Mandya
ಜವಾಬ್ದಾರಿಯುತವಾಗಿ ಚುನಾವಣೆ ಕಾರ್ಯ ಮುಗಿಸಿ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನಲೆಯಲ್ಲಿ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಗಾರ
ಮಂಡ್ಯ: ಚುನಾವಣಾ ಆಯೋಗ ನಿಗದಿಪಡಿಸಿರುವ ನಿಯಮಗಳ ಅನುಸಾರ ನಿರ್ವಹಿಸಿ, ಜೊತೆಗೆ ಚುನಾವಣಾ ಕೆಲಸಗಳು ಒತ್ತಾಯಪೂರ್ವಕವಾಗಿರಬಾರದು ಹಾಗೂ ಜವಾಬ್ದಾರಿಯುತವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.
ನಗರದ ಮಿಮ್ಸ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನಲೆಯಲ್ಲಿ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚುನಾವಣೆ ಕೆಲಸಗಳನ್ನು ನೈತಿಕ ಭಯದೊಂದಿಗೆ, ಪಾರದರ್ಶಕವಾಗಿ, ಚುನಾವಣಾ ಆಯೋಗ ನಿಗದಿಪಡಿಸಿರುವ ನಿಯಮಗಳ ಅನುಸಾರ ನಿರ್ವಹಿಸಬೇಕು. ಯಾವುದೇ ಸ್ವಯಂ ನಿರ್ಧಾರಕ್ಕೆ ಅವಕಾಶವಿಲ್ಲ ಚುನಾವಣಾ ಕೆಲಸಗಳಿಗೆ ನಿಯೋಜಿಸಿರುವ ಸಿಬ್ಬಂದಿಗೆ ಮೊದಲ ಆದ್ಯತೆ ಚುನಾವಣಾ ಕೆಲಸವಾಗಬೇಕು. ಸೆಕ್ಟರ್ ಅಧಿಕಾರಿಗಳು ಮೊದಲು ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆಗಳನ್ನು ಪರಿಶೀಲಿಸಬೇಕು. ರ್ಯಾಂಪ್(ramp), ಕುಡಿಯುವ ನೀರು, ಶೌಚಾಲಯ, ಬಾಗಿಲು ಕಿಟಕಿ, ವಿದ್ಯುತ್ ವ್ಯವಸ್ಥೆ, ವಿದ್ಯುತ್ ದೀಪ, ಕೊಠಡಿಗಳಿಗೆ ಒಳಗೆ, ಹೊರ ಹೋಗಲು ಮತದಾರರಿಗೆ ಸರಿಯಾದ ವ್ಯವಸ್ಥೆ ಸೇರಿದಂತೆ ಮುಂತಾದ ಮೂಲ ವ್ಯವಸ್ಥೆಗಳು ಇರುವ ಬಗ್ಗೆ ತಹಶೀಲ್ದಾರ್ ಅವರಿಗೆ ವರದಿ ನೀಡಬೇಕು. ಯಾವುದೇ ವ್ಯವಸ್ಥೆ ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇ.ವಿ.ಎಂ.ಮ್ಯಾನುಯಲ್‌ನ್ನು ಅಧ್ಯಯನ ಮಾಡಿ ಸಂಪೂರ್ಣವಾಗಿ ತಿಳಿದುಕೊಂಡು ಕೆಲಸ ನಿರ್ವಹಿಸಬೇಕು. ಚುನಾವಣಾ ದಿನಾಂಕ ಪ್ರಕಟವಾದ ತಕ್ಷಣ ಶಾಸಕರು, ಸಚಿವರ, ಫೋಟೋ, ವಿಡಿಯೋಗಳನ್ನು ವೆಬ್ ಸೈಟ್, ಹೋರ್ಡಿಂಗ್ಸ್‌ಗಳಲ್ಲಿ, ಸರ್ಕಾರಿ ಯೋಜನೆಗಳಲ್ಲಿ ಮುಚ್ಚಬೇಕು ಅಥವಾ ತೆರವುಗೊಳಿಸಬೇಕು. ಖಾಸಗಿ ವಾಹನಗಳಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಫ್ಲಾಗ್, ಬ್ಯಾನರ್ ಗಳನ್ನು ಹಾಕಿಕೊಳ್ಳಲು ಅನುಮತಿ ಅವಶ್ಯಕವಾಗಿರುತ್ತದೆ ಅನುಮತಿ ಪಡೆಯದೇ ಅಭ್ಯರ್ಥಿಯು ಪ್ರಚಾರಕ್ಕೆ ಬಳಸುತ್ತಿದ್ದಾರೆ ವಾಹನವನ್ನು ವಶಕ್ಕೆ ಪಡೆಯಬೇಕು ಎಂದರು.
ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕೆಲಸ ಪೂರ್ಣಗೊಂಡಿದ್ದಾರೆ ಬಿಲ್ ಪಾವತಿಗೆ ತೊಂದರೆ ಇಲ್ಲ. ಯಾವುದೇ ಹೊಸ ಕಾಮಗಾರಿಗೆ ಮಂಜೂರಾತಿ ಹಾಗೂ ಪ್ರಾರಂಭಿಸಲು ಅವಕಾಶವಿಲ್ಲ. ಟೆಂಡರ್ ಕರೆಯಲು, ಕಾರ್ಯಾದೇಶ ನೀಡಲು ಅವಕಾಶವಿಲ್ಲ. ಕಾರ್ಯಾದೇಶ ನೀಡಿದ್ದರೂ ಕೆಲಸ ಪ್ರಾರಂಭಿಸಲು ಅವಕಾಶವಿಲ್ಲ, ಮತದಾನದ ದಿನದಂದು ಅಭ್ಯರ್ಥಿಯು 3 ವಾಹನಕ್ಕೆ ಮಾತ್ರ ಅವಕಾಶವಿರುತ್ತದೆ. ಇದರ ಬಗ್ಗೆ ನಿಗಾವಹಿಸಿ. ವಿಡಿಯೋ ಎಲ್.ಇ.ಡಿ.ವಾಹನಕ್ಕೆ ಅನುಮತಿ ಪತ್ರ ಪಡೆದಿರುವುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಸರ್ಕಾರದ ಅನುದಾನ ಬಳಸಿ ಯಾವುದೇ ಜಾಹೀರಾತು ನೀಡಲು ಅವಕಾಶವಿಲ್ಲ. ಇವುಗಳ ಬಗ್ಗೆ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಿ, ಚುನಾವಣೆಯ ನಿರ್ವಹಣೆ ಕಾನೂನು ಸುವ್ಯವಸ್ಥೆ ಕಾಪಾಡುವುದು, ಮಾದರಿ ನೀತಿ ಸಂಹಿತೆ, ಚುನಾವಣಾ ಕಾರ್ಯಗಳ ಸುಗಮ ನಿರ್ವಹಣೆ, ಇವಿಎಂ(ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್)ಗಳ ಕಾರ್ಯನಿರ್ವಹಣೆ, ಎಲ್ಲಾ ಅಧಿಕಾರಿಗಳ ಮಧ್ಯೆ ಸಮನ್ವಯತೆ ಸಾಧಿಸುವುದು ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವುದು ಸೆಕ್ಟರ್ ಅಧಿಕಾರಿಗಳ ಗುರಿ ಮತ್ತು ಉದ್ದೇಶಗಳಾಗಿವೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಸೆಕ್ಟರ್ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದಾಗ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು. ಕಳೆದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ, ನಗರಸಭೆ, ಪುರಸಭೆ, ನಗರ ಪಾಲಿಕೆ, ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ನಡೆದ ಘಟನೆಗಳು ದೂರುಗಳು ಸನ್ನಿವೇಶಗಳನ್ನು ತಿಳಿದು ಕಾರ್ಯನಿರ್ವಹಿಸಬೇಕು. ಕೆಲವು ಉದಾಹರಣೆಗಳನ್ನು ನೀಡಿ ಯಾವ ರೀತಿ ಕೆಲಸ ನಿರ್ವಹಿಸಬೇಕು ಎಂದು ಸೆಕ್ಟರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಮುಡಾ ಆಯುಕ್ತ ಲೋಕನಾಥ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಜಿ.ಪಂ.ಉಪಕಾರ್ಯದರ್ಶಿ ಆನಂದ್ ಕುಮಾರ್ ಭಾಗವಹಿಸಿದ್ದರು.
Mandya
ಜು.11 ‘ಸೆಪ್ಟೆಂಬರ್ 10’ ಕನ್ನಡ ಚಲನಚಿತ್ರ ಬಿಡುಗಡೆ : ಓಂ ಸಾಯಿಪ್ರಕಾಶ್

ಮಂಡ್ಯ: ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂಬ ಧ್ಯೇಯದೊಂದಿಗೆ `ಸೆಪ್ಟೆಂಬರ್ ೧೦’ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಿಸಲಾಗಿದ್ದು, ಜುಲೈ.11ರಂದು ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತವರಿಗೆ ಬಾ ತಂಗಿ, ಮುದ್ದಿನ ಮಾವ, ಅಣ್ಣ ತಂಗಿ, ಸೋಲಿಲ್ಲದ ಸರದಾರದಂತಹ ಯಶಸ್ವಿ ಚಲನಚಿತ್ರಗಳ ನಿರ್ದೇಶನ ಮಾಡಿದ್ದು, `ಸೆಪ್ಟೆಂಬರ್ 10೦’ ನನ್ನ 105ನೇ ಚಲನಚಿತ್ರವಾಗಿದೆ ಎಂದರು.
ಸೆಪ್ಟೆಂಬರ್.10 ರೈತ ಆತ್ಮಹತ್ಯೆ ತಡೆ ದಿನವಾಗಿದ್ದು, ಆತ್ಮಹತ್ಯೆಯನ್ನೇ ಮೂಲವನ್ನಾಗಿಸಿಕೊಂಡು ಚಲನಚಿತ್ರ ನಿರ್ಮಿಸಲಾಗಿದೆ. ದುರ್ಬಲ ಹಾಗೂ ಸಂಕುಚಿತ ಮನಸ್ಸನವರಿಗೆ ಉತ್ತಮ ಸಂದೇಶ, ಮಾರ್ಗದರ್ಶನ ನೀಡುವ ಪ್ರಯತ್ನ ಚಿತ್ರದಲ್ಲಿದೆ. ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿದ ರೈತ, ಪ್ರೇಮಿಗಳು, ವ್ಯಾಪಾರಿಗಳು, ಪರೀಕ್ಷೆ ಎದುರಿಸಲಾಗದ, ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳ ಆತ್ಮಹತ್ಯೆಯ ಸತ್ಯ ದರ್ಶನವನ್ನು ಚಿತ್ರದ ಮೂಲಕ ತೋರ್ಪಡಿಸಲಾಗುತ್ತಿದೆ ಎಂದು ಹೇಳಿದರು.
ಚಿತ್ರದ ಚಿತ್ರೀಕರಣವನ್ನು ಬೆಂಗಳೂರಿನಲ್ಲೇ ಮಾಡಲಾಗಿದ್ದು, 60 ಲಕ್ಷ ರೂ.ಗಳನ್ನು ವ್ಯಯಿಸಲಾಗಿದೆ. ನಿಮಾನ್ಸ್‌ನ ವೈದ್ಯರೂ ಮಾನಸಿಕವಾಗಿ ಕುಗ್ಗಿದವರಿಗೆ ಮಾನಸಿಕ ಸ್ಥೈರ್ಯ ನೀಡಲಿದೆ ಎಂದು ಹೇಳಿರುವುದಾಗಿ ಅವರು ತಿಳಿಸಿದರು.
2020೨೦೨೦ರಲ್ಲೇ ಚಲನಚಿತ್ರ ಪ್ರಾರಂಭಿಸಿ ಮುಗಿಸುವಷ್ಟರಲ್ಲಿ ಕೊರೋನದಿಂದಾಗಿ ಬಿಡುಗಡೆ ಮಾಡಲಾಗಿರಲಿಲ್ಲ, ಚಿತ್ರಕ್ಕೆ ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಂಗೀತ, ಜೆ.ಜಿ.ಕೃಷ್ಣರ ಛಾಯಾಗ್ರಹಣ, ಬಿ.ಎ.ಮಧು ಅವರ ಸಂಭಾಷಣೆಯಿದೆ. ಚಲನಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಬಿಬಿಎಂಪಿ ಮಾಜಿ ಸದಸ್ಯ ಡಾ.ರಾಜು ಅವರ ಸಹಕಾರದಿಂದ ಚಲನಚಿತ್ರ ಬಿಡುಗಡೆಯಾಗುತ್ತಿದ್ದು, ಚಲನಚಿತ್ರ ಪ್ರಿಯರು ಚಿತ್ರ ವೀಕ್ಷಿಸಿ, ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಹ ನಿರ್ದೇಶಕ ಶಶಿಕಿರಣ್, ಹಿರಿಯ ನಟ ಮೀಸೆ ಆಂಜನಪ್ಪ (ಶಂಖನಾದ ಆಂಜಿನಪ್ಪ), ನಟರಾದ ತುಳಸಿ, ಜಯಸಿಂಹ, ಪತ್ರಕರ್ತ ಹಲ್ಲೆಗೆರೆ ಗುರುಸ್ವಾಮಿ, ಜಯರಾಮ್ ಇದ್ದರು.
Mandya
ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

ಮಂಡ್ಯ : “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ. ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.
ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ ಎಂದು ಹೇಳಿದರು.
ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.
ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಎಸ್‌ಎಚ್‌ಎಂ ಜ್ಞಾನ ಕ್ಯಾಂಪಸ್‌ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಉಪಸ್ಥಿತರಿದ್ದರು.
Mandya
ಶ್ರಮಜೀವಿ ರೈತರಿಗೆ ಭೂತಾಯಿ ಮೋಸ ಮಾಡುವುದಿಲ್ಲ : ಸಚಿವ ಎನ್.ಚಲುವರಾಯಸ್ವಾಮಿ

ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ರೈತ ಉದ್ಪಾದಕರ ಕಂಪನಿಯ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಪೂರಕ ಸಂಸ್ಥೆಗಳು ಇದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮುಖಾಂತರ ಆರ್ಥಿಕವಾಗಿ ಸದೃಢರಾಗಬೇಕು ಎಂದರು.
ತಾವೇ ಉತ್ಪಾದಕ ಕಂಪನಿಗಳ ನಿರ್ವಹಣೆ ಮಾಡುವ ವ್ಯವಸ್ಥೆ ಇದ್ದರೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದ್ದು, ರೈತರು ಇಂತಹ ಕೃಷಿ ಪೂರಕ ವ್ಯವಸ್ಥೆಗಳಿಗೆ ಹಾಗೂ ಕೃಷಿ ಭೂಮಿಯ ಬೆಳವಣಿಗೆ ಮಾಡಲು ಅನೇಕ ಯೋಜನೆಗಳು ರೂಪಿಸಿದ್ದು ಕೃಷಿ ಅವಲಂಬಿತ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಸಂಘದ ಅಧ್ಯಕ್ಷರಾದ ಹಾಗೂ ರಾಜ್ಯ ನಿರ್ದೇಶಕರಾದ. ರಾಜೇಶ್ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಹಸೀಲ್ದಾರ್ ಆದರ್ಶ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್, ಕಾರಸವಾಡಿ ಮಹದೇವ, ನೇಗಿಲು ಯೋಗಿ ಬಸವರಾಜು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷರುಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ಕರಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಪಶು ಸಂಗೋಪನ ಚಿಕಿತ್ಸಾಲಯ ಉದ್ಘಾಟನೆ ಹಾಗೂ ದೇವಲಾಪುರ ಹ್ಯಾಂಡ್ ಪೋಸ್ಟ್ ಪಾಲಿಟೆಕ್ನಿಕ್ ಪ್ರಯೋಗಾಲಯ ಹಾಗೂ ಪ್ರಥಮ ದರ್ಜೆ ಕಾಲೇಜು ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅರೆ ಅಲ್ಪಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಗುದ್ದಲಿ ಪೂಜೆ ಹಾಗೂ ಅಲ್ಪಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದರು.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಬಾಡಗ ಮಹಿಳಾ ಸಾಂಸ್ಕೃತಿಕ ಮಂಡಳಿಗೆ ಬೆಳ್ಳಿ ಹಬ್ಬದ ಸಂಭ್ರಮ
-
Mandya24 hours ago
ಜೂ. 26ಕ್ಕೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan22 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya23 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ