Connect with us

Mysore

ಗ್ರಾಮೀಣಾ ಭಾಗದ  ಮಕ್ಕಳು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ: ದೊಡ್ಡಸ್ವಾಮೇಗೌಡ ಮನವಿ 

Published

on

ಸಾಲಿಗ್ರಾಮ : ಸರ್ಕಾರವು ಗ್ರಾಮಾಂತರ ಭಾಗದ  ಮಕ್ಕಳಿಗೆ ಬಿಸಿಊಟ ಮತ್ತು ಉಚಿತ ಸಮವಸ್ತ್ರ ನೀಡಿ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ಕೊಳ್ಳಿ ಎಂದು ಮಕ್ಕಳಿಗೆ ಕೆಪಿಸಿಸಿ ಕಾರ್ಯ  ಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಮನವಿ ಮಾಡಿದರು.
ಸಾಲಿಗ್ರಾಮ ತಾಲೂಕಿನ ಸಾಲುಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾವಾರ್ಷಿಕೋತ್ಸವ ಮತ್ತು ಶಾರದ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸರ್ಕಾರಿ ಶಾಲೆಯಲ್ಲಿ ಓದಿದರೆ  ಸಾಲದು, ಓದಿ ಉನ್ನತ ಸ್ಥಾನಕ್ಕೆ ಹೋದಾಗ ತಾವು ಓದಿದ ಶಾಲೆಗಳನ್ನು ಮರೆಯದೇ ಶಾಲೆಗಳ ಅಭಿವೃದ್ದಿಗೆ ಕೊಡುಗೆ ನೀಡಿದಾಗ ಶಾಲೆಗಳು ಉನ್ನತವಾಗಿ ಅಭಿವೃದ್ದಿ ಹೊಂದುತ್ತವೆ ಎಂದರು.
ಶಾಲೆಯಲ್ಲಿ ಮಕ್ಕಳಿಗೆ  ಶಿಕ್ಷಣ  ನೀಡಿ ವರ್ಗಾವಣೆ ಗೊಂಡ ಶಿಕ್ಷಕರನ್ನು ಮರೆತು ಬಿಡುವ ಈ ದಿನಗಳಲ್ಲಿ ಅಂತಹ ಶಿಕ್ಷಕರನ್ನು ಶಾಲೆಗೆ ಕರೆಸಿ ಅವರನ್ನು ಗೌರವಿಸುವ ಕೆಲಸ ಮಾಡಿ ಅವರಿಗೆ ಈ ಕ್ಷೇತ್ರದಲ್ಲಿ ಗೌರವ ಮತ್ತು  ಜವಬ್ದಾರಿ ಹೆಚ್ಚುಸುವ ಕೆಲಸವನ್ನು ಶಾಲೆಯ ಆಡಳಿತ ಮಂಡಳಿ ಹಾಗೂ  ಗ್ರಾಮಸ್ಥರು   ಮಾಡಿರುವುದು ಶ್ಲಾಘನೀಯ ಎಂದರು
ಶಿಕ್ಷಕ. ಮಹೇಶ್ ಮಾತನಾಡಿ ಪೋಷಕರು ಮಕ್ಕಳ ಶಿಕ್ಷಣದಲ್ಲಿ  ಓದಿಗಷ್ಟೆ ಸೀಮಿತಮಾಡದೇ ಅವರನ್ನು ಇತರೆ ಚಟುವಟಿಕೆಗಳಾದ ಕ್ರೀಡೆ,ಸಾಂಸ್ಕೃತಿಕ ಕಲೆಗಳಿಗೆ ಶಿಕ್ಷಣದಷ್ಟೆ ಮಹತ್ವ ನೀಡಿದರೇ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದ್ದು ಸರ್ಕಾರಿ ಶಾಲೆಗಳ ಉಳಿವಿಗಾಗಿ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸುವಂತೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ  ಕಾಂಗ್ರೇಸ್ ಅಧ್ಯಕ್ಷ ಉದಯ್, ಗ್ರಾ.ಪಂ.ಸದಸ್ಯ ರಂಗಸ್ವಾಮಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹರೀಶ್ ,ಉಪಾಧ್ಯಕ್ಷೆ ಕಾಂತಮಣಿ, ಸದಸ್ಯರಾದ  ಸ್ವಾಮೀಗೌಡ, ಚಂದ್ರೇಗೌಡ,, ಮುಖ್ಯಶಿಕ್ಷಕಿ  ಜಯಂತಿ,  ಶಿಕ್ಷಕರಾದ .ಕಿಶೋರ್  ಸೇರಿದಂತೆ ಮತ್ತಿತರರು ಹಾಜರಿದ್ದರು.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ 

 

Continue Reading
Click to comment

Leave a Reply

Your email address will not be published. Required fields are marked *

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ*

Published

on

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಆಯ್ಕೆ

Published

on

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಯ ಮತದಾನ ನಿನ್ನೆ ಮುಗಿದಿದ್ದು, ಇಂದು ಫಲಿತಾಂಶ ಹೋರ ಬಿದ್ದಿದೆ.

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ದೀಪಕ್ ಅವರು 138 ಮತಗಳನ್ನು ಪಡೆದು ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರ ಉಪಾಧ್ಯಕ್ಷರಾಗಿ ರವಿ ಪಾಂಡವಪುರ, ಗ್ರಾಮೀಣ ಉಪಾಧ್ಯಕ್ಷರಾಗಿ ಹೆಚ್ ಎಸ್ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಗ್ರಾಮಾಂತರ ಕಾರ್ಯದರ್ಶಿ ದಾರಾ ಮಹೇಶ್, ನಗರ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ ಯಾದವ್, ಖಜಾಂಜಿಯಾಗಿ ಸುರೇಶ್ ಎಸ್ ಅವರುಗಳು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ.

ಎಂ.ಟಿ ಯೋಗೇಶ್ ಕುಮಾರ್,
ಕವಿತಾ ಎಸ್, ಅನಗೋಡು ನಟರಾಜು, ಡಿ.ಜೆ ರೋಜಾ ಮಹೇಶ್, ನಾಣಿ ಹೆಬ್ಬಾಳ್, ಜೆ.ರವಿಚಂದ್ರ ಹಂಚ್ಯ, ಹಂಪಾ ನಾಗರಾಜು, ಸೋಮಶೇಖರ್ ಚಿಕ್ಕಮರಳ್ಳಿ, ಜೆ ಶಿವಣ್ಣ, ಸತೀಶ್ ಆರ್ ದೇಪುರ, ದೊಡ್ಡನ ಹುಂಡಿ ರಾಜಣ್ಣ, ಹುಲ್ಲಹಳ್ಳಿ ಮೋಹನ, ಪುನೀತ್ ಎಸ್, ರಾಜು ಕಾರ್ಯ, ಸಿಎನ್ ವಿಜಯ್ ಇವರುಗಳು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

Continue Reading

Mysore

ಮುಡಾ ಅಕ್ರಮ ನಿವೇಶನ ಹಂಚಿಕೆ: ಏಕ ಸದಸ್ಯ ವಿಚಾರಣಾ ಆಯೋಗ ರಚನೆ

Published

on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ, ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು, ತಾಂತ್ರಿಕ, ಆರ್ಥಿಕ ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೀಡಲು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಹಕರಿಸಬೇಕು ಎಂದು ಸೂಚಿಸಲಾಗಿದೆ.

ಆಯೋಗವು ವಿಚಾರಣೆಗೆ ಬಯಸುವ ಎಲ್ಲ ಕಡತಗಳು ಮತ್ತು ದಾಖಲಾತಿಗಳನ್ನು ನಗರಾಭಿವೃದ್ಧಿ ಇಲಾಖೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಒದಗಿಸಬೇಕು. ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತನಿಖೆಗೆ ಆದೇಶಿಸಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಮುಡಾ ನಿವೇಶನ ಹಂಚಿಕೆಯ ವಿರುದ್ಧ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂಬ ಆಶಯದೊಂದಿಗೆ ರಾಜ್ಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಪಿ. ಎನ್. ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿ ತನಿಖೆಗೆ ವಹಿಸಿದೆ. ಪ್ರಕರಣದ ಕೂಲಂಕಷವಾದ ವಿಚಾರಣೆ ನಡೆದು, ಸತ್ಯಾಸತ್ಯತೆ ಹೊರಬರಲಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

Continue Reading

Trending

error: Content is protected !!