Hassan
ಹಾಸನದಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು, ಮಂಡ್ಯದಲ್ಲಿ ಸುಮಲತಾ ನಮಗೆ ಸಹಕರಿಸುತ್ತಿಲ್ಲ

ಕಾವೇರಿ ನೀರನ್ನು ಉಳಿಸಲು ಶತಸಿದ್ಧ : ಹೆಚ್.ಡಿ. ದೇವೇಗೌಡ
ಹಾಸನ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಅವರು ನಮಗೆ ಸಹಕರಿಸುತ್ತಿಲ್ಲ ಎಂದು ಬೇಸರವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನಮ್ಮ ಮೂರು ಕ್ಷೇತ್ರದಲ್ಲೂ ಜಯಗಳಿಸುವುದಾಗಿ ವಿಶ್ವಾಸವ್ಯಕ್ತಪಡಿಸಿ, ಕಾವೇರಿ ನೀರನ್ನು ಉಳಿಸಲು ಶತಸಿದ್ಧ ಎಂದು ಶಪತ ಮಾಡಿದರು.
ನಗರದ ಹೊರವಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್‌ನವರು ಜಗಳವಾಡುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿನೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ರಾಹುಲ್ ಗಾಂಧಿ ಹೇಳ್ತಾರೆ. ಕಾವೇರಿ ಬೇಸಿನ್‌ಗೆ ಸಂಬಂಧಪಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನ ಮಂತ್ರಿಗಳ ಜೊತೆ ಎರಡು ಸಭೆ ಮಾಡಿದ್ದೇನೆ. ಎರಡನೇ ಹಂತದ ಚುನಾವಣೆ ಹೈದರಾಬಾದ್, ಕರ್ನಾಟಕ, ಮುಂಬೈ ಕರ್ನಾಟಕ ಮೇ.೭ ರಂದು ನಡೆಯಲಿದೆ. ಶಿವಮೊಗ್ಗ ಸೇರಿ ಎರಡನೇ ಹಂತದ ಚುನಾವಣೆ ನಡೆಯುತ್ತದೆ ಎಂದರು.
ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತಿನಿ! ಇವತ್ತು ಕಾವೇರಿ ಬೇಸಿನ್‌ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ-ಆಪರೇಟ್ ಮಾಡ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿಗೆ ಕೋಆಪರೇಟ್ ಮಾಡ್ತಿಲ್ಲ.
ಅದರಿಂದ ಕುಮಾರಸ್ವಾಮಿ ಏನೋ ಅಪಾಯ ಆಗುತ್ತೆ ಅಂತ, ಏನು ಆಗಲ್ಲ. ಪ್ರಮುಖವಾಗಿ ಕಾವೇರಿ ಸಮಸ್ಯೆ ಇದೆ, ಅದು ಜೀವನ್ಮರಣದ ಪ್ರಶ್ನೆ.
ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು ೧೨೫ ಕೋಟಿ ಎನ್‌ಓಸಿ ರಿಲೀಸ್ ಮಾಡಿದ್ದಾರೆ. ರಾಜ್ಯದಲ್ಲಿ ೨೮ ಕ್ಕೆ ೨೮ ಸ್ಥಾನ ಗೆಲ್ಲುಬೇಕು. ಯಾರೇ ಪ್ರಚಾರ, ಅಪಪ್ರಚಾರ ಏನೇ ಮಾಡಲಿ ಈ ದೇವೇಗೌಡ ೯೧ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದಾನೆ ಅದು ಎಲ್ಲರ ಮನಸ್ಸಿಗೆ ನಾಟಿದೆ. ಮೋದಿಯವರು ಡಿಎಂಕೆಯ ಹಂಗಿನಿಂದ ಈ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ಮೇಕೆದಾಟು ಯೋಜನೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಹಾಕಿದೆ. ಒಬ್ಬ ಪೊಲೀಸ್ ಅಧಿಕಾರಿ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹೋರಾಡುತ್ತಿದ್ದಾರೆ. ಅಣ್ಣಾ ಡಿಎಂಕೆಯಲ್ಲಿ ಪಕ್ಷದಲ್ಲಿ ಕೆಲವರು ಪರಸ್ಪರ ಭಿನ್ನಾಭಿಪ್ರಾಯಗೊಂಡು ಅವರು ಕೂಡ ಬಿಜೆಪಿ ಜೊತೆ ಅಧಿಕಾರ ಹಂಚಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಅಕೌಂಟ್ ಓಪನ್ ಮಾಡುತ್ತೆ ಯಾವುದೇ ಸಂಶಯವಿಲ್ಲ. ಚಿಕ್ಕಬಳ್ಳಾಪುರದಲ್ಲಿ ನೀರಿನ ಸಮಸ್ಯೆ ಅರ್ಥ ಆಗಿದೆ.
ನಾನು ಗಮನ ಹರಿಸುತ್ತೇನೆ ಎಂದು ಪ್ರಧಾನಮಂತ್ರಿಗೂ ಹೇಳಿದ್ದೇನೆ. ಮೇಕೆದಾಟು, ಕಾವೇರಿ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಮಾಡುತ್ತಿದ್ದೇನೆ.
ಅವರು ಏನು ಹೇಳಿದ್ದಾರೆ ಎನ್ನುವುದನ್ನು ಮಾಧ್ಯಮದ ಮುಂದೆ ಹೇಳಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೋದಲೆಲ್ಲ ಜನಕ್ಕೆ ಅವರು ಹಣದ ಹೊಳೆಯನ್ನು ಹರಿಸುತ್ತಿದ್ದಾರೆ. ಮೂವರು ಇದ್ದರೂ ಆದರೇ ಡಾ. ಮಂಜುನಾಥ್ ಅವರನ್ನು ನಿಲ್ಲಿಸಿದ್ದಾರೆ. ಆದರೂ ಡಾ.ಮಂಜುನಾಥ್ ಗೆಲ್ತಾರೆ. ಅವರು ಅಧಿಕಾರ ಎಷ್ಟು ದುರುಪಯೋಗ ಮಾಡಬೇಕು ಮಾಡಿದ್ದಾರೆ.ಏನೇ ಸಮಸ್ಯೆ ಇಲ್ಲ, ಡಾ.ಮಂಜುನಾಥ್ ಗೆಲ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಯಾವ ಕಾವೇರಿ ನೀರನ್ನು ಉಳಿಸುತ್ತೇನೆ ಎಂದು ಹೇಳಿದ್ದೇನೋ ಅದನ್ನು ಮಾಡುತ್ತೇನೆ, ಅದು ಶತಸಿದ್ದ. ಆದರೆ ಭತ್ತದ ಬೆಳೆಯಿರಿ ಎಂದು ಹೇಳಲು ಹೋಗಲ್ಲ ಎಂದು ಹೇಳಿದರು.
ಇದೆ ವೇಳೆ ಹುಡಾ ಮಾಜಿ ಅಧ್ಯಕ್ಷ ಕೆ.ಎಂ. ರಾಜೇಗೌಡ, ಮಾಜಿ ಶಾಸಕ ಬಿ.ವಿ. ಕರೀಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸುಮುಖ ರಘು, ಒಕ್ಕಲಿಗರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಇತರರು ಉಪಸ್ಥಿತರಿದ್ದರು.
Hassan
ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದಂದು ಮುಸ್ಲಿಂ ಕಾಜಿಯವರಿಂದ ಕುರಾನ್ ಪಟಿಸದಂತೆ ಮನವಿ

ಬೇಲೂರು : ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದ ಅಂಗವಾಗಿ ಯಾವುದೇ ರೀತಿಯ ಹಿಂದು ಧರ್ಮಿಯರಿಗೆ ಅವರ ಭಾವನೆಗೆ ದಕ್ಕೆ ಬಾರದಂತೆ ಮುಸ್ಲಿಂ ಕಾಜಿಯವರಿಂದ ಕುರಾನ್ ಪಟ್ಟಣವನ್ನು ನಡೆಸದಂತೆ ಹಿಂದೂ ಸಮಾಜದ ಮುಖಂಡರು ತಾಲೂಕು ದಂಡಾಧಿಕಾರಿಗಳಿಗೆ ಪೊಲೀಸ್ ಇಲಾಖೆಗೆ ಮತ್ತು ದೇಗುಲದ ಕಾರ್ಯನಿರ್ವಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಮುಸ್ಲಿಂ ಕಾಜಿಯವರಿಗೆ ದೇವಾಲಯದ ವತಿಯಿಂದ ಸಂಪ್ರದಾಯದಂತೆ ನೀಡುವ ಕಾಣಿಕೆಯನ್ನು ನೀಡಲಿ ಮತ್ತು ಅವರು ಹಿಂದೆ ನಡೆಯುತ್ತಿದ್ದ ಸಂಪ್ರದಾಯದಂತೆ ದೇವರಿಗೆ ಒಂದನೇ ತಿಳಿಸಿ ಹೋಗಲಿ ಅದನ್ನು ಬಿಟ್ಟು ಕುರಾನ್ ಪಟ್ಟಣವನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಹಿಂದೂ ಮುಖಂಡರಾದ ರಘು ಸಕಲೇಶಪುರ ಒತ್ತಾಯಿಸಿದ್ದಾರೆ ಕುರಾನ್ ಪಟ್ಟಣಕ್ಕೆ ಅವಕಾಶ ನೀಡಿದ್ದಾರೆ ಇದಕ್ಕೆ ಸಂಪೂರ್ಣ ಹೊಣೆಯನ್ನ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
Hassan
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು 12ಜನ ನೂತನ ನಿರ್ದೇಶಕರುಗಳು ಆಯ್ಕೆಯಾದರು.
ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12ಜನ ನಿರ್ದೇಶಕ ಸದಸ್ಯ ಬಲ ಹೊಂದಿದ್ದು ನೂತನ ನಿರ್ದೇಶಕ 23 ಜನ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಚುನಾವಣೆ ಮೂಲಕ ನೂತನ ನಿರ್ದೇಶಕರನ್ನ ಆಯ್ಕೆ ಮಾಡಲಾಯಿತು.
ಸಾಮಾನ್ಯ ಕ್ಷೇತ್ರದಿಂದ ಅವಿನಾಶ್, ವಿ.ಎಸ್ ಆನಂದ್, ಚಂದ್ರು, ಕುಬೇರಪ್ಪ, ಯೋಗೇಶ್, ಮಹಿಳಾ ಕ್ಷೇತ್ರದಿಂದ ಮಂಜುಳಾ, ಗಿರಿಜಾ, ಹಿಂದುಳಿದ ವರ್ಗ ‘ಎ’ ನಿಂದ ರವಿ ಕುಮಾರ್, ಹಿಂದುಳಿದ ವರ್ಗ ‘ಬಿ’ ನಿಂದ ಮೋಹನ್ ಕುಮಾರ್, ಪರಿಶಿಷ್ಟ ಜಾತಿಯಿಂದ ಪುಟ್ಟಸ್ವಾಮಿ ಆಯ್ಕೆಯಾದರೆ ಪರಿಶಿಷ್ಟ ಪಂಗಡದಿಂದ ಶಾಂತಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು, ಇನ್ನೂ ಸಾಲಗಾರರಲ್ಲದ ಕ್ಷೇತ್ರದಿಂದ ಕಿಶೋರ್ ಕುಮಾರ್ ಆಯ್ಕೆಯಾದರು 2030ರವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್ ತಿಳಿಸಿದರು.
ಚುನಾವಣೆ ಮೂಲಕ ನೂತನ ನಿರ್ದೇಶಕರುಗಳ ಆಯ್ಕೆ ಘೋಷಣೆ ಹೊರಬಿದ್ದ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್. ಎಸ್ ನಟರಾಜ್, ಪಾಳ್ಯ ಸೊಸೈಟಿ ನಿರ್ದೇಶಕ ಕಟ್ಟೆಗದ್ದೆ ನಾಗರಾಜ್, ಬಿಜೆಪಿ ಮುಖಂಡ ಕೆ.ಕೆ ಪ್ರಸಾದ್, ರುದ್ರೇಶ್ ಕಾಡ್ಲೂರು, ನಂದನ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿವೇಕ್ ವೈದ್ಯನಾಥ್ ಸೇರಿದಂತೆ ಮುಂತಾದವರು ನೂತನ ನಿರ್ದೇಶಕರುಗಳನ್ನು ಅಭಿನಂದಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪೋಟೋ ಕ್ಯಾಪ್ಶನ್: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚುನಾಯಿತನಾದ ನೂತನ ನಿರ್ದೇಶಕರನ್ನ ಹಾಸನ ಜಿಲ್ಲಾ ಹೆಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಲ್ಲಿ ಜಗದೀಶ್, ಆರ್.ಎಸ್ ನಟರಾಜ್ ಕೆ.ಕೆ ಪ್ರಸಾದ್ ಸೇರಿದಂತೆ ಇತರರು ಅಭಿನಂದಿಸಿದರು.
Hassan
ಅಟಲ್ ವಿರಸತ್ ಕಾರ್ಯಕ್ರಮ: ಒಡನಾಟ ಉಳ್ಳ ಹಿರಿಯರಿಗೆ ಬಿಜೆಪಿಯಿಂದ ಸನ್ಮಾನ

ಹಾಸನ: ನಗರದ ಆರ್.ಸಿ.ರಸ್ತೆ, ಶ್ರೀಗಂಧದ ಕೋಠಿ ಆವರಣದಲ್ಲಿರುವ ಖಾಸಗೀ ಹೋಟೆಲೊಂದರಲ್ಲಿ ಗುರುವಾರ ನಡೆದ ಅಟಲ್ ವಿರಸತ್ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಾಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ವರ್ಷದ ಅಂಗವಾಗಿ ಹಿರಿಯರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.
ಇದೆ ವೇಳೆ ಅಟಾಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್ ಮಾತನಾಡಿ, ಅಟಾಲ್ ಜೀ ಅವರು ಎಲ್ಲೆಲ್ಲಿ ಬಂದಿದ್ದರೂ, ಅವರ ಒಡಾಟ, ಹೋರಾಟಗಳು, ಸಂಘಟನೆಗಳು, ಅವರ ವ್ಯಕ್ತಿತ್ವ, ಒಡನಾಟ, ಅವರ ಸಂಪರ್ಕಕ್ಕೆ ಬಂದಂತಹ ವ್ಯಕ್ತಿಗಳು, ಅವರ ನೆನಪಿನ ಸ್ಪೂರ್ತಿಯನ್ನು ಸಂಗ್ರಹ ಮಾಡುವಂತಹ ಪೋಟೊ ಸಂಗ್ರಹಿಸುವ ಜೊತೆಗೆ ಯಾರು ಅಟಾಲ್ ಬಿಹಾರಿ ಜೊತೆ ಒಡನಾಟವಿತ್ತು ಅವರನ್ನು ಗುರುತಿಸಿ ಗೌರವಿಸುವ ಕೆಲಸ ನಾವು ಕಳೆದ ಒಂದು ತಿಂಗಳಿನಿಂದ ಮಾಡಿಕೊಂಡು ಈ ಹಿಂದೆಯೇ ಬಂದಿದ್ದೇವೆ ಎಂದರು.
ಅಟಲ್ ಜೀ ಪ್ರೇರಣೆಯನ್ನು ಕಾರ್ಯಕರ್ತರು ಪಡೆದಿದ್ದಾರೆ. ನಾವು ಯಾವ ದಿಕ್ಕಿನಲ್ಲಿ ರಾಜಕಾರಣ ಮಾಡಬೇಕು ಎನ್ನುವ ದಿಕ್ಸೂಜಿ ನಮಗೆ ತೊರಿಸುತ್ತದೆ ಎಂದು ಕಿವಿಮಾತು ಹೇಳಿದರು. ರಾಜಕಾರಣದಲ್ಲಿ ಕೆಲಸ ಮಾಡುವ ನಾವು ಯಾವುದು ಆದರ್ಶ ಎಂಬುದನ್ನು ತಿಳಿದಿರಬೇಕು. ಯಾವ ಮಾರ್ಗದರ್ಶನ ತಿಳಿದಿರಬೇಕು ಬಗ್ಗೆ ಜಾಗೃತಿ ಅಗತ್ಯ ಎಂದು ಸಲಹೆ ನೀಡಿದರು.
ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾತನಾಡಿ, ವಾಜಪೇಯಿ ಕಾಲದಿಂದಲೂ ಹೋರಾಟ ಮಾಡಿದವರು ನಮ್ಮ ಸಕಲೇಶಪುರದಲ್ಲಿ ಮತ್ತು ಈ ಜಿಲ್ಲೆಯಲ್ಲಿ ಹಲವಾರು ಜನರು ಇದ್ದಾರೆ. ಬಿಜೆಪಿಯಲ್ಲಿ ಹಾಸನಕ್ಕೆ ಉತ್ತಮವಾದ ಸ್ಥಾನಮಾನವಿದೆ. ಹಿಂದಿನ ದಿನಗಳಲ್ಲಿ ಎಮರ್ಜನ್ಸಿ ಕಾಲದಲ್ಲಿ ಜೈಲಿಗೆ ಹೋಗಿದಾಗಿನಿಂದ ಹಿಡಿದು ವಾಜಪೇಯಿ ಜೊತೆ ಪಾರ್ಟಿ ಕಟ್ಟಿರುವ ಹಲವಾರು ಜನರು ನಮ್ಮ ಜಿಲ್ಲೆಯಲ್ಲಿರುವುದು ನಮ್ಮ ಹೆಮ್ಮೆ ಎಂದರು.
ಇದೆ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಂಚಾಲಕ ರಾಜಕುಮಾರ್ ಇತರರು ಉಪಸ್ಥಿತರಿದ್ದರು.
-
Hassan22 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
State24 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan21 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State17 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?
-
Mysore20 hours ago
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ