Connect with us

Mandya

ಡಿ.17ಕ್ಕೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದಲ್ಲಿ ರಾಷ್ಟ್ರಪತಿ ಭಾಗಿ : ಡಾ. ಕುಮಾರ

Published

on

ಮಂಡ್ಯ : ಮಳವಳ್ಳಿಯಲ್ಲಿ ಹಮ್ಮಿಕೊಂಡಿರುವ ಆದಿ ಜಗದ್ಗರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಡಿ.17 ರಂದು ಸನ್ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನ್ಯ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರಪತಿಗಳ ಕರ್ತವ್ಯದಲ್ಲಿ ಲೋಪ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಅವರು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಸ್ತೆಗಳ ಸ್ವಚ್ಛತೆ ಮಾಡಬೇಕು. ಆಂಬ್ಯುಲೆನ್ಸ್ ಹಾಗೂ ತಜ್ಞ ವೈದ್ಯರ ಸೇವೆ ಒದಗಿಸಬೇಕು ಎಂದು ಹೇಳಿದರು.

ಹೆಲಿಪ್ಯಾಡ್ ಸುತ್ತಾ ಬ್ಯಾರಿಕೇಡ್ ಹಾಕಬೇಕು, ಗ್ರೀನ್ ರೂಮ್ ನಿರ್ಮಾಣ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ಅಡಚಣೆ ಆಗದಂತೆ ಚೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಧಳದಲ್ಲಿ ಹಾಗೂ ಪ್ರವಾಸಿ ಮಂದಿರದಲ್ಲಿ ಇಂಟರ್ನೆಟ್ ಸಂಪರ್ಕ ಹಾಗೂ ಕಂಪ್ಯೂಟರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಸ್ಥಳಗಳಲ್ಲಿ ಅಗ್ನಿ ಶಾಮಕ ದಳದ ವಾಹನ ನಿಯೋಜಿಸಬೇಕು. ರಾಷ್ಟ್ರಪತಿಗಳ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಲೋಪ ದೋಷಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪ್ರಮುಖ ಇಲಾಖೆಗಳಿಂದ ಸ್ಟಾಲ್ ಗಳ ನಿರ್ಮಾಣ ಮಾಡುವಂತೆ ಹಾಗೂ ಅಲ್ಲಿ ಅಗತ್ಯವಾಗಿ ಬೇಕಾಗಿರುವ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಫೆ.06 ರಂದು ಬೀರೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ : ಜಿಲ್ಲಾಧಿಕಾರಿಯಿಂದ ಪರಿಶೀಲನೆ

Published

on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 6ರಂದು ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಶ್ರೀ ಬೀರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

ಮುಖ್ಯಮಂತ್ರಿಗಳ ಕಾರ್ಯಕ್ರಮವು ಸುಗಮವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಹಾಗೂ ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.

ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಂಡ್ಯ ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಬೃಹತ್ ಕಾಲ್ನಡಿಗೆ ಜಾಥಾಗೆ ಜಿಲ್ಲಾಧಿಕಾರಿ ಚಾಲನೆ

Published

on

ಮಂಡ್ಯ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು.

ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

Continue Reading

Mandya

ಸರ್ಕಾರಿ ಶಾಲೆಗಳು ಉಳಿಸಲು ಎಲ್ಲರೂ ಮುಂದಾಗಬೇಕು: ಪ್ರಸನ್ನ

Published

on

ಮದ್ದೂರು:  ಸರ್ಕಾರಿ ಶಾಲೆಗಳು ಉಳಿಸಲು ನಿಟ್ಟಿನಲ್ಲಿ ಸರ್ಕಾರದ ಜತೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮುಂದಾಬೇಕೆಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಸನ್ನ ಮನವಿ ಮಾಡಿದರು.

ತಾಲೂಕಿನ ಆತಗೂರು ಹೋಬಳಿ ಹೊಸಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ವಂತ ಹಣದಲ್ಲಿ ಟ್ರಾಕ್ ಸೂಟ್ ವಿತರಿಸಿದ ಮಾತನಾಡಿದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಓದುವುದರಿಂದ ಪಾಲಕರಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಉಳಿಯಬೇಕು ಎಂಬ ಉದ್ದೇಶದಿಂದ ನಮ್ಮ ಊರಿನ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಿಗೆ ಕಡಿಮೆ ಇಲ್ಲಾದಂತೆ ಇರಬೇಕು ಎಂಬ ಉದ್ದೇಸದಿಂದ ಮಕ್ಕಳಿಗೆ ಟ್ರಾಕ್ ಸೀಟ್ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ರಮೇಶ್ ಮಾತನಾಡಿ, ನಾವು ಮುಂದಿನ ದಿನಗಳಲ್ಲಿ ಶಾಲೆಗೆ ದಾಖಲಾತಿ ಪ್ರಮಾಣ ಹೆಚ್ಚಾಗಬೇಕು ಎಂದರೆ ನಾವು ಸಹ ಮಕ್ಕಳಿಗೆ ಸರ್ಕಾರ ನೀಡುವ ಸಮವಸ್ತ್ರ ಜತೆಗೆ ಟ್ರಾಕ್ ಸೂಟ್ ನೀಡಿದರೆ ಚೆನ್ನಾಗಿರುತ್ತಾದೆ ಎಂಬ ಉದ್ದೇಶದಿಂದ ಎಸ್‌ಡಿಎಂಸಿಯವರಿಗೆ ತಿಳಿಸಿದಾಗ ಅಧ್ಯಕ್ಷರು ಸಮವಸ್ತ್ರ ನೀಡಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಓದಿನ ಕಡೆ ಗಮನ ಹರಿಸಬೇಕು ಎಂದು ಹೇಳಿದರು.

ಶಿಕ್ಷಕ ರಾಮದಾಸ್, ಅಡುಗೆ ಸಿಬಂದಿ ಸೌಮ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Trending

error: Content is protected !!