Location
ಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ – ಆರ್. ಲೋಕನಾಥ್

*ಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ – ಆರ್. ಲೋಕನಾಥ್
ಮೈಸೂರು,ಡಿ.19:- ಜಿಲ್ಲಾಮಟ್ಟದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಲೋಕನಾಥ್ ಅವರು ತಿಳಿಸಿದರು.
ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಡಿಸೆಂಬರ್ 29 ರಂದು ಬೆಳಿಗ್ಗೆ 11:30ಕ್ಕೆ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಗುವುದು. 2024 ರ ಜನವರಿ 1 ರಂದು ಬೆಳಗ್ಗೆ 11:30ಕ್ಕೆ, ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾಡಳಿತದ ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ ತಳಿರು ತೋರಣ ಕುಡಿಯುವ ನೀರಿನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವ್ಯವಸ್ಥೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಿತಿಯವರು ಅಮರಶಿಲ್ಪಿ ಜಕಣಾಚಾರಿಯವರ ಹೆಸರಿನಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸಾಧಕರಿಗೆ ನೀಡುವಂತೆ ಮನವಿ ಮಾಡಿದರು. ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ (ಆಡಳಿತ) ಸೋಮಶೇಖರ್ ಜಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ. ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಕನ್ನಡ ಚಳುವಳಿ ನಾಯಕರಾದ ತಾಯೂರು ವಿಠಲ ಮೂರ್ತಿ, ಮೋಹನ್ ಕುಮಾರ್ ಗೌಡ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.ET
Hassan
ಫೆ.15 ಮತ್ತು 16 ರಂದು ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ಜಾತ್ರೆ

ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ಎರಡು ಹೋಬಳಿಗಳ ಧಾರ್ಮಿಕ ಸಂಬಂಧ ಬೆಸೆಯುವ ಪುರಾಣ ಪ್ರಸಿದ್ಧ ಅಡಿಬೈಲು ಗ್ರಾಮದ ಶ್ರಿ ರಂಗನಾಥಸ್ವಾಮಿ ದೇವರ ಐತಿಹಾಸಿಕ ಜಾತ್ರೆ ಫೆ.೧೫ ಮತ್ತು ೧೬ ರಂದು ನಡೆಯಲಿದೆ.
ದೇವಸ್ಥಾನದಲ್ಲಿ ಫೆ.೮ ರಿಂದ ೧೭ ರವರೆಗೆ ಉತ್ಸವಗಳು ಮತ್ತು ಅನ್ನ ಸಂತರ್ಪಣೆ ನಡೆಯುತ್ತದೆ. ಇತಿಹಾಸ ಹೇಳುವಂತೆ ಒಬ್ಬ ಕೊರಮನು ಬುಟ್ಟಿ ಹೆಣೆಯಲು ಬಿದಿರು ತರಲು ಹೋಗಿದ್ದನು. ಬಿದಿರು ಮೆಣೆ (ಗುಂಪೊದಕ್ಕೆ) ಕತ್ತಿಯನ್ನು ಹೊಡೆಯುವಾಗ ಆಯತಪ್ಪಿ ಏಟು ಒಂದು ಬಂಡೆಗೆ ತಾಗುತ್ತದೆ. ಆ ಬಂಡೆಯಿಂದ ಒಂದು ಬದಿಯಲ್ಲಿ ಹಾಲು ಮತ್ತೊಂದು ಬದಿಯಲ್ಲಿ ರಕ್ತ ಬರುತ್ತದೆ ಇದರಿಂದ ಗಾಬರಿಯಾದ ಅವನು ಪ್ರಜ್ಞೆ ತಪ್ಪಿ ಬೀಳುವನು. ಮನೆಗೆ ವಾಪಾಸು ಬಾರದ ಈತನನ್ನು ಮನೆಯವರು ಹುಡುಕಿಕೊಂಡು ಹೋದರು. ಪ್ರಜ್ಞೆಬಂದ ವ್ಯಕ್ತಿಯು ನಡೆದ ವಿಷಯವನ್ನು ತಿಳಿಸುತ್ತಾನೆ.
ಸ್ಥಳವನ್ನು ಗಮನಿಸಿದಾಗ ಬ್ರಹ್ಮದೇವನ ವಿಗ್ರಹ ಪತ್ತೆಯಾಗುತ್ತದೆ.ಆ ಉದ್ಭವ ಮೂರ್ತಿಯನ್ನು ಪಾಳೆಗಾರರಿಂದ ರಕ್ಷಿಸಲೆಂದು ವಿಷ್ಣುವರ್ಧನ ರಾಜನು ದೇವಾಲಯವನ್ನು ನಿರ್ಮಾಣ ಮಾಡಿಸುತ್ತಾನೆ. ಹೊಯ್ಸಳ ದೊರೆ ವಿಷ್ಣುವರ್ಧನ ಜೈನ ಧರ್ಮದಿಂದ ವೈಷ್ಣವ ಧರ್ಮಕ್ಕೆ ಮತಾಂತರ ಹೊಂದಿದ್ದರಿಂದ ಬ್ರಹ್ಮದೇವನನ್ನು ರಂಗನಾಥನೆಂಬ ಹೆಸರಿನಿಂದ ಕರೆಯಲಾರಂಭಿಸಿದರು.
ಕೆಂಚಮ್ಮನ ಹೊಸಕೋಟೆ ಮತ್ತು ಕುಂದೂರು ಹೋಬಳಿಗೆ ಸೇರಿದ ಸುಮಾರು ೪೮ ಹಳ್ಳಿಗಳಿಗೆ ಸಂಬಂಧಿಸಿದ ಈ ಜಾತ್ರೆ ಸಂಕ್ರಾಂತಿ ಹಬ್ಬದ ದಿನದಂದು ಕುಂದೂರು ಹೋಬಳಿ ವ್ಯಾಪ್ತಿಗೊಳಪುಡುವ ಸುಮಾರು ೨೦ ಗ್ರಾಮಗಳಿಗೆ ಅಡ್ಡೆ ದೇವರು ಹೋಗುತ್ತದೆ. ಉತ್ಸವ ಮುಗಿದ ನಂತರ ಜಾತ್ರೆ ನಡೆಯುವ ಏಳು ದಿನಗಳ ಮೊದಲು ಬೆಟ್ಟದಲ್ಲಿರುವ ದೇವಾಲಯಕ್ಕೆ ಕರೆತರಲಾಗುತ್ತದೆ.
ಮೊದಲ ದಿನ ಶನಿವಾರ ದೊಡ್ಡ ಹರಿಸೇವೆ. ಭಾನುವಾರ, ಸೋಮವಾರ ಹಕ್ಕಿನ ಉತ್ಸವ ನಡೆಯುತ್ತದೆ. ಮಂಗಳವಾರ ಬಿಂದಿಗಮ್ಮ ಕಳಸ ಹೊರುವ ಪೂಜಾರಿಯವರಿಗೆ ತಲೆ ಬೋಳಿಸಿ, ಹಸೆ ಹಾಕಿ ಕಾಸೆ ವೇಷದೊಂದಿಗೆ ದೇವಾಲಯಕ್ಕೆ ಕಳುಹಿಸಿಕೊಡಲಾಗುತ್ತದೆ. ಇವರು ಜಾತ್ರಾ ಮಹೋತ್ಸವ ಮುಗಿಯುವವರೆಗೂ ಹಣ್ಣ-ಹಂಪಲು ಬಿಟ್ಟರೆ ಬೇರೆನನ್ನೂ ಸೇವಿಸದೆ ಪೂಜಾ ಕೈಂಕರ್ಯದಲ್ಲಿ ತೊಡಗುತ್ತಾರೆ. ಶ್ರೀ ರಂಗನಾಥಸ್ವಾಮಿಗೂ ಬಿಂದಿಗಮ್ಮನಿಗೂ ಮದುವೆ ಮಾಡಿ ಆ ವೈಭವವನ್ನು ಆನಂದಿಸುವುದು ಈ ಜಾತ್ರೆಯ ವಿಶೇಷವಾಗಿದೆ.
ದೇವಾಲಯದಲ್ಲಿ ಗುರುವಾರ ರಾತ್ರಿ ಬಿಂದಿಗಮ್ಮನವರಿಗೆ ಹಸೆ ಹಾಕುವ ವಿಶೇಷ ಪೂಜೆ ಇರುತ್ತದೆ. ಶುಕ್ರವಾರ ರಾತ್ರಿ ಗಂಡನ ಕಡೆ ಊರಾದ ಭರತೂರಿನ ಹೊಳೆ ದಡಕ್ಕೆ ಉತ್ಸವ ಮೂರ್ತಿಯೊಂದಿಗೆ ಬಿಂದಿಗಮ್ಮನವರನ್ನು ಕರೆ ತರಲಾಗುವುದು. ಶನಿವಾರ ಹೊಳೆ ದಡದಲ್ಲಿ ಜಾತ್ರೆ ನಡೆಯುತ್ತದೆ. ಸಂಜೆ ಬಿಂದಿಗಮ್ಮನವರನ್ನು ಗಂಡನ ಮನೆಗೆ ಅಂದರೆ ರಂಗನಾಥಸ್ವಾಮಿ ದೇವಾಲಯಕ್ಕೆ ಕಳುಹಿಸುವ ಸಂದರ್ಭ ನೋಡಲೇಬೇಕಾದುದು. ಕಳಸ ಹೊರಡುವ ಮುನ್ನ ಕುಂದೂರಿನ ಗ್ರಾಮಸ್ಥರನ್ನು ಭರತೂರು ಗ್ರಾಮಸ್ಥರು ಬರಮಾಡಿಕೊಂಡು ವಿಶೇಷ ಆತಿಥ್ಯ ನೀಡಿ ಗೌರವಿಸುತ್ತಾರೆ.
ಹೂವು ತುಳಸಿಯಿಂದ ಅಲಂಕೃತವಾದ ಹರಿವಾಣದಲ್ಲಿ ಬಿಂದಿಗಮ್ಮನವರ ಕಳಸವನ್ನು ತಲೆ ಬೋಳಿಸಿದ್ದ ಪೂಜಾರಿ ತಲೆ ಮೇಲೆ ಇಡಲಾಗುತ್ತದೆ. ಸ್ವಲ್ಪ ದೂರ ನಿಧಾನವಾಗಿ ನಡೆದು ಹೋಗುತ್ತಿದ್ದ ಕಳಸ ಹೊತ್ತವರು, ನಂತರದಲ್ಲಿ ತಲೆ ಮೇಲಿರುವ ಕಳಸವನ್ನು ಕೈಯಲ್ಲಿ ಹಿಡಿಯದೆ ಓಡಲು ಪ್ರಾರಂಭ ಮಾಡುತ್ತಾರೆ. ಹೊಳೆಯಿಂದ ಸುಮಾರು ೧೦ ಕಿ. ಮೀ. ದೂರದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಏಳು ಊರು ಬಾಗಿಲಗಳನ್ನು ದಾಟಿಕೊಂಡು ಕೇವಲ ಮುಕ್ಕಾಲು ಗಂಟೆಯಲ್ಲಿ ತಲುಪುತ್ತದೆ.
ಊರು ಬಾಗಿಲಲ್ಲಿ ಅಕ್ಕಿ ಹಸೆ ಬರೆದು ಹಣ ಹಾಕಿರುತ್ತಾರೆ. ಬಾಗಿಲು ದಾಟುವ ಸಂದರ್ಭದಲ್ಲಿ ಕಳಸ ಹೊತ್ತವರು ತನ್ನ ಗದ್ದದಿಂದ ನೆಲದ ಮೇಲಿಟ್ಟ ಹಣವನ್ನು ಮುಟ್ಟುತ್ತಾರೆೆ. ಕಳಸ ಮುಂದೆ ಹೋದ ಕೂಡಲೆ ನೆರೆದಿದ್ದವರು ಹಸೆ ಅಕ್ಕಿಯನ್ನು ಮುಗಿಬಿದ್ದು ತೆಗೆದುಕೊಳ್ಳುತ್ತಾರೆ. ಈ ಸಂದರ್ಭ ನೋಡಲು ಅತ್ಯಂತ ಕುತೂಹಲಕಾರಿಯಾಗಿರುತ್ತದೆ.
ಭಾನುವಾರ ಬೆಟ್ಟದ ಮೇಲೆ ಹಗಲು ಜಾತ್ರೆ ನಡೆಯುತ್ತದೆ. ಸೋಮವಾರ ಹೇಮಾವತಿ ನದಿ ನೀರಿನಿಂದ ಅಭಿಷೇಕದೊಂದಿಗೆ ಜಾತ್ರಾ ವಿಶೇಷ ಪೂಜಾ ಕಾರ್ಯಕ್ಕೆ ನಾಂದಿ ಹಾಡಲಾಗುತ್ತದೆ. ನಂತರ ಯುಗಾದಿ ಹಬ್ಬದ ಸಂದರ್ಭದಲ್ಲಿ ಭರತೂರು ಕಡೆಗೆ ಸೇರುವ ಸುಮಾರು ೧೦ ಗ್ರಾಮಗಳಲ್ಲಿ ಅಡ್ಡೆ ಉತ್ಸವ ನಡೆಯುತ್ತದೆ ಮುಜರಾಯಿ ಇಲಾಖೆಗೆ ಸೇರಿದ ಅಡಿಬೈಲು ಶ್ರೀ ರಂಗನಾಥಸ್ವಾಮಿ ದೇವರ ಜಾತ್ರೆ ಫೆ. ೧೫ ರಂದು ಭರತೂರು ಗ್ರಾಮ ಹೇಮಾವತಿ ಹಿನ್ನಿರು ಬದಿಯಲ್ಲಿ ಮತ್ತು ೧೬ ರಂದು ರಂಗನಬೆಟ್ಟದ ಮೇಲೆ ನಡೆಯುತ್ತದೆ ಆಲೂರಿನಿಂದ ೧೮ ಕಿ. ಮೀ. ಮಗ್ಗೆ-ರಾಯರಕೊಪ್ಪಲು ಮಾರ್ಗವಾಗಿ ಪ್ರತಿದಿನ ಸಾರಿಗೆ ಬಸ್ ವ್ಯವಸ್ಥೆ ಇರುತ್ತದೆ ಭಕ್ತರು ಸ್ವಚ್ಚತೆಯನ್ನು ಕಾಪಾಡಬೇಕು ಎನ್ನುತ್ತಾರೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಿ. ಉಮೇಶ್.
Mandya
ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.
Mandya
ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
-
Kodagu13 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu12 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Kodagu16 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Hassan21 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore21 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan17 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State14 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan21 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ