Mandya
ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿ:ಟಿ.ಕೆ.ರಾಮಲಿಂಗಯ್ಯ ಅಭಿಮತ

ಮಂಡ್ಯ: ಕಾಂಗ್ರೆಸ್ ಪಕ್ಷದ ಆಧಾರ ಸ್ಥಂಭವಾಗಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನ ಲಭಿಸುವ ಅವಕಾಶ ಸಿಗಲಿ ಎಂದು ಮಂಡ್ಯ ನಗರಸಭೆ ಹಿರಿಯ ಸದಸ್ಯ ಟಿ.ಕೆ.ರಾಮಲಿಂಗಯ್ಯ ಅಭಿಪ್ರಾಯಪಟ್ಟರು.
ನಗರದ ಮಿಮ್ಸ್ ಆವರಣದಲ್ಲಿರುವ ಮಮತೆಯ ಮಡಿಲು ನಿತ್ಯ ಅನ್ನದಾಸೋಹ ಕೇಂದ್ರದಲ್ಲಿ ಡಿ. ಕೆ ಶಿವಕುಮಾರ್ ಅಭಿಮಾನಿಗಳ ಬಳಗ ಆಯೋಜಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುವ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಅವರ ಸಂಬಂಧಿಕರಿಗೆ ಬೆಳಗಿನ ಉಪಹಾರ ಹಾಗೂ ಗಂಜಿ ವಿತರಿಸುವ ಮೂಲಕ ಅವರ ಹುಟ್ಟುಹಬ್ಬ ಆಚರಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷವನ್ನು ಡಿಕೆಶಿ ಕಟ್ಟಿ ಬೆಳೆಸಿದ್ದಾರೆ. ಮುಂದಿನ ದಿನಗಳಲ್ಲಿ ಡಿಕೆಶಿ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ ಅವರಿಗೆ ಆಯಸ್ಸು,ಆರೋಗ್ಯ ಭಾಗ್ಯವನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ಮಂಡ್ಯ ಜಿಲ್ಲೆಯ ಜನತೆಯ ಪರವಾಗಿ ಪ್ರಾರ್ಥಿಸಿದರು.
ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಕಾರ್ತಿಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಸ್ವರ್ಣ ಸಂದ್ರದಲ್ಲಿರುವ ಪ್ರೇರಣ ಅಂಧರ ಶಾಲೆಯ ಮಕ್ಕಳಿಗೂ ಸಹ ಸಿಹಿ ಹಾಗೂ ಊಟ ವಿತರಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಲಕ್ಷ್ಮಿಕಾಂತ್, ಶ್ರೀಕಾಂತ್, ಮಧುಸೂದನ್, ಶ್ರೀನಿವಾಸ್, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದ ಮಂಗಲ ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದರು.
Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.
ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
Mandya
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.
ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ