Mysore
ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್
ಮೈಸೂರು: ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.
Mysore
ಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಪ್ರಯೋಗಾಲಯ ಇದ್ದ ಬಗ್ಗೆ ರಾಷ್ಟಿçÃಯ ಮಾದಕ ವಸ್ತು ನಿಯಂತ್ರಣಾ ದಳ(ಎನ್‌ಸಿಬಿ) ಖಚಿತ ಪಡಿಸಿದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, 14 ತಂಡಗಳನ್ನು ರಚಿಸಿಕೊಂಡು ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಎಸಿಪಿ ರವಿಪ್ರಸಾದ್ ಉಸ್ತುವಾರಿಯಲ್ಲಿ ಇನ್ಸ್‌ಪೆಕ್ಟರ್ ಹಾಗೂ ಸಬ್‌ಇನ್ಸ್‌ಪೆಕ್ಟರ್ ಗಳನ್ನು ಒಳಗೊಂಡ 14 ತಂಡಗಳನ್ನು ರಚಿಸಲಾಗಿದೆ. ಸದರಿ ತಂಡಗಳು ಈಗಾಗಲೇ ಮೂರು ದಿನಗಳಿಂದಲೂ ಕೈಗಾರಿಕಾ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ರಸಾಯನಿಕ ಪದಾರ್ಥಗಳ ಆಧಾರಿತ ಕೈಗಾರಿಕೆಗಳು, ಉತ್ಪಾದನಾ ಘಟಕಗಳು, ಕೈಗಾರಿಕಾ ಶೆಡ್‌ಗಳನ್ನು ಗುರಿಯಾಗಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಹೆಬ್ಬಾಳು, ಹೂಟಗಳ್ಳಿ, ಕೂರ್ಗಳ್ಳಿ, ಮೇಟಗಳ್ಳಿ, ಬನ್ನಿಮಂಟಪ, ಹಿನಕಲ್ ಕೈಗಾರಿಕಾ ಪ್ರದೇಶಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದಾರೆ. ಮೈಸೂರು ನಗರ, ಮೈಸೂರು ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ವ್ಯಾಪ್ತಿಯ 250ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ತಪಾಸಣೆ ನಡೆಸಲಾಗಿದೆ.

ಕಳೆದ ವರ್ಷ ಜುಲೈ ತಿಂಗಳಲ್ಲಿ ನಗರದ ರಿಂಗ್ ರಸ್ತೆಯ ಸಿದ್ದಿಕಿ ನಗರ ಸಮೀಪ ಮುಂಬೈ ಪೊಲೀಸರ ವಿಶೇಷ ತಂಡ ದಾಳಿ ನಡೆಸಿ ಎಂಡಿಎಂಎ ಮಾದಕ ವಸ್ತು ತಯಾರಿಕಾ ಘಟಕವನ್ನು ಪತ್ತೆ ಹಚ್ಚಿದ್ದರು. ಇತ್ತೀಚೆಗೆ ನವದೆಹಲಿಯ ಎನ್‌ಸಿಬಿ ತಂಡದವರು ಹೆಬ್ಬಾಳು ಕೈಗಾರಿಕಾ ಪ್ರದೇಶದ ಪಿನಾಯಿಲ್ ತಯಾರಿಕಾ ಘಟಕದಲ್ಲಿ ಡ್ರಗ್ಸ್ ಪ್ರಯೋಗಾಲಯ ಇರುವುದನ್ನು ಕಂಡು ಹಿಡಿದಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
Mysore
ಕಾಂಗ್ರೆಸ್ ಅಹಾರೋತ್ರಿ ಧರಣಿ ಅಂತ್ಯ
ಮೈಸೂರು: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸೋಮವಾರ ಬೆಳಗ್ಗೆ ಅಂತ್ಯಗೊಂಡಿತು.
ಎಐಸಿಸಿ ಸೂಚನೆ ಹಿನ್ನೆಲೆಯಲ್ಲಿ ವಿವಿಧ ಹಂತದ ಹೋರಾಟ ರೂಪಿಸಿದ್ದು, ಮೈಸೂರಿನ ಪುರಭವನ ಆವರಣದಲ್ಲಿ ಸೋಮವಾರ ಅಹೋರಾತ್ರಿ ಸತ್ಯಗ್ರಹ ಸಂಘಟಿಸಲಾಗಿತ್ತು. ಕೆಪಿಸಿಸಿ ಉಪಾಧ್ಯಕ್ಷ, ಮೈಸೂರು ಉಸ್ತುವಾರಿ ವಿ.ಎಸ್.ಉಗ್ರಪ್ಪ ಅವರ ನೇತೃತ್ವದಲ್ಲಿ ರಾತ್ರಿಪೂರ್ತಿ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಶಾಸಕರು ಪಾಲ್ಗೊಂಡರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟವನ್ನು ಅಂತ್ಯಗೊಳಿಸಲಾಯಿತು.
ಜಾನಪದ ಕಥೆ, ಕಾರ್ಯಕರ್ತರ ಗಾಯನ: ಪ್ರತಿಭಟನೆಯಲ್ಲಿ ತೊಡಗಿದ್ದವರು ನಿದ್ದೆಗೆ ಜಾರದಂತೆ ರಾತ್ರಿ ಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಹಿರಿಯ ರಂಗಕರ್ಮಿ ಎಚ್.ಜನಾರ್ದನ್ (ಜನ್ನಿ) ತಂಡದವರು ಕ್ರಾಂತಿಗೀತೆಗಳನ್ನು ಹಾಡಿದರು.
ಜಾನಪದ ಗಾಯಕ ಮೈಸೂರು ಗುರುರಾಜ್ ಅವರು ಇಡೀ ರಾತ್ರಿ ಮಾದಪ್ಪ, ಮಂಟೇಸ್ವಾಮಿ ಕಥಪ್ರಸಂಗ ಹಾಗೂ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಗಾಯನದಲ್ಲಿ ಆಸಕ್ತಿ ಇದ್ದ ಕಾಂಗ್ರೆಸ್ ಮುಖಂಡರೂ ವಿವಿಧ ಗೀತೆಗಳನ್ನು ಹಾಡಿ ಗಮನ ಸೆಳೆದರು.
ಬೆಳಗ್ಗೆ 5 ಗಂಟೆಗೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ ಬಿ.ಆರ್. ಅಂಬೇಡ್ಕರ್ ಸಾಕ್ಷö್ಯಚಿತ್ರಗಳನ್ನು ವೀಕ್ಷಿಸಿದರು. ರಾಷ್ಟçಗೀತೆ ಹಾಡಲಾಯಿತು. ಕೊನೆಯದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಹೋರಾಟ ಯಶಸ್ವಿಗೊಂಡಿತು.
ಅಹೋರಾತ್ರಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮುಖಂಡರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನಿದ್ದೆಗೆ ಜಾರದಂತೆ ಟೀ, ಕಾಫಿ ವಿತರಿಸಲಾಗುತ್ತಿತ್ತು. ಪಕ್ಷದ ಸೂಚನೆ ಹಿನ್ನೆಲೆಯಲ್ಲಿ ಎಲ್ಲ ಹಂತದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಮಹಿಳೆಯರು ಮುಖಂಡರು ಹಾಜರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಹೆಸರು ಬದಲಾವಣೆ ಮಾಡಿದೆ. ದೇಶದ ಜನರ ದುಡಿಯುವ ಹಕ್ಕನ್ನ ಕಿತ್ತುಕೊಂಡಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ನರೇಗಾದಿಂದ 15 ಕೋಟಿ ಜನ ಉದ್ಯೋಗ ಪಡೆಯುತ್ತಿದ್ದರು. ಕೋವಿಡ್ ವೇಳೆ ನರೇಗಾದಿಂದ ಜನರು ಜೀವನ ಸಾಗಿಸಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಲಕ್ಷಾಂತರ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ನೀಡಿ, ಜೀವನಕ್ಕೆ ಆಧಾರವಾಗಿದ್ದ ಮನರೇಗಾ ಯೋಜನೆಯನ್ನು ಬದಲಾವಣೆ ಮಾಡಲಾಗಿದೆ. ಕಾಯ್ದೆ ಮರುಸ್ಥಾಪನೆಗೆ ಆಗ್ರಹಿಸಿ ನಮ್ಮ ಹೋರಾಟ ಮುಂದುವರಿಯಲಿದೆ. ಬಡ ಜನರ ಉದ್ಯೋಗದ ಹಕ್ಕು ಕಸಿಯುವ ಹೊಸ ಕಾಯಿದೆಯನ್ನು ಹಿಂಪಡೆಯಬೇಕು ಎಂದರು.
ಈ ಹಿಂದೆ ಕೇಂದ್ರ ಸರ್ಕಾರವೇ ಮನರೇಗಾಕ್ಕೆ ಹಣ ಕೊಡುತ್ತಿತ್ತು. ಹೊಸ ಕಾಯ್ದೆಯಂತೆ ಈಗ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40 ಕೊಡಬೇಕಿದೆ. ಕೇವಲ ಹೆಸರನ್ನು ಮಾತ್ರ ಬದಲಾವಣೆ ಮಾಡಿದ್ದಾರೆ. ಇದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಯಥಾವತ್ತಾಗಿ ಮನ್‌ರೇಗಾ ಯೋಜನೆ ಜಾರಿ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.
ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿದೆ. ಗ್ರಾಮೀಣ ಬಡವರ ಬದುಕಿಗೆ ಆಸರೆಯಾಗಿರುವ ಈ ಯೋಜನೆಯನ್ನು ಮರುಜೀವಂತಗೊಳಿಸಬೇಕು. ಮನರೇಗಾ ಮರಳಿ ತರೋಣ ಜನರ ಉದ್ಯೋಗದ ಹಕ್ಕನ್ನು ಉಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಣ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಮಾಜಿ ಶಾಸಕರಾದ ಎಚ್.ಪಿ. ಮಂಜುನಾಥ್, ಜಿ.ಎನ್.ನಂಜುಂಡಸ್ವಾಮಿ, ಎಂ.ಕೆ. ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಬಿ.ಎಲ್.ಭೈರಪ್ಪ, ಕೆ.ವಿ. ಮಲ್ಲೇಶ್, ಭಾಸ್ಕರ್ ಎಲ್.ಗೌಡ, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ಎಂ.ಶಿವಣ್ಣ, ರವಿ ಮಂಚೇಗೌಡನಕೊಪ್ಪಲು, ಈಶ್ವರ್ ಚಕ್ಕಡಿ, ಕೆ.ಮಹೇಶ್, ಹುಣಸೂರು ಬಸವಣ್ಣ ಮುಂತಾದವರು ಭಾಗವಹಿಸಿದ್ದರು.
Mysore
ಕಾಡಿನ ಹಸಿರೆ ನಾಡಿನ ಉಸಿರು: ಲಕ್ಷ್ಮೀ ಪತಿ ಬಾಲಾಜಿ
ಮೈಸೂರು: ನಗರದ ಎಂ ಜಿ ರಸ್ತೆಯಲ್ಲಿರುವ ಜೆಎಸ್ಎಸ್ ಸಂಸ್ಥೆಯವರ ಸಾಹುಕಾರ್ ಸಿದ್ದಲಿಂಗಯ್ಯನವರ ವೇದ ಶಾಸ್ತ್ರ ಜ್ಯೋತಿಷ್ಯ ಪಾಠಶಾಲೆಯ ವಿದ್ಯಾರ್ಥಿ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಪರಿಸರ ಜಾಗೃತಿ, ಸೇವಾ ಕಾರ್ಯಕ್ರಮದಲ್ಲಿ ಮಾವುತ ಚಲನಚಿತ್ರದ ನಾಯಕ ನಟ ಲಕ್ಷ್ಮೀ ಪತಿ ಬಾಲಾಜಿ ಹಾಗೂ ಅವರ ತಂಡ ಭಾಗವಹಿಸಿ ವಿದ್ಯಾರ್ಥಿಗಳಿಗೆ ಡ್ರೈ ಫ್ರೂಟ್ಸ್, ಹಣ್ಣು ಹಂಪಲು ವಿತರಿಸಿ ಪರಿಸರ ಜಾಗೃತಿ ಮೂಡಿಸಿದರು.
ನಂತರ ಮಾತನಾಡಿದ ನಟ ಲಕ್ಷ್ಮೀ ಪತಿ ಬಾಲಾಜಿ, ಕಾಡಿನ ಹಸಿರೆ ನಾಡಿನ ಉಸಿರು ಇತ್ತೀಚಿನ ವರ್ಷಗಳಲ್ಲಿ ಕಾಡುಗಳನ್ನು ಕಡಿದು ರೆಸಾರ್ಟ್ ಇನ್ನಿತರ ಚಟುವಟಿಕೆಯಿಂದ ಅರಣ್ಯ ಸಂಪತ್ತು ನಾಶವಾಗುತ್ತಿದ್ದು. ಕಾಡನ್ನು ರಕ್ಷಿಸುವುದು ಪ್ರತಿ ಒಬ್ಬ ಪ್ರಜೆಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಗೂ ಕುಟುಂಬದವರ ಜನ್ಮದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ಸಸಿಗಳನ್ನು ನೆಡುವು ಮೂಲಕ ಪರಿಸರವನ್ನು ಅಚ್ಚು ಹಸಿರಾಗಿರುವಂತೆ ನೋಡಿಕೊಳ್ಳುವ ಜವಾಬ್ದಾರಿ ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ವಿದ್ಯೆಯೆಂಬುದು ಬದುಕಿನ ಬಹುದೊಡ್ಡ ಆಸ್ತಿ ಪ್ರತಿಯೊಬ್ಬ ವಿದ್ಯಾರ್ಥಿಯು ಓದಿನ ಸಮಯದಲ್ಲಿ ಚೆನ್ನಾಗಿ ಓದಿ ವಿದ್ಯಾವಂತರಾಗಿ ತಂದೆ ತಾಯಿಗೆ ಕೀರ್ತಿ ತರಬೇಕು. ಹಾಗೆಯೇ ಪರಿಸರದ ಬಗ್ಗೆ ತಿಳಿದು ಗಿಡ ಮರಗಳನ್ನು ಬೆಳೆಸಿ ಪೋಷಿಸುವ ಜೊತೆಯಲ್ಲಿ ಅದರ ರಕ್ಷಣೆಗೆ ಇಂದಿನಿಂದಲೇ ಕಟಿಬದ್ಧರಾಗಿರಬೇಕೆಂದು ಹೇಳುವ ಮೂಲಕ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಈ ಸಂದರ್ಭದಲ್ಲಿ ನಾಯಕ ನಟ ಲಕ್ಷ್ಮೀ ಪತಿ ಬಾಲಾಜಿ, ನಾಯಕಿ ನಟಿ ಶಿಲ್ಪ ಶ್ರೀ, ಮೈಸೂರು ನಗರ ಜೆ.ಡಿ.ಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ, ಸಿಂಚನಗೌಡ (ಮಂಗಳಮುಖಿ), ವಿದ್ಯಾ ದಿವ್ಯಶ್ರೀ, ಎಂ ಎಂ ಗ್ರೂಪ್ಸ್ ನ ಮಹಾನ್ ಶ್ರೇಯಸ್, ಮಲ್ಲಿಕಾರ್ಜುನ ಸ್ವಾಮಿ, ಲಿಖಿತ್, ಉಮೇಶ್, ಅಭಿಲಾಶ್ ಸಿಂಹ, ಛಾಯ,ಗಾಯಕ ಯಶವಂತ್ ಕುಮಾರ್ , ಬಿಜೆಪಿ ಮುಖಂಡ ಪುರುಷೋತ್ತಮ್,ರಾಜೇಶ್ ಕುಮಾರ್, ಮಹೇಶ್, ಶ್ರೀಧರ್ ಇನ್ನಿತರರು ಹಾಜರಿದ್ದರು.
-
Cinema21 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Mandya6 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Hassan2 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan2 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
State4 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
National4 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
Hassan24 hours agoವಿಜೃಂಭಣೆಯಿಂದ ಜರುಗಿದ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ 7ನೇ ವರ್ಷದ ವಾರ್ಷಿಕೋತ್ಸವ
-
Manglore1 hour agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
