Connect with us

State

ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು

Published

on

ಬೆಂಗಳೂರು: ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನಕರ್ ಅವರು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಶನಿವಾರ ಬೆಳಗ್ಗೆ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೆಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು.

ಬೆಳಗ್ಗೆ 9 ಗಂಟೆಗೆ ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಗಳು, ಒಂದು ಗಂಟೆಗೂ ಹೆಚ್ಚು ಕಾಲ ಇದ್ದು, ಶ್ರೀಮತಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ದೇವೇಗೌಡರಲ್ಲಿ ವಿಚಾರಿಸಿದರು.

ಚನ್ನಮ್ಮ ಅವರು ಆದಷ್ಟು ಬೇಗ ಗುಣಮಖರಾಗಲಿ, ಆ ನಂತರ ಅವರನ್ನು ತಾವು ದೆಹಲಿಗೆ ಕರೆದುಕೊಂಡು ಬನ್ನಿ ಎಂದು ಉಪ ರಾಷ್ಟ್ರಪತಿಗಳು, ಮಾಜಿ ಪ್ರಧಾನಿಗಳಿಗೆ ತಿಳಿಸಿದರು. ಇದಕ್ಕೆ ಮಾಜಿ ಪ್ರಧಾನಿಗಳು ಸಮ್ಮತಿಸಿ, ತಮ್ಮ ಮೇಲೆ ತಾವು ಇರಿಸಿರುವ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನನ್ನ ಹೃದಯ ತುಂಬಿ ಬಂದಿದೆ. ತಮ್ಮ ಆಗಮನ ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಉಪ ರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಉಪ ರಾಷ್ಟ್ರಪತಿಗಳು, ಶ್ರೀಮತಿ ಸುದೇಶ್ ಧನಕರ್ ಅವರುಗಳು ಮಾಜಿ ಪ್ರಧಾನಿಗಳು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆಯಲ್ಲಿಯೇ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಅವರೆಲ್ಲರೂ ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಕುಟುಂಬದ ಎಲ್ಲಾ ಸದಸ್ಯರ ಕುಶಲೋಪರಿ ವಿಚಾರಿಸಿದರು. ವಿಶೇಷವಾಗಿ ಪುಟ್ಟ ಮಕ್ಕಳ ಜತೆ ಉಪ ರಾಷ್ಟ್ರಪತಿಗಳು ಕೆಲ ಕಾಲ ಕಳೆದರು.

ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಗಳನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬರಮಾಡಿಕೊಂಡರು.

ಉಪ ರಾಷ್ಟ್ರಪತಿಗಳನ್ನು ಬೀಳ್ಕೊಟ್ಟ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಉಪ ರಾಷ್ಟ್ರಪತಿಗಳು ಹಾಗೂ ಮಾಜಿ ಪ್ರಧಾನಿಗಳ ನಡುವೆ ಸ್ನೇಹಪೂರ್ವಕ ಬಾಂಧವ್ಯ ಇದೆ. ಇಬ್ಬರೂ ಪರಸ್ಪರ ಗೌರವಭಾವ ಇರಿಸಿಕೊಂಡಿದ್ದು, ಅದರಲ್ಲಿಯೂ ಉಪ ರಾಷ್ಟ್ರಪತಿಗಳು ಮಾಜಿ ಅತ್ಯಂತ ಗೌರವ ಇರಿಸಿಕೊಂಡಿದ್ದೇನೆ. ಇದನ್ನು ಆನೇಕ ಸಲ ಕಣ್ಣಾರೆ ಕಂಡಿದ್ದೇನೆ ಎಂದರು.

ಇಬ್ಬರೂ ನಾಯಕರು ರೈತ ಕುಟುಂಬದ ಹಿನ್ನೆಲೆಯಿಂದ ಬಂದವರು. ಹೀಗಾಗಿ ಅವರಿಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು. ರೈತರ ಅಭಿವೃದ್ಧಿಯ ಬಗ್ಗೆ ಅವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಕೇಂದ್ರ ಸಚಿವರು ಮಾಹಿತಿ ಹಂಚಿಕೊಂಡರು.

ಅಲ್ಲದೆ, ಉಪ ರಾಷ್ಟ್ರಪತಿಗಳು ಅನೇಕ ಸಲ ಬೆಂಗಳೂರಿಗೆ ಬಂದಾಗ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಇವತ್ತು ಭೇಟಿ ನೀಡಿದ್ದಾರೆ. ಇನ್ನೂ ನಮ್ಮ ತಾಯಿ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ವಿಶೇಷವಾಗಿ ಉಪ ರಾಷ್ಟ್ರಪತಿಗಳು ನಮ್ಮ ತಾಯಿಯವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗಬೇಕು ಎಂದು ಹಾರೈಸಿದರು. ಅವರು ತೋರಿದ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ನಮ್ಮ ಕುಟುಂಬ ಚಿರಋಣಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Continue Reading

Politics

ಮದ್ದೂರು ಕಲ್ಲು ತೂರಾಟ ಪ್ರಕರಣ|ಬಿಜೆಪಿ ಸತ್ಯಶೋಧನಾ ತಂಡ ರಚನೆ: ಬಿ.ವೈ.ವಿಜಯೇಂದ್ರ

Published

on

ಬೆಂಗಳೂರು: ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ರಾವ್‌ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಚನೆ ಮಾಡಿದ್ದು, ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಬಳಿಕ ವರದಿ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮದ್ದೂರಿನಲ್ಲಿ ಪೊಲೀಸ್‌ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ ನಡೆದಿದೆ. ನಿಜಾಮರ ಆಡಳಿತವನ್ನು ನಿನ್ನೆ ಪ್ರಕರಣ ನೆನೆಪು ಮಾಡಿದೆ ಎಂದು ವ್ಯಂಗ್ಯ ಮಾಡಿದರು.

ಸಿಎಂ ಮತ್ತು ಗೃಹ ಸಚಿವರು ತಮ್ಮ ಧೋರಣೆಯನ್ನು ಸರಿಪಡಿಸಿಕೊಳ್ಳದಿದ್ದರೆ ರಾಕ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗುತ್ತದೆ. ಅದಕ್ಕ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಗಣೇಶ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ವರ್ತಿಸಿದ ಪಿಎಸ್‌ಐ ಒಬ್ಬರನ್ನು ಅಮಾನತು ಮಾಡಿರುವ ಮಾಹಿತಿ ಇದೆ. ನಾನೇನು ಪಾಕಿಸ್ತಾನದಲ್ಲಿ ಇದ್ದೇವಾ? ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯದಲ್ಲಿ ಇವತ್ತು ಏನಾಗುತ್ತಿದೆ? ದಿನನಿತ್ಯ ಯಾವ ರೀತಿ ಪರಿಸ್ಥಿತಿ ಹದಗೆಡುತ್ತಿದೆ? ಕಾನೂನು ಸುವ್ಯವಸ್ಥೆ ಮುರಿದುಬಿದ್ದಿದೆ. ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ಇಂಥ ದುರ್ಬುದ್ಧಿ ಬಂದಿದೆ? ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಏನು ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯದ ಅಸಂಖ್ಯಾತ ಹಿಂದೂ ಕಾರ್ಯಕರ್ತರು ಸಿಎಂ ಅವರನ್ನು ಪ್ರಶ್ನಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಸುತ್ತ ಅಯೋಗ್ಯರನ್ನೇ ಇಟ್ಟುಕೊಂಡಂತಿದೆ ಎಂದು ವಾಗ್ದಾಳಿ ನಡೆಸಿದರು.

ಹಿಂದೂಗಳ ಮೇಲೆ ಕಲ್ಲೆಸೆತ, ಹಲ್ಲೆ ನಡೆಯುತ್ತಿದೆ. ಗಣಪತಿ ಮಹೋತ್ಸವವನ್ನೂ ಹಿಂದೂಗಳು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವು ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ ಎಂದು ಟೀಕಿಸಿದರು.

Continue Reading

Special

ನಿಮ್ಮ ವಾಹನದ ಮೇಲೆ ಇರುವ ದಂಡವನ್ನು 50% ರಿಯಾಯಿತಿಯೊಂದಿಗೆ ಪಾವತಿಸಲು ಸರ್ಕಾರದಿಂದ ಅವಕಾಶ

Published

on

50% Discount on Vehicle Penalty : ನಿಮ್ಮ ಎಲ್ಲಾ ವಾಹನಗಳ ಮೇಲೆ ಇರುವ ದಂಡವನ್ನು ರಿಯಾಯಿತಿ ದರದಲ್ಲಿ ಪಾವತಿಸಲು ಕರ್ನಾಟಕ ಸರ್ಕಾರ ಅವಕಾಶ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾರಿಗೆ ಅನ್ವಯವಾಗಲಿದೆ?

ಸಂಚಾರಿ ಇ – ಚಲನ್ ನಲ್ಲಿ ದಾಖಲಾಗಿರುವಂತಹ ಸಂಚಾರಿ ಪ್ರಕರಣಗಳಿಗೆ ಅಥವಾ ಸಂಚಾರಿ ನಿಯಮಗಳನ್ನು ಪಾಲಿಸದೇ ಇರುವವರಿಗೆ ದಾಖಲಾಗಿರುವ ದಂಡವನ್ನು ಪಾವತಿಸಲು ಒಂದು ಬಾರಿ ಅವಕಾಶವಾಗಿ 50% ರಿಯಾಯಿತಿ ದರದಲ್ಲಿ ಪಾವತಿಸಲು ಅನುಮತಿ ನೀಡಿದೆ.

ಪಾವತಿಸಲು ಕೊನೆಯ ದಿನಾಂಕ – ದಂಡವನ್ನು ಪಾವತಿಸಲು ಸೆಪ್ಟೆಂಬರ್ 12ನೇ ತಾರೀಖಿನವರೆಗೆ ಅವಕಾಶ ನೀಡಲಾಗಿದ್ದು, ಆನ್ಲೈನ್ ಮೂಲಕ ಪಾವತಿಸುವ ಮಾಹಿತಿ ಕೆಳಗಿದೆ.

ಆನ್‌ಲೈನ್‌ ಮುಖಾಂತರ ಪಾವತಿಸುವುದು ಹೇಗೆ?

ಇದನ್ನು ಪಾವತಿಸುವುದು ಬಹಳ ಸುಲಭವಾಗಿದ್ದು, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ಮೊಬೈಲ್ ಆಪ್ ಮುಖಾಂತರ ಪಾವತಿಸಬಹುದು.

ಸಹಾಯವಾಣಿ ಸಂಖ್ಯೆ : 080-49203888
ವೆಬ್‌ಸೈಟ್‌ : www.karnatakaone.gov.in

Continue Reading

Special

SSLC ಅರ್ಧ ವಾರ್ಷಿಕ ಪರೀಕ್ಷೆಯು 12ನೇ ತಾರೀಖಿನಿಂದ ಆರಂಭ : ಪರೀಕ್ಷೆ ಬರೆಯುವ ಮುನ್ನ ಈ ಮಾಹಿತಿ ತಿಳಿಯಿರಿ

Published

on

Karnataka SSLC Semester exam 2025 : ಕರ್ನಾಟಕ ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಅರ್ಧ ವಾರ್ಷಿಕ ಪರೀಕ್ಷೆ ಇದೇ ತಿಂಗಳು ಸಪ್ಟೆಂಬರ್ 12ನೇ ತಾರೀಖಿನಿಂದ ಆರಂಭವಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಇಲ್ಲಿದೆ.

ಈ ಪರೀಕ್ಷೆಯು ಸೆಪ್ಟೆಂಬರ್ 12ನೇ ತಾರೀಖಿನಿಂದ 19ನೇ ತಾರೀಖಿನವರೆಗೆ ನಡೆಯಲಿದ್ದು, ವಿಷಯವಾರು ದಿನಾಂಕಗಳ ವೇಳಾಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ ಪರೀಕ್ಷಾ ವೇಳಾಪಟ್ಟಿ :

• ಪ್ರಥಮ ಭಾಷೆ – ಸೆಪ್ಟೆಂಬರ್ 12
• ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ, ಸಂಗೀತ, ಕರ್ನಾಟಕ ಸಂಗೀತ – ಸಪ್ಟೆಂಬರ್ 13
• ದ್ವಿತೀಯ ಭಾಷೆ – ಸಪ್ಟೆಂಬರ್ 15
• ಗಣಿತ ಸಮಾಜಶಾಸ್ತ್ರ – ಸಪ್ಟೆಂಬರ್ 16

• ತೃತೀಯ ಭಾಷೆ, ಎನ್ ಎಸ್ ಕ್ಯೂ ಎಫ್ ವಿಷಯಗಳು – ಸಪ್ಟೆಂಬರ್ 17
• ಸಮಾಜ ವಿಜ್ಞಾನ – ಸಪ್ಟೆಂಬರ್ 18
• ಜಿಟಿಎಸ್ ಪರೀಕ್ಷೆ – ಸಪ್ಟೆಂಬರ್ 19

ಪರೀಕ್ಷೆ ನಡೆಯುವ ಸಮಯ : ಹಿಂದುಸ್ತಾನಿ ಮತ್ತು ಕರ್ನಾಟಕ ಸಂಗೀತ ಪರೀಕ್ಷೆಯು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಉಳಿದ ಎಲ್ಲಾ ವಿಷಯಗಳು ಬೆಳಗ್ಗೆ 10.30 ಕ್ಕೆ ಆರಂಭವಾಗಲಿದೆ.

Continue Reading

Trending

error: Content is protected !!