Chamarajanagar
ಕಾರ್ಮಿಕರ ಸೌಲಭ್ಯಗಳ ಅರಿವು ಪ್ರಚಾರ ವಾಹನಕ್ಕೆ ಚಾಲನೆ
ಚಾಮರಾಜನಗರ: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿಂದು ಕಾರ್ಮಿಕ ಇಲಾಖೆಯ ಯೋಜನೆಗಳ ಕುರಿತ ಪ್ರಚಾರ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಸೋಮವಾರ (ಫೆ.10) ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾ ನ್ಯಾಯಾಧೀಶರು ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುವ ಸೌಲಭ್ಯಗಳಿಗೆ ನೊಂದಣಿಯಾಗಬೇಕು. ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ನೀಡಲಾಗುವ ವಿವಿಧ ಸೌಲಭ್ಯಗಳನ್ನು ಪಡೆಯಲು ನಿಗದಿಪಡಿಸಿರುವ ಕಾರ್ಡ್ ಗಳನ್ನು ಪಡೆಯಬೇಕು. ಇದಕ್ಕಾಗಿ ನಾವು ಸಹ ಸಾಧ್ಯವಿರುವ ಎಲ್ಲಾ ಕಡೆ ಪ್ರಚಾರ ಮಾಡಲಿದ್ದೇವೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಮಾತನಾಡಿ, 23 ಅಸಂಘಟಿತ ವಲಯಗಳ ಕಾರ್ಮಿಕರು ನೊಂದಣಿಯಿಂದ ಪ್ರಯೋಜನ ಪಡೆಯಬಹುದಾಗಿದೆ. ಪಿಂಚಣಿ, ವೈದ್ಯಕೀಯ, ಶೈಕ್ಷಣಿಕ, ಆರೋಗ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಬಹುದು. ಸರ್ಕಾರದ ಯೋಜನೆಗಳನ್ನು ಕಾಮಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ.ಸವಿತಾ ಮಾತನಾಡಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಡಾ. ಬಿ.ಆರ್.ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ 23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದರು.
ಯೋಜನೆಯಡಿ ಅಪಘಾತ ಪರಿಹಾರ ಸೌಲಭ್ಯ ದೊರೆಯಲಿದೆ. ಅಪಘಾತದಿಂದ ಮರಣ ಹೊಂದಿದ್ದಲ್ಲಿ ನಾಮನಿರ್ದೇಶಿತರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಪಘಾತದಿಂದ ದುರ್ಬಲತೆ ಹೊಂದಿದ್ದಲ್ಲಿ ಪರಿಹಾರ ನೀಡಲಾಗುತ್ತದೆ. 50 ಸಾವಿರ ರೂ.ವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಮಾಡಲಾಗುತ್ತದೆ. ಇತರೆ ಕಾರ್ಮಿಕರಿಗೂ ವಿವಿಧ ಸೌಲಭ್ಯಗಳ ಪ್ರಯೋಜನ ಪಡೆಯಬಹುದಾಗಿದೆ. ಈ ಎಲ್ಲ ಮಾಹಿತಿ ಪ್ರಚಾರಕ್ಕಾಗಿ ವಾಹನ ಸಂಚರಿಸಲಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಎಂ.ಸವಿತಾ ತಿಳಿಸಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ಪ್ರಧಾನ ಕಾರ್ಯದರ್ಶಿ ಆರ್. ರಂಗಸ್ವಾಮಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಮಹೇಶ್, ಇನ್ನಿತರರು ಉಪಸ್ಥಿತರಿದ್ದರು.
Chamarajanagar
ಗೂಡ್ಸ್ ಆಟೋ ಡಿಕ್ಕಿ: ಪಾದಚಾರಿ ಸಾ*ವು
ಚಾಮರಾಜನಗರ: ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲೇ ಪಾದಚಾರಿಯೊಬ್ಬ ಮೃತ ಪಟ್ಟಿರುವ ಘಟನೆ ಮಾದಾಪುರ ರಸ್ತೆಯಲ್ಲಿ ನಡೆದಿದೆ.
ಮಂಗಲ ಗ್ರಾಮದ ನಂಜುಂಡಶೆಟ್ಟಿ (55) ಮೃತ ಪಾದಚಾರಿ.

ಮೃತ ನಂಜುಂಡಶೆಟ್ಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಗೂಡ್ಸ್ ಟಾಟಾ ಮ್ಯಾಜಿಕ್ ಆಟೋ ಡಿಕ್ಕಿ ಹೊಡೆದ ಪರಿಣಾಮ ನಂಜುಂಡಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Chamarajanagar
ಆ.18ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಆಗಸ್ಟ್. 18 ರಂದು ಬೆಳಿಗ್ಗೆ 9.20 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ದೇವಸ್ಥಾನದ ರಂಗಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ಮಹಾಸಂಸ್ಥಾನ ಮಠದ ಸುತ್ತೂರು ವೀರಸಿಂಹಾಸನ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಶಾಶ್ವತ ಸದಸ್ಯರು ಮತ್ತು ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಮ್ಮುಖದಲ್ಲಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ.

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಪಶುಸಂಗೋಪನೆ, ರೇಷ್ಮೆ ಸಚಿವ ಕೆ. ವೆಂಕಟೇಶ್ ನೂತನ ವಧುವಿಗೆ ಮಾಂಗಲ್ಯ ವಿತರಿಸುವರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ನೂತನ ವಧು ವರರಿಗೆ ವಸ್ತ್ರ ವಿತರಣೆ ಮಾಡುವರು. ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಶಾಸಕ ಎಂ.ಆರ್. ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ನೆನಪಿನ ಕಾಣಿಕೆ ವಿತರಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್ ಪ್ರಮಾಣ ಪತ್ರ ವಿತರಣೆ ಮಾಡುವರು.

ಶಾಸಕರಾದ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಎಂ. ನಂಜುಂಡಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಹೆಚ್.ವಿ. ಚಂದ್ರು, ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ನಾಮ ನಿರ್ದೇಶಿತ ಸದಸ್ಯರಾದ ಗಂಗನ ತಿಮ್ಮಯ್ಯ, ಭಾಗ್ಯಮ್ಮ, ಬಿ. ಮಹದೇವಪ್ಪ, ಮರಿಸ್ವಾಮಿ, ಆರ್.ಎಸ್. ಕುಮಾರ ವಿಜಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Chamarajanagar
ಪುರುಷ ಕಾಣೆ ಸುಳಿವಿಗೆ ಸಹಕರಿಸಲು ಮನವಿ
ಚಾಮರಾಜನಗರ: ತಾಲೂಕಿನ ಹೆಗ್ಗವಾಡಿಪುರ ಗ್ರಾಮದ ಶ್ರೀಕಂಠ ಅಲಿಯಾಸ್ ಶ್ರೀಕಾಂತ್ ಎಂಬುವವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
42 ವರ್ಷದ ಶ್ರೀಕಂಠ 5.5 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಆಕಾಶ ನೀಲಿ ಬಣ್ಣದ ತುಂಬು ತೋಳಿನ ಷರ್ಟ್ ಮತ್ತು ಬಿಳಿ ಬಣ್ಣದ ಪಂಚೆ ಧರಿಸಿದ್ದರು.

ಇವರ ಸುಳಿವು ದೊರೆತಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆ ದೂ.ಸಂ 08226-240250, ಪಿ.ಎಸ್.ಐ ಮೊ.ಸಂ 9480804650, ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂ 08226-222383 ಸಂಪರ್ಕಿಸುವಂತೆ ಸಂತೇಮರಹಳ್ಳಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Mandya17 hours agoಮಂಡ್ಯ: ಜಿಲ್ಲೆಗೆ ಅಗತ್ಯವಿರುವ ವಿಭಾಗಗಳನ್ನು ಆರಂಭಿಸಲು ಮುಂದಾಗಬೇಕು : ಎಂ.ನಿಂಗಯ್ಯ
-
Kodagu16 hours agoಗಿಡುಗ ಸಿನಿಮಾ ರಾಜ್ಯಾದ್ಯಂತ ಏಕಕಾಲದಲ್ಲಿ ಬಿಡುಗಡೆ
-
Hassan22 hours agoನೂತನ ಡಿಡಿಪಿಐ ಕೆ.ಎನ್. ಬಲರಾಮ್ ಕರ್ತವ್ಯಕ್ಕೆ: ಸಂಘದಿಂದ ಅಭಿನಂದನೆ
-
Mysore22 hours agoಕೆ.ಎನ್.ರಾಜಣ್ಣ ವಜಾ: ಹೋರಾಟದ ಎಚ್ಚರಿಕೆ ನೀಡಿದ ನಾಯಕರ ಹಿತರಕ್ಷಣಾ ವೇದಿಕೆ
-
Mysore21 hours agoಧರ್ಮಸ್ಥಳ ಕೇಸ್: ಮೈಸೂರಿನಲ್ಲೂ ಬೀದಿಗಿಳಿದ ಮಂಜುನಾಥನ ಭಕ್ತರು
-
Hassan20 hours agoಹಾಸನದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಕ್ಕೆ ಒತ್ತಾಯಿಸಿ ಮನವಿ
-
Mandya17 hours agoಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕೇಂದ್ರ ತೆರೆಯಿರಿ: ಇಂಡುವಾಳು ಸಚ್ಚಿದಾನಂದ
-
National16 hours agoಸೋನಿಯಾ ಗಾಂಧಿ ಭಾರತೀಯ ಪ್ರಜೆಯಾಗದೇ ಮತದಾರರ ಪಟ್ಟಿಯಲ್ಲಿ ಹೆಸರು ಕಾಣಿಸಿಕೊಂಡಿದೆ: ಅಮಿತ್ ಮಾಳವೀಯ
