Connect with us

State

ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಶಮನ; ಅ. 30 ರಂದು ನಾಮಪತ್ರ ಹಿಂಪಡೆಯಲಿರುವ ಖಾದ್ರಿ: ಡಿಸಿಎಂ

Published

on

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಯ್ಯದ್ ಅಜ್ಜಂಪೀರ್ ಖಾದ್ರಿ ಅವರು ಅ.30 ಬುಧವಾರದಂದು ನಾಮಪತ್ರವನ್ನು ಹಿಂಪಡೆಯಲಿದ್ದಾರೆ. ಅವರ ಅರ್ಹತೆಗೆ ತಕ್ಕಂತೆ ಪಕ್ಷವು ಅಧಿಕಾರ ನೀಡುತ್ತದೆ” ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸಕ್ಕೆ ಆಗಮಿಸಿದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರ ಉಪಚುನಾವಣೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಅವರ ಜತೆ ಮಾತುಕತೆ ನಡೆಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಶನಿವಾರ ಮಾತನಾಡಿದರು.

“ಖಾದ್ರಿ ಅವರು ನಮ್ಮ ಜೊತೆಯಲ್ಲಿದ್ದಾರೆ. ಅವರ ದುಃಖ ದುಮ್ಮಾನಗಳನ್ನು ನಮ್ಮ ಬಳಿ ಚರ್ಚೆ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣಕ್ಕೆ ಅವರಿಗೆ ನೀಡಿರುವ ಭರವಸೆಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಖಾದ್ರಿ ಅವರ ಬಳಿ ಗೌಪ್ಯವಾಗಿ ಮಾತನಾಡಿದ್ದೇನೆ” ಎಂದು ಹೇಳಿದರು.

“ಖಾದ್ರಿ ಅವರಿಗೆ ಕಳೆದ ಚುನಾವಣೆಯಲ್ಲಿಯೇ ಟಿಕೆಟ್ ನೀಡಬೇಕಾಗಿತ್ತು, ಕಾರಣಾಂತರಗಳಿಂದ ಯಾಸಿರ್ ಪಠಾಣ್ ಅವರಿಗೆ ನೀಡಲಾಗಿತ್ತು. ಇವರ ತ್ಯಾಗವನ್ನು ಪಕ್ಷ ಮರೆಯುವುದಿಲ್ಲ. ಅವರಿಗೆ ಉತ್ತಮ ಸ್ಥಾನವನ್ನು ನೀಡುವುದಾಗಿ ಹಿಂದೆಯೂ ಹೇಳಿದ್ದೆವು, ಈಗಲೂ ಹಾಗೂ ಮುಂದಕ್ಕೂ ಹೇಳುತ್ತೇವೆ” ಎಂದರು.

ಖಾದ್ರಿ ಪ್ರಾಮಾಣಿಕ ವ್ಯಕ್ತಿ

“ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾದ ಖಾದ್ರಿ ಅವರು ಜಾತ್ಯಾತೀತ ತತ್ವಗಳಿಗೆ ಹಾಗೂ ಕಾಂಗ್ರೆಸ್‌ ಪಕ್ಷದ ನಿಲುವಿಗೆ ಬದ್ಧರಾಗಿದ್ದಾರೆ. ಸಚಿವರಾದ ಜಮೀರ್ ಅವರು, ಎಂಎಲ್ ಸಿ ನಜೀರ್ ಅಹ್ಮದ್ ಅವರು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್ ಅವರು ಹಾಗೂ ಇಸ್ಮಾಯಿಲ್ ತಮಟಗಾರ ಅವರೆಲ್ಲಾ ಸೇರಿ ಖಾದ್ರಿ ಅವರ ಮನವೊಲಿಸಿದ್ದಾರೆ. ಶನಿವಾರ (ಇಂದು) ಬೆಳಿಗ್ಗೆ ಮುಖ್ಯಮಂತ್ರಿಗಳ ಬಳಿಯೂ ಟಿಕೆಟ್ ಹಿಂಪಡೆಯುವ ವಿಚಾರವಾಗಿ ಚರ್ಚೆ ನಡೆಸಿದ್ದರು” ಎಂದು ಹೇಳಿದರು.

ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ

“ಭಾನುವಾರ (ನಾಳೆ) ಶಿಗ್ಗಾಂವಿ ಕ್ಷೇತ್ರದ ಮುಖಂಡರ ಬಳಿ ಚರ್ಚೆ ಮಾಡಲಾಗುವುದು. ಎಲ್ಲರೂ ಪಕ್ಷದ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತಾರೆ. ಖಾದ್ರಿ ಅವರ ತ್ಯಾಗವನ್ನು ಕಾಂಗ್ರೆಸ್ ಪಕ್ಷ ಮರೆಯುವುದಿಲ್ಲ, ಗುರುತಿಸುತ್ತದೆ” ಎಂದು ಪುನರುಚ್ಚರಿಸಿದರು.

“ಖಾದ್ರಿ ಅವರು ಜನತಾದಳದಿಂದ ಒಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿಂದೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು” ಎಂದರು

ಕಾರ್ಯಕರ್ತರ ಜೊತೆ ಮಾತುಕತೆ

ಖಾದ್ರಿ ಅವರು ಸಂದಾನಕ್ಕೆ ಈ ಹಿಂದೆ ಒಪ್ಪಿರಲಿಲ್ಲ ಎಂದು ಕೇಳಿದಾಗ, ” ಕ್ಷೇತ್ರದ ಎಲ್ಲಾ ಕಾರ್ಯಕರ್ತರ ಅಭಿಪ್ರಾಯ ತೆಗೆದುಕೊಳ್ಳಬೇಕಲ್ಲವೇ? ಈಗ ಯಾವುದೇ ಬಂಡಾಯವಿಲ್ಲ. ಅವರ ಅಭಿಮಾನಿಗಳ ಜೊತೆ ಮಾತನಾಡಬೇಕಿದೆ. ಅವರನ್ನೆಲ್ಲಾ ಬೆಂಗಳೂರಿಗೆ ಕರೆಸಿ ಮಾತನಾಡಲಾಗುವುದು. ಮೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಒಮ್ಮತದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ.” ಎಂದರು.

ಖಾದ್ರಿ ಅವರಿಗೆ ಯಾವ ಭರವಸೆಗಳನ್ನು ನೀಡಲಾಗಿದೆ ಎಂದು ಕೇಳಿದಾಗ, “ಖಾದ್ರಿ ಅವರು ಕ್ಷೇತ್ರದ ಮತದಾರರು. ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ, ಅವರ ಸಮ್ಮುಖದಲ್ಲಿ ಬಹಿರಂಗಗೊಳಿಸಲು ಆಗುವುದಿಲ್ಲ. ಅವರ ಗೌರವಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಸ್ಥಾನಮಾನ ನೀಡಲಾಗುವುದು” ಎಂದರು.

ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ

ನಂತರ ಮಾತನಾಡಿದ ಮಾಜಿ ಶಾಸಕ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪಿರ್ ಖಾದ್ರಿ ಅವರು, “ಈ ಬಾರಿ ಟಿಕೆಟ್ ನೀಡಿದರೆ ನಾನೇ ಗೆಲ್ಲುತ್ತೇನೆ, ಟಿಕೆಟ್ ನೀಡಿ ಎಂದು ಉಭಯ ನಾಯಕರ ಬಳಿಯೂ ನಾನು ಮತ್ತೊಮ್ಮೆ ಮನವಿ ಮಾಡಿದೆ. ಇದು ನಮ್ಮ ತೀರ್ಮಾನವಲ್ಲ, ಹೈಕಮಾಂಡ್ ತೀರ್ಮಾನ ಎಂದು ಹೇಳಿದರು. ನಾನು ಪಕ್ಷದ ತೀರ್ಮಾನವನ್ನು ಕ್ಷೇತ್ರದ ಕಾರ್ಯಕರ್ತರ ಬಳಿಗೆ ತೆಗೆದುಕೊಂಡು ಹೋಗುತ್ತೇನೆ. ಅವರ ಬಳಿ ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಿಗೆ ಸಿಎಂ ಹಾಗೂ ಡಿಸಿಎಂ ಅವರನ್ನು ಭಾನುವಾರ (ನಾಳೆ) ಭೇಟಿ ಮಾಡಿಸಲಾಗುವುದು. ನಿಮ್ಮ ಆದೇಶವನ್ನು ಪಾಲಿಸಲಾಗುವುದು” ಎಂದು ಹೇಳಿದರು.

“ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ನಾನು ಐದು ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದೇನೆ. ಪ್ರತಿ ಬಾರಿಯೂ ಅತ್ಯಂತ ಕಡಿಮೆ ಅಂತರಗಳ ಮತದಿಂದ ಸೋತಿದ್ದೇನೆ. ಒಂದು ಚುನಾವಣೆಯನ್ನು 787 ಮತಗಳ ಅಂತರದಿಂದ ಸೋತಿದ್ದೇನೆ” ಎಂದರು.

ಬಿಜೆಪಿ ಸೋಲಬೇಕು, ಕಾಂಗ್ರೆಸ್ ಗೆಲ್ಲಬೇಕು

“ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಮೂರು ಬಾರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಡಿಮೆ ಅಂತರದಿಂದ ಸೋತಿದ್ದೇನೆ. ಮೊದಲ ಬಾರಿಗೆ ಜನತಾದಳದಿಂದ ಸಿದ್ದರಾಮಯ್ಯ ಅವರು ನನಗೆ ಮೊದಲ ಬಾರಿಗೆ ಟಿಕೆಟ್ ನೀಡಿದ್ದರು. ಪ್ರಸ್ತುತ ನನಗೆ ವ್ಯಕ್ತಿಗಿಂತ, ಕಾಂಗ್ರೆಸ್ ಪಕ್ಷವೇ ಮುಖ್ಯ. ಕ್ಷೇತ್ರದಲ್ಲಿ ಬಿಜೆಪಿ ಸೋಲಬೇಕು, ಕಾಂಗ್ರೆಸ್ ಗೆಲ್ಲಬೇಕು” ಎಂದರು.

ಶನಿವಾರ (ಇಂದು) ಬೆಳಿಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ, ಖಾದ್ರಿ ನೀನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನಿನಗೆ ರಕ್ಷಣೆಯನ್ನು ಕೊಡುವುದು ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ. ಪಕ್ಷವನ್ನು ಗೆಲ್ಲಿಸುವ ಹೊಣೆ ಜಮೀರ್, ನಜೀರ್, ಹ್ಯಾರಿಸ್ ಅವರು ಸೇರಿದಂತೆ ಎಲ್ಲರ ಮೇಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು” ಎಂದರು.

ಶಿವಕುಮಾರ್ 4.5 ಕೋಟಿ ಅನುದಾನ ಕೊಡಿಸಿದ್ದರು

ನಾನು ಪರಂಪರೆಯಿಂದ ಬಂದವನು. ನುಡಿದಂತೆ ನಡೆಯುತ್ತೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ನಿಮ್ಮ ಕ್ಷೇತ್ರ ಜವಾಬ್ದಾರಿ ನನ್ನ ಮೇಲಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಹೇಳಿದ್ದರು. ಅದೇ ರೀತಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಸವಣೂರಿನ ಮೋತಿ ತಲಾಬ್ ಅಭಿವೃದ್ಧಿಗೆ 4.5 ಕೋಟಿ ಅನುದಾನ ಕೊಟ್ಟವರು ಶಿವಕುಮಾರ್ ಎನ್ನುವುದನ್ನು ಮರೆತಿಲ್ಲ” ಎಂದು ಹೇಳಿದರು.

Continue Reading

Mandya

ವಿರೋಧ ಪಕ್ಷಗಳು ಸಾವಿನಲ್ಲಿ ರಾಜಕೀಯ ಮಾಡೋದನ್ನು ಬಿಡಬೇಕು: ಎನ್‌.ಚಲುವರಾಯಸ್ವಾಮಿ

Published

on

ಬೆಂಗಳೂರು: ವಿರೋಧ ಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡೋದನ್ನೂ ಬಿಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ನಾಯಕರಿಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಳೆ(ಜೂ.17) ಪ್ರತಿಭಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಘಟನೆಯ ಬಗ್ಗೆ ದುಃಖ ಇದೆ. ಈ ಪ್ರಕರಣದಿಂದ ರಾಜ್ಯ ಸರ್ಕಾರಕ್ಕೆ ನೋವು ತಂದಿದೆ. ಎಲ್ಲಿ ತಪ್ಪಾಗಿದೆ ಎಂದು ಕ್ರಮ ಆಗಿದೆ. ಅಲ್ಲದೇ ಮೃತರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಎಲ್ಲಿ ಏನೇ ತೊಂದರೆಯಾದರೂ ಅದು ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಅಹಮದಾಬಾದ್‌ ವಿಮಾನ ಅಪಘಾತದ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ. ಉತ್ತರಪ್ರದೇಶದ ಕುಂಭಮೇಳದಲ್ಲಿ ಕಾಲ್ತುಳಿತವಾಗಿ ಸಾವಾಗಿರುವುದಕ್ಕೆ ಯಾರು ಜವಾಬ್ದಾರಿ ತೆಗೆದುಕೊಂಡಿದ್ದರು. ನಾವೂ ಈ ರಾಜ್ಯದಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡುತ್ತಿದ್ದೇವೆ. ಅದನ್ನು ವಿರೋಧ ಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಹೀಗೆಲ್ಲಾ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪಾಡಿಗೆ ಅವರು ಮಾಡಿಕೊಳ್ಳಲಿ ನಾವು ಅಡ್ಡಿಪಡಿಸುವುದಿಲ್ಲ ಎಂದಿದ್ದಾರೆ.

ನಾವೂ ಕಾಲ್ತುಳಿತ ಘಟನೆಯನ್ನು ಒಪ್ಪುವುದಿಲ್ಲ. ಮುಂದೆ ಹೀಗೆ ಆಗದಂತೆ ಏನು ಮಾಡಬೇಕೋ ಅದನ್ನು ಸರ್ಕಾರ ಮಾಡುತ್ತದೆ. ಹಲವು ಕಡೆ ಇಂತಹ ಘಟನೆ ನಡೆದಿದೆ. ನಟ ಡಾ.ರಾಜ್ ಕುಮಾರ್ ಸಾವಿನ ಸಮಯದಲ್ಲಿ ಕಾಲ್ತುಳಿತ ಆಗಿದ್ದಾಗ ಕುಮಾರಸ್ವಾಮಿ ಹೊಣೆ ಹೊತ್ತರಾ? ವಿಪಕ್ಷಗಳು ಸಾವಿನಲ್ಲೂ ರಾಜಕೀಯ ಮಾಡುತ್ತಾರೆಂದು ನನಗೆ ತಿಳಿದಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

 

Continue Reading

State

SSC ಯಿಂದ 14 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ಯಾರು ಅರ್ಹರು?

Published

on

SSC CGL Recruitment 2025 – ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಿಂದ ಭಾರತ ದೇಶಾದ್ಯಂತ ೧೪ ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.

ಇವು ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಾಗಿದ್ದು, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಇನ್ಸ್ಪೆಕ್ಟರ್, ಆಡಿಟರ್ ಅಕೌಂಟೆಂಟ್ ಸೇರಿದಂತೆ ಹಲವಾರು ಹುದ್ದೆಗಳನ್ನು ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ನೇಮಕಾತಿಯ ವಿವರ :
• ಒಟ್ಟು ಹುದ್ದೆಗಳ ಸಂಖ್ಯೆ – 14,582
• ಹುದ್ದೆಗಳ ವರ್ಗ – ಗ್ರೂಪ್ ಸಿ, ಗ್ರೂಪ್ ಬಿ

ಅರ್ಜಿ ಸಲ್ಲಿಸಲು ಯಾರು ಅರ್ಹರು?

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು. ಯಾವ ಹುದ್ದೆಗೆ ಯಾವ ಪದವಿ ಮುಗಿಸಿರಬೇಕು ಎಂಬ ಅರ್ಹತೆಗಳನ್ನು ತಿಳಿದುಕೊಳ್ಳಲು ಸ್ಟಾಪ್ ಸೆಲೆಕ್ಷನ್ ಕಮಿಷನ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ.

ಅದೇ ರೀತಿ ವಯೋಮಿತಿ ಅರ್ಹತೆ ನೋಡುವುದಾದರೆ ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು 27ರಿಂದ 32 ವರ್ಷದ ಒಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಒಟ್ಟು ಎರಡು ಹಂತದಲ್ಲಿ ಪರೀಕ್ಷೆ ಇರುತ್ತದೆ.

ಕರ್ನಾಟಕ ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು : ಬೆಳಗಾವಿ ಬೆಂಗಳೂರು ಹುಬ್ಬಳ್ಳಿ ಕಲಬುರಗಿ ಮೈಸೂರು ಶಿವಮೊಗ್ಗ ಮಂಗಳೂರು ಮತ್ತು ಉಡುಪಿ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸ್ಟಾಪ್ ಸೆಲೆಕ್ಷನ್ ಕಮಿಷನ ಅಧಿಕೃತ ಜಾಲತಾಣ www.ssc.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04 ಜುಲೈ 2025

Continue Reading

State

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ತುರ್ತು ಅಧಿವೇಶನ ಕರೆಯಲು ಪತ್ರ ಬರೆದ ಆರ್‌.ಅಶೋಕ್‌

Published

on

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ಪ್ರಕರಣಕದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸತ್ಯ ಮರೆಮಾಚಲು 3 ರೀತಿಯ ತನಿಖೆ

ಈ ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು 3 ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಆರೋಪ ಮಾಡಿದ್ದಾರೆ.

ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Continue Reading

Trending

error: Content is protected !!