Special
ಇದೊಂದು ಕಾರ್ಡ್ ಇದ್ರೆ ಸಾಕು ಸರ್ಕಾರದಿಂದ ಪಡೆಯಬಹುದು 2 ಲಕ್ಷ ರೂ. ಪ್ರಯೋಜನ
ನಮ್ಮ ದೇಶದಲ್ಲಿ ಬೇರೆ ಬೇರೆ ಪ್ರದೇಶದಲ್ಲಿ ಬೇರೆ ಬೇರೆ ವರ್ಗದ ಜನ (different kind of people) ವಾಸಿಸುತ್ತಾರೆ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವವರು ಕಾರ್ಮಿಕರು (workers) ಕೃಷಿ ಕೆಲಸ ಮಾಡುವ ರೈತರು ಹೀಗೆ ಬೇರೆ ಬೇರೆ ವಲಯಗಳಲ್ಲಿ ದುಡಿಯುವ ಜನರು ಇದ್ದಾರೆ
ಇಂಥವರಿಗೆ ಸಾಮಾಜಿಕ ಭದ್ರತೆಯನ್ನು ಕಲ್ಪಿಸಿ ಕೊಡುವ ಸಲುವಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಕೂಡ ಪರಿಚಯಿಸುತ್ತವೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಅನುಕೂಲ! (Help for unorganised sector workers)
ಕಟ್ಟಡಗಳಲ್ಲಿ ಕೆಲಸ ಮಾಡುವ ಹಾಗೂ ಇತರ ಸಣ್ಣಪುಟ್ಟ ಸ್ವಂತ ಉದ್ಯಮ ಹೊಂದಿರುವಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲವಾಗಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ.
ಅವುಗಳಲ್ಲಿ ಇ – ಶ್ರಮ್ ಕಾರ್ಡ್ (E-shram Card) ವಿತರಣೆ ಕೂಡ ಒಂದು. ಇದರಿಂದ ದೇಶಾದ್ಯಂತ ಕೋಟ್ಯಾಂತರ ಜನರಿಗೆ ಅನುಕೂಲವಾಗಿದೆ, ಸರಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಇದೊಂದು ಕಾರ್ಡ್ ಇದ್ದವರು ಸುಲಭವಾಗಿ ಸರ್ಕಾರದ ಸಹಾಯ ಪಡೆಯಬಹುದಾಗಿದೆ.
ಇ – ಶ್ರಮ್ ಕಾರ್ಡ್ ಬೆನಿಫಿಟ್ಸ್ (E-shram Card benefits)
ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗಾಗಿ ಸಾಮಾಜಿಕ ಭದ್ರತೆ ಹಾಗೂ ಆರ್ಥಿಕ ನೆರವು ಒದಗಿಸುವ ಸಲುವಾಗಿ 2021 ರಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಿತು.
ಇ – ಶ್ರಮ್ ಪೋರ್ಟಲ್ (E- shram web portal) ಆರಂಭವಾಗುತ್ತಿದ್ದ ಹಾಗೆ ಸುಮಾರು 28,60,20,000 ಅಸಂಘಟಿತ ವಲಯದ ಕಾರ್ಮಿಕರು ನೋಂದಣಿ (unorganised sector worker registration) ಮಾಡಿಸಿಕೊಂಡಿದ್ದಾರೆ.
ಈ ಒಂದು ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರು ಹೀಗೆ ಹಲವು ಅಸಂಘಟಿತ ವಲಯದ ಕಾರ್ಮಿಕರು ಪ್ರಯೋಜನ ಪಡೆಯಬಹುದಾಗಿದೆ.
ಇನ್ನು ನಿಮ್ಮ ಬಳಿ ಇದೊಂದು ಇ – ಶ್ರಮ್ ಕಾರ್ಡ್ ಇದ್ರೆ ಸರ್ಕಾರದಿಂದ ಕಾರ್ಮಿಕರಿಗಾಗಿಯೇ ಬಿಡುಗಡೆಯಾಗುವ ಎಲ್ಲಾ ಯೋಜನೆಗಳ ಪ್ರಯೋಜನಗಳು ಕೂಡ ಆದ್ಯತೆಯ ಮೇರೆಗೆ ಮೊದಲಿಗೆ ಲಭ್ಯವಾಗುತ್ತದೆ.
ಉದಾಹರಣೆಗೆ ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ (pm shramayogi Yogi man dhan scheme) ಯೋಜನೆ, ನ್ಯಾಷನಲ್ ಪೆನ್ಷನ್ ಸ್ಕೀಮ್ ಫಾರ್ ಟ್ರೇಡರ್ಸ್ (National pension scheme for traders), ಡಿಜಿಸಕ್ಷಮ್ (Digisaksham) ಮೊದಲಾದ ಯೋಜನೆಯ ಅಡಿಯಲ್ಲಿ ಸರ್ಕಾರವೇ ಪಿಂಚಣಿ ಸೌಲಭ್ಯವನ್ನು ಕೂಡ ಒದಗಿಸಿಕೊಡುತ್ತದೆ
ಇದಕ್ಕಾಗಿ ಅಸಂಘಟಿತ ವಲಯದ ಕಾರ್ಮಿಕರು ಹೂಡಿಕೆ ಮಾಡಬೇಕಾಗಿರುವ ಮೊತ್ತ ಬಹಳ ಕಡಿಮೆ, ಪ್ರತಿ ತಿಂಗಳು 50 ರಿಂದ ರೂ.100 ಗಳನ್ನು ಹೂಡಿಕೆ ಮಾಡಿದರು ಕೂಡ ನಿವೃತ್ತಿ ಸಮಯದಲ್ಲಿ ಅಂದರೆ 60 ವರ್ಷದ ನಂತರ ಉಚಿತವಾಗಿ 3000 ವರೆಗೆ ಪಿಂಚಣಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
2,00,000 ಆರೋಗ್ಯ ವಿಮೆ! (Health insurance up to 2 lakh)
ಸಾಮಾನ್ಯವಾಗಿ ಆರೋಗ್ಯ ವಿಮೆಯನ್ನು ಯಾರು ಮಾಡಿಸುವುದಿಲ್ಲ, ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರಿಗೆ ಆರೋಗ್ಯ ವಿಮೆ ಮಾಡಿಸಲು ಹಣ ಖರ್ಚು ಮಾಡಲು ಸಾಧ್ಯವಿಲ್ಲ.. ಈ ಹಿನ್ನೆಲೆಯಲ್ಲಿ ಸರ್ಕಾರವೇ ವಿಮಾ ಸೌಲಭ್ಯದ (insurance) ಅಡಿಯಲ್ಲಿ ಅಪಘಾತವಾದರೆ ಹಾಗೂ ಕೃಷಿ ಕಾರ್ಮಿಕರು ಮರಣ ಹೊಂದಿದರೆ ರೂಪಾಯಿ ಎರಡು ಲಕ್ಷದ ವರೆಗೆ ವಿಮಾ ಸೌಲಭ್ಯವನ್ನು ನೀಡುತ್ತದೆ.
ಇ – ಶ್ರಮ್ ನೋಂದಣಿಗೆ ಬೇಕಾಗಿರುವ ಅರ್ಹತೆಗಳು! (Eligibility)
16 ರಿಂದ 59 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಸ್ವಂತ ಉದ್ಯಮ ಮಾಡುವ ಬೀದಿ ವ್ಯಾಪಾರಿಗಳು ಅಸಂಘಟಿತ ವಲಯದ ಕಾರ್ಮಿಕರು ಮಾತ್ರವಲ್ಲದೆ ಇ ಪಿ ಎಫ್ ಓ (EPFO) ಹಾಗೂ ಇ ಎಸ್ ಐ ಸಿ (ESIC) ಇಲ್ಲದ ಸಂಘಟಿತ ಕಾರ್ಮಿಕರು ಕೂಡ ಈ ಯೋಜನೆಯ ಭಾಗವಾಗಬಹುದು.
ಇ – ಶ್ರಮ್ ನೊಂದಣಿ ಮಾಡಿಕೊಳ್ಳುವುದು ಹೇಗೆ? (How to register)
ಇದಕ್ಕಾಗಿ ಸರ್ಕಾರದ ಅಧಿಕೃತ ವೆಬ್ಸೈಟ್ https://register.eshram.gov.in/#/user/self ಮೇಲೆ ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಲು ಅರ್ಜಿ ಫಾರಂ ತೆರೆದುಕೊಳ್ಳುತ್ತದೆ. ಇಲ್ಲಿ ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
ಮೊಬೈಲ್ ಗೆ ಒಂದು ಓಟಿಪಿ ಕಳುಹಿಸಲಾಗುತ್ತಿದೆ. ನಮೂದಿಸಿ ವೇರಿಫೈ ಮಾಡಿ ಬಳಿಕ ಕೇಳಿರುವ ಮಾಹಿತಿಗಳು ಭರ್ತಿ ಮಾಡಿ. ನಿಮ್ಮ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ನಿಮಗೆ ಒಂದು UIN ನಂಬರ್ ನೀಡಲಾಗುತ್ತದೆ. ಈ ಐಡಿ ಮೂಲಕ ನೀವು ಸರ್ಕಾರದ ಮೀಸಲಾಗಿರುವ ಪ್ರಯೋಜನ ಪಡೆಯಬಹುದು.
Agriculture
ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ.
– ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ
2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ.
ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ.
ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ.
ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ.
ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ.
ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ.
ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ.
ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ.
Special
ವಿದ್ಯುತ್ ವಯರ್ ಮೇಲೆ ಬಿದ್ದು ಚಿಂತಾಜನಕವಾದ ಕೋತಿ ಮರಿ
ಚಿಕಿತ್ಸೆ ಕೊಡಿಸಿ ಜೀವ ಉಳಿಸಿದ ಪವರ್ ಮ್ಯಾನ್ ಗಳು
ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ ಘಟನಾವಳಿ ಕಣ್ಣ ಮುಂದೆ ನಡೆದರೆ ಹೇಗಿರುತ್ತದೆ…? ಇದಕ್ಕೊಂದು ನಿದರ್ಶನದ ವಿಡಿಯೋ ಇಲ್ಲಿದೆ.
ಮಡಿಕೇರಿ ವ್ಯಾಪ್ತಿಯಲ್ಲಿ ಸೆಸ್ಕ್ ನ ಪವರ್ ಮ್ಯಾನ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಚಾನಾಕಾಗಿ ಮರ್ಕಟದ ಮರಿಯೊಂದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ವಿದ್ಯುತ್ ಸ್ಪರ್ಶಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಕೋತಿಯನ್ನು ಕೂಡಲೇ ಪವರ್ ಮ್ಯಾ ನ್ ಗಳಾದ (O & M-1ಮಡಿಕೇರಿ) ಶಿವಣ್ಣ ಮತ್ತು ಅಭಿಷೇಕ್ ಅವರುಗಳು ಪಶು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಕೊಡಿಸುವ ಮೂಲಕ ಅದರ ಜೀವ ಉಳಿಸುವಲ್ಲಿ ಮಾನವೀಯತೆ ಮೆರೆದರು. ವಿದ್ಯುತ್ ಆಘಾತದಿಂದ ನೋವುಂಡರೂ ತಂಟೆ ಮಾಡದೇ ಕೋತಿ ಮರಿ ಚಿಕಿತ್ಸೆಗೆ ಸ್ಪಂದಿಸಿದೆ. ಪವರ್ ಮ್ಯಾನ್ ಗಳ ಈ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Special
ಅರಣ್ಯ ರಕ್ಷಣೆಗಾಗಿ ದೂರ ಸಂವೇದಿ ತಂತ್ರಜ್ಞಾನ
ಕಾಡ್ಗಿಚ್ಚೆಂಬ ಕೆಂಬೂತವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ದೂರ ಸಂವೇದಿ ತಂತ್ರಜ್ಞಾನವನ್ನು ಮತ್ತೊಷ್ಟು ಅಭಿವೃದ್ಧಿ ಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇತ್ತೀಚೆಗೆ ಜಾಗತಿಕ ತಾಪಮಾನದಿಂದಾಗಿ ಹೆಚ್ಚುತ್ತಿರುವ ಕಾಡ್ಗಿಚ್ಚು ಲೆಕ್ಕವಿಲ್ಲದಷ್ಟು ಅರಣ್ಯ ಪ್ರದೇಶವನ್ನು ದಹಿಸುತ್ತಿದೆ. ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಅಗ್ನಿವೀರರನ್ನು ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಿದರೂ ಪ್ರಯೋಜನವಾಗುತ್ತಿಲ್ಲ. ಈ ಸಮಸ್ಯೆಯನ್ನು ಹತೋಟಿಗೆ ತರುವಲ್ಲಿ ದೂರ ಸಂವೇದಿ ತಂತ್ರಜ್ಞಾನವು ಸಹಕಾರಿಯಾಗಲಿದೆ.
2023 ರಲ್ಲಿ ಕೆನಡಾ ದೇಶವು ಅತಿ ಹೆಚ್ಚು ಕಾಡ್ಗಿಚ್ಚಿಗೆ ತುತ್ತಾಗಿರುವ ದೇಶವಾಗಿದೆ. ಸುಮಾರು18 ಮಿಲಿಯನ್ ಹೆಕ್ಟೇರ್ ಪ್ರದೇಶ ನಾಶವಾಗಿದೆ. ಎನ್.ಸಿ.ಇ.ಐ ವರದಿಯ ಅನುಸಾರ 2023 ರ ಸಾಲಿನಲ್ಲಿ ವಿಶ್ವದಾದ್ಯಂತ ಸುಮಾರು 55,571 ಸ್ಥಳಗಳಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಆ ಪೈಕಿ 2,633,636 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಇನ್ನೂ ಕರ್ನಾಟಕವೊಂದರಲ್ಲೇ ಸುಮಾರು 3793.13 SQ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಇದರಿಂದ ಸುಮಾರು 2170 ಮೆಗಾಟನ್ ನಷ್ಟು ಇಂಗಾಲ ಹೊರಸುಸುವಿಕೆ ಉಂಟಾಗಿದ್ದು, ಆ ಪೈಕಿ ಶೇ. 22ರಷ್ಟು ಕೆನಡಾದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಬಿಡುಗಡೆಯಾಗಿದೆ. ಈ ಹಿಂದೆ ಕಾಡ್ಗಿಚ್ಚು ಸಂಭವಿಸಿದರೆ ಅದು ದುಪ್ಪಟ್ಟಾಗುವವರೆಗೂ ಗಮನಕ್ಕೆ ಬರುತ್ತಿರಲಿಲ್ಲ. ಆದರೆ ದೂರ ಸಂವೇದಿ ತಂತ್ರಜ್ಞಾನದಿಂದಾಗಿ ಅತ್ಯಂತ ವೇಗವಾಗಿ ಉಪಗ್ರಹದ ಮೂಲಕ ಕಾಡ್ಗಿಚ್ಚು ಸಂಭವಿಸಿದ ಸ್ಥಳ ಯಾವುದು ಎಂಬ ಮಾಹಿತಿ ಅರಣ್ಯ ಇಲಾಖೆಗೆ ದೊರೆಯುತ್ತದೆ.
ದೂರ ಸಂವೇದಿ ತಂತ್ರಜ್ಞಾನ ಎಂಬುದು ಉಪಗ್ರಹದ ನೆರವಿನಿಂದ ಮಾಹಿತಿ ನೀಡುವ ತಂತ್ರಜ್ಞಾನವಾಗಿದೆ. ಈ ತಂತ್ರಜ್ಞಾನವು ಹಲವು ವರ್ಷಗಳಿಂದ ಬಳಕೆಯಾಗುತ್ತಿದೆ. ಈ ಹಿಂದೆ ನಾಸಾದಿಂದ ಕಾಡ್ಗಿಚ್ಚಿನ ಮಾಹಿತಿ ಮೊದಲು ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರಕ್ಕೆ ಬಂದು ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆಗೆ ಬರುತ್ತಿತ್ತು. ನಂತರ ಆಯಾ ರಾಜ್ಯಗಳಿಗೆ ಮಾಹಿತಿ ತಲುಪುತ್ತಿತ್ತು. ಈ ಪ್ರಕಿಯೆ ನಡೆಯಲು ಸಮಯವನ್ನು ತೆಗೆದುಕೊಳ್ಳುತ್ತಿದ್ದರಿಂದ ಶೀಘ್ರವಾಗಿ ಮಾಹಿತಿ ತಿಳಿಯಲು ಕಷ್ಟವಾಗುತ್ತಿತ್ತು. ಆದರೆ ಈಗ ನೇರವಾಗಿ ನಾಸಾದಿಂದ ಇಸ್ರೋದ ಎನ್.ಆರ್.ಎ.ಸಿ ಗೆ ಬಂದ ಮಾಹಿತಿ ಕೆ.ಎಸ್.ಆ.ರ್.ಎಸ್.ಸಿ ಗೆ ಬರುತ್ತದೆ. ನಂತರ ಮಾಹಿತಿ ಶೀಘ್ರವಾಗಿ ಅರಣ್ಯ ಇಲಾಖೆಯ ಸಂಬಂಧಿತ ವಲಯಕ್ಕೆ ರವಾನೆಯಾಗುತ್ತದೆ. ಈ ಮೂಲಕ ತಕ್ಷಣವೇ ಸ್ಪಂದಿಸಿ ಬೆಂಕಿ ನಂದಿಸಲು ಸಾಧ್ಯವಾಗುವ ಮುಖೇನ ಹೆಚ್ಚಿನ ಅರಣ್ಯ ನಾಶವನ್ನು ತಡೆಯುತ್ತದೆ. ಈ ತಂತ್ರಜ್ಞಾನದಲ್ಲಿ ಕಾಡ್ಗಿಚ್ಚಿನ ಅಲರ್ಟ್ ಬಂದ ನಂತರ ಫೀಡ್ ಬ್ಯಾಕ್ ಹಾಕಲು ಅವಕಾಶವಿದೆ. ಅಗ್ನಿಯನ್ನು ನಂದಿಸುತ್ತಿರುವ ಚಿತ್ರಗಳನ್ನು ಸಹ ಅಪ್ಲೋಡ್ ಮಾದುವುದರ ಜೊತೆಗೆ ಅಗ್ನಿ ನಿಯಂತ್ರಣಕ್ಕೆ ಬಂದಿದೆಯೋ ಇಲ್ಲವೋ ಎಂಬ ಮಾಹಿತಿಯು ಲಭ್ಯವಾಗಲಿದೆ ಎಂಬುದು ತಜ್ಞರು ಸ್ಪಷ್ಟಪಡಿಸುತ್ತಾರೆ.
ಈ ತಂತ್ರಜ್ಞಾನದ ಮೂಲಕ ಅರಣ್ಯ ರಕ್ಷಣೆಗೆ ಹೆಚ್ಚಿನ ಸಹಕಾರ ಸಿಗಲಿದ್ದು, ಇದರ ಅಭಿವೃದ್ಧಿ ಕಾರ್ಯ ಶೀಘ್ರವಾಗಿ ನಡೆಯಬೇಕಿದೆ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.