Location
ಜಿಲ್ಲೆಯ ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಕುಮಾರ*
*ಜಿಲ್ಲೆಯ ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಕುಮಾರ*
ಮಂಡ್ಯ: ಜಿಲ್ಲೆಯ ಪ್ರತಿಯೊಬ್ಬರು ಕೂಡ ಏಪ್ರಿಲ್ 26 ರಂದು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಇಂದು ಮಂಡ್ಯ ರೋಟರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಟ್ ಸಮಿತಿ ವತಿಯಿಂದ ನಡೆದ ಜಿಲ್ಲಾಮಟ್ಟದ ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಚುನಾವಣಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪ್ರತಿಯೊಬ್ಬ ಬುದ್ದಿವಂತ ಹಾಗೂ ಪ್ರಜ್ಞಾವಂತ ಮತದಾರರು ಮನೆಯಲ್ಲಿ ಉಳಿಯದೆ ಮನೆಯಿಂದ ಹೊರಗೆ ಬಂದು ತಮ್ಮ ಅಮೂಲ್ಯವಾದ ಹಾಗೂ ನೈತಿಕವಾದ ಮತವನ್ನು ಚಲಾಯಿಸುವ ಮೂಲಕ ಪ್ರಜಾಸತ್ತಾತ್ಮಕ ಮೌಲ್ಯವನ್ನು ಎತ್ತಿಹಿಡಿಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.
ಇಂದು ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಪರಿಕಲ್ಪನೆಯ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು,
ಪ್ರತಿಯೊಬ್ಬರೂ ಏಪ್ರಿಲ್ 26 ರಂದು ಖಂಡಿತವಾಗಿಯೂ ಮತದಾನ ಮಾಡುತ್ತೇನೆ ಎಂಬ ಸಂಕಲ್ಪವನ್ನಿಟ್ಟುಕೊಳ್ಳಬೇಕು.
18ನೇ ಲೋಕಸಭಾ ಚುನಾವಣೆಯ ಅಂಗವಾಗಿ ಎಲ್ಲ ಮತದಾರರು ಕೂಡ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು ಎಂಬ ಸದುದ್ದೇಶವನ್ನು ಇಟ್ಟುಕೊಂಡು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸಿಇಓ ಅವರು ಅನೇಕ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ.
ಭಾರತ ದೇಶ ಪ್ರಜಾ ಪ್ರಭುತ್ವದಲ್ಲಿಯೇ ಅಧಿಕೃತ ದೇಶವಾಗಿದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಎಲ್ಲರೂ ಸೇರಿ ಸಡಗರ ಸಂಭ್ರಮದಿಂದ ಚುನಾವಣೆ ಹಬ್ಬವನ್ನು ಆಚರಿಸೋಣ ಎಂದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಸಂಬಂಧ ಜಿಲ್ಲಾಡಳಿತ ಎಲ್ಲಾ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಡ್ಯ ಜಿಲ್ಲೆಯ 2076 ಮತಗಟ್ಟೆಗಳಲ್ಲಿಯೂ ಕೂಡ ಧ್ವಜಾರೋಹಣ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ಕ್ರಮಸಂಖ್ಯೆ, ಹಾಗೂ ತಮ್ಮ ಮತಗಟ್ಟೆಯ ಬಗ್ಗೆ ಪರಿಶೀಲಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿ, ಇಂದು ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಚುನಾವಣೆಯನ್ನು ಸುಲಲಿತವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ಇದರ ಮೂಲಕ ಎಲ್ಲರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಹಿನ್ನೆಲೆ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ ಸಿಕ್ಕಿದೆ. ಈ ಬಾರಿ ಪ್ರಥಮ ಸ್ಥಾನವನ್ನು ಪಡೆಯುವ ಅಪೇಕ್ಷೆ ಜಿಲ್ಲೆಯ ಮತದಾರರ ಮೇಲಿದೆ ಎಂದರು.
ಪ್ರತಿಯೊಬ್ಬರೂ ಯಾವುದೇ ಆಮಿಷಗಳಿಗೆ ಒಳಗಾಗದೇ, ಏಪ್ರಿಲ್ 26 ರಂದು ಮತಗಟ್ಟೆಗೆ ಬಂದು ನಿರ್ಭಿತವಾಗಿ ನಿಮ್ಮ ಮಹತ್ವಪೂರ್ಣವಾದ ಮತದಾನದ ಹಕ್ಕನ್ನು ಚಲಾಯಿಸಿ. ಮತದಾನಕ್ಕೆ ಮುಂಚೆ ನಿಮ್ಮ ಚುನಾವಣೆಯ ಭೂತ್ ಗಳು ಎಲ್ಲಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್. ಯತೀಶ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
*ಬೈಕ್ ಹಾಗೂ ಸೈಕಲ್ ಜಾಥಾಗೆ ಚಾಲನೆ:*
ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್.ನಾಗರಾಜು ಅವರು ರೋಟರಿ ಸಂಸ್ಥೆಯ ಮುಂಭಾಗದಿಂದ ಸೈಕಲ್ ತುಳಿಯುವ ಮೂಲಕ ಬೈಕ್ ಹಾಗೂ ಸೈಕಲ್ ಜಾಥಾಗೆ ಚಾಲನೆ ನೀಡಿದರು.
ಜಾಥಾವು ಬೆಂಗಳೂರು – ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯವರ ಕಚೇರಿ ಆವರಣದವರೆಗೆ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಏಪ್ರಿಲ್ 26ರಂದು ತಪ್ಪದೇ ಮತ ಚಲಾಯಿಸುವಂತೆ ಈ ಮೂಲಕ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಎಂ.ಬಾಬು, ಯೋಜನಾ ನಿರ್ದೇಶಕ ಸಂಜೀವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mysore
ಫುಟ್ಪಾತ್ ವ್ಯಾಪಾರಿಗಳಿಗೆ ನಂಜನಗೂಡು ನಗರಸಭೆ ಆಯುಕ್ತ ಎಂ. ಬಸವರಾಜು ಎಚ್ಚರಿಕೆ
ವರದಿ : ಮಹದೇವಸ್ವಾಮಿ ಪಟೇಲ್
ನಂಜನಗೂಡು : ನಂಜನಗೂಡು ನಗರಸಭೆ ವ್ಯಾಪ್ತಿಯ ಫುಟ್‌ಪಾತ್‌ಗಳಲ್ಲಿ ಪಾದಚಾರಿಗಳಿಗೆ ತೊಂದರೆ ನೀಡುತ್ತಿರುವ ತಳ್ಳುವಗಾಡಿ ಸೇರಿ ಅಕ್ರಮ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೌರಾಯುಕ್ತ ಎಂ. ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಹಲವು ವರ್ಷಗಳಿಂದ ಮಾರುಕಟ್ಟೆ ಸೇರಿ ನಗರಸಭೆಯ ಹಲವು ರಸ್ತೆಗಳ ಫುಟ್‌ಪಾತ್ ಜಾಗ ಒತ್ತುವರಿಯಾಗಿದೆ. ಈ ವಿಚಾರವಾಗಿ ವ್ಯಾಪಾರಸ್ಥರುಗಳಿಗೆ ನೋಟಿಸ್ ನೀಡುತ್ತ ಬಂದಿದ್ದರೂ, ಅವರುಗಳನ್ನು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆಗದಂತೆ ನಗರಸಭೆಯಿಂದ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ.

ಫುಟ್‌ಬಾತ್‌ನಲ್ಲಿ ಜನರು ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವಾಗಿ ಅನೇಕ ದೂರುಗಳು ಬಂದಿದೆ. ಹೀಗಾಗಿ ಫುಟ್ ಪಾತ್ ಒತ್ತುವರಿ ಮಾಡಿಕೊಂಡಿರುವ ವ್ಯಾಪಾರಸ್ಥರುಗಳಿಗೆ ನೋಟಿಸ್ ನೀಡಿದ್ದೇವೆ. ಒತ್ತುವರಿ ತೆರವುಗೊಳಿಸದಿದ್ದರೇ ಅಂತಹವ ವಿರುದ್ಧ ದಂಡ ಹಾಕಿ, ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.
ಈ ವೇಳೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ, ನಗರಸಭೆ ಅಧಿಕಾರಿಗಳಾದ ವಸಂತ , ಮಹೇಶ್, ಪೊಲೀಸ್ ಇಲಾಖೆ, ಹಾಗೂ ನಗರಸಭೆ ಸಿಬ್ಬಂದಿಗಳು ಹಾಜರಿದ್ದರು.
Hassan
ಅರೇಹಳ್ಳಿಯಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ
ಅರೇಹಳ್ಳಿ: ಸಮಾಜದಲ್ಲಿ ಶಾಂತಿ ಕಾಪಾಡುತ್ತ ಸಾರ್ವಜನಿಕರ ರಕ್ಷಣೆಗಾಗಿ ಪಣತೊಟ್ಟು, ಕಾನೂನು ಸುವ್ಯವಸ್ಥೆ ಪಾಲನೆಯ ಜೊತೆಗೆ ಅಪರಾದ ತಡೆಯಲು ಶ್ರಮಿಸುವ ಆರಕ್ಷಕರು ಇದೀಗ ಇನ್ನೊಬ್ಬರ ಜೀವರಕ್ಷಣೆಗಾಗಿ ರಕ್ತದಾನ ಮಾಡುತ್ತಿರುವುದು ಪ್ರಶಂಸನೀಯ ಎಂದು ಸ್ಥಳೀಯರು ಸ್ಲಾಘನೆ ವ್ಯಕ್ತಪಡಿಸಿದ್ದಾರೆ.
ಜೀವದಾನಕ್ಕೆ ಸಮಾನ ಪವಿತ್ರ ಕಾರ್ಯವಾದ ರಕ್ತದಾನವು ಕೇವಲ ಜೀವಗಳನ್ನು ಉಳಿಸುವುದಲ್ಲದೆ, ದಾನಿಯ ಆರೋಗ್ಯಕ್ಕೂ ಒಳ್ಳೆಯದು ಹಾಗೂ ಒಬ್ಬರ ರಕ್ತದಾನದಿಂದ ಮತ್ತೊಬ್ಬರ ಜೀವಕ್ಕೆ ಸಂಜೀವಿನಿಯಾಗಬಹುದು ಆದ್ದರಿಂದ ಎಲ್ಲರೂ ಅದಕ್ಕಾಗಿ ಮುಂದಾಗಬೇಕು ಎಂಬ ಚಿಂತನೆಯಿಂದ ಸ್ಥಳೀಯ ಪೊಲೀಸ್ ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಇತರರಿಗೂ ಪ್ರೇರಣೆಯಾಗಿದ್ದಾರೆ.

ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರದಂದು ಲಯನ್ಸ್ ಸಂಸ್ಥೆ, ಯೋಗ ಚೇತನ ಕೇಂದ್ರ ಹಾಗೂ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದದವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ಶಿಬಿರದಲ್ಲಿ ವೈದ್ಯಾಧಿಕಾರಿ ಡಾ. ಅನುಪಮಾ, ಪಿ.ಎಸ್.ಐ ಶೋಭಾ ಬರಮಣ್ಣನವರ್, ವೀರಶೈವ ಘಟಕದ ಹೋಬಳಿ ಅಧ್ಯಕ್ಷ ತೇಜಪಾಲ್, ಲಯನ್ ಸಂಸ್ಥೆಯ ಅಧ್ಯಕ್ಷ ಚಾಮರಾಜ, ಸ್ಥಳೀಯು ಮುಖಂಡರು ಸೇರಿದಂತೆ ವಿವಿದ ಆಸ್ಪತ್ರೆಯ ವೈದ್ಯರು ಸಿಬ್ಬಂದಿವರ್ಗದವರು ಹಾಗೂ ಇತರರು ಹಾಜರಿದ್ದರು.
Chikmagalur
ವಿವಾಹಿತ ಹಿಂದೂ ಮಹಿಳೆಯ ಜೊತೆ : ಸಿಕ್ಕಿ ಬಿದ್ದ ಕಾಂಗ್ರೆಸ್ ಮುಖಂಡ
ಚಿಕ್ಕಮಗಳೂರು : ವಿವಾಹಿತ ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಮಹಿಳೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಹಿಂದೂ ಮಹಿಳೆ ಇರುವುದನ್ನು ಕಂಡು ಯುವಕರು ಕೋಪಗೊಂಡಿದ್ದಾರೆ.
ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹುಡುಗರು ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಅಂತ ಹೇಳಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರಿನ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಇನ್ನೂ ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ. ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
Politics16 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu22 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu22 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Special22 minutes agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan19 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
Hassan15 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
National18 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Mysore18 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
