Mysore
ಚುನಾವಣಾ ಬಹಿಷ್ಕಾರಕ್ಕೆ ಗ್ರಾಮ ಸಹಾಯಕರ ನಿರ್ಧಾರ

ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ನೀಡಬೇಕು ಹಾಗೂ ಚುನಾವಣಾ ಭತ್ಯೆ ನೀಡದಿದ್ದರೆ ಚುನಾವಣೆ ಬಹಿಷ್ಕಾರಯನ್ನು ಬಹಿಷ್ಕಾರ ಮಾಡುವಂತೆ ನಂಜನಗೂಡಿನಲ್ಲಿ ಗ್ರಾಮ ಸಹಾಯಕರ ವತಿಯಿಂದ ಜಿಲ್ಲಾ ಕಾರ್ಯ ಕಾರಿಣಿ ಸಭೆಯಲ್ಲಿ ಗ್ರಾಮ ಸಹಾಯಕರು ಒತ್ತಾಯಿಸಿದ್ದಾರೆ.
ನಂಜನಗೂಡು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಗ್ರಾಮ ಸಹಾಯಕರ ಕುಂದು ಕೊರತೆಗಳ ಸಭೆಯನ್ನು ನಡೆಸಲಾಯಿತು.
ಗ್ರಾಮ ಸಹಾಯಕರ ರಾಜ್ಯಾಧ್ಯಕ್ಷ ದೇವರಾಜು ಮಾತನಾಡಿ, ರಾಜ್ಯದಲ್ಲಿ ಸುಮಾರು 10,400 ಗ್ರಾಮ ಸಹಾಯಕರಿದ್ದೇವೆ. ಕಂದಾಯ ಇಲಾಖೆಯ ಎಲ್ಲಾ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರತಿ ಗ್ರಾಮಗಳಲ್ಲಿ ತಿಳುವಳಿಕೆ ನೀಡಲು ಸಂದೇಶ ರವಾನಿಸಲು , ಹಾಗೂ ಚುನಾವಣಾ ಸಂದರ್ಭದಲ್ಲಿ ಗ್ರಾಮ ಸಹಾಯಕರ ಪಾತ್ರ ಬಹು ಮುಖ್ಯವಾಗಿರುತ್ತದೆ.
ಗ್ರಾಮ ಸಹಾಯಕ ಗ್ರಾಮ ಸೈನಿಕರಂತೆ ಕೆಲಸ ಮಾಡುತ್ತಾರೆ. ಮತಪೆಟ್ಟಿಗೆ ಹೊತ್ತು ಸಾಗಿಸುವುದರಿಂದ ಹಿಡಿದು ಕೌಟಿಂಗ್ ಮುಗಿಯುವವರೆಗೂ ನಮ್ಮದೇ ಆದ ಜವಾಬ್ದಾರಿ ಇರುತ್ತೆ. ಸರಿಯಾದ ಊಟ ನೀರಿನ ವ್ಯವಸ್ಥೆಯು ಇಲ್ಲದೆ ಹೆಂಡತಿ ಮಕ್ಕಳನ್ನು ಬಿಟ್ಟು ಕೆಲಸ ಮಾಡಿದ್ದೇವೆ. ಆದರೆ, ಕಂದಾಯ ಇಲಾಖೆ ನಮಗೆ ಕನಿಷ್ಠ ವೇತನ, ಗೌರವ ಭತ್ಯೆ, ಸೇವಾ ಭದ್ರತೆ ಯಾವ ಸೌಲಭ್ಯವನ್ನು ನೀಡಿಲ್ಲ. ನಮ್ಮ ಕುಟುಂಬ ಹಾಗೂ ಮಕ್ಕಳ ವಿದ್ಯಾಭ್ಯಾಸ ನಿರ್ವಹಣೆಗೆ ತುಂಬಾ ಕಷ್ಟವಾಗಿದೆ. ಬಳ್ಳಾರಿಯಲ್ಲಿ ಕೊರೋನ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮೂರು ಜನ ಗ್ರಾಮ ಸಹಾಯಕರು ಕೊರೊನದಿಂದ ಸಾವನ್ನಪ್ಪಿದರು. ಖಾಯಂ ನೌಕರರಲ್ಲ ಎಂದು ಪರಿಗಣಿಸಿ ಅವರಿಗೆ ಯಾವುದೇ ಪರಿಹಾರವನ್ನು ನೀಡಲಿಲ್ಲ. ಇಂತಹ ಪರಿಸ್ಥಿತಿ ಬರಬಾರದು ಎಂದು ಮಾನ್ಯ ಮುಖ್ಯಮಂತ್ರಿಗಳಿಗೂ ಮನವಿ ಕೊಟ್ಟಿದ್ದೇವೆ.
ಈ ಕೂಡಲೇ ಡಿ ಗ್ರೂಪ್ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಇಲ್ಲವಾದರೆ ರಾಜ್ಯಾದಂತ ಗ್ರಾಮ ಸಹಾಯಕರೆಲ್ಲರೂ ಮುಂದಿನ ಚುನಾವನೆಗಳನ್ನು ಬಹಿಷ್ಕರಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಹಲೋ ಗ್ರಾಮ ಸಹಾಯಕ ಚಲೋ ಬೆಳಗಾಂ ಮಾಡು ಇಲ್ಲವೇ ಮಡಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಿರಸ್ತೆದಾರ್ ಶ್ರೀನಾಥ್, ರಾಜ್ಯ ಪ್ರದಾನ ಕಾರ್ಯದರ್ಶಿ ಬಿ. ಶಿವರುದ್ರಪ್ಪ, ಜಿಲ್ಲಾ ಅಧ್ಯಕ್ಸ ಬಸವರಾಜು, ತಾಲ್ಲೂಕು ಅಧ್ಯಕ್ಷ ಸತೀಶ್, ನಂಜುಂಡ, ಜವರಯ್ಯ, ಎಲ್ಲಾ ಗ್ರಾಮ ಸಹಾಯಕರು ಹಾಜರಿದ್ದರು.
Mysore
ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Mysore4 days ago
ಮುಖ್ಯ ಶಿಕ್ಷಕ ಮತ್ತು ಡಿ ದರ್ಜೆ ನೌಕರ, ಶಾಲಾ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ – ಆರೋಪ
-
Hassan1 day ago
ಕಾಡಾನೆ ದಾಳಿಗೆ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತು ಆನೆ ಅರ್ಜುನ ಬಲಿ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore4 days ago
ಹಳೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ದರಿದ್ರ ನನಗೆ ಬಂದಿಲ್ಲ, ಹೊಸದಾಗಿ ತರುವ ತಾಕತ್ತು ನನಗೆ ಇದೆ – ಶಾಸಕ ಡಿ. ರವಿಶಂಕರ್