Connect with us

Kodagu

ಡಾ.ಕಲ್ಯಾಟಂಡ ಗಣಪತಿಗೆ ಸನ್ಮಾನ

Published

on

ನಾಪೋಕ್ಲು : ಸ್ಟಾರ್ ಆಫ್ ಮೈಸೂರು, ಮೈಸೂರು ಮಿತ್ರ ಸಂಪಾದಕರಾದ ಡಾ. ಕಲ್ಯಾಟಂಡ ಬಿ.ಗಣಪತಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮದ ಕಲ್ಯಾಟಂಡ ಐನ್ ಮನೆಯಲ್ಲಿ ಅವರನ್ನು ಕುಟುಂಬಸ್ಥರು ಸನ್ಮಾನಿಸಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಗಣಪತಿ ಕುಟುಂಬಗಳ ನಡುವೆ ಒಗ್ಗಟ್ಟು, ಸಾಮರಸ್ಯ ಅಗತ್ಯ. ಕಲ್ಯಾಟಂಡ ಕುಟುಂಬದಲ್ಲಿ ವಾರ್ಷಿಕವಾಗಿ 3-4 ಬಾರಿ ಕುಟುಂಬಸ್ಥರ ಸಮ್ಮುಖದಲ್ಲಿ ವಿವಿಧ ಕಾರ್ಯಕ್ರಮ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.
ಮನುಷ್ಯ ಸಮಾಜ ಜೀವಿ. ಕುಟುಂಬದ ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಕುಟುಂಬದ ಏಳಿಗೆ ಸಾಧ್ಯ. ಪ್ರತಿಯೊಬ್ಬರೂ ಶ್ರೀ ಕೃಷ್ಣ ಪರಮಾತ್ಮನ ಮನೋಭಾವನೆ ಹೊಂದಿರಬೇಕು. ಮತ್ತೊಬ್ಬರ ಕಷ್ಟವನ್ನು ಅರಿತು ಅವರಿಗೆ ಸಹಕಾರ ನೀಡುವ ಗುಣ ಬೆಳೆಸಿಕೊಳ್ಳಬೇಕು ಎಂದರು.

ಕುಟುಂಬದ ಬಗ್ಗೆ ಕಿವಿಮಾತು ಹೇಳಿದ ಅವರು ಕುಟುಂಬದ ಎಲ್ಲಾ ಸದಸ್ಯರು ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು. ಕುಟುಂಬದ ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉನ್ನತ ವಿದ್ಯಾಭ್ಯಾಸದ ಬಗ್ಗೆ ಒತ್ತುನೀಡುವ, ಉತ್ತೇಜಿಸುವ ಕೆಲಸ ಮಾಡಬೇಕು ಎಂದರು. ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ದೃಢ ನಿರ್ಧಾರದಿಂದ ಮುನ್ನಡೆದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಯಾಟಂಡ ಅಪ್ಪಚ್ಚು ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಕುಟುಂಬದ ಹಿರಿಯರಾದ ಪ್ರೊ. ಕಲ್ಯಾಟಂಡ ಪೂಣಚ್ಚ, ಕಲ್ಯಾಟಂಡ ಅಯ್ಯಪ್ಪ, ಕಲ್ಯಾಟಂಡ ಮುತ್ತಪ್ಪ ಮಾತನಾಡಿದರು.
ವೇದಿಕೆಯಲ್ಲಿ ಕಲ್ಯಾಟಂಡ ಕುಟುಂಬದ ಅಧ್ಯಕ್ಷ ಕಲ್ಯಾಟಂಡ ಚಿಣ್ಣಪ್ಪ,ಕಲ್ಯಾಟಂಡ ರ್ಯಾಲಿ ಗಣಪತಿ,ಕಲ್ಯಾಟಂಡ ಶಾರದ ಅಪ್ಪಣ್ಣ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿಕಲ್ಯಾಟಂಡ ಜಾನ್ಸಿ ಗಣಪತಿ ಪ್ರಾರ್ಥಿಸಿದರು.ಕಲ್ಯಾಟಂಡ ತೇಜಸ್ವಿನಿ ನಿರೂಪಿಸಿದರು. ಪ್ರೊ. ಕಲ್ಯಾಟಂಡ ಪೂಣಚ್ಚ ಸ್ವಾಗತಿಸಿ,ಕಲ್ಯಾಟಂಡ ರಮೇಶ್ ಚಂಗಪ್ಪ ವಂದಿಸಿದರು.

ವರದಿ :ಝಕರಿಯ ನಾಪೋಕ್ಲು

 

Continue Reading
Click to comment

Leave a Reply

Your email address will not be published. Required fields are marked *

Kodagu

ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Published

on

ಮಡಿಕೇರಿ : ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು.


ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.


ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ‌ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು
ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.


ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

Published

on

ಮಡಿಕೇರಿ ಜು.20(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 55.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 36.86 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1404.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 674.02 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.82 ಮಿ.ಮೀ. ಕಳೆದ ವರ್ಷ ಇದೇ ದಿನ 32.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2262.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1233.78 ಮಿ.ಮೀ. ಮಳೆಯಾಗಿತ್ತು.


ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1559.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 499.36 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 50.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1487.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 505.98 ಮಿ.ಮೀ. ಮಳೆಯಾಗಿತ್ತು.


ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 96.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 86.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1576.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 655.31 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1031.5 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 475.65 ಮಿ.ಮೀ. ಮಳೆಯಾಗಿತ್ತು.


ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 59.60, ನಾಪೋಕ್ಲು 58.20, ಸಂಪಾಜೆ 61.50, ಭಾಗಮಂಡಲ 84, ವಿರಾಜಪೇಟೆ 31.20, ಅಮ್ಮತ್ತಿ 31.50, ಹುದಿಕೇರಿ 58.60, ಶ್ರೀಮಂಗಲ 95, ಪೊನ್ನಂಪೇಟೆ 24, ಬಾಳೆಲೆ 25, ಸೋಮವಾರಪೇಟೆ ಕಸಬಾ 82, ಶನಿವಾರಸಂತೆ 70, ಶಾಂತಳ್ಳಿ 184, ಕೊಡ್ಲಿಪೇಟೆ 50.20, ಕುಶಾಲನಗರ 19.80, ಸುಂಟಿಕೊಪ್ಪ 51 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-07-2024) ವರದಿ


*************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.75 ಅಡಿಗಳು. ಕಳೆದ ವರ್ಷ ಇದೇ ದಿನ 2849.60 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 33.40 ಮಿ.ಮೀ., ಕಳೆದ ವರ್ಷ ಇದೇ ದಿನ 23.60 ಮಿ.ಮೀ., ಇಂದಿನ ನೀರಿನ ಒಳಹರಿವು 16560 ಕ್ಯುಸೆಕ್, ಕಳೆದ ವರ್ಷ ಇದೇ ದಿನ 5748 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 17291 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

Continue Reading

Kodagu

ವಿರಾಜಪೇಟೆಯಲ್ಲಿ ಭೀಕರವಾಗಿ ನಡೆದ ಮಹಿಳೆ ಹತ್ಯೆ

Published

on

ಗಂಡನಿಂದ ಹೆಂಡತಿಗೆ ಗುಂಡು ಹೊಡೆದು ಹತ್ಯೆ
ಶಿಲ್ಪ (40)ಮೃತಪಟ್ಟ ದುರ್ದೈವಿ


ನಾಯಕಂಡ ಬೋಪಣ್ಣ (45)ಹತ್ಯೆ ಅರೋಪಿ
ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾದ ಹತ್ಯೆ ಆರೋಪಿ ನಾಯಕಂಡ ಬೋಪಣ್ಣ
ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದ ಘಟನೆ


ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

Continue Reading

Trending

error: Content is protected !!