Connect with us

Hassan

ನೀರು ಉಳಿಸಲು ಮಾರ್ಗೋಪಾಯಗಳಿವೆ – ಮುಂದಿನ ಪೀಳಿಗೆಗೆ ಜೀವಜಲ ಉಳಿಸುವಂತೆ ಡಾ. ದೇವರಾಜ ರೆಡ್ಡಿ ಕರೆ

Published

on

ಹಾಸನ: ನೀರಿನ ಬಗ್ಗೆ ಅನೇಕ ಮಾರ್ಗೋಪಾಯಗಳಿದ್ದು, ಸೂಕ್ಷ್ಮವಾಗಿ ಬಳಸಿಕೊಂಡು ಮುನ್ನಡೆದರೇ ಮುಂದಿನ ಪೀಳಿಗೆಗೆ ಜಲಜೀವವನ್ನು ಉಳಿಸಲು ಸಾಧ್ಯ ಎಂದು ಅಂತರ್ಜಲ ಹಾಗೂ ಮಳೆ ನೀರು ಕೊಯ್ಲು ತಜ್ಞರಾದ ಚಿತ್ರದುರ್ಗದ ಡಾ. ದೇವರಾಜ ರೆಡ್ಡಿ ತಿಳಿಸಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕ ಇಲಾಖೆ ಹಾಗೂ ಹಸಿರುಭೂಮಿ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಳೆ ನೀರು ಕೊಯ್ಲು ವಿಚಾರವಾಗಿ ಕಾರ್ಯಾಗಾರದಲ್ಲಿ ಮಾತನಾಡಿ, ಭಾರತ ದೇಶದ ಅನೇಕ ಕಡೆ ಹಾಗೂ ಕರ್ನಾಟಕ ರಾಜ್ಯದಲ್ಲಿ ಕೂಡ ಈ ಬಾರಿ ಮಳೆ ಕೊರತೆ ಇದೆ. ಇಂತಹ ಸಂಧರ್ಭದಲ್ಲಿ ನೀರಿನ ಸಮರ್ಪಕ ಬಳಕೆ ಹಾಗೂ ನಿರ್ವಹಣೆ ಬಗ್ಗೆ ಮೊಟ್ಟ ಮೊದಲ ಬಾರಿಗೆ ಹಾಸನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೊದಲ ಬಾರಿಗೆ ನೀರನ್ನು ಉಳಿಸುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು. ಕೊಳವೆ ಬಾವಿ ರೀಚಾರ್ಜ್, ನದಿ ಸಂರಕ್ಷಣೆ, ನದಿ ನೀರು ಜೋಡಣೆ ಸಾಧ್ಯತೆ, ಸಂಸ್ಥೆ ಕೈಗೊಂಡ ಯೋಜನೆ, ಸಮುದ್ರ ನೀರಿನ ಪುನರ್ಬಳಕೆ, ಮಳೆಕೊಯ್ಲು ಕಡ್ಡಾಯ, ಪಠ್ಯಕ್ರಮದಲ್ಲಿ ನೀರಿನ ಬಗ್ಗೆ ಹೀಗೆ, ಕಣ್ಮುಂದೆ ಅನೇಕ ಮಾರ್ಗೋಪಾಯಗಳಿವೆ, ಎಲ್ಲವನ್ನು ಸೂಕ್ತವಾಗಿ ಬಳಸಿಕೊಂಡು ಮುನ್ನಡೆದರೆ ಯಾವುದೇ ರೀತಿ ಸಮಸ್ಯೆಗಳಿರುವುದಿಲ್ಲ. ಇದು ಸರ್ಕಾರದ ಕೆಲಸ ಮಾತ್ರವಲ್ಲ, ಪ್ರತಿ ಹಳ್ಳಿ, ನಗರಗಳಲ್ಲಿ ಈ ಬಗ್ಗೆ ಜಾಗೃತಿ ಅಭಿಯಾನದ ಮೂಲಕ ಯೋಜನೆ ಅನುಷ್ಠಾನ ಕಡ್ಡಾಯಗೊಳಿಸಿದರೆ ಮುಂದಿನ ಪೀಳಿಗೆಗೆ ಜೀವಜಲವನ್ನು ಉಳಿಸಲು ಸಾಧ್ಯ ಎಂದು ಸಲಹೆ ನೀಡಿದರು.

ಕೃಷಿ ಜಂಟಿ ಕೃಷಿ ನಿರ್ದೇಶಕರಾದ ರಾಜ ಸುಲೋಚನಾ ಪ್ರಸ್ತಾವಿಕವಾಗಿ ಮಾತನಾಡಿ, ಹವಾಮಾನ ವೈಪರಿತ್ಯ, ಬದಲಾಗುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ ನೀರಿನ ಸಮರ್ಥ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯ, ಅಂತರ್ಜಲ ಕುಸಿಯುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ ನೀರಿನ ಸಮರ್ಪಕ ಬಳಕೆ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕುಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇವಲ ಕೃಷಿ ಕ್ಷೇತ್ರದಲ್ಲಿ ಮಾತ್ರವಲ್ಲದೆ ತಮ್ಮ ಮನೆಗಳಲ್ಲಿ ಕೂಡ ನೀರಿನ ಸದ್ಬಳಕೆ ಬಹಳ ಮುಖ್ಯ ಈ ನಿಟ್ಟಿನಲ್ಲಿ ನೀರಿನ ಬಳಕೆ ಬಗ್ಗೆ ಹಾಗೂ ಜಲ ಮರು ಪೂರಣ ಬಗ್ಗೆ ಅರಿವು ಮೂಡಿಸಬೇಕಾಗದ ಅನಿವಾರ್ಯತೆ ಬಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೊಜೆಕ್ಟರ್ ಮೂಲಕ ಮಳೆ ನೀರನ್ನು ಹೇಗೆ ಸಂರಕ್ಷಣೆ ಮಾಡಬೇಕು ಮತ್ತು ಅಂತರ್ಜಲ ಕುಸಿಯುತ್ತಿರುವ ಪ್ರಸ್ತುತ ಸಂಧರ್ಭದಲ್ಲಿ ನೀರಿನ ಸಮರ್ಪಕ ಬಳಕೆ ಬಗ್ಗೆ ಸವಿಸ್ತಾರವಾಗಿ ವಿವರಿಸಿ ಎಚ್ಚರಿಕೆ ನೀಡಿದಲ್ಲದೇ ಮಾರ್ಗೋಪಾಯದ ಬಗ್ಗೆ ಅರಿವು ಮೂಡಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಪೂರ್ಣಿಮಾ ಅವರು ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿದರು.

ಇದೆ ವೇಳೆ ಹಸಿರು ಭೂಮಿ ಪ್ರತಿಷ್ಟಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಕೃಷಿ ಕಾಲೇಜಿನ ಡೀನ್ ವಾಸುದೇವನ್, ಕೃಷಿಕರಾದ ದೊಡ್ದ ಬೈರೇಗೌಡ, ತಂಬ್ಲಾಪುರ ಕೃಷ್ಣೇಗೌಡ, ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಈ. ಕೃಷ್ಣೇಗೌಡ, ತೋಟಗಾರಿಕ ಇಲಾಖೆ ಉಪ ನಿರ್ದೇಶಕಿ ಮಂಗಳ, ದೊಡ್ಡವೀರೇಗೌಡ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

Published

on

ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಶ್ರೀನಗರ ನಿವಾಸಿ ಆದಿಲ್ ಪಾಷಾ (29), ಅಂಬೇಡ್ಕರ್ ನಗರ ನಿವಾಸಿ ಮಹಮದ್ ಸಬ್ರಿಜ್ ಕಾಲು ಹಾಗೂ ಹಳೇಬೀಡು ತರಗಿನ ಪೇಟೆ ಗೋವಿಂದ (40) ಬಂಧಿತ ಆರೋಪಿಗಳು.

ಏನಿದು ಪ್ರಕರಣ-1? 

ಫೆ. 3 ರಂದು ಹಾಸನದ ದೇವೇಗೌಡ ನಗರದ ಬಸ್ಸು ನಿಲ್ದಾಣದ ಹತ್ತಿರ ಇಬ್ಬರು ವ್ಯಕ್ತಿಗಳು ಗಾಂಜಾವನ್ನು ತರುತ್ತಿದ್ದಾರೆಂದು ಹಾಸನ ನಗರ ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆದಿಲ್ ಆದಿಲ್ ಪಾಷಾ ಹಾಗೂ ಮಹಮದ್ ಸಬ್ರಿಜ್ ಕಾಲುನನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 1301 ಗ್ರಾಂ ತೂಕವುಳ್ಳ ಅಂದಾಜು ಬೆಲೆ 2,08,500 ರೂ. ಬೆಲೆಬಾಳುವ ಗಾಂಜಾಸೊಪ್ಪು ಹಾಗು ಒಂದು ಓಪೋ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಾಸನದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ 2:
ಹಗರೆ-ಹಳೇಬೀಡು ರಸ್ತೆ ಪುಷ್ಪಗಿರಿ ಬೆಟ್ಟದ ಹತ್ತಿರ ಬಂಡಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಒಂದು ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹಳೇಬೀಡು ಠಾಣೆ ಪೊಲೀಸರು ದಾಳಿ ನಡೆಸಿ ಬಸ್ ನಿಲ್ದಾಣದೊಳಗೆ ಕುಳಿತುಕೊಂಡಿದ್ದ ಹಳೇಬೀಡಿನ ನಯನ ಕ್ಷತ್ರಿಯ ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ತರಗಿನಪೇಟೆ ನಿವಾಸಿ ಗೋವಿಂದನ ಬಳಿಯಿದ್ದ ೫೧೦ ಗ್ರಾಂ ತೂಕವುಳ್ಳ ಗಾಂಜಾ ಸೊಪ್ಪನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.


ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Hassan

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ

Published

on

ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್‌ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್‌ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್‌ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್‌ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್‌ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್‌ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.

Continue Reading

Hassan

ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು

Published

on

ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.


ಈ ಸಂದರ್ಭದಲ್ಲಿ  ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.

Continue Reading

Trending

error: Content is protected !!