Connect with us

Kodagu

ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದ ಮಹಾಸಭೆ : ಪದಾಧಿಕಾರಿಗಳ ಆಯ್ಕೆ

Published

on

ಮಡಿಕೇರಿ: ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಮಹೇಶ್ವರ ಜೆ.ಎ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಡಿಕೇರಿ ನಗರಸಭೆಯ ಆವರಣದಲ್ಲಿರುವ ವಿಶೇ? ಚೇತನರ ಸಂಘದ ಕಚೇರಿಯಲ್ಲಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಅಧ್ಯಕ್ಷರಾದ ಕಲಾವತಿ ಅವರು ವಿಕಲಚೇತನರಿಗೆ ನಗರಸಭೆಯಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.


ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ ವಿಶೇಷ ಚೇತನರ ಸಂಘಕ್ಕೆ ಕಟ್ಟಡ ಮತ್ತು ಕಚೇರಿಯ ಅಗತ್ಯವಿದ್ದು, ನಗರಸಭೆ ಮೂಲಕ ಸಹಾಯ ಮಾಡುವುದಾಗಿ ತಿಳಿಸಿದರು.
ವಿಕಲಚೇತನರ ಸಬಲೀಕರಣ ಇಲಾಖೆಯ ಅಧಿಕಾರಿ ವಿಮಲಾ ದಿನೇಶ್ ಮಾತನಾಡಿ ಸಂಘವು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪದಾಧಿಕಾರಿಗಳ ಕಾರ್ಯವೈಖರಿ ಶ್ಲಾಘನೀಯವೆಂದರು.


ವಿಕಲಚೇತನರ ಸಂಘದ ಕಾರ್ಯದರ್ಶಿ ಬಿ.ಎಂ.ತಿರುಮಲೇಶ್ವರ ಸ್ವಾಗತಿಸಿ, ಉಪಾಧ್ಯಕ್ಷ ರೇವಣ್ಣ ಕೆ.ಪಿ ವಂದಿಸಿದರು.
ನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮಹೇಶ್ವರ ಜೆ.ಎ ಕಾರ್ಯದರ್ಶಿಯಾಗಿ ಬಿ.ಎಂ.ತಿರುಮಲೇಶ್ವರ, ಉಪಾಧ್ಯಕ್ಷರಾಗಿ ರೇವಣ್ಣ ಕೆ.ಪಿ, ಸಹ ಕಾರ್ಯದರ್ಶಿಯಾಗಿ ಶಿಲ್ಪ, ಖಜಾಂಚಿಯಾಗಿ ಹರೀಶ, ನಿರ್ದೇಶಕರುಗಳಾಗಿ ಹಸನ್ ಕೆ.ಎಂ, ವೀಣಾ ಎಂ.ಎನ್, ಹೇಮಾವತಿ ಪಿ.ಡಿ ಹಾಗೂ ಭಾ? ಎಂ.ಕೆ ಮರು ಆಯ್ಕೆಯಾದರು.
ನೂತನ ನಿರ್ದೇಶಕರುಗಳನ್ನಾಗಿ ಕವಿತಾ ಸಂದೀಪ, ರಾಮಚಂದ್ರ ಗೌಡ, ಮಂದಣ್ಣ ಎಂ.ಪಿ, ಸವಿತಾ ಎಂ.ಎನ್, ಜಿತೇಶ ಹಾಗೂ ಸುಬೇರಾ ಎಂ.ಎಂ ಅವರುಗಳನ್ನು ನೇಮಕ ಮಾಡಲಾಯಿತು.

Continue Reading

Kodagu

ಮೇ 16 ರಿಂದ 25 ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಪಂದ್ಯಾವಳಿ

Published

on

ಮಡಿಕೇರಿ : ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ ೧೬ ರಿಂದ ೨೫ರ ವರೆಗೆ ಡಿ ಶಿವಪ್ಪ ಸ್ಮಾರಕ ರಾಜ್ಯಮಟ್ಟದ ಗೋಲ್ಡ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎಂ.ಆಲಿಕುಟ್ಟಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ ೨೬ನೇ ವರ್ಷದ ನಾಕೌಟ್ ಮಾದರಿಯ ಪುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, ಗೋಲ್ಡ್‌ಕಪ್‌ಗಾಗಿ ೨೫ ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದರು.


ಪಂದ್ಯಾವಳಿಯ ಪ್ರಥಮ ಮತ್ತು ದ್ವಿತೀಯ ವಿಜೇತ ತಂಡಕ್ಕೆ ಡಿ.ವಿನೋದ್ ಶಿವಪ್ಪ ಮತ್ತು ಅವರ ಪುತ್ರ ವಿಶಾಲ್ ಶಿವಪ್ಪ ಅವರು ಡಿ.ಶಿವಪ್ಪ ಸ್ಮರಣಾರ್ಥವಾಗಿ ೧ ಲಕ್ಷ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನವಾಗಿ ೫೦ ಸಾವಿರ ನಗದು ಮತ್ತು ಟ್ರೋಫಿ ಜೊತೆಗೆ ವೈಯಕ್ತಿಕ ಬಹುಮಾನವನ್ನು ನೀಡಲಿದ್ದಾರೆ ಎಂದು ಹೇಳಿದರು.
ಪ್ರತಿ ನಿತ್ಯ ಮಧ್ಯಾಹ್ನ ೩ ಗಂಟೆಯಿಂದ ಎರಡು ಪಂದ್ಯಾವಳಿ ನಡೆಯಲಿದ್ದು, ಭಾನುವಾರ ೩ ಪಂದ್ಯ ಆಯೋಜಿಸಲಾಗಿದೆ. ಮೇ ೨೪ ರಂದು ಸೆಮಿಫೈನಲ್ ಪಂದ್ಯ ಜರುಗಲಿದೆ ಎಂದು ತಿಳಿಸಿದರು.
ಕೊಡಗಿನ ಕೊಲ್ಕೋತ್ತಾ ಎಂದೇ ಖ್ಯಾತವಾದ ಸುಂಟಿಕೊಪ್ಪಕ್ಕೆ ಪುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಸಿದ್ಧಿಯಿದೆ. ಪುಟ್ಬಾಲ್ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ೩೮ ವರ್ಷದ ಹಿಂದೆ ಸುಂಟಿಕೊಪ್ಪದಲ್ಲಿ ಸ್ಥಾಪನೆಯಾದ ಬ್ಲೂ ಬಾಯ್ಸ್ ಯುವಕ ಸಂಘ ಇದೀಗ ಸಾಕಷ್ಟು ಸಾಧನೆಗಳೊಂದಿಗೆ ಮತ್ತೊಂದು ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಸಜ್ಜುಗೊಂದಿದೆ. ಸುಂಟಿಕೊಪ್ಪದಲ್ಲಿ ಪುಟ್ಬಾಲ್ ಪಂದ್ಯಾಟಕ್ಕೆ ೬೬ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವುದು ಸುಂಟಿಕೊಪ್ಪದ ಹೆಗ್ಗಳಿಕೆಯಾಗಿದೆ ಎಂದರು.


ಸುಂಟಿಕೊಪ್ಪದಲ್ಲಿ ಪುಟ್ಬಾಲ್ ಪಂದ್ಯಾಟಕ್ಕೆ ಪ್ರೋತ್ಸಾಹ ನೀಡಿದವರಲ್ಲಿ ಬೆಟ್ಟಗೇರಿ ಎಸ್ಟೇಟ್ ಮಾಲೀಕ ದೊಡ್ಡಮನೆ ಶಿವಪ್ಪ ಪ್ರಮುಖರಾಗಿದ್ದರು. ಅವರ ಕಾಲಾನಂತರ ಶಿವಪ್ಪ ಅವರ ಪುತ್ರ ವಿನೋದ್ ಶಿವಪ್ಪ ತನ್ನ ತಂದೆ ಡಿ.ಶಿವಪ್ಪ ಸ್ಮರಣಾರ್ಥ ಬ್ಲೂಬಾಯ್ಸ್ ಯುವ ಸಂಘಕ್ಕೆ ಪ್ರತಿವರ್ಷ ಟ್ರೋಫಿ, ನಗದು ಬಹುಮಾನ ನೀಡುವ ಮೂಲಕ ಪುಟ್ಬಾಲ್ ಪಂದ್ಯಾವಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸುಂಟಿಕೊಪ್ಪ ವ್ಯಾಪ್ತಿಯ ಅನೇಕ ದಾನಿಗಳು ಪ್ರಾಯೋಜರು ಪುಟ್ಬಾಲ್ ಪಂದ್ಯಾವಳಿಗೆ ಸಹಕಾರ ನೀಡುತ್ತಾ ಕ್ರೀಡಾ ನಿರಂತರತೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು.
ಪ್ಲಾಂಟರ್ ಹಾಗೂ ದಾನಿಗಳಾದ ಡಿ. ವಿನೋದ್ ಶಿವಪ್ಪ ಮಾತನಾಡಿ, ೧೯೯೬ ರಿಂದ ಸುಂಟಿಕೊಪ್ಪದಲ್ಲಿ ಡಿ.ಶಿವಪ್ಪ ಸ್ಮಾರಕ ಪುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಾ ಬರುತ್ತಿರುವ ಬ್ಲೂ ಬಾಯ್ಸ್ ಯುವಕ ಸಂಘ ಮಕ್ಕಳಿಂದ ಹಿರಿಯವರೆಗೆ ಈ ಪಂದ್ಯಾವಳಿ ಮೂಲಕ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಪುಟ್ಬಾಲ್ ಕ್ರೀಡೆಯತ್ತ ಆಕರ್ಷಣೆ ಮೂಡಿಸುವಲ್ಲಿ ಸಹಕಾರಿಯಾಗಿದೆ. ಪ್ರತೀ ವರ್ಷ ಡಿ.ಶಿವಪ್ಪ ಸ್ಮಾರಕ ಪುಟ್ಬಾಲ್ ಪಂದ್ಯಾವಳಿಯನ್ನು ಸಾವಿರಾರು ಕ್ರೀಡಾ ಪ್ರೇಮಿಗಳು ವೀಕ್ಷಿಸುತ್ತಾ ಕ್ರೀಡಾ ಮನರಂಜನೆ ಪಡೆಯುತ್ತಿದ್ದಾರೆ ಎಂದರು.


ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ತಮಿಳುನಾಡು, ಮಂಡ್ಯ, ಮೈಸೂರು, ಕೇರಳ ಕ್ಯಾಲಿಕಟ್, ಮಂಗಳೂರು, ಕೂತುಪರಂಬ ಕಣ್ಣೂರು, ಕುಂಬಳೆ, ಉಪ್ಪಳ, ಊಟಿ, ತಿರುಚ್ಚಿ, ಕೆಜಿಎಫ್‌ನ ವಾರಿಯರ್ಸ್ ಫುಟ್ಬಾಲ್ ಕ್ಲಬ್, ಬೈಲಕುಪ್ಪ, ಕೊಡಗಿನ ಪ್ರತಿಷ್ಟಿತ ತಂಡಗಳಾದ ಕುಶಾಲನಗರ, ಮಿಡ್ ಸಿಟಿ, ಪನ್ಯ, ಬೆಟ್ಟಗೇರಿ, ಗೋಣಿಕೊಪ್ಪ, ಕೊಡಗರಹಳ್ಳಿಯ ನೇತಾಜಿ ಯುವಕ ಸಂಘ, ಗದ್ದೆಹಳ್ಳದ ಎಮಿಟಿ ತಂಡಗಳೂ ಸೇರಿದಂತೆ ಅತಿಥೇಯ ಸುಂಟಿಕೊಪ್ಪದ ಬ್ಲೂಬಾಯ್ಸ್ ಯೂತ್ ತಂಡವೂ ಪಾಲ್ಗೊಳ್ಳಲಿದೆ ಎಂದರು.
ಸುಂಟಿಕೊಪ್ಪ ವಾಹನ ಚಾಲಕ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮನ್ ಮಾತನಾಡಿ, ಮೇ ೧೬ ರಂದು ಮಧ್ಯಾಹ್ನ ೩ ಗಂಟೆಗೆ ಪಂದ್ಯಾವಳಿಯನ್ನು ಕೊಡಗಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಮತ್ತು ಕುಶಾಲನಗರ ಉಪವಿಭಾಗದ ಉಪ ಅಧೀಕ್ಷಕರಾದ ಪಿ.ಚಂದ್ರಶೇಖರ್ ಹಾಗೂ ಡಿ.ವಿಶಾಲ್ ಶಿವಪ್ಪ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಈಗಾಗಲೇ ಬ್ಲೂ ಬಾಯ್ಸ್ ಯುವಕ ಸಂಘವು ಅನೇಕ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸಂತ್ರಸ್ಥರಿಗೆ ನೆರವು ನೀಡಿದ ಸಂಘದ ಸದಸ್ಯರು, ಹಲವಾರು ವರ್ಷಗಳಿಂದ ರಕ್ತದಾನ ಶಿಬಿರ, ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಪ್ರತೀ ವರ್ಷ ಒಂದಲ್ಲ ಒಂದು ರೀತಿಯ ಕ್ರೀಡಾ ಚಟುವಟಿಕೆ. ರಾಷ್ಟ್ರೀಯ ಉತ್ಸವಗಳು ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಆಟಗಾರರು ರಾಜ್ಯಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ವಿಶೇಷ. ಅಲ್ಲದೇ ಸಂಘದ ಸದಸ್ಯರಲ್ಲಿಯೇ ಅನೇಕರು ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿರುವುದು ಕೂಡ ಗಮನಾರ್ಹ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಟಿ.ವಿ.ಪ್ರಸನ್ನ, ಉಪಾಧ್ಯಕ್ಷ ಎನ್.ಎಸ್.ಆದಿಶೇಷ, ಸಹಕಾರ್ಯದರ್ಶಿ ಯು.ಎಂ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

Continue Reading

Kodagu

ಕತೆ ಬರೆಮೊ ಬನ್ನಿ : ಅರೆಭಾಷೆಲಿ ಮಕ್ಕಳ ಕಥಾ ಕಾರ್ಯಾಗಾರಕ್ಕೆ ಆಹ್ವಾನ

Published

on

ಮಡಿಕೇರಿ : ಅರೆಭಾಷೆಲಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಳ ಕಥಾ ರಚನೆ ಕಾರ್ಯಾಗಾರ ನಡೆಯಲಿದೆ.
ಮೇ, 30 ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯುವ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಅರೆಭಾಷೆ ಕತೆಗಾರ ಡಾ ಪುನೀತ್ ರಾಘವೇಂದ್ರ ಕುಂಟುಕಾಡು ಹಾಗೂ ಚಿತ್ರಕಲಾ ಶಿಕ್ಷಕ, ತರಬೇತುದಾರ ಪ್ರಸನ್ನ ಐವರ್ನಾಡು ಭಾಗವಹಿಸಲಿದ್ದಾರೆ.


ಕಾರ್ಯಾಗಾರದಲ್ಲಿ ಹನ್ನೆರಡರಿಂದ, ಹದಿನೆಂಟು ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಉಚಿತ ತರಬೇತಿಯಾಗಿದ್ದು ಆಸಕ್ತ ಮೂವತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಭಾಗವಹಿಸಿದ ಮಕ್ಕಳಿಗೆ ಅಕಾಡೆಮಿಯ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ.
ಕಥಾ ಕಾರ್ಯಾಗಾರದಲ್ಲಿ ಅರೆಭಾಷೆಯಲ್ಲಿ ಕಥೆ ಬರೆಯುವ ಶೈಲಿ, ಓದುವ ಶೈಲಿ, ಕಥೆಯ ಹುಡುಕಾಟ, ಕಥೆಯ ಪಾತ್ರಗಳು, ನೀತಿ, ಜೊತೆಗೆ ಕಥೆಗೆ ಸಂಬಂಧಪಟ್ಟ ಚಿತ್ರಗಳ ಮೂಲಕ ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
ಹೆಸರು ನೋಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿಕೃಪಾ ರಾಜಾಸೀಟ್ ರಸ್ತೆ ಮಡಿಕೇರಿ-571201 ದೂರವಾಣಿ: 9611355496, 6363783983 ಗೆ ಸಂಪರ್ಕಿಸಲು ಕೋರಲಾಗಿದೆ.

Continue Reading

Kodagu

ಸಕಾಲ ಕಾಯ್ದೆಯಡಿ ಅರ್ಜಿ ಕಾಲಮಿತಿಯಲ್ಲಿ ಮಾಹಿತಿ ನೀಡಿ: ವೆಂಕಟ್ ರಾಜಾ

Published

on

ಮಡಿಕೇರಿ ಮೇ.14 :-ವಿವಿಧ ಇಲಾಖೆಗೆ ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.


ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಸತಾಯಿಸುವುದು ಬೇಡ ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
‘ಸಕಾಲ ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಯಾವ ರೀತಿ ಭಾವಿಸಿಕೊಳ್ಳಬೇಕು ಎಂಬ ಬಗ್ಗೆ ತಾವೇ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಚ್ಚರಿಸಿದರು.’


ಸಕಾಲ ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡದಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಸಮಯವನ್ನು ವ್ಯರ್ಥ ಮಾಡದೆ ಕಚೇರಿ ಕೆಲಸವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ಕರ್ತವ್ಯದ ದಿನಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ (ಮಧ್ಯಾಹ್ನದ ಊಟದ ಸಮಯ ಹೊರತುಪಡಿಸಿ) ಕಚೇರಿ ಕೆಲಸ ಮಾಡಿದ್ದಲ್ಲಿ ಎಷ್ಟೇ ಒತ್ತಡ ಇದ್ದರೂ ಸಹ ಸಾರ್ವಜನಿಕ ಕೆಲಸಗಳನ್ನು ಪೂರ್ಣಗೊಳಿಸಬಹುದು, ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕು. ಸರ್ಕಾರ ಕೇಳುವ ಮಾಹಿತಿಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.


ಇದೇ ಮೇ ಕೊನೆ ವಾರದಲ್ಲಿ ಜಿಲ್ಲೆಗೆ ‘ಮುಂಗಾರು’ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಕಳೆದ ಬಾರಿಯಂತೆಯೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು. ದಾಖಲಾತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಮಹಾಲೇಖಪಾಲಕರ ಆಡಿಟ್ ಕಂಡಿಕೆಗಳಿಗೆ ಮಾಹಿತಿ ನೀಡಲು ಬಾಕಿ ಇದ್ದು, ಕೂಡಲೇ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ವಿವಿಧ ಇಲಾಖೆಗಳು ಈಗಿನಿಂದಲೇ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಜೊತೆಗೆ ಪ್ರಗತಿ ಸಾಧಿಸಬೇಕು ಎಂದರು.
ವಿವಿಧ ಇಲಾಖೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ನಿವೇಶನ ಗುರುತು ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ಪಡೆದರು.


ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಸಂಬಂಧಿಸಿದಂತೆ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪಕಾರ್ಯದರ್ಶಿ ಅಬ್ದುಲ್ ನಬೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕಾರ್ಮಿಕ ಅಧಿಕಾರಿ ಕಾವೇರಿ, ತಹಶೀಲ್ದಾರರಾದ ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಹೇಮಂತ್ ಕುಮಾರ್, ತಾ.ಪಂ.ಇಒಗಳು, ಕೃಷಿ, ಸೆಸ್ಕ್, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಇತರರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

Continue Reading

Trending

error: Content is protected !!