Chikmagalur
ಚಿಕ್ಕಮಗಳೂರಿಗರಿಗೆ ಧಕ್ಕುತ್ತಾ ಲೋಕಾ ಟಿಕೆಟ್?
 
																								
												
												
											ಶ್ರೀಕಂಠಪ್ಪರ ಬಳಿಕ ಕಾಫಿನಾಡಿಗರಿಗಿಲ್ಲ ಸಂಸತ್ ಪ್ರವೇಶ ಅವಕಾಶ! ಕೈ-ಕಮಲದಲ್ಲೂ ಲೋಕಾಟಿಕೆಟ್ ನದ್ದೇ ಸದ್ದು! ಚಿಕ್ಕಮಗಳೂರಿನ ಕಡೆಯ ಸಂಸದ ಡಿ.ಸಿ ಶ್ರೀಕಂಠಪ್ಪ

ಯೋಗೀಶ್ ಕಾಮೇನಹಳ್ಳಿ
ಚಿಕ್ಕಮಗಳೂರು : ವಿಧಾನ ಸಭಾ ಚುನಾವಣೆ ಕಾವು ತಣ್ಣಗಾಗಿದ್ದು, ಲೋಕಸಭಾ ಚುನಾವಣೆಯ ಕಾವುಎಲ್ಲೆಡೆ ಹೊತ್ತಿಕೊಳ್ಳುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಎರಡೂ ರಾಷ್ಟ್ರೀಯ ಪಕ್ಷಗಳಿಂದಲೂ ಈ ಬಾರಿ ಚಿಕ್ಕಮಗಳೂರಿನವರಿಗೆ ಟಿಕೆಟ್ ನೀಡಬೇಕೆಂಬ ಕೂಗು ವ್ಯಾಪಕವಾಗಿ ಕೇಳಿ ಬರತೊಡಗಿದೆ.
1952ರಲ್ಲಿ ರಚನೆಯಾಗಿ 2009ರ ಲೋಕಸಭಾ ಚುನಾವಣೆಯವರೆಗೂ ಅಸ್ತಿತ್ವದಲ್ಲಿದ್ದ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರ ಬಳಿಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವಾಗಿ ಮಾರ್ಪಟ್ಟಿತು. ಅಂದಿನಿಂದ ಇದುವರೆಗೂ ಚಿಕ್ಕಮಗಳೂರು ಜಿಲ್ಲೆಯವರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನೇ ಕೊಡದೆ, ಕೇವಲ ಉಡುಪಿ ಜಿಲ್ಲೆಯವರಿಗೆ ಮಣೆ ಹಾಕುತ್ತ ಬಂದಿರುವುದು ಚಿಕ್ಕಮಗಳೂರಿಗರಿಗೆ ನಿರಾಸೆ ತರಿಸಿದೆ, ಈ ಬಾರಿ ಚಿಕ್ಕಮಗಳೂರು ಜಿಲ್ಲೆಯವರಿಗೆ ಟಿಕೆಟ್ ನೀಡುವ ಮೂಲಕ ಅವಕಾಶ ಕಲ್ಪಿಸಬೇಕೆಂದು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ತರೀಕೆರೆ ವಿಧಾನಸಭಾಕ್ಷೇತ್ರಗಳನ್ನು ಹೊಂದಿದ್ದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ ಜನ್ಮ ನೀಡಿದ್ದಲ್ಲದೆ, ಡಿ.ಕೆ. ತಾರಾದೇವಿಯವರನ್ನು ಎರಡು ಬಾರಿ, ಡಿ.ಬಿ. ಚಂದ್ರೇಗೌಡ, ಡಿ.ಸಿ ಶ್ರೀಕಂಠಪ್ಪನವರಂತ ನಾಯಕರುಗಳನ್ನು ಮೂರು ಮೂರು ಬಾರಿ ಲೋಕಸಭೆಗೆ ಕಳುಹಿಸಿದೆ. ಆದರೆ, ಕ್ಷೇತ್ರ ಮರು ವಿಂಗಡಣೆಯ ಬಳಿಕ ಚಿಕ್ಕಮಗಳೂರಿನ ರಾಜಕೀಯ ಮುತ್ಸದ್ದಿಗಳು ಲೋಕಸಭೆಗೆ ಪ್ರವೇಶ ಮಾಡಲು ಅವಕಾಶವನ್ನೇ ಕಲ್ಪಿಸದಿರುವುದು ಬೇಸರದ ಸಂಗತಿಯಾಗಿದೆ.
ಸದ್ಯ ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾರ್ಕಳ, ಕಾಪು ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ ವಿಧಾನ ಸಭಾ ಕ್ಷೇತ್ರಗಳು ಸೇರಿಕೊಂಡು ಉಡುಪಿ ಚಿಕ್ಕಮಗಳೂರು ಲೋಕಸಭಾ ಕೇತ್ರ ರಚನೆಯಾಗಿದ್ದು ಕೇವಲ ಕರಾವಳಿಯವರಿಗೆ ಮಣೆ ಹಾಕುತ್ತಿದ್ದು, ಚಿಕ್ಕಮಗಳೂರಿನವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳು ಎರಡೂ ರಾಷ್ಟಿçÃಯ ಪಕ್ಷಗಳಲ್ಲಿಯೀ ಕಂಡುಬರುತ್ತಿವೆ. ಹಾಗೂ ತಮ್ಮ ಪಕ್ಷದ ನಾಯಕರುಗಳ ಮುಂದೆ ಜಿಲ್ಲೆಯ ಮುಖಂಡರಿಗೆ ಈ ಬಾರಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರಲಾರಂಭಿಸಿವೆ.
ಈ ಬಾರಿಯ 2024ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯವರನ್ನು ಹೊರತುಪಡಿಸಿ ಭೌಗೋಳಿಕವಾಗಿ ನೋಡಿದರೆ ಉಡುಪಿ ಜಿಲ್ಲೆಗಿಂತ ಅತೀ ಹೆಚ್ಚು ಸಮಸ್ಯೆ ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯ ಮುಖಂಡರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳೂ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕೆಲವು ಜ್ವಲಂತ ಸಮಸ್ಯೆಗಳಿಗೆ ಸ್ಪಂಧಿಸಬೇಕೆಂಬುದು ಎಲ್ಲರ ಆಶಯವಾಗಿದೆ.
ಕೈ ಪಾಳಯದಲ್ಲಿ ಲೋಕಾ ಟಿಕೆಟ್‌ಗೆ ಪೈಪೋಟಿ :
 
  
  
 
ಮಾಜಿ ಪರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯವಾಗಿ ಮರು ಹುಟ್ಟು ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಪಕ್ಷದ ಭದ್ರಕೋಟೆ ಎನಿಸಿಕೊಂಡಿದ್ದ ಕಾಫಿ ನಾಡಲ್ಲಿ ಡಿ.ಕೆ ತಾರಾ ದೇವಿ ಅವರ ಬಳಿಕ ಕಾಂಗ್ರೆಸ್ ಪಕ್ಷದಿಂದ ಯಾರೂ ಕೂಡಾ ಲೋಕಸಭೆ ಪ್ರವೇಶಿಸು ಸಾಧ್ಯವಾಗಿಲ್ಲ ಹಾಗೂ ಕ್ಷೇತ್ರ ಮರು ವಿಂಗಡಣೆ ಬಳಿಕ ಒಮ್ಮೆ ಕೆ. ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದನ್ನು ಬಿಟ್ಟರೆ ಉಳಿದೆಲ್ಲ ಅವಧಿಗೆ ಬಿಜೆಪಿಯೇ ಅಧಿಕಾರದಲ್ಲಿದೆ. ಇನ್ನೂ ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ ೫ಕ್ಕೆ ೫ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಮಹತ್ತರವಾದ ಪಾತ್ರ ವಹಿಸಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ ಅಂಶುಮಂತ್, ಎಐಸಿಸಿ ವಕ್ತಾರ ಬಿ.ಎಂ. ಸಂದೀಪ್, ಮಾಜಿ ಸಚಿವೆ ಡಾ. ಆರತಿ ಕೃಷ್ಣ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಇವರುಗಳು ಈಗಾಗಲೇ ಲೋಕಸಭಾ ಚುನವಣೆಗೆ ಟಿಕೆಟ್ ಕೇಳಿದ್ದು ಕ್ಷೇತ್ರದಾದದ್ಯಂತ ಓಡವನ್ನೂ ಆರಂಭಿಸಿದ್ದಾರೆ. ಲೋಕಸಭಾ ಚುನಾವಣೆಗೆ ಟಿಕೆಟ್‌ಗಾಗಿ ಅರ್ಜಿಸಲ್ಲಿಕೆಗೆ ಅವಕಾಶ ಕಲ್ಪಿಸಿದರೆ ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ಇನ್ನೂ ಸ್ವಲ್ಪ ದೊಡ್ಡದಾಗುವ ಲಕ್ಷಣಗಳಿವೆ.
ಕಮಲ ಪಡೆಯಲ್ಲೂ ಮಾರ್ಧನಿಸುತ್ತಿದೆ ಟಿಕೆಟ್ ಕೂಗು
 
 
ಇತ್ತೀಚೆಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಐದಕ್ಕೆ ಐದೂ ಕ್ಷೇತ್ರಗಳನ್ನು ಕಳೆದುಕೊಂಡು, ಒAದಷ್ಟು ದಿನ ಸೋಲಿನ ಅವಲೋಕನದ ಜೊತೆಗೆ ಪಕ್ಷವನ್ನು ಮತ್ತಷ್ಟು ಬಲಗೊಳಿಸಿಕೊಂಡಿರುವ ಬಿಜೆಪಿಯಲ್ಲಿಯೂ ಕೂಡಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರಿನ ಮುಖಂಡರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ. ಶೃಂಗೇರಿ ವಿಧಾನ ಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಡಿ.ಎನ್ ಜೀವರಾಜ್ ಅವರು ಇತ್ತೀಚೆಗಷ್ಟೇ ತಮ್ಮ ಮೇಲಿದ್ದ ಪ್ರಕರಣವೊಂದರಿAದ
ಖುಲಾಸೆಯಾಗಿ ಹೊರಬಂದಿದ್ದು ಅವರೂ ಕೂಡಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದು. ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಮತ್ತೊಂದೆಡೆ ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ ರವಿ ಅವರೂ ಕೂಡಾ ಈ ಬಾರಿ ಲೋಕಸಭಾ ಚುನಾವಣೆ ತಯಾರಿಯಲ್ಲಿದ್ದು, ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ ಮಾಡುವ ಇಂಗಿತವನ್ನು ತಮ್ಮ ಆಪ್ತ ವಲಯದಲ್ಲಿ ತೋಡಿಕೊಂಡಿದ್ದಾರೆ ಎನ್ನಲಾಗುತ್ತದೆಯಾದರೂ ಎಲ್ಲಿಯೂ ಕೂಡಾ ಅವಬರು ಬಹಿರಂಗವಾಗಿ ಹೇಳಿಕೊಂಡಿಲ್ಲ. ಆದರೂ ಈ ಬಾರಿ ಬಿಜೆಪಿಯಿಂದ ಲೋಕಸಭಾ ಚುನಾವಣೆಯ ಟಿಕೆಟ್‌ನ್ನು ಚಿಕ್ಕಮಗಳೂರಿನವರಿಗೆ ನೀಡಬೇಕೆಂಬ ಕೂಗು ಕಮಲ
ಪಡೆಯಲ್ಲಿ ಮಾರ್ಧನಿಸುತ್ತಿದೆ.
ಶ್ರೀಕಂಠಪ್ಪರ ಬಳಿಕ ಧಕ್ಕದ ಅವಕಾಶ : 
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಟ್ಟ ಕಡೆಯ ಸಂಸದರೆಂದು ಕರೆಯಿಸಿಕೊಳ್ಳುವ ಡಿ.ಸಿ ಶ್ರೀಕಠಪ್ಪ ಅವರು ೧೯೯೮ ರಿಂದ ೨೦೦೪ರವರೆ ಒಟ್ಟು ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ೨೦೦೯ರ ಬಳಿಕ ಕ್ಷೇತ್ರ ವಿಂಗಡಣೆಯಾಗಿ ಉಡುಪಿ ಕ್ಷೇತ್ರದೊಂದಿಗೆ ಸೇರಿಕೊಂಡ ಬಳಿಕ ಜಿಲ್ಲೆಯವರಿಗೆ ಅವಕಾಶ ಸಿಗದೆ ಚಿಕ್ಕಮಗಳೂರಿಗರ ಮೇಲೆ ಮಲತಾಯಿ
ಧೋರಣೆ ತೋರುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು. ಈ ಬಾರಿ ಚಿಕ್ಕಮಗಳೂರಿನವರಿಗೆ ಅವಕಾಶ ಸಿಗುತ್ತಾ ಎಂಬ ಕುತೂಹಲ ರಾಜಕೀಯಾಸಕ್ತರನ್ನು ಮಂತ್ರ ಮುಗ್ಧರನ್ನಾಗಿಸಿದೆ.
ಹತ್ತು ಹಲವು ಸಮಸ್ಯೆ ಹೊಂದಿರುವ ಕಾಫಿ ನಾಡು :ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಮಲೆನಾಡು, ಅರೆ ಮಲೆನಾಡು, ಬಯಲುಸೀಮೆ ಸೇರಿ ಮೂರು ವಿಭಿನ್ನ ಪ್ರದೇಶಗಳನ್ನು ಹೊಂದಿ, ವಿವಿಧ ಸಮಸ್ಯೆಗಳನ್ನು ಒಳಗೊಂಡಿರುವ ಜಿಲ್ಲೆಯಾಗಿದೆ. ಸರಳವಾಗಿ ಹೇಳುವುದಾದರೆ ಕೃಷ್ಣ ಕಣಿವೆ ಪ್ರದೇಶ ಹಾಗೂ ಕಾವೇರಿ ಕಣಿವೆ ಪ್ರದೇಶ ವರ್ಗೀಕರಿಸಲಾಗಿದ್ದು ಕೃಷ್ಣ ಕಣಿವೆಯನ್ನು ಬರ ಪೀಡಿತವೆಂದು, ಕಾವೇರಿ ಕಣಿವೆಯನ್ನು ಮಲೆನಾಡು ಎಂದು ಕರೆಯಲ್ಪಡುತ್ತದೆಯಾದರೂ, ಇಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕಾದರೆ ಇಲ್ಲಿನವರಿಗೇ ಅವಕಾಶ ಕಲ್ಪಿಸುವುದು ಅನಿವಾರ್ಯವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ನನಗೆ ಟಿಕೆಟ್ ನೀಡದೆ ಯಾರಿಗೇ ಕೊಟ್ಟರೂ ಅವರ ಪರವಾಗಿ ಕೆಲಸ ಮಾಡುತ್ತೇ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಿಸುವುದೇ ನಮ್ಮ ಗುರಿ.

– ಡಿ.ಎನ್ ಜೀವರಾಜ್, ಮಾಜಿ ಶಾಸಕ
ಈ ಬಾರಿ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಜಿಲ್ಲೆಯನ್ನು ಕಾಂಗ್ರೆಸ್ ಭದ್ರ ಕೋಟೆ ಮಾಡಲಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಚ್ಛೆ ಹೊಂದಿದ್ದು, ಪಕ್ಷದ ವರಿಷ್ಟರೊಂದಿಗೆ ಮಾತುಕತೆ ಮಾಡಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಅಂತಿಮವಾಗಿ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ.

– ಡಾ. ಕೆ.ಪಿ ಅಂಶುಮOತ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
Chikmagalur
ಬಾಲಕಿ ಮೇಲೆ ಅ*ತ್ಯಾಚಾರ: ಆರೋಪಿಗೆ 20 ವರ್ಷ ಶಿಕ್ಷೆ
 
														ಚಿಕ್ಕಮಗಳೂರು: ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ 20 ವರ್ಷ ಸಜೆ ಮತ್ತು 50,000 ದಂಡ ವಿಧಿಸಲಾಗಿದೆ.
ಮೂಡಿಗೆರೆ ತಾಲೂಕು ಕುಂದೂರು ಗ್ರಾಮದ ಭಟ್ರುಗದ್ದೆ ವಾಸಿ, ಯೋಗೇಶ್ ಕೆ. ಎಸ್. (23 ವರ್ಷ) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಈತನ ವಿರುದ್ಧದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.-1, ಆರೋಪಿಗೆ 20 ವರ್ಷ ಸಜೆ ಮತ್ತು ರೂ. 50,000/- ದಂಡ ವಿಧಿಸಿದೆ.

ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011 ರ ಅಡಿಯಲ್ಲಿ ನೊಂದ ಬಾಲಕಿಗೆ ರೂ. 1,00,000/- ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಮೂಡಿಗೆರೆ ವೃತ್ತದ ಅಂದಿನ ಸಿಪಿಐ ಸೋಮೇಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಭರತ್ ಕುಮಾರ್ ನ್ಯಾಯಾಲಯದಲ್ಲಿ ವಾದ ಮಂಡಿಸಿರುತ್ತಾರೆ. ಮತ್ತು ಎ.ಎಸ್.ಐ. ಯತೀಶ್ ಎಸ್ ನ್ಯಾಯಾಲಯದ ಕರ್ತವ್ಯ ಮತ್ತು ಸಿ.ಪಿ.ಸಿ. ಮನು ಕೆ. ಎಸ್. ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು
Chikmagalur
ಬೀರೂರು ಗುರು ಭವನದಲ್ಲಿ ಪತ್ರಕರ್ತರ ಸಮ್ಮಿಲನ ಮತ್ತು ಪತ್ರಿಕಾ ದಿನಾಚರಣೆ
 
														ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದ ಗುರು ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡೂರು ತಾಲೂಕು ಘಟಕದ ವತಿಯಿಂದ ಪತ್ರಕರ್ತರ ಸಮ್ಮಿಲನ ಮತ್ತು ಪತ್ರಿಕಾ ದಿನಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಮದನ್ ಗೌಡ ಅವರು ನೆರವೇರಿಸಿದರು.

Chikmagalur
ಮರ ಬಿದ್ದು 2 ಮನೆಗಳಿಗೆ ಹಾನಿ
 
														ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಮಳೆ ಆರ್ಭಟ ಮುಂದುವರಿದಿದ್ದು ಸಾಲು ಸಾಲು ಅವಾಂತರಗಳನ್ನ ಸೃಷ್ಟಿಸುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯಡದಂಟೆ ಗ್ರಾಮದಲ್ಲಿ ಭಾರೀ ಬಿರುಗಾಳಿಗೆ ಬೃಹತ್ ಗಾತ್ರದ ಅಕೇಶಿಯ ಮರವೊಂದು ಮುರಿದು ಮನೆಯ ಮೇಲೆ ಬಿದ್ದ ಪರಿಣಾಮವಾಗಿ ಮನ್ವಿತಾ ಅಫ್ರಿದ್ ಮತ್ತು ರಫೀಕ್ ಎಂಬುವವರ ಮನೆಗಳ ಮೇಲೆ ಮರ ಬಿದ್ದಿದ್ದರಿಂದ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಹಾನಿಯಾಗಿದ್ದು. ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೂ ಹಾನಿಯಾಗಿದೆ. ಇನ್ನೂ ವಿದ್ಯುತ್ ಕಂಬಗಳು ಕೂಡಾ ಮುರಿದು ಬಿದ್ದು. ವಿದ್ಯುತ್ ವ್ಯತ್ಯಯ ಉಂಟಾಗಿ ಜನ ಪರದಾಟ ಪಡುವಂತಾಗಿದೆ.
- 
																	   Hassan12 hours ago Hassan12 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ 
- 
																	   Hassan14 hours ago Hassan14 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ. 
- 
																	   Chikmagalur17 hours ago Chikmagalur17 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್ 
- 
																	   Hassan10 hours ago Hassan10 hours agoಹಾಸನ: ದುರ್ನಾಥ ಬೀರುತ್ತಿರುವ ರಜತಾ ಕಾಂಪ್ಲೆಕ್ಸ್ ಹಿಂಭಾಗದ ರಸ್ತೆ 
- 
																	   Kodagu10 hours ago Kodagu10 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ 
- 
																	   Hassan15 hours ago Hassan15 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ 
- 
																	   Hassan13 hours ago Hassan13 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ 
- 
																	   Manglore11 hours ago Manglore11 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ 

 
									 
																	 
									 
																	 
									 
																	 
									 
																	 
									 
																	 
									 
																	 
											 
											