Connect with us

Location

ಹಿರಿಯ ನಟ ದ್ವಾರಕೀಶ್ ನಿಧನ

Published

on

ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು

ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Hassan

ಛತ್ರಪತಿ ಶಿವಾಜಿ ತತ್ವ ಆದರ್ಶ ಅನುಸರಿಸಿ: ಸಂಸದ ಶ್ರೇಯಸ್ ಪಟೇಲ್

Published

on

ಹಾಸನ : ಇಡೀ ದೇಶಕ್ಕೆ ಮಾದರಿಯಾದ ಛತ್ರಪತಿ ಶಿವಾಜಿ ಮಹಾರಾಜರ ತತ್ವ ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರದಂದು ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಧೈರ್ಯ, ಶೌರ್ಯ, ನೇರ ನುಡಿಯನ್ನು ಎಲ್ಲರೂ ಮೆಚ್ಚಲೇಬೇಕು. ಶಿವಾಜಿ ಅವರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಇಡೀ ದೇಶಕ್ಕೆ ಮಾದರಿಯಾದ ಕ್ರಾಂತಿವೀರರು. ಮುಂದಿನ ಪೀಳಿಗೆಯವರು, ನಾವು ಅವರು ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ ಎಂದು ಹೇಳಿದರು.

ಬೆಂಗಳೂರಿನ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಮಾತನಾಡಿ, ಛತ್ರಪತಿ ಶಿವಾಜಿಯವರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ, ಇಡೀ ವಿಶ್ವಕ್ಕೆ ಆದರ್ಶ ಪುರುಷರಾಗಿದ್ದಾರೆ. ಶಿವಾಜಿ ರಾಷ್ಟ್ರ ನಾಯಕ, ಸ್ವರಾಜ್ಯ ಸ್ಥಾಪಕರಾಗಿದ್ದಾರೆ. ಭಾರತೀಯರೆಲ್ಲರೂ ಒಂದೇ ಎಂಬ ಉದಾತ್ತ ಆದರ್ಶ ಕೊಟ್ಟಿರುವ ಮಹಾಪುರುಷರಲ್ಲಿ ಶಿವಾಜಿ ಅವರೂ ಒಬ್ಬರು. ಶಿವಾಜಿವನ್ನು ನಾಲ್ಕು ಗೋಡೆಗೆ ಸೀಮಿತಗೊಳಿಸದೆ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಹೇಳಿದರು.

ಶಾಸಕ ಹೆಚ್.ಪಿ. ಸ್ವರೂಪ್ ಮಾತನಾಡಿ, ಶಿವಾಜಿಯವರು ವೀರ ಯೋಧರಾಗಿದ್ದು, ವಿಶ್ವ ಪ್ರಸಿದ್ಧರಾಗಿದ್ದಾರೆ. ಶಿವಾಜಿ ಅವರ ಪುತ್ತಳಿಯನ್ನು ಹಾಸನದಲ್ಲಿ ಶೀಘ್ರದಲ್ಲೇ ಅನಾವರಣ ಮಾಡೋಣ ಹಾಗೂ ಮರಾಠ ಸಮುದಾಯದ ಮಕ್ಕಳಿಗೆ ವಸತಿ ನಿಲಯವನ್ನು ನಿರ್ಮಾಣ ಮಾಡಿಕೊಡುವುದರ ಕುರಿತು ನೀವು ಕೂಡ ಮನವಿ ಮಾಡಿದ್ದೀರಿ ಅದನ್ನು ಶೀಘ್ರದಲ್ಲೇ ಶಾಸಕರ ನಿಧಿಯಿಂದ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮೊದಲು ೩೯೮ನೇ ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವದ ಅಂಗವಾಗಿ ಶ್ರೀ ಅಂಬಾಭವಾನಿ ಕಲ್ಯಾಣ ಮಂಟಪ, ಅಗ್ರಹಾರ, ಹಾಸನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪೂಜಾ ಕಾರ್ಯಕ್ರಮಗಳನ್ನು ಮುಗಿಸಿ ಇಲ್ಲಿಂದ ಮೆರವಣಿಗೆ ಹೊರಟು ಹಳೆ ಬಸ್ ಸ್ಟ್ಯಾಂಡ್ ರಸ್ತೆ ಮಾರ್ಗವಾಗಿ ಕಲಾಭವನವರೆಗೆ ಮೆರವಣಿಗೆ ನಡೆಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಚ್.ಪಿ. ತಾರಾನಾಥ್, ಹಾಸನ ಜಿಲ್ಲಾ ನೌಕರರ ಸಂಘದ ಗೌವಾಧ್ಯಕ್ಷರಾದ ಈ. ಕೃಷ್ಣೇಗೌಡ, ವಕೀಲರಾದ ವಿಜಯಕುಮಾರ್ ನಾರ್ವೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಹಾಸನ ಜಿಲ್ಲಾಧ್ಯಕ್ಷರಾದ ಎನ್ ಲೀಲಾಕುಮಾರ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎ.ವಿ. ರುದ್ರಪ್ಪಾಜಿರಾವ್ ಫೋರ್ಪಡೆ, ಗೌರವಾಧ್ಯಕ್ಷ ಹೆಚ್.ಜೆ. ತುಳಜಿರಾವ್ ಠಾಣ್ಗೆ, ಖಜಾಂಚಿ ಪ್ರಕಾಶ್, ನಿರ್ದೇಶಕ ಸುರೇಶ್ ಇತರರು ಉಪಸ್ಥಿತರಿದ್ದರು. ಯದೀಶ್ ಅವರು ಕಾರ್ಯಕ್ರಮ ನಿರೂಪಿಸಿದರು.

Continue Reading

Hassan

ಏ.12, 13ರಂದು ಹಾಸನದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

Published

on

ಹಾಸನ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಸೂಚನೆಯಂತೆ ಏಪ್ರಿಲ್ 12 ಮತ್ತು 13 ರಂದು ನಗರದ ಸರಕಾರಿ ಕಲಾ ಕಾಲೇಜು ಮತ್ತು ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಮೆಂಟ್ ನಡೆಸಲು ಹಾಸನ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಭೆ ನಡೆಸಿ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ. ಶಿವಾನಂದ್ ತಗಡೂರು ಮಾತನಾಡಿ, ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಹಾಸನದಲ್ಲಿ ಆಯೋಜಿಸಲು ತೀರ್ಮಾನ ಮಾಡಲಾಗಿದ್ದು, ಕಳೆದ ವರ್ಷ ಮಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಬಹಳ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಅದಕ್ಕಿಂತ ಬಿನ್ನವಾಗಿ ಇಲ್ಲಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲು ಆಲೂಚನೆ ಇಟ್ಟುಕೊಂಡು ನಿರ್ಧರಿಸಲಾಗಿದೆ. ಕೊಪ್ಪಳದಲ್ಲಿ ನಡೆದ ಸಮ್ಮೇಳನದಲ್ಲಿ ಮದನ್ ಗೌಡರು ತಿಳಿಸಿದ್ದರು. ಏಪ್ರಿಲ್ ೧೨ ಮತ್ತು ೧೩ನೇ ದಿನಾಂಕದಂದು ಹಾಸನದಲ್ಲಿ ಏರ್ಪಡು ಮಾಡಲು ಭಾನುವಾರದಂದು ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

ಯಾರು ಪತ್ರಕರ್ತರ ಸಂಘದ ಸದಸ್ಯರಾಗಿದ್ದಾರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ತಂಡ ಭಾಗವಹಿಸಲು ಅವಕಾಶ ಇರುತ್ತದೆ. ಪ್ರತಿಯೊಬ್ಬರ ಐಡಿ ಕಾರ್ಡ್ ಪರೀಕ್ಷೆ ಮಾಡಲಾಗುದು. ಹೊರ ಜಿಲ್ಲೆಯಿಂದ ಬರುವ ಪತ್ರಕರ್ತ ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟ ಯಶಸ್ವಿಗೆ ಜಿಲ್ಲಾ ಸಮಿತಿ, ಉಪ ಸಮಿತಿ ಮಾಡಿಕೊಂಡು ಆವರವರ ಜವಬ್ಧಾರಿಯನ್ನು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ವಹಿಸಿಕೊಡಲಿದೆ. ಪ್ರಾರಂಭದ ದಿನದಲ್ಲಿ ಮೊದಲ ಆಟ ಸೆಲೆಬ್ರೆಟಿ ಕ್ರಿಕೆಟ್ ನಡೆಯಲಿದೆ. ಮಂಗಳೂರಿನಲ್ಲಿಯೂ ಕೂಡ ಸೆಲಬ್ರಿಟಿ ಜನಪ್ರತಿನಿಧಿಗಳಿಂದ ಆಟೋಟ ನಡೆದಿತ್ತು. ಒಟ್ಟಾರೆ ರಾಜ್ಯ ಮಟ್ಟದ ಈ ಕ್ರಿಕೆಟ್ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿ ಮನವಿ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂರ್ಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ಮಾತನಾಡಿ, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಕ್ರಿಕೆಟ್ ಕ್ರೀಡಾಪಟುಗಳಿಗೆ ವಸತಿ ಸೌಲಭ್ಯ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ. ಕ್ರಿಕೆಟ್ ಪಂದ್ಯಾವಳಿಗೆ ವಿಶೇಷವಾಗಿ ರಾಜ್ಯ ಸಭಾಪತಿ ಯೂ.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಆಗಮಿಸಲಿದ್ದಾರೆ. .

ಸಭೆಯಲ್ಲಿ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಹೆಚ್.ಬಿ. ಮದನ್ ಗೌಡ, ಮಾಜಿ ಅಧ್ಯಕ್ಷರಾದ ಮಂಜುನಾಥ್, ರವಿನಾಕಲಗೂಡು, ಬಿ.ಆರ್. ಉದಯಕುಮಾರ್, ಪ್ರಸನ್ನಕುಮಾರ್, ಕಾರ್ಯದರ್ಶಿ .ಪಿ.ಎ. ಶ್ರೀನಿವಾಸ್, ಕುಮಾರ್, ನಟರಾಜು, ಜಿ. ಪ್ರಕಾಶ್, ಹೆತ್ತೂರ್ ನಾಗರಾಜು, ಜ್ಞಾನೇಶ್, ಕುಶ್ವಂತ್, ಕೃಷ್ಣ, ನಾಗರಾಜು, ಮಂಜು, ಮೆಹಾಬೂಬ್, ದಯಾನಂದ್, ಶರತ್ ಇತರರು ಉಪಸ್ಥಿತರಿದ್ದರು.

Continue Reading

Mysore

ಜಾತಿ ಮತಗಳನ್ನ ಮೀರಿದಂತ ಸತ್ವಪೂರ್ಣ ಕವಿ ಅಕ್ಬರ್‌ ಅಲಿ: ಡಾ. ಸಿ.ಪಿ ಕೃಷ್ಣಕುಮಾರ್

Published

on

ಮೈಸೂರು: ಅಕಬರ್ ಅಲಿಯವರ ಸಾಹಿತ್ಯಗಳು‌ ಅಂದಿನ ಸಮಾಜದಲ್ಲಿನ ಜಾತಿ ಧರ್ಮ ವ್ಯವಸ್ತೆಗೆ ವಿರುದ್ದವಾಗಿ. ಎಲ್ಲರಿಗು ಸಮಾನತೆಯನ್ನು ನೀಡುವ ಕಲ್ಪನೆ ಹೊಂದಿದ್ದ, ಜಾತಿ ಮತಗಳನ್ನ ಮೀರಿದಂತ ಸತ್ವಪೂರ್ಣ ಕವಿ ಎಂದು ಎಂದು ಹಿರಿಯ ಸಾಹಿತಿ ಡಾ. ಸಿ.ಪಿ ಕೃಷ್ಣಕುಮಾರ್ ಹೇಳಿದರು.

ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಚುಟುಕು ರತ್ನ ಡಾ.ಎಂ ಅಕಬರ್ ಅಲಿ ಅವರ ಶತಮಾನೋತ್ಸವ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಕಬರ್ ಅಲಿಯವರು ಸಾಹಿತ್ಯ ಎಲ್ಲರಿಗೂ ಸಲ್ಲುತ್ತದೆ ಎಂದರೂ ತಪ್ಪಾಗಲಾರದು. ಆಧುನಿಕ ಕನ್ನಡ ಸಾಹಿತ್ಯದ ಆದ್ಯರು. ಮನನೀಯ ಕವಿ ಅಕಬರ್ ಅಲಿ ಎಂದು ಶ್ಲಾಘಿಸಿದರು.

ಸ್ತ್ರೀಯರಿಗೆ ಕಾನೂನಿನ ಅನುಕೂಲಗಳಿದ್ದರು ಅವರನ್ನು, ಅಗೌರವವಾಗಿ ಕಾಣಲಾಗುತ್ತದೆ. ಅಂತಹದರಲ್ಲಿ ಅಕಬರ್ ಅವರಿಗೆ ಸ್ತ್ರೀಯರ ಮೇಲೆ ಆದರ, ಗೌರವ ಇಟ್ಟುಕೊಂಡಿದ್ದ ಸ್ತ್ರೀ ಸಂವೇದಿಗಳು ಎಂದು ತಿಳಿಸಿದರು.

ನನ್ನ ಸಹದ್ಯೋಗಿಗಳು ಹಾಗೂ ಅವರ ಸರಳತೆ, ಸಜ್ಜನಿಕೆಯನ್ನು ನಾನು ಕಂಡುಂಡವನು. ಒಂದು ಮಾತಿನಲ್ಲಿ ಹೇಳುವುದಾದರೆ ಅವರು ಸಮತೋಲನ, ಸಂಪನ್ನನಾದಂತಹ ಸಮನ್ವಯ ಸಾಹಿತಿ ಎಂಬುದನ್ನ ಒಪ್ಪಬೇಕು. ಚುಟುಕು ಸಾಹಿತ್ಯದ ಎರಡು ಕಣ್ಣುಗಳು ದಿನಕರ ದೇಸಾಯಿ ಹಾಗೂ ಅಕಬರ್ ಅಲಿಯವರು. ಇವರ ಸಾಹಿತ್ಯದಲ್ಲಿ ಮತ ಧರ್ಮಗಳು ಗೌಣ. ಅವರಲ್ಲಿ ಮುಖ್ಯವಾದದ್ದು ಕವಿಧಾಮ, ಕವಿ ಮನೋಧರ್ಮ ಎಂದು ಹೆಮ್ಮೆಪಟ್ಟರು.

Continue Reading

Trending

error: Content is protected !!