ್ತು ಹದಿಹರೆಯದವರಲ್ಲಿ ಕಂಡುಬರುವ ಜಂತು ಬಾಧೆ, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟುವ ಸಲುವಾಗಿ ರಾಜ್ಯಾದ್ಯಂತ ಫೆ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣ ದಿನ ಹಮ್ಮಿಕೊಳ್ಳಲಾಗಿದ್ದು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತು ನಿವಾರಣ ಅಲ್ಬಂಡಾಜೋಲ್ ಮಾತ್ರೆಗಳನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ,ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ತಪ್ಪದೆ ನೀಡಬೇಕು ಜತೆಗೆ ಈ ಬಗ್ಗೆ ಪೋಷಕರಿಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಂತುಹುಳು ನಿವಾರಣ ಕಾರ್ಯಕ್ರಮದ ಬಿತ್ತಿ ಪತ್ರ ಬಿಡುಗಡೆಗೊಳಿಸಿದರು. ತರಬೇತಿ ಕಾರ್ಯಗಾರದಲ್ಲಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್,ಜಿ ಬಿ ಹೇಮಣ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯರಾಮ್ ಟಿ ಬಿ,ಚಿಕ್ಕ ಬೋರಯ್ಯ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್,ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪುಣ್ಯವತಿ, ಶಾಂತರಾಮ,ನರ್ಸಿಂಗ್ ಅಧಿಕಾರಿ ಕುಸುಮ,ವಸತಿ ಶಾಲಾ ನರ್ಸಿಂಗ್ ಅಧಿಕಾರಿ ಶಿವಮ್ಮ,ತ್ರಿವೇಣಿ,ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ,ಲಲಿತಾ ಹಾಗೂ ಎಲ್ಲಾ ಶಾಲೆಯ ವಿಜ್ಞಾನ ಶಿಕ್ಷಕರು,ಕ್ಷೇತ್ರ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು ಉಪಸ್ಥಿತರಿದ್ದರು.
Mandya
ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ : ಡಾ.ಕುಮಾರ
ಮಂಡ್ಯ: ಸ್ವಚ್ಛ ಸರ್ವೇಕ್ಷಣ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಪ್ರತಿಯೊಬ್ಬ ನಾಗರಿಕನು ಕೂಡ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.
ನಗರದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜ್ಞಾನ ಕೇಂದ್ರ ಶಾಲೆಯ ಪಾರ್ಕ್ ಮುಂಭಾಗ ನಗರ ಸಭೆ ವತಿಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ. ಸ್ವಚ್ಛ ಸರ್ವೇಕ್ಷಣ ಅಭಿಯಾನದ ಬಗ್ಗೆ ತರಬೇತಿಯನ್ನು ನೀಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸ್ವಚ್ಛತೆಯ ಬಗ್ಗೆ ಎಲ್ಲಾ ಅಧಿಕಾರಿಗಳು ಸಕ್ರಿಯವಾಗಿ ಸ್ವಚ್ಛತೆಯ ಅರಿವು ಮೂಡಿಸುವ ಸಲುವಾಗಿ ಚಿತ್ರಗಳನ್ನು ಬರೆದು ಅರಿವು ಮೂಡಿಸಿದ್ದಾರೆ.
ಮನಸ್ಸು ಶುದ್ಧವಾಗಿದ್ದರೆ ಮಾತ್ರ ಸಮಾಜವನ್ನು ಶುದ್ಧವಾಗಿಸಲು ಸಾಧ್ಯ. ಕಸವನ್ನು ರಸ್ತೆಯ ಬದಿ ಹಾಕಬಾರದು ಮನೆಗಳಲ್ಲಿ ಹಸಿ ಕಸ ಒಣ ಕಸವನ್ನು ವಿಂಗಡಿಸಬೇಕು ಮತ್ತು ಬಹಳ ಮುಖ್ಯವಾಗಿ ಪ್ಲಾಸ್ಟಿಕ್ ಅನ್ನು ಬಳಸಬಾರದು ಮನೆಯ ಮುಂಭಾಗದಲ್ಲಿ ಗಿಡಮರಗಳನ್ನು ಬಳಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರು ಪಂಪಶ್ರೀ, ನಗರಾಭಿವೃದ್ಥಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
Mandya
ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿಯು ಸದೃಢ : ಶಾಸಕ ಹೆಚ್.ಟಿ.ಮಂಜು
ಮಂಡ್ಯ: ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿಯು ಸದೃಢವಾಗಿದ್ದು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಗೌಡ ಅವರು ಎನ್‌ಡಿಎ ಮೈತ್ರಿಕೂಟದ ಸಂಘರ್ಷಕ್ಕೀಡಾಗುವ ಹೇಳಿಕೆ ನೀಡಬಾರದು ಎಂದು ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಶಾಶ್ವತವಾಗಿ ಮುಂದುವರೆಯಲಿದೆ. ಇದಕ್ಕೆ ಧಕ್ಕಯಾಗುವಂತೆ ಯಾರಾದರೂ ಪ್ರಚೋಧಿಸಿದರೆ ಪ್ರತಿಕ್ರಿಯೆ ನೀಡದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಆದರೆ ಇತ್ತೀಚೆಗೆ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕೆ.ಸಿ.ನಾರಾಯಣಗೌಡ ಅವರ ಹೇಳಿಕೆ ಸರಿಯಾದುದಲ್ಲ ಎಂದು ಹೇಳಿದರು.

ಅವರು ಮೈತ್ರಿ ಪಕ್ಷದ ಮುಖಂಡರು, 2013ರಲ್ಲಿ ಜೆಡಿಎಸ್‌ನಿಂದ ಮೊದಲ ಬಾರಿಗೆ ಸ್ಪರ್ಧಿಸಿ ಶಾಸಕರಾದರು, 2018ರಲ್ಲಿ ನಿಖಿಲ್ ಅವರು ರಾಜಕೀಯ ಪ್ರವೇಶ ಮಾಡದಿದ್ದರೂ ಕೆ.ಸಿ.ನಾರಾಯಣಗೌಡ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದರು ಎಂಬುದನ್ನು ಮರೆಯಬಾರದು. ಹೆಚ್.ಡಿ.ದೇವೇಗೌಡರ ಕುಟುಂಬದ ನೆರವಿಲ್ಲದೇ ರಾಜಕೀಯವಾಗಿ ಬೆಳೆಯಲು ಸಾಧ್ಯವಿರಲಿಲ್ಲ.ಅವರು ನಡೆದುಬಂದ ಹಾದಿಯನ್ನು ಮರೆಯಬಾರದು. ಅವರು ಅನುಭವಿ ಹಿರಿಯ ರಾಜಕಾರಣಿಗಳು, ಪದೇ ಪದೇ ಈ ರೀತಿಯ ಹೇಳಿಕೆ ನೀಡಬಾರದು ಎಂದರು.
ಕಳೆದ ಜನವರಿ 16ರಂದು ಗವಿಗಂಗಾಧರಸ್ವಾಮಿ ದೇವಾಲಯದ ಬಳಿ ಕಲ್ಯಾಣಿ ಉದ್ಘಾಟನೆ ವೇಳೆ ತಾವು ತಂದ ಅನುದಾನದಿಂದ ಕಾಮಗಾರಿ ನಡೆದಿದೆ ಎಂದಿದ್ದರು. ಅದಕ್ಕೆ ಸಹಮತ ವ್ಯಕ್ತಪಡಿಸಿ ಕಾಂಗ್ರೆಸ್ ಸರಕಾರದಿಂದ ಅವರ ಅವಧಿಯ ೩೭ ಕೋಟಿ ರೂ.ಗಳ ಅನುದಾನ ಹಿಂಪಡೆಯಲಾಗಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದ್ದೆ. ಹಿಂದಿನ ಶಾಸಕರು ತಂದ ಅನುದಾನದ ಕಾಮಗಾರಿಗಳಿಗೆ ಹಾಲಿ ಶಾಸಕರು ಚಾಲನೆ ನೀಡುವುದು ವಾಡಿಕೆ ಅದನ್ನು ತಪ್ಪೆಂಬದಂತೆ ಬಿಂಬಿಸಬಾರದೆಂದು ಹೇಳಿದರು.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಮನು ಅವರೊಂದಿಗೆ ೧೫ರಿಂದ ೩೦ ಮಂದಿ ಜೆಡಿಎಸ್ ಸೇರ್ಪಡೆಗೊಂಡರು. ಬಿಜೆಪಿ ಪಕ್ಷದ ಮುಖಂಡರು ನನ್ನ ಮನೆಗೆ ಆಗಮಿಸಿದಾಗ ಸಾಧಾರಣ ಶಾಲು ಹಾಕಿ ಸ್ವಾಗತಿಸಿದೆ. ಇದನ್ನು ಮನೆಗೆ ಬಂದವರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂಬ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಎನ್‌ಡಿಎ ಮೈತ್ರಿಕೂಟದ ಸದಸ್ಯರಾಗಿ ಕೆಲಸ ಮಾಡಬೇಕು. ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕು. ಆದರೆ ಕೆ.ಸಿ.ನಾರಾಯಣಗೌಡ ಅವರು ಸಣ್ಣಪುಟ್ಟ ವಿಷಯವನ್ನು ದೊಡ್ಡದು ಮಾಡುತ್ತಿರುವುದು ಸರಿಯಲ್ಲ ಎಂದು ಕಾರವಾಗಿ ನುಡಿದರು.
2028ರ ಚುನಾವಣೆಯ ಸಂಬಂಧ ಅಭ್ಯರ್ಥಿಗಳನ್ನು ಎರಡೂ ಪಕ್ಷಗಳ ವರಿಷ್ಟರು ನಿರ್ಧಾರ ಮಾಡುತ್ತಾರೆ. ಇದನ್ನು ನಾವು ನಿರ್ಧರಿಸುವುದಕ್ಕೆ ಸಾಧ್ಯವಿಲ್ಲ. ಈ ಸಂಬಂಧ ನಿಖಿಲ್ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಅವರ್‍ಯಾರು ಮಾತನಾಡಲು ಎಂದು ಪ್ರಶ್ನಿಸಿರುವುದು ಸರಿಯಲ್ಲ ಎಂದು ತಾಕೀತು ಮಾಡಿದರು.
ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಅವರು ನಿಮ್ಮನ್ನು ಒಮ್ಮೆ ಶಾಸಕ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿದ್ದನ್ನು ಮರೆಯಬಾರದು. ನಿಮಗೆ ಅವರು ಯಾರು ಅಲ್ಲದಿದ್ದರೂ ಜೆಡಿಎಸ್ ಪಕ್ಷಕ್ಕೆ ಅವರು ನಾಯಕರು. ಇದೇ ರೀತಿ ಉದ್ದಟತನ ಮುಂದುವರೆದರೆ ಜೆಡಿಎಸ್ ಪಕ್ಷದಿಂದ ನಿರ್ಧಾರ ಕೈಗೊಂಡು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ಜಿ.ಪಂ ಮಾಜಿ ಸದಸ್ಯ ಮೋಹನ್, ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷ ರವಿ, ಮಾದೇವು ಇದ್ದರು.
Mandya
ವಿಜ್ಞಾನ – ತಂತ್ರಜ್ಞಾನದಲ್ಲಿ ಭಾರತ ವಿಶ್ವದ ಗಮನ ಸೆಳೆದಿರುವುದು ಪ್ರಶಂಸನೀಯ: ಶ್ರೀ ಡಾ.ನಿಶ್ಚಲಾನಂದನಾಥಸ್ವಾಮಿ
ಮದ್ದೂರು: ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ವಿಶ್ವದ ಗಮನ ಸೆಳೆದಿರುವುದು ಪ್ರಶಂಸನೀಯ ಸಂಗತಿ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿಶ್ಚಲಾನಂದನಾಥಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಶಿವಪುರದ ಪೂರ್ಣಪ್ರಜ್ಞಾ ಕಾನ್ವೆಂಟ್ನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ, 2024-25 ನೇ ಸಾಲಿನ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಹಾಗೂ ವೈದ್ಯಕಿಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಒಂದು ಕಾಲದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ತುಂಬಾ ಹಿಂದೇ ಉಳಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು ಆದರೆ ಇಂದು ಬಹತೇಕ ದೇಶಗಳಲ್ಲಿ ನಮ್ಮ ದೇಶದ ವಿಜ್ಞಾನಿಗಳೇ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ, ಅಮೇರಿಕಾದಲ್ಲಿ ಶೇ.50 ರಷ್ಟು ವಿಜ್ಞಾನಿಗಳು ನಮ್ಮ ದೇಶದವರೇ ಹಾಗೂ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಪ್ ಅವರಿಗೆ ವಿಶೇಷ ವೈದ್ಯಕೀಯ ಸಲಹೆಗಾರರಾಗಿರುವುದು ಮಂಡ್ಯದ ಜಿಲ್ಲೆಯ ಹಲ್ಲೆಗೆರೆ ಗ್ರಾಮದ ಡಾ.ವಿವೇಕ್ ಎಂಬುವುದು ಹೆಮ್ಮೆಯ ಸಂಗತಿ ಎಂದರು.
ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಅವರ ನಿರಂತರ ಶ್ರಮದಿಂದ ಸಂಸ್ಥೆಯು ಅತ್ಯುತ್ತಮವಾಗಿ ನಡೆಯುತ್ತಿದ್ದು, ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಲ್ಲಿಯಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ರಾಜ್ಯದ ಗಮನ ಸೆಳೆಯುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು.

ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದ ಬೆಂಗಳೂರು ಇಸ್ರೋ ಡೆಪ್ಯೂಟಿ ಡೆರಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮ ಮಾತನಾಡಿ, ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ದೇಶದ ಋಷಿಮುನಿಗಳೇ ಭಾರತದ ವಿಜ್ಞಾನಿಗಳಾಗಿದ್ದರು. ಮಹಾಭಾರತದ ಕಾಲದಲ್ಲಿಯೇ ಗ್ರಹಗತಿಗಳು ಹೇಗೆ ಸಂಭವಿಸುತ್ತವೆ. ಪಂಚಾಂಗದಿಂದ ಯಾವಾಗ ಒಳ್ಳೆಯ ದಿನಗಳು ಬರುತ್ತವೆ ಎಂಬುದನ್ನು ತಪಸ್ಸು, ಜ್ಞಾನವೇ ಇಂದು ವಿಜ್ಞಾನ ಮತ್ತು ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು.
1972 ರಲ್ಲಿ ದೇಶದಲ್ಲಿ ಇಸ್ರೋ ಸಂಸ್ಥೆ ಸ್ಥಾಪನೆಯಾಯಿತು. ಕೇವಲ 3 ವರ್ಷಗಳಲ್ಲೆ ಆರ್ಯಭಟ ಎಂಬ ಸ್ಯಾಟಲೈಟ್ ಅನ್ನು ಪ್ರಪಥಮ ಭಾರಿಗೆ ಅತ್ಯಂತ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು ಎಂದರು.
30 ವರ್ಷಗಳ ಮುಂಚೆಯೇ ಅಮೇರಿಕಾ ದೇಶ ಚಂದ್ರಯಾನಕ್ಕೆ ಹೋಗಿತ್ತು. ಆದರೆ, ಚಂದ್ರಯಾನದಲ್ಲಿ ನೀರಿದೆ ಅಂತ ಪತ್ತೆ ಹಚ್ಚಿದ್ದು, ನಮ್ಮ ದೇಶ ಎಂದರು. ಮಂಗಳಯಾನಕ್ಕೆ ಹೋಗಲು ಅಮೇರಿಕಾ ದೇಶ 4 ಬಾರಿ ಪ್ರಯತ್ನ ಮಾಡಿ 5 ನೇ ಬಾರಿಗೆ ಯಶಸ್ವಿಯಾಗಿದ್ದಾರೆ. ರಷ್ಯಾ 3 ಬಾರಿ ಪ್ರಯತ್ನ ಮಾಡಿ 4 ನೇ ಬಾರಿಗೆ ಯಶಸ್ವಿಯಾಗಿದ್ದಾರೆ. ಆದರೆ ನಮ್ಮ ದೇಶ ಪ್ರಪಥಮ ಬಾರಿಗೆ ಮಂಗಳಯಾನವನ್ನು ಅತ್ಯಂತ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಚಂದ್ರಯಾನ – 3 ರಲ್ಲೂ ಸಹ ಯಶಸ್ವಿಯಾಗಿದ್ದು, ಈ ದೇಶದ ಘನತೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ – ವಿಚಾರಗಳನ್ನು ಶ್ರದ್ದೆಯಿಂದ ಕಲಿಸಬೇಕು. ತಂತ್ರಜ್ಞಾನ, ವಿಜ್ಞಾನದ ಆವಿಷ್ಕಾರಗಳು, ಪ್ರಾಕೃತಿಕ ಸಂಪತ್ತು ರಕ್ಷಣೆ, ಐತಿಹಾಸಿಕ ಸ್ಥಳಗಳು, ಗಾಳಿ, ನೀರಿನ ಮಿತ ಬಳಕೆ, ಪ್ರಾಣಿ ಪಕ್ಷಿ ಸಂರಕ್ಷಣೆ, ಆಹಾರ ಪದ್ದತಿ, ಮನುಷ್ಯರ ಜೀವನ ಶೈಲಿಯನ್ನು ಶಿಕ್ಷಣದ ಜತೆಗೆ ಕಲಿಸಬೇಕು ಎಂದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವಿದ್ಯಾಥರ್ಿಗಳಿಗೆ ನುರಿತ ಶಿಕ್ಷಕರಿಂದ ಗುಣಾತ್ಮಕ ಶಿಕ್ಷಕ ಕೊಡುವ ಜತೆಗೆ ಶಿಸ್ತು, ಸಂಸ್ಕಾರ, ಗುರು, ಹಿರಿಯರಿಗೆ ಗೌರವ ಕೊಡುವ ಸಂಸ್ಕೃತಿ ಕಲಿಸುತ್ತಿರುವುದು ಮೆಚ್ಚುಗೆಯ ವಿಷಯ ಎಂದರು.
ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳ ಜ್ಞಾನಾರ್ಜನೆ, ಸೃಜನಶೀಲತೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಪ್ರಮುಖ ವೇದಿಕೆಯಾಗಿದೆ. ಸಂಸ್ಕೃತಿ, ಕಲೆ, ವಿಜ್ಞಾನ ಹಾಗೂ ಇತಿಹಾಸವನ್ನು ಪರಿಣಾಮಕಾರಿ ತಿಳಿಸುತ್ತದೆ. ಆದ್ದರಿಂದ ವಿಜ್ಞಾನ ವಸ್ತು ಪ್ರದರ್ಶನಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು ಎಂದು ತಿಳಿಸಿದರು.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ 750 ಕ್ಕೂ ಹೆಚ್ಚು ವಿವಿಧ ಮಾದರಿ ತಯಾರಿಸಿಕೊಡು ಬಂದು ಅದರ ಬಗ್ಗೆ ಸಂಪೂರ್ಣವಾಗಿ ವಿವರ ನೀಡಿದ್ದು, ಗಣ್ಯರ ಹಾಗೂ ಪಾಲಕರ ಗಮನ ಸೆಳೆಯಿತು.
ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ, ಬಿಇಒ ಎಸ್.ಬಿ.ಧನಂಜಯ, ನಿವೃತ್ತ ಬಿಇಒ ಮರಿಗೌಡ, ನಿವೃತ್ತ ಮುಖ್ಯ ಅಭಿಯಂತರ ಎಸ್.ವಿ.ರಮೇಶ್, ನಿವೃತ್ತ ಪ್ರಾಂಶುಪಾಲ ಡಾ.ಕೃಷ್ಣ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಪಿ.ನಾಗೇಶ್, ಉಪನ್ಯಾಸಕರಾದ ಎಂ.ರಾಜೇಂದ್ರ, ಜಿ.ಎನ್.ಪುಟ್ಟರಾಜು ಇತರರಿದ್ದರು.
-
Chamarajanagar24 hours agoಬಿಳಿಗಿರಿ ರಂಗನಬೆಟ್ಟದ ದೇವಾಲಯ ಸುತ್ತಮುತ್ತ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಶ್ರಮದಾನ
-
National - International17 hours agoನಾಳೆಯಿಂದ T-20 World Cup| 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ: ವೇಳಾಪಟ್ಟಿ ಏನು?
-
National16 hours agoU-19 World Cup| ವೈಭವ್ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
-
State18 hours agoಬಿಗ್ ಬಾಸ್-12 ವಿನ್ನರ್ ಗಿಲ್ಲಿನಟ ವಿರುದ್ದ ಫಿಲ್ಮ್ ಚೇಂಬರ್ಗೆ ದೂರು
-
Mysore19 hours agoವಿಶ್ವಕರ್ಮ ಯೋಜನೆಯಡಿ ವಸ್ತು ಪ್ರದರ್ಶನ
-
State20 hours agoನಮ್ಮ ಪಕ್ಷದ ಹೈಕಮಾಂಡ್ ಡಾ.ಯತೀಂದ್ರ ಅವರೇ: ಡಿಸಿಎಂ ಡಿಕೆಶಿ ಟಾಂಗ್
-
National21 hours agoಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್
-
Mysore21 hours agoವಕೀಲರ ಸಂಘದ ಅಧ್ಯಕ್ಷರ ಮೇಲೆ ಪ್ರಕರಣ: ವಕೀಲ ಸಂಘದಿಂದ ಪ್ರತಿಭಟನೆ
