Location
ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ
ಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. ವೇದಿಕೆ ಮೇಲಿರುವ ಮತ್ತು ಸಭೆಯಲ್ಲಿ ಭಾಗವಹಿಸಿದ ಎಲ್ಲ ಹಿರಿಯರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಶಕ್ತಿ ತುಂಬಲು ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ಮುಕ್ತವಾಗಿ ಕೊಡಬೇಕು ಎಂದು ವಿನಂತಿಸಿದರು.
ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಹಿರಿಯರು ಕಾರಣಕರ್ತರಾಗಿದ್ದಾರೆ. ಅಂಥ ಎಲ್ಲ ಹಿರಿಯರು ಇಲ್ಲಿದ್ದಾರೆ. ಎಲ್ಲರ ಪರಿಶ್ರಮ ಪಕ್ಷದ ಬೆಳವಣಿಗೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ನಮಗೆ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ನಮಗೆ ಗೋಚರಿಸುವುದಿಲ್ಲ. ಬಿಜೆಪಿಗೆ ಸುಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಿದರು.
ಪಕ್ಷದ ರಾಷ್ಟ್ರದ ಹಿರಿಯರ ಆಶೀರ್ವಾದದಿಂದ ಈ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಸಹಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಳ್ಳೋಣ. ಲೋಕಸಭೆ ಚುನಾವಣೆ ಮಾತ್ರವಲ್ಲದೆ, ನಂತರ ಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನ ಪರಿಷತ್ ಸೇರಿ ಎಲ್ಲ ಚುನಾವಣೆಗಳಲ್ಲಿ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲೇಬೇಕಿದೆ ಎಂದು ತಿಳಿಸಿದರು.
ಈ ಗುರಿ ತಲುಪಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು.
ಈ ಸಭೆಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Kodagu
ಹುಲಿ ದಾಳಿಗೆ ಕರು ಬಲಿ

ಸಿದ್ದಾಪುರ :-
ಹುಲಿ ದಾಳಿಗೆ ಒಂದುವರೆ ವರ್ಷದ ಕರು ಬಲಿಯಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಗ್ರಾಮದ ಸಿ. ಟಿ. ಪೊನ್ನಪ್ಪ ಎಂಬುವರ ಮೇಯಲು ಬಿಟ್ಟ ಕರು ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ.ಕಳೆದ ತಿಂಗಳ ಅಂತರದಲ್ಲಿ ಮಾಲ್ದಾರೆ,ಚೆನ್ನಯ್ಯನ ಕೋಟೆ , ಗ್ರಾಮ ವ್ಯಾಪ್ತಿಯಲ್ಲಿ ಐದು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ ಇದರಿಂದ ಸ್ಥಳೀಯರು ಜೀವಭಯದಲ್ಲಿ ಸಂಚಾರ ಮಾಡುವಂತಾಗಿದೆ.
ಹುಲಿಯನ್ನು ಶೀಘ್ರ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಈ ಭಾಗದಲ್ಲಿ ಹುಲಿಯ ಚಲನವಲನ ಪರಿಶೀಲಿಸಲು ಕ್ಯಾಮರಾ ಅಳವಡಿಸಲಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಶನಿವಾರವೂ ಕಾರ್ಯಾಚರಣೆ ನಡೆಯಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರೆ
ಕಾರ್ಯಾಚರಣೆಯಲ್ಲಿ ಆರ್,ಎಫ್,ಒ, ಗಂಗಾಧರ್, ನೇತೃತ್ವದಲ್ಲಿ ಡಿಆರ್‌ಎಫ್‌ಒ ಶಶಿ,
ರಾಜೇಶ್, ವಾಚರ್ ಸುನೀಲ್,
ಆರ್‌ಆರ್‌ಟಿ ತಂಡದ ಶಂಕರ್,ಮುತ್ತ, ರಂಜಿತ್, ಭರತ್, ರೋಷನ್, ಪ್ರದೀಪ್, ಇದ್ದರು
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
-
Mandya21 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Kodagu17 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar21 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Chamarajanagar21 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu14 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar12 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur15 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Chikmagalur14 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.