Connect with us

Politics

ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

Published

on

ಬೆಂಗಳೂರು : “ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆ ಅನುಮತಿಯನ್ನು ಹಿಂಪಡೆದಿದ್ದರೂ ಕಿರುಕುಳ ಮುಂದುವರೆದಿದೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ನಾಯಕರಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೇರಳ ಮೂಲದ ಜೈ ಹಿಂದ್ ಚಾನೆಲ್ ಎಂಡಿ ಹಾಗೂ ತಮಗೆ ಸಿಬಿಐ ನೋಟಿಸ್ ಜಾರಿ ಮಾಡಿರುವ ಬಗ್ಗೆ ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಪ್ರಶ್ನಿಸಿದಾಗ ಡಿಸಿಎಂ ಅವರು ಹೇಳಿದ್ದು ಹೀಗೆ:

“ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ಸಿಬಿಐನವರೂ ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ಕಾರಿ ಕಚೇರಿ, ಸಹಕಾರಿ ಸೊಸೈಟಿ, ನಾನು ಅಧ್ಯಕ್ಷನಾಗಿರುವ ಸಂಸ್ಥೆ, ಸೇರಿದಂತೆ ಅನೇಕರಿಗೆ ನೊಟೀಸ್ ಕೊಟ್ಟಿದ್ದಾರೆ. ಯಾವ ಲೆಕ್ಕಾಚಾರದ ಮೇಲೆ ಈ ನೊಟೀಸ್ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಉದ್ದೇಶ ಏನು ಎಂಬುದು ಗೊತ್ತಿಲ್ಲ. ಆದರೆ ಮೇಲ್ನೋಟಕ್ಕೆ ಅವರು ನನಗೆ ಹಾಗೂ ಪಕ್ಷಕ್ಕೆ ತೊಂದರೆ ನೀಡಲು ದೊಡ್ಡ ಷಡ್ಯಂತ್ರ ರೂಪಿಸುತ್ತಿದ್ದಾರೆ.

ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಿದೆ. ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಹೈಕೋರ್ಟ್ ಒಪ್ಪಿದ್ದರೂ ಸಿಬಿಐ ಯಾಕೆ ನೊಟೀಸ್ ನೀಡುತ್ತಿದೆ ಎಂಬುದು ಗೊತ್ತಿಲ್ಲ. ಅವರ ಬಳಿ ನನ್ನ ಎಲ್ಲಾ ದಾಖಲೆಗಳು ಇವೆ. ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರವಾಗಿರುವ ಹಿನ್ನೆಲೆಯಲ್ಲಿ ಈ ಎಲ್ಲ ದಾಖಲೆಗಳನ್ನು ಸಿಬಿಐ, ಲೋಕಾಯುಕ್ತಕ್ಕೆ ನೀಡಬೇಕಿದೆ ಎಂಬುದು ನನಗಿರುವ ಕಾನೂನಿನ ಅರಿವು.

ನನ್ನ ಸಂಸ್ಥೆ, ನನ್ನ ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರು, ನನ್ನ ಸ್ನೇಹಿತರು ಸೇರಿದಂತೆ ಹಲವರಿಂದ ಮಾಹಿತಿ ಕೇಳುತ್ತಿದ್ದಾರೆ. ಮೊದಲು ಈ ರೀತಿ ಮಾಡಿ ನಂತರ ಅವರು ನನಗೆ ನೇರವಾಗಿ ನೊಟೀಸ್ ನೀಡುತ್ತಾರೆ.

ಅವರು ಏನು ಬೇಕಾದರೂ ಮಾಡಲಿ. ನನ್ನನ್ನು ಜೈಲಿಗೆ ಕಳಿಸುವ ಬಗ್ಗೆ ಅನೇಕ ಬಿಜೆಪಿ ನಾಯಕರು ಹಿಂದೆ ಹೇಳಿದ್ದರು. ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಹ್ವಾನ ನೀಡಿದ್ದೆ.

ನಾನು ಯಾವುದೇ ತಪ್ಪು ಮಾಡಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ನನಗೆ ಎಲ್ಲಿ ನ್ಯಾಯ ಸಿಗಬೇಕೋ ಅಲ್ಲಿ ಸಿಗುತ್ತದೆ” ಎಂದು ತಿಳಿಸಿದರು.

10% ತನಿಖೆಯೂ ಮಾಡಿರಲಿಲ್ಲ:

ಸಿಬಿಐ ಅಧಿಕಾರಿಗಳಿಗೆ ನಾನು ಎಲ್ಲ ದಾಖಲೆ ನೀಡಿದ್ದೆ. ಅವರು 10 % ಕೂಡ ತನಿಖೆ ಮಾಡಿರಲಿಲ್ಲ. ಆದರೆ ನ್ಯಾಯಾಲಯದಲ್ಲಿ 90% ತನಿಖೆ ಮುಗಿದಿದೆ ಎಂದು ಹೇಳಿದ್ದರು. ಯಾವ ಲೆಕ್ಕಾಚಾರದಲ್ಲಿ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅವರು ಏನಾದರೂ ಮಾಡಲಿ. ನನ್ನನ್ನು ಒಳಗೆ ಹಾಕಿಸುವ ಆಸೆ ಇದ್ದರೆ ಹಾಕಿಸಲಿ. ನಾನು ಸಿದ್ಧನಿದ್ದೇನೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಕಾರಣ ನನ್ನ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಅಹ್ಮದ್ ಪಟೇಲ್ ಅವರೇ ಇಂದು ನಮ್ಮ ಜತೆ ಇಲ್ಲ. ಆದರೂ ನನಗೆ ಕಿರುಕುಳ ಮುಂದುವರೆಸಿದ್ದಾರೆ. ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದು ಗೊತ್ತು. ಕಾನೂನು ಇದೆ, ನನ್ನ ಕೊನೆಯುಸಿರು ಇರುವವರೆಗೂ ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.

ಮಾಧ್ಯಮದ ವರದಿ ಸುಳ್ಳು:

ಲೋಕಸಭೆ ಚುನಾವಣೆಯಲ್ಲಿ ಸಚಿವರ ಸ್ಪರ್ಧೆಗೆ ನಾನು ಮಾಡಿದ್ದ ಶಿಫಾರಸ್ಸಿಗೆ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎಂಬ ವರದಿ ಬಗ್ಗೆ ಕೇಳಿದಾಗ, “ಅದೆಲ್ಲವೂ ಸುಳ್ಳು. ನಾನು ಯಾವುದೇ ಸಚಿವರನ್ನು ಅಭ್ಯರ್ಥಿ ಮಾಡಿ ಎಂದು ವರದಿ ಕೊಟ್ಟಿಲ್ಲ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೈಕಮಾಂಡ್ ನನಗೆ ವರದಿ ಕೇಳಿದ್ದು, ನಾನು ಇನ್ನೂ ವಾರದಿಯನ್ನೇ ನೀಡಿಲ್ಲ. ಇದೇ 4 ರಂದು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಯಾವುದೇ ಸಚಿವರ ಸ್ಪರ್ಧೆ ಬಗ್ಗೆ ಸೂಚನೆ ನೀಡಿಲ್ಲ. ಲೋಕಸಭೆ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡಲು ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆ. ನಮ್ಮ ನಾಯಕರು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಅವರು ಯಾವ ಮಾನದಂಡ ನಿಗದಿ ಮಾಡುತ್ತಾರೋ ಅದರ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಸಚಿವರ ಸ್ಪರ್ಧೆ ಬಗ್ಗೆ ಶಿಫಾರಸ್ಸು ವರದಿಯನ್ನೇ ಕೊಡದಿರುವಾಗ, ಅದನ್ನು ಹೈಕಮಾಂಡ್ ನಾಯಕರು ತಿರಸ್ಕರಿಸಿದ್ದಾರೆ ಎಂಬ ಮಾಧ್ಯಮದ ವರದಿ ಸುಳ್ಳು. ಪಕ್ಷ ಹೇಳಿದಂತೆ ಎಲ್ಲರೂ ಕೇಳುತ್ತಾರೆ. ಜ.10 ರಂದು ಸಭೆ ಕರೆದಿದ್ದು, ಬೆಳಗ್ಗೆ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ಮಧ್ಯಾಹ್ನ ಬ್ಲಾಕ್ ಅಧ್ಯಕ್ಷರ ಜೊತೆ ಸಭೆ ಮಾಡುತ್ತೇವೆ. ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಸಹ ಭಾಗವಹಿಸಬೇಕು ಎಂದು ಆಹ್ವಾನ ನೀಡಲಾಗಿದೆ.

ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕೆಲವು ಸಚಿವರು ನಿಲ್ಲುವ ಪರಿಸ್ಥಿತಿ ಬರಬಹುದು, ಬಾರದೆಯೂ ಇರಬಹುದು. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ.

ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಕೊರತೆ ಇದೆಯೇ ಎಂದು ಕೇಳಿದಾಗ, “ನಮ್ಮ ಪಕ್ಷದಲ್ಲಿ ಅನೇಕ ಅಭ್ಯರ್ಥಿಗಳು ಇದ್ದಾರೆ. ಕೆಲವು ಕಡೆ 3-4 ಆಕಾಂಕ್ಷಿಗಳು ಇದ್ದರೆ, ಮತ್ತೆ ಕೆಲವೆಡೆ 8-10 ಆಕಾಂಕ್ಷಿಗಳು ಇದ್ದಾರೆ. ಅವರು ಕೇಳುವುದಕ್ಕಿಂತ ನಾವು ಯಾರನ್ನೂ ಕಣಕ್ಕೆ ಇಳಿಸುತ್ತೇವೆ ಎಂಬುದು ಮುಖ್ಯ.

ಹೊಸವರ್ಷದ ಶುಭಾಶಯಗಳು:

ನಾಡಿನ ಜನತೆಗೆ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಹೊಸವರ್ಷದ ಹಾರ್ದಿಕ ಶುಭಾಶಯಗಳು. ಕಳೆದ ವರ್ಷ ಬರಗಾಲ ಎದುರಿಸಿದ್ದು, ಈ ವರ್ಷ ಬರದ ಛಾಯೆ ದೂರವಾಗಲಿ, ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಕೊಟ್ಟ ಮಾತು ಉಳಿಸಿಕೊಂಡಿದೆ. ಈ ಯೋಜನೆ ಮೂಲಕ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿದ್ದೇವೆ ಎಂಬ ತೃಪ್ತಿ ನಮಗಿದೆ. ನಾವು ವಿರೋಧ ಪಕ್ಷದವರನ್ನು ಮೆಚ್ಚಿಸಲು ಆಗುವುದಿಲ್ಲ. ನಮಗೆ ಮತ ಹಾಕಿದ ಜನರ ಪರವಾಗಿ ಆತ್ಮಸಾಕ್ಷಿಯಿಂದ ಕೆಲಸ ಮಾಡುತ್ತಿದ್ದೇವೆ.

Continue Reading
Click to comment

Leave a Reply

Your email address will not be published. Required fields are marked *

National

ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ : ಬಿ.ಕೆ.ಹರಿಪ್ರಸಾದ್ 

Published

on

ನವದೆಹಲಿ:  ಮೋಹನ್ ಭಾಗವತ್,  ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ  ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ ಎಂಬುದು ಅಷ್ಟೇ ಸತ್ಯ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರ ವಿರುದ್ಧ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಇಂದು ಹಿಂದೂ ರಾಷ್ಟ್ರ ಮಾಡುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, RSS ಸಾಂವಿಧಾನಿಕ ಚೌಕಟ್ಟಿನಲ್ಲಿ ನೊಂದಣಿಯಾಗಿಲ್ಲ ಎಂದು ಅವರೇ ಹೇಳಿಕೊಂಡಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ನೋಂದಣಿಯಾಗದವರು ಸಂಸತ್ ಬಗ್ಗೆ ಏನು ಮಾತನಾಡುತ್ತಾರೆ? ಹಿಂದೂ ರಾಷ್ಟ್ರ ಮಾಡಲು ಸಂವಿಧಾನದಲ್ಲಿ ಬದಲಾವಣೆ ಬೇಕಾಗಿಲ್ಲ ಎನ್ನುತ್ತಾರೆ. ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನ ಮಂತ್ರಿ ಮತ್ತು  ಗೃಹ ಸಚಿವರು, ಮೋಹನ್ ಭಾಗವತ್ ಏಜೆಂಟ್‌ಗಳಾ? ಸಂವಿಧಾನದ ಅಡಿ ಪ್ರಮಾಣ ವಚನ ಸ್ವೀಕರಿಸಿದರು. ಸಂವಿಧಾನದ ಅಡಿ ಕೆಲಸ ಮಾಡಬೇಕು. ಮೋಹನ್ ಭಾಗವತ್‌ಗೆ  Z+ ಸೆಕ್ಯೂರಿಟಿ ನೀಡಿದ್ದಾರೆ. ದೇಶಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ.

 

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಪತ್ರದ ಬಗ್ಗೆ ಮಾತನಾಡಿದ  ಅವರು, ಸಂಸತ್ ಚುನಾವಣೆಯಲ್ಲಿ ಸೋಲಿಗೆ ಕಾರಣ ಏನು ಎಂದು ಚರ್ಚೆ ನಡೆದಿದೆ. ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಚರ್ಚೆಯಾಗಿದೆ. ಆ ತಂಡದ ಮುಂದೆ ಫಲಿತಾಂಶಕ್ಕೆ ಕಾರಣ ಏನು ಎಂದು ಹೇಳಿದೆ. ಸೋಲಿಗೆ ಕಾರಣ ಏನು ಎಂದು ಮಧುಸೂದನ್ ಮಿಸ್ತ್ರಿ ತಂಡ ಹೇಳಬೇಕು. ಕೆ.ಎನ್. ರಾಜಣ್ಣ ತಮ್ಮ ಅಭಿಪ್ರಾಯ ಹೇಳಿದ್ದಾರೆ. ವೋಟ್ ಚೋರಿ ವಿಚಾರ ಬೇರೆ, ಬಿಎಲ್‌ಓ ನೇಮಕ ಬೇರೆ. ಪತ್ರದಲ್ಲಿ ಏನು ಬರೆದಿದ್ದಾರೆ? ನಾನು ಪೂರ್ತಿ ಓದಿಲ್ಲ, ಓದಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಬಣದ ನಾಯಕರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಡಿಸಿಎಂ ಭೇಟಿ ರಾಜಕೀಯ ಭೇಟಿಯಲ್ಲ. ಪಕ್ಷದ ಕಾರ್ಯಕ್ರಮಗಳಲ್ಲಿ ಭೇಟಿಯಾಗಿದ್ದೇನೆ. ಅವರು ಪಕ್ಷದ ಅಧ್ಯಕ್ಷರು, ಡಿಸಿಎಂ ಸಹ ಆಗಿದ್ದಾರೆ. ಎರಡು ಸ್ಥಾನದಲ್ಲಿರುವ ಕಾರಣ ಒಂದಲ್ಲ ಒಂದು ಸ್ಥಾನದ ಉಪಯೋಗ ಮಾಡಿಕೊಂಡು ಭೇಟಿ ಮಾಡುತ್ತಾರೆ. ಬೆಂಬಲ ಕೇಳಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಡೆಗೆ ಯಾರು ಇಲ್ಲ. ಎಲ್ಲ ನಾಯಕರು ಕಾಂಗ್ರೆಸ್ ಪಕ್ಷದ ಕಡೆಯವರು. ಕಾರ್ಯಕರ್ತರಿಂದ ಪಕ್ಷ ಗೆದ್ದಿರುವುದು ಎಂದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಅವರಿಗೆ ಸರಿಯಾದ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Continue Reading

Politics

ರಾಹುಲ್‌ ಗಾಂಧಿಗೆ 8 ಪುಟಗಳ ಸುದೀರ್ಘ ಪತ್ರ ಬರೆದ ಕೆ.ಎನ್.ರಾಜಣ್ಣ

Published

on

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ  ಭೇಟಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಮನವಿ ಮಾಡಿ 8 ಪುಟಗಳ ಸುದೀರ್ಘ  ಪತ್ರ ಬರೆದಿದ್ದಾರೆ.

ರಾಹುಲ್ ಗಾಂಧಿ ಭೇಟಿಗೆ ತಾವು ಸಚಿವ ಸ್ಥಾನ ಕಳೆದುಕೊಂಡ ನಂತರ  ಸತತ ಯತ್ನ ಮಾಡಿದ್ದರೂ, ಅದು ಸಾಧ್ಯವಾಗದ ಕಾರಣ ರಾಹುಲ್ ಗಾಂಧಿಗೆ ಬರೆದಿದ್ದಾರೆ. ಅದರಲ್ಲಿ ರಾಜ್ಯ ರಾಜಕಾರಣದ ಹಲವು ಮಹತ್ವದ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಈ  ಪತ್ರದಲ್ಲಿ ಅಹಿಂದ ನಾಯಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 2013 ಮತ್ತು 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಅವರು ಎಸ್‌ಸಿ/ಎಸ್‌ಟಿ, ಓಬಿಸಿ ಅಲ್ಪಸಂಖ್ಯಾತರು, ಬಡವರು ಸೇರಿ ಎಲ್ಲರ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಪರ ಉಲ್ಲೇಖಿಸಿದ್ದಾರೆ. ಅಲ್ಲದೇ ಇದೇ ಪತ್ರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ನೇರಾ ನೇರವಾಗಿ ಆರೋಪ ಮಾಡಿದ್ದಾರೆ.

ಬಿಎಲ್‌ಆರ್‌ಗಳು ಸರಿಯಾಗಿ ಕೆಲಸ ಮಾಡಿದ್ದಿದ್ದರೆ ಲೋಕಸಭೆಯಲ್ಲಿ ಇನ್ನೂ 8-10 ಸೀಟ್ ಗೆಲ್ಲುತ್ತಿದ್ದೇವು. ಬೇರೆ ರಾಜ್ಯಗಳಿಂದಲೂ 30-40 ಸೀಟ್ ಗೆಲ್ಲಬಹುದಿತ್ತು ಎಂದು ಬಿಎಲ್‌ಆರ್‌ಗಳನ್ನು ನೇಮಕ ಮಾಡಿದ್ದು, ಅವರ ನೇಮಕ ಸರಿಯಾಗಿದ್ದರೆ, ವೋಟ್ ಚೋರಿ ಆಗುತ್ತಿರಲಿಲ್ಲ. ಬಿಎಲ್‌ಆರ್‌ಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಸರಿಯಾದ ಗಮನ ಹರಿಸಿಲ್ಲ. ಹೀಗಾಗಿ, ಕರ್ನಾಟಕದಲ್ಲಿ ವೋಟ್ ಚೋರಿಗೆ ಅವಕಾಶ ಆಗಿದೆ ಎಂದು ಡಿಕೆಶಿ ವಿರುದ್ಧ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್ ಅದು ಅವರ ಪ್ರತಿಪಾದನೆ ಅವರ ವಿಚಾರ ಎಂದು ಹೇಳಿದ್ದಾರೆ.

ಪತ್ರದಲ್ಲಿ ಏನಿದೆ?

ರಾಜಣ್ಣ ತಮ್ಮ ಪತ್ರದಲ್ಲಿ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಕೇಳಿದ್ದು, ಏನು ತಪ್ಪು ಮಾಡದೆ ನನ್ನ ಸಚಿವ ಸ್ಥಾನ ಕಳೆದುಕೊಂಡಿದ್ದೇನೆ ಎಂದು ಪ್ರಸ್ತಾಪಿಸಿದ್ದಾರೆ. ನಾನು ಯಾವುದೇ ಭ್ರಷ್ಟಾಚಾರ ಮಾಡದೇ ಎರಡು ವರ್ಷ ಸಚಿವ‌ನಾಗಿ ಕೆಲಸ ಮಾಡಿದ್ದೇನೆ. ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ತಂದಿದ್ದೇನೆ ಎಸ್‌ಸಿ-ಎಸ್‌ಟಿ ಮಹಿಳಾ ಮೀಸಲಾತಿ ತಂದಿದ್ದೇನೆ. ಇದರಿಂದ ರಾಜ್ಯಾದ್ಯಂತ ಒಂದು ಲಕ್ಷ ಕಾರ್ಯಕರ್ತರಿಗೆ ಅನುಕೂಲವಾಗಿದೆ. ಹಾಸನ ಉಸ್ತುವಾರಿಯಾಗಿ ಹಳೇ ಮೈಸೂರು ಭಾಗದಲ್ಲಿ ಹಾಸನ ಗೆಲ್ಲುವಂತೆ ಕೆಲಸ ಮಾಡಿದ್ದೇನೆ. ನಾನು ನೆಹರೂ ಫ್ಯಾಮಿಲಿಗೆ ನಿಷ್ಠೆಯಿಂದ ಇದ್ದೇನೆ. ನಾನು ಈ ಪತ್ರ ಬರೆದ ಉದ್ದೇಶ ಇಷ್ಟೇ. ನನ್ನ ವಿರುದ್ಧ ತಮಗೆ ತಪ್ಪು ಮಾಹಿತಿ ನೀಡಿದವರ ಮೇಲೆ ಕ್ರಮ ಆಗಬೇಕು. ನನ್ನ ಹೇಳಿಕೆಯ ಉದ್ದೇಶವನ್ನು ತಮಗೆ ತಪ್ಪಾಗಿ ಅರ್ಥೈಸುವಂತೆ ಮಾಡಿದವರ ಮೇಲೆ ಕ್ರಮ ಆಗಬೇಕು. ಜೊತೆಗೆ ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ತಮ್ಮ ಭೇಟಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

 

Continue Reading

Politics

ಡಿಕೆ ಬ್ರದರ್ಸ್‌ಗೆ ನೋಟಿಸ್‌ ಜಾರಿ ಮಾಡಿದ ದೆಹಲಿ ಪೊಲೀಸರು

Published

on

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಅವರ  ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್‌ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

Continue Reading

Trending

error: Content is protected !!