Connect with us

Chamarajanagar

ಜಿಲ್ಲೆಗೆ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಸದಸ್ಯರ ಭೇಟಿ: ಸಭೆ

Published

on

ಚಾಮರಾಜನಗರ: ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಹಾಗೂ ಆಯೋಗದ ಸದಸ್ಯರು ಜಿಲ್ಲೆಗೆ ಇಂದು ಭೇಟಿ ನೀಡಿ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ, ಸದಸ್ಯ ಮೊಹಮದ್ ಸನಾವುಲ್ಲಾ, ಆರ್.ಎಸ್. ಪೋಂಡೆ, ಸಮಾಲೋಚಕ ಎಂ.ಕೆ. ಕೆಂಪೇಗೌಡ, ಸಿ.ಜಿ. ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಕೆ. ಯಾಲಕ್ಕಿಗೌಡ, ವಿಶೇಷ ಕರ್ತವ್ಯ ಅಧಿಕಾರಿ ವಹಬ್ ಖಾನ್ ಅವರು ಸಭೆ ನಡೆಸಿದರು.

ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಣಕಾಸು ಆಯೋಗ ಕಳುಹಿಸಿರುವ ಪ್ರಶ್ನಾವಳಿ ಕುರಿತ ಮಾಹಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಪಂಚಾಯಿತಿ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಾಚರಣೆ, ಹುದ್ದೆಗಳು, ಆಯವ್ಯಯ, ವೆಚ್ಚಗಳ ವಿವರ ರಾಜ್ಯ ಮತ್ತು ಕೇಂದ್ರ ಹಣಕಾಸು ಆಯೋಗದ ಅನುದಾನ, ಹಂಚಿಕೆ, ಬಿಡುಗಡೆ, ಮಾಡಲಾದ ವೆಚ್ಚ ಕುರಿತ ವಿವರವನ್ನು ಪಡೆಯಲಾಯಿತು.

ಆಡಳಿತ ಸುಧಾರಣೆ, ಮಾಹಿತಿ ತಂತ್ರಜ್ಞಾನ, ರಾಜ್ಯ ಹಣಕಾಸು ಆಯೋಗದ ಪರಿಶೀಲನಾ ಅಂಶಗಳಿಗೆ ಪೂರಕವಾದ ಸಲಹೆಗಳನ್ನು ಪಡೆಯಲಾಯಿತು.

ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಮಾಹಿತಿ ಮತ್ತು ಅಭಿಪ್ರಾಯಗಳನ್ನು ಪಡೆಯಲಾಯಿತು.

ಸಭೆಯಲ್ಲಿ ಮಾತನಾಡಿದ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ ಹಾಗೂ ಇತರೆ ಸದಸ್ಯರು ಆಸ್ತಿತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಸ್ವಂತ ಸಂಪನ್ಮೂಲ ಕ್ರೊಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ ನೀಡುವುದು ಸೇರಿದಂತೆ ಇತರೆ ಅಭಿಪ್ರಾಯಗಳನ್ನು ಆಯೋಗದ ಮುಂದೆ ಮಂಡಿಸಿದರು. ಅಧಿಕಾರಿಗಳೂ ಸಹ ಸಂಸ್ಥೆಗಳಿಗೆ ಅಗತ್ಯವಿರುವ ಹೆಚ್ಚಿನ ಅನುದಾನ ಹಾಗೂ ನೆರವಿನ ಬಗ್ಗೆ ಪ್ರಸ್ತಾಪಿಸಿ ಆಯೋಗದ ಮುಂದೆ ಅಭಿಪ್ರಾಯಗಳನ್ನು ಮಂಡಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಮುಖ್ಯ ಯೋಜನಾಧಿಕಾರಿ ದೀಪ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಉಪಾಧ್ಯಕ್ಷೆ ಮಮತ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ಸಿ.ಎನ್.ರೇಖಾ, ಉಪಾಧ್ಯಕ್ಷ ಎ.ಪಿ. ಶಂಕರ್, ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಸ್. ಲಕ್ಷ್ಮೀ, ಉಪಾಧ್ಯಕ್ಷೆ ಶಾಂತಮ್ಮ, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮುಮ್ತಾಜ್ ಭಾನು, ಉಪಾಧ್ಯಕ್ಷ ಆನಂದ್ ಕುಮಾರ್. ಆರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು

Continue Reading

Chamarajanagar

ಜಲಾಯನ‌ ಯಾತ್ರೆಗೆ ಚಾಲನೆ ನೀಡಿದ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್

Published

on

ವರದಿ : ಗೋವಿಂದ ಕೆ ಗೌಡ ಹನೂರು

ಹನೂರು: ಪ್ರತಿಯೊಬ್ಬ ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವ ಕಾರ್ಯಕ್ಕೆ ಮುಂದಾಗಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್ ಎಸ್ ಅಭೀದ್ ತಿಳಿಸಿದರು.

ಹನೂರು ತಾಲೂಕಿನ ಕೊರಟ್ಟಿ ಹೊಸೂರು ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಲಾಯನ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಂದು ಹನಿ ಹನಿ ನೀರನ್ನು ಸಂರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ. ಬೇಸಿಗೆ ಕಾಲದಲ್ಲಿ ನೀರಿನ ಬಳಕೆಯನ್ನು ಮುನ್ನೆಚ್ಚರಿಕೆಯಿಂದ ಬಳಸುವ ಮೂಲಕ ನಾವು ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳಬಹುದು.. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಸಮೃದ್ಧ ಪರಿಸರವನ್ನು ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ದೊರೆಯುವ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಮಾರ್ಗದರ್ಶನಗಳನ್ನು ಅನುಸರಿಸಿದರೆ ರೈತರು ಕೃಷಿಯಲ್ಲಿ ಆರ್ಥಿಕವಾಗಿ ಸಬಲರಾಗಬಹುದು. ಜೊತೆಗೆ ಮಣ್ಣು ಫಲವತ್ತಾಗಿ, ಪರಿಸರ ಸ್ನೇಹಿಯಾಗಿಸಲು ಸಾಧ್ಯವಿದೆ. ಈ ಎಲ್ಲಾ ಕಾರ್ಯಕ್ರಮವು ನಮ್ಮ ಪರಿಸರ ಮತ್ತು ಕೃಷಿಯ ಭವಿಷ್ಯವನ್ನು ಸುರಕ್ಷಿತವಾಗಿಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ರಾಮಾಪುರ ರೈತ ಸಂಪನ್ಮೂಲ ಕೇಂದ್ರದ ಕೃಷಿ ಅಧಿಕಾರಿ ಮನೋಹರ್ ಮಾತನಾಡಿ ದೇಶಕ್ಕೆ ಸೈನಿಕ ಎಷ್ಟು ಮುಖ್ಯವೋ, ರೈತನು ಕೂಡ ಅಷ್ಟೇ ಮುಖ್ಯ, ಸೈನಿಕ ದೇಶವನ್ನು ಸಂರಕ್ಷಣೆ ಮಾಡಿದರೆ ರೈತ ಇಡೀ ದೇಶಕ್ಕೆ ಅನ್ನ ನೀಡುತ್ತಾನೆ. ರೈತರು ವಲಸೆ ಹೋಗುವುದನ್ನು ತಪ್ಪಿಸಲು ಕೃಷಿ ಇಲಾಖೆ ವತಿಯಿಂದ ಸರ್ಕಾರ ವಿವಿಧ ಯೋಜನೆಗಳ ಮೂಲಕ ಮನೆಯ ಬಾಗಿಲಿಗೆ ಹಲವು ಕಾರ್ಯಕ್ರಮಗಳನ್ನು ತಲುಪಿಸುತ್ತಿದೆ. ಪ್ರತಿಯೊಬ್ಬರು ಆಗಾಗ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದಿಂದ ಸಿಗುವ ಸೌಲತ್ತುಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಲಾನಯನ ಕಾರ್ಯಕ್ರಮದ ಬಗ್ಗೆ ಚಿತ್ರಕಲೆ ಪ್ರಬಂಧ ಸೇರಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಸ್ತಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನೀರು ಮಣ್ಣಿನ ಪಾತ್ರದ ಮಹತ್ವದ ಕುರಿತು ಜನರಲ್ಲಿ ಹರಿವು ಮೂಡಿಸಲು ಜಲಾಯನ ಯಾತ್ರೆಯ ಕಿರುಚಿತ್ರವನ್ನು ಪ್ರದರ್ಶನದ ಜೊತೆಗೆ ರಂಗವಾಹಿನಿ ಚಾಮರಾಜನಗರ ತಂಡದಿಂದ ನಾಟಕ ಪ್ರದರ್ಶನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ನಟರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ, ಅಧಿಕಾರಿಗಳಾದ ನಿಶಾಂತ್, ನಾಗೇಂದ್ರ, ಧರ್ಮೇಂದ್ರ, ಉಪೇಂದ್ರ, ಜಗದೀಶ್ ಸ್ಥಳಿಯ ಮುಖಂಡರಾದ ಶಿವಣ್ಣ ಪೊನ್ನು ಶೆಟ್ಟಿ ಜಗ ಮಲ್ಲೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Chamarajanagar

ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಮೂಡಿಸುವ ಜಾಥಾಗೆ ಚಾಲನೆ

Published

on

ಚಾಮರಾಜನಗರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾಗೆ ಚಾಲನೆ ದೊರೆಯಿತು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಅವರು ಜಾಥಾಗೆ ಹಸಿರು ನಿಶಾನೆ ತೋರಿ ಬಳಿಕ ಮಾತನಾಡಿ, ಜನಸಾಮಾನ್ಯರಿಗೆ ರಸ್ತೆ ಸುರಕ್ಷತೆಯ ಅರಿವು ಮೂಡಿಸಲು ಪ್ರತಿವರ್ಷದಂತೆ ಈ ಬಾರಿಯೂ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಯೋಜಿಸಲಾಗಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಅಪಘಾತ ಪ್ರಮಾಣವನ್ನು ತಗ್ಗಿಸುವುದೇ ಸಪ್ತಾಹದ ಉದ್ದೇಶವಾಗಿದೆ. ರಸ್ತೆ ಸುರಕ್ಷತೆಯ ಬಗ್ಗೆ ನಾಗರಿಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಅಗತ್ಯವಾಗಿದೆ ಎಂದರು.

ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ಕಳೆದ ಬಾರಿಗಿಂತ ಪ್ರಸ್ತುತ ಸಾಲಿನಲ್ಲಿ ಹೆಚ್ಚಾಗಿದೆ. ಅಪಘಾತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಜನರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಚಾಮರಾಜನಗರವನ್ನು ಅಪಘಾತ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರು ಸಹಕರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಅವರು ತಿಳಿಸಿದರು.

ಪ್ರಾದೇಶಿಕ ಸಾರಿಗೆ ನಿರೀಕ್ಷಕ ದಿನೇಶ್‍ಕುಮಾರ್ ಮಾತನಾಡಿ ಸಾರ್ವಜನಿಕರು, ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಮಹತ್ವವನ್ನು ಅರಿಯಬೇಕು. ಅಪಘಾತ ಪ್ರಮಾಣಗಳನ್ನು ಕಡಿಮೆ ಮಾಡಲು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ ಪಡೆದಿರಬೇಕು. 18 ವರ್ಷ ಮೇಲ್ಪಟ್ಟವರು ಮಾತ್ರ ವಾಹನ ಚಾಲನೆ ಮಾಡಬೇಕು. ಅಪ್ರಾಪ್ತರು ವಾಹನ ಚಾಲಿಸಿದರೆ ಅವರ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಲಾಗುವುದು. ಅಪಘಾತದಲ್ಲಿ ಸಿಲುಕಿದ ವ್ಯಕ್ತಿ ಮರಣ ಹೊಂದಿದರೆ ಅಪ್ತಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಲಾಗುವುದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಯುವಕರು ಬೈಕ್ ವೀಲಿಂಗ್ ಮಾಡಬಾರದು. ಕುಡಿದು ವಾಹನ ಚಾಲಿಸಬಾರದು ಎಂದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಸಂಚಾರಿ ನಿರೀಕ್ಷಕರಾದ ಮಹದೇವಸ್ವಾಮಿ ಇತರರು  ಉಪಸ್ಥಿತರಿದ್ದರು

Continue Reading

Chamarajanagar

ಗಾಯಗೊಂಡಿದ್ದ ಹಾವಿಗೆ ಚಿಕಿತ್ಸೆ

Published

on

ಚಾಮರಾಜನಗರ: ತಾಲ್ಲೂಕಿನ ಕೆಲ್ಲಂಬಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಅಡಿಪಾಯ ತೆಗೆಯುವಾಗ ಕೆರೆ ಹಾವಿಗೆ ಕಬ್ಬಿಣ ಸರಳಿನಿಂದ ಏಟು ಬಿದ್ದು, ತೀವ್ರ ಗಾಯಗೊಂಡಿದ್ದ ಹಾವಿಗೆ ಚಿಕಿತ್ಸೆ ನೀಡಿ ರಕ್ಷಿಸಲಾಗಿದೆ.

ಉತ್ತುವಳ್ಳಿ ಗ್ರಾಮದ ಸ್ನೇಕ್ ಸುರೇಶ್ ರವರು ಕೆರೆ ಹಾವನ್ನು ಚಾಮರಾಜನಗರದ ಜಿಲ್ಲಾ ಪಶುಪಾಲನ ಪಾಲಿ ಕ್ಲಿನಿಕ್ ಗೆ ಕೊಂಡು ಹೋಗಿ ಪಶು ಪಾಲನ ಸಹಾಯಕ ನಿರ್ದೇಶಕ ಡಾ. ಎಂ ಮೂರ್ತಿ ಅವರು ಮತ್ತು ಸಿಬ್ಬಂದಿ ವರ್ಗದವರು ಹಾವಿಗೆ ಸೂಕ್ತ ಚಿಕಿತ್ಸೆ ನೀಡಿ ಚೇತರಿಸಿಕೊಂಡ ಬಳಿಕ ಕಾಡಿಗೆ ಬಿಟ್ಟಿರುತ್ತಾರೆ.

Continue Reading

Trending

error: Content is protected !!