Connect with us

Mandya

ವಿದ್ಯಾರ್ಥಿಗಳು ಸೋಲು ಗೆಲುವು ಲೆಕ್ಕಚಾರ ಹಾಕದೆ ಕ್ರೀಡೆಯಲ್ಲಿ ಭಾಗವಹಿಸಬೇಕು: ಧನಂಜಯ

Published

on

ಮದ್ದೂರು: ವಿದ್ಯಾರ್ಥಿಗಳು ಸೋಲು ಗೆಲುವು ಲೆಕ್ಕಚಾರ ಹಾಕದೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಸ್ಫೂರ್ತಿ ಮೆರೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ತಿಳಿಸಿದರು.

ತಾಲೂಕಿನ ಆತಗೂರು ಹೋಬಳಿಯ ಮಲ್ಲನಕುಪ್ಪೆ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ ವಿಭಾಗ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪನಕುಪ್ಪೆ ವತಿಯಿಂದ ಬುಧವಾರ ಆಯೋಜಿಸಿದ್ದ 2025-26 ನೇ ಸಾಲಿನ ಆತಗೂರು ವೃತ್ತ ಹಾಗೂ ಹೋಬಳಿ ಮಟ್ಟದ 14 ವರ್ಷ ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಬೇಕು. ಗ್ರಾಮಾಂತರ ಪ್ರದೇಶದ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕೆಂದು ಕಿವಿ ಮಾತು ಹೇಳಿದರು.

ಕ್ರೀಡಾಕೂಟದಲ್ಲಿ 1 ಸಾವಿರಕ್ಕೂ ಹೆಚ್ಚು ವಿದ್ಯಾಥರ್ಿಗಳು ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ಭಾಗವಹಿಸಿದರು ಗೆದ್ದವರು ಬಹುಮಾನ ಪಡೆದರೆ, ಸೋತವರು ಕ್ರೀಡಾ ಸ್ಪೂರ್ತಿ ಮೆರೆದರು.

ಗ್ರಾ.ಪಂ. ಅಧ್ಯಕ್ಷ ಗಿರಿಯಯ್ಯ, ಉಪಾಧ್ಯಕ್ಷ ವಾಸುದೇವ್, ಮಾಜಿ ಅಧ್ಯಕ್ಷರಾದ ಇಂದ್ರಮ್ಮ, ಡಿ.ರವಿಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಎಂ.ಡಿ.ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಮಹದೇವಪ್ರಸಾದ್, ಅಕ್ಷರ ದಾಸೋಹ ಸಹಾಯಕ ನಿದರ್ೇಶಕಿ ರಾಜೇಶ್ವರಿ, ಮುಖ್ಯ ಶಿಕ್ಷಕ ನಾಗರಾಜು ಇದ್ದರು.

Continue Reading

Mandya

ಕಬ್ಬು ಬೆಳೆಗಾರರ ಪ್ರೋತ್ಸಾಹಧನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

Published

on

ಮದ್ದೂರು: ರಾಜ್ಯ ಸರ್ಕಾರ 2025-26ನೇ ಸಾಲಿನಲ್ಲಿ ಕಬ್ಬು ಬೆಳೆಗಾರರಿಗೆ ನೀಡುವುದಾಗಿ ಘೋಷಿಸಿದ್ದ ಪ್ರೋತ್ಸಾಹಧನ ಇನ್ನೂ ಪಾವತಿಯಾಗಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ತಾಲೂಕಿನ ಕೊಪ್ಪದ NSL Sugars ಸಕ್ಕರೆ ಕಾರ್ಖಾನೆ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಸರ್ಕಾರದಿಂದ ₹50 ಹಾಗೂ ಕಾರ್ಖಾನೆ ಮಾಲೀಕರಿಂದ ₹50 ಸೇರಿ ಒಟ್ಟು ₹100 ಪ್ರೋತ್ಸಾಹಧನವನ್ನು ರೈತರಿಗೆ ತಕ್ಷಣ ಪಾವತಿಸಬೇಕು. ಬಾಕಿ ಹಣ ನೀಡದೇ ಕಾರ್ಖಾನೆ ಪ್ರಾರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

2018ರಲ್ಲಿ ಕಾರ್ಖಾನೆಯ ರಿಕವರಿ ಪ್ರಮಾಣ 10.25 ಇದ್ದ ಹಿನ್ನೆಲೆಯಲ್ಲಿ ಸಾಗಾಣಿಕೆ ವೆಚ್ಚ, ಕಡುಗೂಲಿ ಮತ್ತು ಒಡಗೂಲಿ ವೆಚ್ಚವನ್ನು ಕಾರ್ಖಾನೆ ಆಡಳಿತ ಮಂಡಳಿಯೇ ಭರಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ 2026-27ನೇ ಸಾಲಿನ ಕಬ್ಬಿನ ದರವನ್ನು ಶೀಘ್ರ ನಿಗದಿಪಡಿಸಬೇಕೆಂದು ಒತ್ತಾಯಿಸಿದರು.

ರೈತರಿಗೆ ನೀಡಬೇಕಾದ ₹100 ಬಾಕಿ ಹಣವನ್ನು ಪಾವತಿಸದೇ ಕಾರ್ಖಾನೆ ಆಡಳಿತ ನ್ಯಾಯಾಲಯದ ಮೊರೆ ಹೋಗಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಖಂಡಿಸಿದೆ. ನ್ಯಾಯಾಲಯ ತೀರ್ಪು ಬರುವವರೆಗೆ ಕಾರ್ಖಾನೆ ಪ್ರಾರಂಭಿಸಬಾರದು ಎಂದು ಸಂಘದ ಮುಖಂಡರು ಒತ್ತಾಯಿಸಿದರು.

ನಂತರ ಕಾರ್ಖಾನೆಯ ಉಪಾಧ್ಯಕ್ಷ ರಾಮಚಂದ್ರರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಸೊ.ಶಿ. ಪ್ರಕಾಶ್, ಪ್ರಭುಲಿಂಗು, ಜಗದೀಶ, ಲಿಂಗರಾಜು, ಚನ್ನೇಗೌಡ, ಉಮೇಶ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

Mandya

ಮದ್ದೂರಿನಲ್ಲಿ ಎಸ್.ಎಂ. ಕೃಷ್ಣ ಜನ್ಮ ದಿನೋತ್ಸವ ಸಂಸ್ಮರಣೆ

Published

on

ಶಾಸಕ ಕೆ.ಎಂ. ಉದಯ್‌ಗೆ ಆಡಳಿತ ಸೇವಾರತ್ನ ಪ್ರಶಸ್ತಿ ಪ್ರದಾನ

ಮದ್ದೂರು: ಎಸ್. ಎಂ. ಕೃಷ್ಣ ಅವರ 94ನೇ ಜನ್ಮ ದಿನೋತ್ಸವ ಮತ್ತು ಸಂಸ್ಮರಣೆ ಅಂಗವಾಗಿ ನಗರದ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಬುಧವಾರ ವಿಶೇಷ ಕಾರ್ಯಕ್ರಮ ನಡೆಯಿತು.

ಚುಂಚಶ್ರೀ ಗೆಳೆಯರ ಬಳಗ ಹಾಗೂ ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ “ಎಸ್.ಎಂ. ಕೃಷ್ಣ ಆಡಳಿತ ಸೇವಾರತ್ನ ಪ್ರಶಸ್ತಿ”ಯನ್ನು ಕೆ. ಎಂ. ಉದಯ್ ಅವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ನಿರ್ಮಲಾನಂದನಾಥ ಸ್ವಾಮೀಜಿ, ಎಸ್.ಎಂ. ಕೃಷ್ಣ ಅವರು ಬೆಂಗಳೂರು ಹಾಗೂ ರಾಜ್ಯವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಂತೆ ಮಾಡಿದ ಅದ್ವಿತೀಯ ನಾಯಕರು ಎಂದು ಬಣ್ಣಿಸಿದರು. ಪ್ರಧಾನಮಂತ್ರಿ ಸ್ಥಾನ ಅವರಿಗೆ ಸಿಗದಿರುವುದು ನೋವಿನ ಸಂಗತಿ ಎಂದ ಅವರು, ಕೃಷ್ಣ ಅವರಿಗೆ ಮರಣೋತ್ತರ “ಕರ್ನಾಟಕ ರತ್ನ” ಪ್ರಶಸ್ತಿ ನೀಡಬೇಕು ಹಾಗೂ ವಿಧಾನಸೌಧದ ಎದುರು ಪ್ರತಿಮೆ ಸ್ಥಾಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ದಿನೇಶ್ ಗೂಳಿಗೌಡ ಮಾತನಾಡಿ, ಕೃಷ್ಣ ಅವರ ಆಡಳಿತದಲ್ಲಿ ಐಟಿ-ಬಿಟಿ ಕ್ಷೇತ್ರ, ಯಶಸ್ವಿನಿ ಯೋಜನೆ, ಪಹಣಿ ವ್ಯವಸ್ಥೆ, ನೀರಾವರಿ ಹಾಗೂ ಮೈಸೂರು-ಬೆಂಗಳೂರು ಹೆದ್ದಾರಿ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಾಗಿದೆ ಎಂದು ಹೇಳಿದರು. ಮದ್ದೂರಿನ ಅಭಿವೃದ್ಧಿಗೂ ಅವರು ವಿಶೇಷ ಅನುದಾನ ಒದಗಿಸಿದ್ದರು ಎಂದು ಸ್ಮರಿಸಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶಾಸಕ ಕೆ. ಎಂ. ಉದಯ್, ಎಸ್.ಎಂ. ಕೃಷ್ಣ ಅವರು ಪ್ರಧಾನಿಯಾಗಿದ್ದರೆ ದೇಶದ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಸಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು. ಅವರ ಶಿಸ್ತು, ಸಮಯಪ್ರಜ್ಞೆ ಮತ್ತು ಆಡಳಿತ ವೈಖರಿ ಎಲ್ಲರಿಗೂ ಮಾದರಿ ಎಂದರು.

ಇದೇ ಸಂದರ್ಭದಲ್ಲಿ “ಮದ್ದೂರು ತಾಲ್ಲೂಕಿನ ಚುನಾಯಿತ ಜನಪ್ರತಿನಿಧಿಗಳು ಹಾಗೂ ಶಿಕ್ಷಣದ ಮುನ್ನೋಟ” ಗ್ರಂಥವನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರೊ. ಕೃಷ್ಣ, ಜಯಪ್ರಕಾಶ್ ಗೌಡ, ತೈಲೂರು ವೆಂಕಟಕೃಷ್ಣ, ಶಂಕರಗೌಡ, ಸುರೇಶ್ ಕಂಠಿ, ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

Mandya

ದಲಿತ ಮುಖ್ಯಮಂತ್ರಿಗೆ ಆಗ್ರಹಿಸಿ ಪಂಜಿನ ಮೆರವಣಿಗೆ

Published

on

ಮಂಡ್ಯ : ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ ಪಂಜಿನ ಮೆರವಣಿಗೆ ನಡೆಯಿತು.

ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು, ಪಂಜಿನ ಮೆರವಣಿಗೆ ಮೂಲಕ ದಲಿತರಿಗೆ ಸಿಎಂ ಪಟ್ಟ ನೀಡಬೇಕೆಂದು ಆಗ್ರಹಿಸಿದರು. ಕೆಲಕಾಲ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿ ದಲಿತ ಸಿಎಂ ಗಾಗಿ ಪಟ್ಟುಹಿಡಿದರು.

ದಲಿತ ಸಿಎಂ ಮಾಡದಿದ್ದರೆ ಕಾಂಗ್ರೆಸ್‌ ಪಕ್ಷವನ್ನ ಬಿಡುವುದಿಲ್ಲ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಕಾಂಗ್ರೆಸ್‌ ಈ ಹಿಂದಿನಿಂದಲೂ ದಲಿತರನ್ನ ಓಟ್ ಬ್ಯಾಂಕ್ ಮಾಡಿಕೊಂಡಿದೆ. ದಲಿತರ ಮತದಿಂದ ಕಾಂಗ್ರೆಸ್‌ ಸರ್ಕಾರ ರಚಿಸಿದೆ. ಕಾಂಗ್ರೆಸ್ ಸರ್ಕಾರ ಬಂದರೂ ದಲಿತರಿಗೆ ಸಿಎಂ ಸ್ಥಾನ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಆ ಸ್ಥಾನಕ್ಕೆ ದಲಿತರನ್ನೇ ಆಯ್ಕೆ ಮಾಡಬೇಕು. ಇಲ್ಲವಾದರೆ ದಲಿತರು ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಎಂ.ವಿ.ಕೃಷ್ಣ, ನರಸಿಂಹ ಮೂರ್ತಿ, ಚನ್ನಕೇಶವ‌, ಟಿ.ಡಿ.ನಾಗರಾಜು, ಹೆಚ್.ಪಿ. ರವಿಶಂಕರ್, ಅಜಯ್,ಜಿ.ವಿ..ಅಭಿಜೀತ್, ಮುಖುಂದ್, ಪ್ರದೀಪ್, ಟಿ.ಡಿ.ಬಸವರಾಜು, ನಿರಂಜನ್, ಪ್ರಮೋದ್ ಸೇರಿದಂತೆ ಇತರರು ಭಾಗವಹಿಸಿದ್ದರು.

Continue Reading

Trending

error: Content is protected !!