Connect with us

Mandya

ಉತ್ತಮ ಅಭ್ಯರ್ಥಿ ಆಯ್ಕೆಗೆ ಮತದಾನ ಮಾಡೋಣ: ಮಂಡ್ಯ ರಮೇಶ್‌

Published

on

ಮಂಡ್ಯ: ಮತದಾನದ ದಿನದಂದು ತಪ್ಪದೇ ಮತದಾನ ಮಾಡುವ ಮೂಲಕ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ ಎಂದು ಜಿಲ್ಲಾ ಸ್ವೀಪ್ ಐಕಾನ್ ಮಂಡ್ಯ ರಮೇಶ್ ಮನವಿ ಮಾಡಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಮತದಾನದ ಮಹತ್ವ ಹಾಗೂ ನೈತಿಕ ಮತದಾನ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನೋರಂಜನೆಗಾಗಿ ನಾವು ಬಹಳಷ್ಟು ಸಮಯವನ್ನು ಜಂಗಮವಾಣಿಯೊಂದಿಗೆ ಕಳೆಯುತ್ತೇವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯುವ ಮತದಾನಕ್ಕಾಗಿ ಏ.26 ರಂದು ಸಮಯ ಮೀಸಲಿಟ್ಟು, ತಪ್ಪದೇ ಮತದಾನ ಮಾಡೋಣ ಎಂದು ಕರೆ ನೀಡಿದರು.

ಒಂದು ಮತದಾನದಿಂದ ಯಾವ ಬದಲಾವಣೆಯಾಗುತ್ತದೆ ಎಂಬ ಆಲೋಚನೆಯಿಂದ ಪ್ರತಿಯೊಬ್ಬರೂ ಹೊರಬರಬೇಕು. ಬೇರೆ ಊರು, ದೇಶಗಳಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಜನರಿದ್ದಾರೆ. ಅವರು ನಮಗೆ ನಿದರ್ಶನವಾಗಬೇಕು. ಮತದಾನ ಪವಿತ್ರವಾದ, ಜವಾಬ್ದಾರಿಯುತ ಹಾಗೂ ಆತ್ಮತೃಪ್ತಿ ನೀಡುವ ಕೆಲಸ. ಎಲ್ಲರೂ ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಸುತ್ತ ಮುತ್ತಲು ಇರುವ ಸಾರ್ವಜನಿಕರು ಹಾಗೂ ಯುವಜನರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೆರೇಪಿಸಬೇಕು ಎಂದು ತಿಳಿಸಿದರು.

ಮಹಿಳೆಯರು ಕುಟುಂಬದ ಶಕ್ತಿಯಾಗಿದ್ದು, ಅವರು ಹೇಳುವ ಮಾತನ್ನು ಎಲ್ಲರೂ ಕೇಳುತ್ತಾರೆ. ಮಹಿಳೆಯರು ತಮ್ಮ ಮನೆಯಲ್ಲಿ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವ ಬಗ್ಗೆ ಖಾತ್ರಿ ಮಾಡಿಕೊಳ್ಳಿ. ಮನೆಯಲ್ಲಿ ಪ್ರತಿ ದಿನ ಏ.26 ರಂದು ಮತದಾನ ಮಾಡಿ ಎಂಬ ಸುಪ್ರಭಾತವನ್ನು ಅಳವಡಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್‌ವೀರ್‌ ಆಸೀಫ್ ಮಾತನಾಡಿ, ಮತ ಹಾಕುವುದು ನಮ್ಮ ನಿಮ್ಮೆಲ್ಲರ ಹಕ್ಕು. ಅದು ಪ್ರತಿಯೊಬ್ಬರ ಕರ್ತವ್ಯ ಆದ್ದರಿಂದ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ. ನಮ್ಮ ಮತ ಮಾರಾಟಕ್ಕಿಲ್ಲ ಅದು ಅಮೂಲ್ಯವಾದ ಶಕ್ತಿ ಎಂಬುದನ್ನು ಅರಿತು ಮತದಾನ ಮಾಡೋಣ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ದಿನನಿತ್ಯ ಸಾರ್ವಜನಿಕರಿಗೆ ಕೆಲಸವಿರುವುದು ಸರ್ವೆ ಸಾಮಾನ್ಯ. ಏ.26 ರಂದು ತಮ್ಮ ಎಲ್ಲಾ ಕೆಲಸಗಳನ್ನು ಬದಿಗಿಟ್ಟು ಏ.26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಪ್ಪದೇ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ನಗರಸಭೆ ಆಯುಕ್ತ ಮಂಜುನಾಥ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ನಾನು ಮೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತೇನೆ, ಸರಿ

Published

on

ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ ಮೆಂಟ್ ಕೊಡುತ್ತಾರೋ ನೋಡೋಣ ಎಂದ ಕೇಂದ್ರ ಸಚಿವರು

ಮಂಡ್ಯ : ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತದ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿ, ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಹೇಳಿಕೆ ನೀಡಿದರು.

ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟರು.

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ.. ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.

 

ತುಂಗಭದ್ರ ಕ್ರಸ್ಟ ಗೇಟ್ ಬಗ್ಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಆರ್.ಎಸ್ ಜಲಾಶಯ ಸೇರಿದಂತೆ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು ಸಚಿವರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.
ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಚಿವರು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.
ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತಿರುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Continue Reading

Mandya

ಕುಸಿಯುವ ಭೀತಿಯಲ್ಲಿ ಪ್ರಯಾಣಿಕರ ತಂಗುದಾಣ

Published

on

ಮದ್ದೂರು : ತಾಲೂಕು ಕೊಪ್ಪ ಹೋಬಳಿಯ ಪ್ರಯಾಣಿಕರ ತಂಗು ನಿಲ್ದಾಣದ ಕುಸಿಯುವ ಹಂತದಲ್ಲಿದ್ದು, ದುರಸ್ಥಿ ಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ತಂಗುನಿಲ್ದಾಣದ ಯಾವಾಗ ಬಿಳುತ್ತಾದೋ ಎಂಬ ಭೀತಿ ಪ್ರಯಾಣಿಕರಲ್ಲಿ ಶುರುವಾಗಿದ್ದು, ಮಳೆ ಸುರಿದಾಗ ನಿಲ್ದಾಣದ ಮೇಲ್ಛಾವಣಿಯಿಂದ ನೀರು ಸೋರುತ್ತಿದೆ.

ಇದೀಗ ಮಳೆಗಾಲ ಶುರುವಾಗಿರುವುದರಿಂದ ಸಾರ್ವಜನಿಕ ಕುಳಿತು ಕೊಳ್ಳಲು ಭಯ ಭೀತರಾಗುತ್ತಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಇದರ ಕಡೆ ಗಮನಹರಿಸಿ ದುರಸ್ಥಿಗೆ ಮುಂದಾಗಬೇಕೆಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದ್ದಾರೆ.

Continue Reading

Mandya

ಶುದ್ದ ಕುಡಿಯುವ ನೀರಿನ ಘಟಕಕ್ಕೆ ಶಾಸಕರ ಭಾವಚಿತ್ರ ಅಳವಡಿಕೆ – ಕಂಪನಿಯಿಂದ ಬೀಗ

Published

on

ಭಾರತೀನಗರ : ಟಯೋಟಾ ಕಂಪನಿಯಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣ ಮಾಡಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಅವರ ಭಾವಚಿತ್ರ ಅಳವಡಿಸಿದ್ದ ಹಿನ್ನೆಲೆ ಕಂಪನಿಯಿಂದ ಘಟಕಕ್ಕೆ ಬೀಗ ಜಡಿಯಲಾಗಿದೆ.

ಕಳೆದ ಜುಲೈ 30 ರಂದು ಟಯೋಟಾ ಖಂಪನಿಯವರು ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಶಾಸಕ ಕೆ.ಎಂ.ಉದಯ್ ಅವರ ಭಾವಚಿತ್ರ ಅಳವಡಿಸಲಾಗಿತ್ತು. ಈ ಸಂಬಂಧ ಜೆಡಿಎಸ್, ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಜೊತೆಗೆ ಟಯೋಟಾ ಕಂಪನಿಯ ಅಧಿಕಾರಿ ವರ್ಗದವರಿಗೂ ವಿಷಯ ಮುಟ್ಟಿಸಿದ್ದರು. ಆನಂತರವೂ ಕೆಲ ದಿನಗಳು ಶುದ್ಧ ಕುಡಿಯುವ ನೀರಿನ ಘಟಕದ ಬಾಗಿಲು ಮುಂಚಿದಂತೆಯೇ ಇತ್ತು. ಇದೀಗ ಟಯೋಟಾ ಕಂಪನಿಯ ಉನ್ನತಾಧಿಕಾರಿಗಳ ಸೂಚನೆಯ ಮೇರೆಗೆ ಕಂಪನಿಯ ಸಿಬ್ಬಂದಿ ಆಗಮಿಸಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೀಗ ಜಡಿದು ಹೋಗಿದ್ದಾರೆ.

ಈ ಘಟನೆಯಿಂದ ಸಾರ್ವಜನಿಕರಿಗೆ ಲಭ್ಯವಾಗುತ್ತಿದ್ದ ಶುದ್ಧ ಕುಡಿಯುವ ನೀರಿಗೂ ಕಲ್ಲು ಬಿದ್ದಂತಾಗಿದೆ. ಟಯೋಟಾ ಕಂಪನಿ ನಿರ್ಮಿಸಿದ್ದ ಘಟಕದ ಮೇಲೆ ಶಾಸಕರ ಭಾವಚಿತ್ರ ಅಳವಡಿಸುವ ಅಗತ್ಯವೇನಿತ್ತು ಎಂದ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.

Continue Reading

Trending

error: Content is protected !!