Connect with us

Mysore

ಧರ್ಮಸ್ಥಳ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ಜನತೆಗೆ ಹೆಚ್ಚಿನ ಅನುಕೂಲವಾಗಿದೆ  : ಕ.ಸಾ.ಪ.ಅಧ್ಯಕ್ಷ ಮಧುಚಂದ್ರ 

Published

on

 

ಸಾಲಿಗ್ರಾಮ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ.ಮಧುಚಂದ್ರ ಹೇಳಿದರು.

ಅವರು ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಟಿಯನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರನ್ನು ಜಾಗೃತಿಗೊಳಿಸಿ, ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳುವ ಬಗ್ಗೆ ಅವರಿಗೆ ಎಲ್ಲಾ ರೀತಿಯ ನೆರವು ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕೆಲಸ ಮಾಡುತ್ತಿರುವ ಯೋಜನೆಯು ಅತ್ಯಂತ ಪವಿತ್ರವಾದ ಕಾರ್ಯವಾಗಿದೆ ಎಂದರು.

ವೈದ್ಯೆ ಡಾ.ದೇವಿಕಾ ಅವರು ಮಹಿಳೆ ಮತ್ತು ಆರೋಗ್ಯ ಹಾಗೂ ವಕೀಲೆ ಪೂರ್ಣಿಮಾ ಗುರುಶಾಂತಪ್ಪ ಅವರು ಮಹಿಳೆ ಮತ್ತು ಕಾನೂನು ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮಹಿಳೆಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಫಾತಿಮಾ ಉನ್ನಿಸ, ಯೋಜನೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ನಿರ್ದೇಶಕ ಹೆಚ್.ಎಲ್.ಮುರಳೀಧರ, ತಾಲ್ಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ಜನ ಜಾಗೃತಿ ವೇದಿಕೆ ಸದಸ್ಯರುಗಳಾದ ಎಸ್.ಬಿ.ಶೇಖರ್,  ಸಿ.ಕೆ.ಬಾಲಮನೋಹರ, ಶಕುಂತಲ, ಮೇಲ್ವಿಚಾರಕ ಧರಣಪ್ಪಗೌಡ, ಭವ್ಯ  ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

​ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಕೆ. ರಾಮಕೃಷ್ಣಯ್ಯ ಅಧಿಕಾರ ಸ್ವೀಕಾರ

Published

on

ಮೈಸೂರು: ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಲಲಿತ ಕಲೆಗಳ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಕೆ. ರಾಮಕೃಷ್ಣಯ್ಯ ಅವರು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು.

​ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನವರಾದ ಇವರು, ಬೆಂಗಳೂರು, ನೀನಾಸಂ ಕಲಾವಿದರರು. ಪ್ರದರ್ಶನ ಕಲಾ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ.ಡ್ರಾಮ ಪದವಿ, ಪಿಹೆಚ್.ಡಿ ಪದವಿಯನ್ನು ಪಡೆದು ಪ್ರಧ್ಯಾಪಕರಾಗಿ ವಿಶ್ವವಿದ್ಯಾಲಯದಲ್ಲಿ 25 ವರ್ಷಗಳ ಸುದೀರ್ಘ ಬೋಧನಾ ಅನುಭವ ಹೊಂದಿದ್ದಾರೆ. ಇವರ ಮಾರ್ಗದರ್ಶನದಲ್ಲಿ 16 ಸಂಶೋಧಕರು ಪಿಎಚ್.ಡಿ ಪದವಿ ಪಡೆದಿದ್ದು, ರಂಗಭೂಮಿ ಕುರಿತಾದ ಅನೇಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೇ ​ ನಟ ಮತ್ತು ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

​ನಾಲ್ಕು ನಾಟಕಗಳನ್ನು ರಚಿಸಿ ಪ್ರಕಟಿಸಿದ್ದಾರೆ. ​2011ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸ್ಟೇಟ್ ಫೆಲೋಶಿಪ್ ಹಾಗೂ 2017ರಲ್ಲಿ ನಾಟಕ ಅಕಾಡೆಮಿಯ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

​ದೆಹಲಿಯಲ್ಲಿ ನಡೆದ 8ನೇ ಥಿಯೇಟರ್ ಒಲಿಂಪಿಕ್ಸ್ (2018) ಮತ್ತು ಅಹಮದಾಬಾದ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತರಂಗ ಮಹೋತ್ಸವ 2024ರಲ್ಲಿ ಪಾಲ್ಗೊಂಡಿದ್ದಾರೆ.

ಆಡಳಿತಾತ್ಮಕ ದಕ್ಷತೆ:

ಬೆಂಗಳೂರು ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಂಯೋಜಕರಾಗಿ (Cultural Coordinator) 2017ರಿಂದ ಕಾರ್ಯನಿರ್ವಹಿಸುತ್ತಿದ್ದ ಇವರು, ಈ ಹಿಂದೆ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಆಗಿ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Continue Reading

Mysore

ಶುಕ್ರವಾರ ಸಂತೆ ಪುನರಾರಂಭಿಸಿ | APMC ಮಾರುಕಟ್ಟೆಯಲ್ಲಿ ಪ್ರಗತಿ ಪರಿಶೀಲನೆ : ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

Published

on

ವರದಿ: ಮಹದೇವಸ್ವಾಮಿ ಪಟೇಲ್

ನಂಜನಗೂಡು: ತಾಲೂಕಿನ ಎಪಿಎಂಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸಭೆ ನಡೆಸಿದರು.

ಇಂದು ಎಪಿಎಂಸಿ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ರೈತರುಗಳೊಂದಿಗೆ ಚರ್ಚಿಸಿದ ಅವರು, 2025 26ನೇ ಹಣಕಾಸು ಆಯವ್ಯಯದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಅನುದಾನ ಎಪಿಎಂಸಿ ಅಭಿವೃದ್ಧಿಗಾಗಿ ಬಂದಿದೆ. ಈ ಹಣದಲ್ಲಿ ಎಪಿಎಂಸಿ ಅಭಿವೃದ್ಧಿಯಾಗುವ ಜೊತೆಗೆ ರೈತರುಗಳಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡಲು ಚರ್ಚಿಸಿದ್ದೇವೆ.

ನಂಜನಗೂಡು ತಾಲೂಕು ವ್ಯಾಪ್ತಿಯಲ್ಲಿ ರೈತರಗಳ ಸಂಖ್ಯೆ ಹೆಚ್ಚಿದೆ. ತಾಲೂಕಿನಲ್ಲಿ ರೈತರಿಗೆ ಸಹಾಯವಾಗುವಂತಹ ಎಪಿಎಂಸಿಯಲ್ಲಿ ಮಾಸ್ ಲೈಟ್ ಗಳು, ಕ್ಲೀನಿಂಗ್, ವಿವಿಧ ಕೆಲಸಗಳನ್ನು ಮಾಡಬೇಕು. ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಲವು ಅಂಗಡಿ ಮಳಿಗೆಗಳನ್ನು ಬಾಡಿಗೆಗೆ ನೀಡಿಲ್ಲ. ಮಳಿಗೆಗಳನ್ನು ಅತಿ ಶೀಘ್ರದಲ್ಲಿ ಬಾಡಿಗೆ ನೀಡಲು ಕ್ರಮ ಕೈಗೊಳ್ಳಬೇಕು.

ಈ ಹಿಂದೆ ಶುಕ್ರವಾರ ಸಂತೆ ನಡಿತಿತ್ತು. ಇದರಿಂದ ನಂಜನಗೂಡು ಮಾತ್ರವಲ್ಲದೆ ಸುತ್ತಮುತ್ತಲಿನ ರೈತರುಗಳಿಗೆ, ವ್ಯವಸಾಯ ಉತ್ಪನ್ನ ಮಾರಾಟಗಾರರಿಗೆ ಸಹಾಯಾಗುತ್ತಿತ್ತು. ಆದರೆ ನಾನು ಕಾರಣಗಳಿಂದ ಸಂತೆ ನಡೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ಶುಕ್ರವಾರ ಸಂತೆಯನ್ನು ಪುನರ್ ಆರಂಭ ಮಾಡುವಂತೆ ಸಭೆಯಲ್ಲಿದ್ದ ಎಪಿಎಂಸಿ ಅಧಿಕಾರಿ ಮಹೇಶ್ ಅವರಿಗೆ ಖಡಕ್ ಸೂಚನೆ ನೀಡಿ ಇತರೆ ಅಭಿವೃದ್ಧಿ ಕಾರ್ಯಗಳ ಕುರಿತು ಸಲಹೆ ಸೂಚನೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮಾದಪ್ಪ, ಅಧಿಕಾರಿಗಳು ಇದ್ದರು.

Continue Reading

Mysore

ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನ

Published

on

ಮೈಸೂರು: ನಿಷೇಧಿತ ಮಾಧಕ ವಸ್ತು ಎಂಡಿಎಂಎ ಸಾಗಣೆ ಮತ್ತು ಮಾರಾಟ ಆರೋಪದ ಮೇರೆಗೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಗೌಸಿಯಾ ನಗರದ 9ನೇ ಕ್ರಾಸ್ ನಿವಾಸಿ ಜಿಯಾ ಉಲ್ಲಾ(29), ಸಿ ಬ್ಲಾಕ್ ನಿವಾಸಿ ಸುಹೇಲ್ ಪಾಷಾ(19), ಲಷ್ಕರ್ ಮೊಹಲ್ಲಾ ಪುಲಕೇಶಿ ನಗರದ ನಿವಾಸಿ ಜವೀದ್ ಅಹಮದ್(46) ಮತ್ತು ಬೆಂಗಳೂರಿನ ಪಾದರಾಯನಪುರ ನಿವಾಸಿ ನುಹೈದ್ ಖಾನ್ ಬಂಧಿತ ಆರೋಪಿಗಳು.

ಇವರಿಂದ 10,40,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಮತ್ತು 8 ಲಕ್ಷ ರೂ. ಮೌಲ್ಯದ ಇನ್ನೋವಾ ಕಾರು ವಶಪಡಿಸಿಕೊಳ್ಳಲಾಗಿದೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಶಬ್ಬೀರ್ ಹುಸೇನ್, ಪಿಎಸ್‌ಐ ಲೇಪಾಕ್ಷ ಕೆ., ಜೋತ್ಸಾö್ನ ರಾಜ್ ಆರ್., ರೇವಣ ಸಿದ್ದಪ್ಪ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Continue Reading

Trending

error: Content is protected !!