Connect with us

Mandya

ಬಿತ್ತನೆ ಬೀಜ ವಿತರಣೆಯಲ್ಲಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ.ಕುಮಾರ

Published

on

ಮಂಡ್ಯ : ಮುಂಗಾರು ಹಂಗಾಮ ಪ್ರಾರಂಭವಾಗಿದ್ದು, ರೈತರ ಕೃಷಿ ಚಟುವಟಿಕೆಗಳು ಚುರುಕಾಗಿರುತ್ತದೆ. ರೈತರಿಗೆ ತೊಂದರೆಯಾಗದಂತೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಸಸ್ಯ ಸಂರಕ್ಷಣಾ ಔಷಧಿ ದೊರಕುವಂತೆ ವ್ಯವಸ್ಥೆ ಯಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಇಂದು ಕೃಷಿ ಪರಿಕರಗಳ ಉಸ್ತುವಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು , ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದ್ದು, ಸುಮಾರು 60000 ಹೆಕ್ಟೇರ್ ನಲ್ಲಿ ಬಿತ್ತನೆಯಾಗಲಿದೆ ಎಂದರು.

ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿ ರೈತ ಸಂಪರ್ಕ ಕೇಂದ್ರ‌, ಪಿ.ಎ.ಸಿ.ಎಸ್ ಹಾಗೂ ರೈತ ಉತ್ಪನ್ನ ಸಂಸ್ಥೆಗಳು ಪ್ರತಿ ದಿನ ಬೆಳಿಗ್ಗೆ 8.30 ಗಂಟೆಗೆ ಕೇಂದ್ರ ಗಳನ್ನು ತೆರೆಯಬೇಕು ರೈತರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದರು.

ಪ್ರತಿ ದಿನ ಲಭ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ವಿವರವನ್ನು ಅನಾವರಣ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ದಾಸ್ತಾನು ಬುಲೆಟನ್ ಅನ್ನು ಬಿಡುಗಡೆ ಮಾಡಬೇಕು ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ತೊಂದರೆಯಿಲ್ಲ ಎಂದು ಮನವರಿಕೆಯಾಗುತ್ತದೆ ಎಂದರು.

ಕಳಪೆ ಗುಣಮಟ್ಟದ ಬಿತ್ತನೆ ಬೀಜ ಸೇರಿದಂತೆ ಯಾವುದೇ ಕೃಷಿ ಪರಿಕರ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಣ್ಣು ಪರೀಕ್ಷಾ ವರದಿಯನ್ನು ಆದರಿಸಿ ಬೆಳೆಗಳನ್ನು ಬೆಳೆಯುವ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಹಾಗೂ ಕೃಷಿ ತಜ್ಞರ ಜೊತೆ ಸಂವಾದಗಳನ್ನು ನಡೆಸಬೇಕು.ಯುರಿಯಾ ಬಳಕೆಯನ್ನು ತಗ್ಗಿಸಲು, ಯುರಿಯಾದ ಪರ್ಯಾಯವಾಗಿ ಜೈವಿಕ, ಹಸಿರೆಲೆ, ಸಾವಯವ ಗೊಬ್ಬರದ ಬಳಕೆಯನ್ನು ಉತ್ತೇಜಿಸಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ಅಶೋಕ್ ಅವರು ಮಳೆ, ಬಿತ್ತನೆಯ ಪ್ರಗತಿ, ರಸಗೊಬ್ಬರ, ಭತ್ತದ ಬೆಳೆಯ ಸರಾಸರಿ ಇಳುವರಿ, ಮಾರಾಟ ಮಳಿಗೆಗಳ ವಿವರ ನೀಡಿದರು.

ಸಭೆಯಲ್ಲಿ ಕೃಷಿ ಅಧಿಕಾರಿಗಳಾದ ಹರ್ಷ, ಮುನೇಗೌಡ, ಡಾ.ಭಾನುಪ್ರಕಾಶ್ ಉಪಸ್ಥಿತರಿದ್ದರು.

Continue Reading

Mandya

 ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ

Published

on

ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು

ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.

ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.

Continue Reading

Mandya

ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ

Published

on

ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.

ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.

Continue Reading

Mandya

ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

Published

on

ಮದ್ದೂರು:  ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.


ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.

ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.

ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.

ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.

Continue Reading

Trending

error: Content is protected !!