Chikmagalur
ವಿದ್ಯಾರ್ಥಿಗಳು ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಹೆಚ್.ಸಿ

ಚಿಕ್ಕಮಗಳೂರು: ನಡೆದುಹೋಗಿರುವುದನ್ನು ಇತಿಹಾಸ ಹೇಳಿದರೆ ವಿಜ್ಞಾನ ಮುಂದೆ ಆಗುವುದನ್ನು ತಿಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಹೆಚ್.ಸಿ ತಿಳಿಸಿದರು.
ಅವರು ಇಂದು ಇಲ್ಲಿನ ಜೂನಿಯರ್ ಕಾಲೇಜಿನಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೈದ್ಯ, ಇಂಜಿನಿಯರ್ ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಕನಸು ಕಾಣಬೇಕು. ಅದನ್ನು ನನಸು ಮಾಡಲು ಕಠಿಣ ಪರಿಶ್ರಮದೊಂದಿಗೆ ಯಶಸ್ಸು ಗಳಿಸಿ ಎಂದು ಕವಿಮಾತು ಹೇಳಿದರು.
ಉನ್ನತ ಹುದ್ದೆಗೆ ಹೋದ ಬಳಿಕ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಇನ್ನು ಕೆಲವರು ಒಳ್ಳೆಯ ಸೇವೆಯನ್ನು ನೀಡಿ ಹಣವನ್ನು ಪಡೆಯುತ್ತಾರೆ ಎಂದರು.
ಸರ್ಕಾರಿ ಶಾಲೆ, ಆಸ್ಪತ್ರೆಯಲ್ಲಿ ಉಚಿತ ಸೌಲಭ್ಯಗಳು ದೊರೆಯುತ್ತವೆ. ಆದರೆ ದೇವರ ದರ್ಶನಕ್ಕೆ ಹೋದರೆ ಶುಲ್ಕ ಪಾವತಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು.
ವಿದ್ಯಾರ್ಥಿಗಳು ಕೌಶಲ್ಯದ ಮೂಲಕ ಬದಲಾವಣೆ ತರಲು ಸಾಧ್ಯವಿದೆ. ಇದಕ್ಕೆ ಯೋಜನಾ ಬದ್ಧವಾಗಿ ನಡೆಯಬೇಕು. ವಿಜ್ಞಾನದಿಂದ ಕ್ರೋಮೋಜೋಮ್‌ಗಳನ್ನು ಬಳಕೆ ಮಾಡಿದರೆ ಎಲ್ಲವೂ ಸರಿದೂಗಿಸಬಹುದಾಗಿದೆ ಎಂದು ತಿಳಿಸಿದರು.
ವಿಜ್ಞಾನಿಗಳು ಸಂಶೋಧನೆ ಮಾಡಿದಂತೆ ನಿಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ನೀವೂ ಸಹ ಹೊಸ ಹೊಸ ಆವಿಷ್ಕಾರಗಳನ್ನು ಮಾಡಿ ಎಂದು ಸಲಹೆ ನೀಡಿದರು.
ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ ರಾಜ್ ಅರಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ಪರ್ಧೆಗಳ ನಿಯಮಗಳನ್ನು ಸರಿಯಾಗಿ ಪಾಲಿಸಿ ವಿಚಾರ ಮಂಡನೆ ಮಾಡಿ ಜಯಗಳಿಸಿ ಎಂದು ಹಾರೈಸಿದರು.
ತಾಲ್ಲೂಕು ಮಟ್ಟದ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀತ ಎಂಬ ಮೂರು ವಿಭಾಗಗಳಿದ್ದು, ನಗದು ಬಹುಮಾನ ನೀಡಲಾಗುವುದು. ವಿಜೇತರಾದ ವಿದ್ಯಾರ್ಥಿಗಳು ತಾವು ಹೊಂದಿರುವ ಬ್ಯಾಂಕಿನ ಖಾತೆ ಪಾಸ್‌ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಮೂರು ದಿನಗಳ ಒಳಗಾಗಿ ನೋಡಲ್ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದರು.
ಶಿಕ್ಷಕರಿಗೆ ಜಿಲ್ಲಾಮಟ್ಟದಲ್ಲಿ ಭಾಗವಹಿಸಲು ಅವಕಾಶ ಇದ್ದು, ತಾಲ್ಲೂಕು ಮಟ್ಟದಲ್ಲಿ ಎರಡು ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಯಟ್ ಉಪನ್ಯಾಸಕ ನೀಲಕಂಠಪ್ಪ ಕೆ.ಜಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ನಿಬಂಧನೆಗಳ ಬಗ್ಗೆ ವಿವರ ನೀಡಿದರು.
ಇಂದು ನಡೆಯುತ್ತಿರುವ ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ವಿಜೇತರಾದವರಿಗೆ ಸೆ.೧೮ ರಂದು ಚಿಕ್ಕಮಗಳೂರಿನ ಡಯಟ್‌ನಲ್ಲಿ ಜಿಲ್ಲಾ ಮಟ್ಟದ ವಿಜ್ಞಾನಗೋಷ್ಠಿ ನಡೆಯಲಿದ್ದು, ಅವಕಾಶ ಕಲ್ಪಿಸಲಾಗುವುದು. ಸೆ.೨೦ ರಂದು ಎಂಇಎಸ್ ನಲ್ಲಿ ಜಿಲ್ಲಾಮಟ್ಟದ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಜಿಲ್ಲಾಮಟ್ಟದ ನಾಟಕ ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಒಂದು ಪ್ರದರ್ಶನಕ್ಕೆ ೮ ಜನ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದೆಂದು ಹೇಳಿದರು.
೬ ಜಿಲ್ಲೆಯನ್ನು ಸೇರಿಸಿ ವಿಭಾಗಮಟ್ಟ ಮಾಡಿದ್ದು, ಜಿಲ್ಲಾಮಟ್ಟದಲ್ಲಿ ಗೆದ್ದವರು ಭಾಗವಹಿಸಲು ಅವಕಾಶ ನೀಡಲಾಗಿದೆ. ವಿಭಾಗ ಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್.ಎಂ ಓಂಕಾರಪ್ಪ, ನೀಲಕಂಠಪ್ಪ ಹೆಚ್.ಎಂ, ನಾಗರಾಜ್ ಎ.ಎಂ, ಗಂಗಾಧರ್ ಬಿ.ವಿ, ಮಂಜುನಾಥ್ ಕೆ.ಎಂ, ಪ್ರಕಾಶ್.ಪಿ, ತೀರ್ಪುಗಾರರಾಗಿ ಪ್ರಭಾಕರ್ ಕೆ.ಆರ್ ಭಾಗವಹಿಸಿದ್ದರು.ಶಿಕ್ಷಣ ಸಂಯೋಜಕ ಜಿ.ಎಂ ಜಗದೀಶ್ ಸ್ವಾಗತಿಸಿ, ಮಧು ಎಸ್.ಬಿ ವಂದಿಸಿದರು.
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu24 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ