Connect with us

Hassan

ಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ

Published

on

ಹಾಸನ: ನಗರದ ಸಮೀಪ ಚಿಕ್ಕಕೊಂಡಗುಳದ ಬಳಿಯ ಮಿಲೇನಿಯಂ ವರ್ಲ್ಡ್ ಶಾಲೆ ಆವರಣದಲ್ಲಿ ಜಿಲ್ಲಾ ಚೆಸ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಕದಂಬ ಚೆಸ್ ಅಕಾಡೆಮಿಯು ಆಯೋಜಿಸಿದ್ದ 15 ವರ್ಷದೊಳಗಿನ 8ನೇ ಅಂತರಶಾಲಾ ಮುಕ್ತ ಚೆಸ್ ಪಂದ್ಯಾವಳಿ ಭರ್ಜರಿಯಾಗಿ ಯಶಸ್ವಿಯಾಯಿತು.

ಯುವ ಚೆಸ್ ಪ್ರತಿಭೆಗಳು ಬುದ್ಧಿಮತ್ತೆ ಮತ್ತು ತಂತ್ರಜ್ಞಾನದ ಹೋರಾಟದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿದ ವೇದಿಕೆಯಾಗಿತ್ತು.

ಕಾರ್ಯಕ್ರಮದಲ್ಲಿ ಜನಮಿತ್ರ ದಿನಪತ್ರಿಕೆಯ ಸಂಪಾದಕ ಸಿ.ಆರ್. ನವೀನ್, ನಾಗಮ್ಮ, ಹಾಸನ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ರಶ್ಮಿ ಕಿರಣ್, ಟ್ರೀಟಾಪ್ ಟ್ರಸ್ಟ್ ಮುಖ್ಯಸ್ಥರಾದ ಎಸ್. ಮಧುರಾ, ಮಿಲೇನಿಯಂ ವರ್ಲ್ಡ್ ಶಾಲೆಯ ನಿರ್ದೇಶಕ ಬಿ.ಪಿ. ಶರತ್, ಕೀರ್ತಿ ಪ್ರಸಾದ್, ಪ್ರಾಂಶುಪಾಲ ಡಾ. ಕೆ.ಎಸ್. ನಾಗಭೂಷಣ್, ಶೈಕ್ಷಣಿಕ ಮುಖ್ಯಸ್ಥರಾದ ದುರ್ಗಾ ಕುಮಾರ್, ಕದಂಬ ಚೆಸ್ ಅಕಾಡೆಮಿಯ ಸಂಸ್ಥಾಪಕ ಎಂ.ಟಿ. ತ್ಯಾಗರಾಜು, ಖಜಾಂಚಿ ಡಾ. ಪ್ರತಾಪ್, ತರಬೇತುದಾರರಾದ ಕಾವ್ಯಚಂದನ್ ಮತ್ತು ನಯನಾ ಸತೀಶ್ ಉಪಸ್ಥಿತರಿದ್ದರು.

Continue Reading

Hassan

ಅಖಿಲ ಭಾರತ ಸರ್ಕಾರಿ ನೌಕರರ ಫುಟ್ಬಾಲ್ ಟೂರ್ನಿ: ಸಕಲೇಶಪುರ ತಾಲೂಕಿನ 2 ಪಿಡಿಒಗಳು ಆಯ್ಕೆ

Published

on

ಸಕಲೇಶಪುರ: ಅಖಿಲ ಭಾರತ ಸರ್ಕಾರಿ ನೌಕರರ ಫುಟ್ಬಾಲ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ತಾಲೂಕಿನ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಯ್ಕೆಯಾಗಿದ್ದಾರೆ.

ಆನೆಮಹಲ್ ಗ್ರಾಪಂ ಪಿಡಿಒ ವೇಣುಗೋಪಾಲ್ ಹಾಗೂ ಹಾನುಬಾಳು ಗ್ರಾ.ಪಂ. ಪಿಡಿಒ ಕೆ. ಹರೀಶ್ ಕರ್ನಾಟಕ ಸರ್ಕಾರಿ ನೌಕರರ ಫುಟ್ಬಾಲ್ ತಂಡದಲ್ಲಿ ಸ್ಥಾನಗಿಟ್ಟಿಸಿದ್ದಾರೆ. ಈಗಾಗಲೇ ಹಲವಾರು ಟೂರ್ನಿಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಪ್ರಮುಖ ಫುಟ್ಬಾಲ್ ಆಟಗಾರರಾಗಿ ಗುರುತಿಸಿಕೊಂಡಿರುವ ಅವರನ್ನು ಸ್ನೇಹಿತರು, ಸಹೋದ್ಯೋಗಿಗಳು ಅಭಿನಂದಿಸಿದ್ದಾರೆ.

Continue Reading

Hassan

ಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ

Published

on

ಹಾಸನ: ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ 2025-26ನೇ ಸಾಲಿನ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೌರವ ಮತ್ತು ಬಹುಮಾನ ವಿತರಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ಅರ್.ಟಿ. ದ್ಯಾವೇಗೌಡರು ಮಾತಾನಾಡಿ, ವಿದ್ಯಾರ್ಥಿಗಳು ವ್ಯಾಸಂಗದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಂತ ಅಗತ್ಯ. ಗೆಲುವು-ಸೋಲು ಮುಖ್ಯವಲ್ಲ, ಸ್ಪರ್ಧಾತ್ಮಕ ಮನೋಭಾವ ಮತ್ತು ಸೌಹಾರ್ದತೆ ಮುಖ್ಯ ಎಂದು ಹೇಳಿದರು.

ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲೂ ಚುರುಕಾಗಿ ತೊಡಗಿಸಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಹೊರತರುವುದು ಇಂತಹ ವೇದಿಕೆಗಳಿಂದ ಸಾಧ್ಯ. ನಮ್ಮ ಕಾಲೇಜು ವಿಶಾಲ ಆವರಣ, ಎಲ್ಲಾ ರೀತಿಯ ಕ್ರೀಡಾ ಮೈದಾನಗಳು ಹಾಗೂ ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದರು.

ಕಾಲೇಜು ಪ್ರಾಂಶುಪಾಲ ಡಾ. ಹೆಚ್.ಜೆ. ಅಮರೇಂದ್ರ ಅವರು, ವಿದ್ಯಾರ್ಥಿಗಳು ಹೊರ ಕಾಲೇಜುಗಳಲ್ಲಿ ಭಾಗವಹಿಸಿ ವಿಜೇತರಾಗಿರುವುದು ಕಾಲೇಜಿಗೆ ಗೌರವ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಹೆಚ್.ಎಸ್. ನರಸಿಂಹನ್, ಪ್ರಾಧ್ಯಾಪಕರಾದ ಡಾ. ಎ.ಜೆ. ಕೃಷ್ಣಯ್ಯ, ಡಾ. ಶಿವಶಂಕರ್, ಮಂಜುನಾಥ್, ಸಂಯೋಜಕರು ಬಿ.ಎನ್. ಬೃಂದಾ, ಅರ್.ಬಿ. ಶೃತಿ ಸೇರಿದಂತೆ ಅನೇಕ ಬೋಧಕ ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ಬಾರಿ ಸಿವಿಲ್ ಇಂಜಿನಿಯರಿಂಗ್ ಬ್ರಾಂಚ್‌ನ ಕ್ರೀಡಾಕೂಟದಲ್ಲಿ ಕ್ರಿಕೆಟ್, ಸ್ವಿಮ್ಮಿಂಗ್, ವಾಲಿಬಾಲ್, ಕಬ್ಬಡಿ, ಥ್ರೋಬಾಲ್, ಪುಟ್‌ಬಾಲ್ ಮತ್ತು ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆದಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳು ಹಾಗೂ ಟ್ರೋಫಿಗಳನ್ನು ವಿತರಿಸಲಾಯಿತು.

Continue Reading

Hassan

ರೈತ ಸಂಘದ ಹೋರಾಟ ಫಲಿಸಿದ್ದು ಜೋಳ ಖರೀದಿ ಆದೇಶ: ಖರೀದಿ ಕೇಂದ್ರ ತೆರೆಯಬೇಕು ಕಣಗಾಲ್ ಮೂರ್ತಿ ಅಗ್ರಹ

Published

on

ಹಾಸನ: ರೈತ ಸಂಘದ ಹೋರಾಟ ಫಲಿಸಿದ್ದು, ರಾಜ್ಯ ಸರ್ಕಾರದಿಂದ ಜೋಳ ಖರೀದಿ ಆದೇಶ ನೀಡಿದ್ದು ಜಿಲ್ಲೆಯಲ್ಲಿ ಕೂಡಲೇ ಖರೀದಿ ಕೇಂದ್ರ ತೆರೆಯಬೇಕು ಎಂದು ಕಣಗಾಲ್ ಮೂರ್ತಿ ಅಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಸನ ಘಟಕದ ನಿರಂತರ ಹೋರಾಟದ ಪರಿಣಾಮವಾಗಿ, ಸರ್ಕಾರವು ಮೆಕ್ಕೆಜೋಳವನ್ನು ಕನಿಷ್ಠ 50 ಕ್ವಿಂಟಾಲ್‌ದಷ್ಟು ಪ್ರತಿಯೊಬ್ಬ ರೈತನಿಂದ ಖರೀದಿಸಲು ಆದೇಶ ಹೊರಡಿಸಿದೆ. ಜೊತೆಗೆ, ಬಿಳಿಸುಳಿ ರೋಗದಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡುವ ಭರವಸೆಯನ್ನೂ ಸರ್ಕಾರ ವ್ಯಕ್ತಪಡಿಸಿದೆ.

ನವೆಂಬರ್ 24ರಿಂದ 31ರ ವರೆಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಸಂಘವು ಅಹೋರಾತ್ರಿ ಧರಣಿ–ಸತ್ಯಾಗ್ರಹ ನಡೆಸಿತ್ತು. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಮತ್ತು ಬಿಳಿಸುಳಿ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂಬುದು ಮುಖ್ಯ ಬೇಡಿಕೆಗಳಾಗಿದ್ದವು.

ಧರಣಿಯ ಬಳಿಕ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೆಎಂಎಫ್, ಎಪಿಎಂಸಿ, ಕೃಷಿ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೆಎಂಎಫ್ 1 ಡಿಸೆಂಬರ್‌ರಿಂದಲೇ ಸರ್ಕಾರ ನಿಗದಿ ಪಡಿಸಿದ ರೂ.2400 ದರಕ್ಕೆ ಖರೀದಿ ಪ್ರಾರಂಭಿಸುವುದಾಗಿ ಹೇಳಿತ್ತು. ಆದರೆ ಪ್ರಾರಂಭಿಕ ಹಂತದಲ್ಲಿ ಒಬ್ಬ ರೈತನಿಗೆ 20 ಕ್ವಿಂಟಾಲ್‌ವರೆಗೆ ಮಾತ್ರ ಮಿತಿ ವಿಧಿಸಲಾಗಿತ್ತು.


ಈ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಅವರ ನೇತೃತ್ವದಲ್ಲಿನ ತಂಡವು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, 50 ಕ್ವಿಂಟಾಲ್ ಪೂರ್ಣ ಪ್ರಮಾಣದ ಖರೀದಿ ಹಾಗೂ ಬಿಳಿಸುಳಿ ರೋಗದಿಂದ ಬಳಲುತ್ತಿರುವ 12,000 ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡಿತು.

ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಪರಿಹಾರದ ಬಗ್ಗೆ ಭರವಸೆ ನೀಡಿದ್ದು, 7 ಡಿಸೆಂಬರ್ ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಮೂಲಕ ಪ್ರತಿಯೊಬ್ಬ ರೈತನಿಂದ 50 ಕ್ವಿಂಟಾಲ್ ಜೋಳವನ್ನು ಖರೀದಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.

ಹಾಸನ ಜಿಲ್ಲೆಯಾದ್ಯಂತ ತಕ್ಷಣ ಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು ಹಾಗು ಬಿಳಿಸುಳಿ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆಯನ್ನು ವೇಗಗೊಳಿಸಲು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಜು ಬಿಟ್ಟ ಗೌಡನಹಳ್ಳಿ, ಲಕ್ಷ್ಮಣ್ , ಕಾಂತರಾಜ್ , ಶಿವಣ್ಣ ಇತರರು ಹಾಜರಿದ್ದರು

Continue Reading

Trending

error: Content is protected !!