Mysore
ಕ್ಷೇತ್ರದಲ್ಲಿ ತಾವು ಪಡೆದ ಲೀಡ್, ಮತ್ತೊಮ್ಮೆ ಪಡೆಯಲು ತಂತ್ರಗಾರಿಕೆ ಯತ್ನ

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ಈ ಬಾರಿ ನಡೆಯುವ ಲೋಕಸಭೆಯ ಚುನಾವಣೆಯು ಈ ಕ್ಷೇತ್ರದ ಪ್ರತಿಯೊಬ್ಬ ಕಾಂಗ್ರೇಸ್ ಶಾಸಕರಿಗೂ ಪ್ರತಿಷ್ಠೆಯಾಗಿದ್ದು, ಈ ಹಿನ್ನಲೆಯಲ್ಲಿ ಹಾಲಿ ಕೆ.ಆರ್.ನಗರದ ಶಾಸಕ ಡಿ.ರವಿಶಂಕರ್ ಕೂಡ ತಾವು ಪಡೆದ ಲೀಡ್ ಅನ್ನು ಕಾಂಗ್ರೇಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಕೊಡಿಸಲು ತಮ್ಮದೇ ತಂತ್ರ ರೂಪಿಸುತ್ತಿದ್ದು ಈಗಾಗಲೇ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಕರೆಸಿ, ದೇವಿ ತಂದ್ರೆ ಗ್ರಾಮದ ದೇವಿರಮ್ಮ ದೇವಾಲಯದಲ್ಲಿ ಪ್ರಥಮ ಪೂಜೆ ಸಲ್ಲಿಸಿ, ಅಲ್ಲಿಂದಲೇ ಆರಂಭಿಸಿ ಪ್ರಾರಂಭದಲ್ಲಿಯೇ ಕೈ ಕಾರ್ಯಕರ್ತರಿಗೆ ಪರಿಚಯ ಮಾಡಿಸುವ ಕಾರ್ಯಕ್ರಮವನ್ನು ಮಾಡಿದ್ದು, ಮುಂದೆ ತಮ್ಮ ಗೆಲುವಿನಂತೆ ಪಡೆದ ಮತಗಳನ್ನು ಸ್ಟಾರ್ ಚಂದ್ರು ಅವರಿಗೆ ಕೊಡಿಸಲು ತಯಾರಿ ನಡೆಸಿದ್ದು ಇದಕ್ಕೆ ಇವರ ತಂದೆ ದೊಡ್ಡಸ್ವಾಮೇಗೌಡ ಸಾಥ್ ನೀಡುತ್ತಿದ್ದಾರೆ.
ಮತ್ತೊಮ್ಮೆ ಹೈವೊಲ್ಟೈಜ್ ಕದನವಾಗಿ ಗೋಚರಿಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಸ್ಪರ್ಧೆ, ಈಗ ಈ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಉಳಿವಿಗೆ ಅನಿವಾರ್ಯವೇ..? ಹೌದು ಎನ್ನುತ್ತಿದೆ ಈ ಕ್ಷೇತ್ರದ ರಾಜಕೀಯ ಲೆಕ್ಕಚಾರಗಳು…..
ಈ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಡ್ಯ, ಮದ್ದೂರು,ನಾಗಮಂಗಲ, ಮಳವಳ್ಳಿ, ಕೆ.ಆರ್.ಪೇಟೆ,ಶ್ರೀರಂಗಪಟ್ಟಣ, ಪಾಂಡವಪುರ ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರಗಳು ಬರಲಿದ್ದು ಇಲ್ಲಿ ಕೆ.ಆರ್.ಪೇಟೆ ಕ್ಷೇತ್ರವನ್ನು ಬಿಟ್ಟರೆ ಕ್ಷೇತ್ರಗಳು ಕಾಂಗ್ರೇಸ್ ತೆಕ್ಕೆಯಲಿದ್ದು ಪಾಂಡವಪುರ ಕೂಡ ಕೈ ಬೆಂಬಲದಲ್ಲಿದ್ದು ಮುಂದಿನ ದಿನಗಳಲ್ಲಿ ಇಲ್ಲಿ ಜೆಡಿಎಸ್ ಮೇಲೆ ಏಳಲು ಕುಮಾರಸ್ವಾಮಿ ಅವರ ಸ್ಪರ್ಧೆ ಮತ್ತು ಗೆಲುವು ಅನಿವಾರ್ಯತೆಗೆ ಸಿಲುಕಿದೆ.
ಜೆಡಿಎಸ್ ಭದ್ರ ಕೋಟೆಯಲ್ಲಿ ಕಳೆದ ವಿಧಾನ ಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿದರು ತಮ್ಮ ಪುತ್ರ ನಿಖಿಲ್ ಅವರು 2 ಲಕ್ಷ ಮತಗಳ ಅಂತರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ದ ಸೋತಿದ್ದು ಮತ್ತು ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಈ ಲೋಕಸಭೆ ವ್ಯಾಪ್ತಿಯಲ್ಲಿ ಸೋತಿದ್ದು ಕುಮಾರಸ್ವಾಮಿ ಅವರಿಗೆ ನುಂಗಲಾರದ ತುಪ್ಪವಾಗಿದೆ.
ಈಗಾಗಲೇ ಈ ಕ್ಷೇತ್ರದ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಈ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಲು ನಿಖಿಲ್ , ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೆಸರು ಕೇಳಿ ಬಂದಿದ್ದರು ಸಹ ಕಳೆದ ಲೋಕ ಸಭಾ ಚುನಾವಣೆಯಲ್ಲಿ ಅದ ಸೋಲು ಮತ್ತೆ ಆಗ ಬಾರದು ಎನ್ನುವ ಕಾರಣಕ್ಕೆ ಕುಮಾರಸ್ವಾಮಿ ಸ್ಪರ್ದೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಮುಂದಿನ ವಿಧಾನ ಸಭೆ ಚುನಾವಣೆಗೆ ಇನ್ನು ಬರೋಬ್ಬರಿ 4 ವರ್ಷಗಳಿದ್ದು ಅಲ್ಲಿಯ ತನಕ ಈ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ ಜೆಡಿಎಸ್ ಅಸ್ಥಿತ್ವ ಉಳಿಯ ಬೇಕಾದರೇ ಸೋತವರಿಗೆ ಶಕ್ತಿ ತುಂಬ ಬೇಕಾದರೇ ಕುಮಾರಸ್ವಾಮಿ ಅವರ ಲೋಕಸಭೆಯ ಚುನಾವಣೆಯಲ್ಲಿ ಗೆಲುವು ಬೇಕಾಗಿರುವುದರಿಂದ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು,ಡಿ.ಸಿ.ತಮ್ಮಣ್ಣ,ಮಾಜಿ ಶಾಸಕರಾದ ಸಾ.ರಾ.ಮಹೇಶ್,ಅನ್ನದಾನಿ,ರವಿಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಶಾಸಕ ಮಂಜುನಾಥ್ ಇವರ ಸ್ಪರ್ದೆಗೆ ಒತ್ತಡ ತಂದಿರುವುದು ಗುಟ್ಟಾಗಿ ಉಳಿದಿಲ್ಲ.
ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಶಾಸಕರಾದ ಡಿ.ರವಿಶಂಕರ್ ಅವರನ್ನು ಹೊರತು ಪಡಿಸಿ ಉಳಿದ ಶಾಸಕರಾದ ಚೆಲುವರಾಯಸ್ವಾಮಿ,ಕದಲೂರು ಉದಯ್, ರವಿ ಕುಮಾರ್ ಗಣಿಗ, ರಮೇಶ್ ಬಂದಿಸಿದ್ದೇಗೌಡ,ನರೇಂದ್ರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದೊಂದಿಗೆ ರಾಜಕೀಯ ಜಿದ್ದು ಬೆಳೆಸಿ ಕೊಂಡಿದ್ದು ಕುಮಾರಸ್ವಾಮಿ ಅವರನ್ನು ಹೊರತು ಪಡಿಸಿ ಬೇರೆ ಯಾರು ನಿಂತರು ಅವರನ್ನು ಸೋಲಿಸುವ ಚಾಣಾಕ್ಷತೆ ಇವರಲ್ಲಿ ಇರುವುದರಿಂದ ಕುಮಾರಸ್ವಾಮಿ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಆಗಬೇಕಾದ ಸ್ಥಿತಿಗೆ ಸಿಲುಕಿದ್ದಾರೆ.
ಈಗಾಗಲೇ ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆಯ ನೀಡಿರುವ ವರದಿಯ ಪ್ರಕಾರ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಯಾರೇ ನಿಂತರು ಗೆಲ್ಲುವ ಅವಕಾಶ ಶೇ.50 ರಿಂದ 55 ಅಷ್ಟೆ ಇದ್ದು, ಕುಮಾರ ಸ್ವಾಮಿ ಅವರು ನಿಂತರೇ ಮಾತ್ರ 65 ರಿಂದ 70 ಶೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿರುವುದರಿಂದ ಕುಮಾರಸ್ವಾಮಿ ಅವರು ಈ ಕ್ಷೇತ್ರದಿಂದ ಸ್ಪರ್ದೆ ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಇದರ ಜೊತಗೆ ಬಿಜೆಪಿ ಚಾಣಾಕ್ಷ ಅಮಿತ್ ಷಾ ಅವರು ಖುದ್ದು ಕುಮಾರಸ್ವಾಮಿ ಅವರಿಗೆ ನೀವೆ ಮಂಡ್ಯ ಕ್ಷೇತ್ರದಿಂದ ನಿಲ್ಲ ಬೇಕು ಎಂದು ಹೇಳಿರುವ ಪರಿಣಾಮವಾಗಿ ಇಲ್ಲಿಂದ ಕುಮಾರಸ್ವಾಮಿ ಅವರೇ ಸ್ಪರ್ದಿಸುತ್ತಾರ ಇಲ್ಲ ರಾಜ್ಯ ರಾಜಕಾರಣದಲ್ಲಿಯೇ ಉಳಿಯುತ್ತಾರಾ..? ಎಂಬುದನ್ನು ಜೆಡಿಎಸ್ ಕಾರ್ಯಕರ್ತರು ಎದುರು ನೋಡುತ್ತಿದ್ದು, ಇದಕ್ಕೆ ತಾವು ಪ್ರಕಟಿಸುವ ತಿರ್ಮಾನ, ನಂತರವೇ ಮಂಡ್ಯ ಕ್ಷೇತ್ರಕ್ಕೆ ಯಾರು ಜೆಡಿಎಸ್ ಅಭ್ಯರ್ಥಿ ಯಾರು ಅಗಲಿದ್ದಾರೆ ಎಂಬುದು ತಿಳಿಯಲಿದೆ.
ಸಾ.ರಾ.ಪ್ರಚಾರಕ್ಕೆ ಬರುತ್ತಾರಾ…?
ಮಂಡ್ಯ ಕ್ಷೇತ್ರದ ವ್ಯಾಪ್ತಿಗೆ ಕೆ.ಆರ್.ನಗರ ಕ್ಷೇತ್ರವು ಬರಲಿದ್ದು ಇಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಜೆಡಿಎಸ್ ಪರವಾಗಿ ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎಂಬ ಗೊಂದಲಕ್ಕೆ ಇಲ್ಲಿನ ಜೆಡಿಎಸ್ ಕಾರ್ಯಕರ್ತರು ಒಳಗಾಗಿದ್ದಾರೆ.
ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸೋತ ನಂತರ ಕೆ.ಆರ್.ನಗರ ಕ್ಷೇತ್ರದಲ್ಲಿ ಹೆಚ್ಚಾಗಿ ಕಾಣಿಸಿ ಕೊಳ್ಳದ ಸಾ.ರಾ.ಮಹೇಶ್ ಅವರು ಲೋಕಸಭೆ ಚುನಾವಣೆ ಘೋಷಣೆ ಆದರೂ ಸಹ ಇದುವರೆಗೂ ಒಂದೇ ಒಂದು ಸಲ ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ಮುಂದಾಗದೇ ಇರುವುದರಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮುಂದೇನು ಮಾಡುವುದು ಎಂದು ಸಾಕಷ್ಟು ಗೊಂದಲಕ್ಕೆ ಒಳಗಾಗಿ ಇಕ್ಕಟ್ಟಿಗೆ ಸಿಲುಕಿದ್ದಾರೆ.
ದಿನೇ ದಿನೇ ಕುತೂಹಲದಲ್ಲಿ ಕಾವೇರುತ್ತಿರುವ ಕ್ಷೇತ್ರ ಯಾರು ಯಾವ ರೀತಿಯಲ್ಲಿ ತಂತ್ರ – ಪ್ರತಿ ತಂತ್ರ ರೂಪಿಸುವರು ಎಂದು ಕಾದು ನೋಡಬೇಕಾಗಿದೆ
Mysore
ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್‌ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Mysore
ಎಚ್‌ಸಿಎಂ ಮನೆಗೆ ದಸಂಸ ಮುಖಂಡರಿಂದ ಮುತ್ತಿಗೆ ಯತ್ನ

ಮೈಸೂರು: ಸಚಿವ ಡಾ. ಹೆಚ್ ಸಿ ಮಹದೇವಪ್ಪ ನಿವಾಸಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರರವನ್ನು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಬೇಸತ್ತು ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ ಮಹದೇವಪ್ಪ ನಿವಾಸಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.
ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು ಎಲ್ಲರನ್ನು ಪೊಲೀಸರು ಬಂಧಿಸಿದ್ದಾರೆ.
Mysore
ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿ

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್,ಸದಸ್ಯರಾದ ಗೌತಮ್ ಸಾಲೇಚ ಮತ್ತು ರಿತೇಶ್ ಗೌಡ ಭೇಟಿ ಮಾಡಿ ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಬೇಸ್ ಮೆಂಟ್ನಲ್ಲಿ ನಿಲ್ಲಿಸಿದ್ದು ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿಸಿದರು .
ಕಾಮಗಾರಿ 2019 ರಲ್ಲಿ ಆದೇಶ ಪಡೆದ ಗುತ್ತಿಗೆದಾರರು 2021 ರಲ್ಲಿ ಬೇಸ್ ಮೆಂಟ್ ವರೆಗೆ ಮಾತ್ರ ಮಾಡಿ ನಿಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಮಳೆಗೆ ಶಿಥಿಲವಾಗುತ್ತಿದೆ. ಕೇಂದ್ರ ಸರ್ಕಾರದ 3 ಕೋಟಿ ರೂಪಾಯಿ
ರಾಜ್ಯ ಸರ್ಕಾರದ 1 ಕೋಟಿ ರೂಪಾಯಿ ಮೈಸೂರು ಕೈಗಾರಿಕೆಗಳ ಸಂಘದ 50 ಲಕ್ಷ ರೂಪಾಯಿ ಕೆ.ಐ.ಎ.ಡಿ.ಬಿ.ಗೆ ವಿ.ಐ.ಪಿ.ಸಿ ಮೂಲಕ ನೀಡಿ 20020 ರಲ್ಲಿ ಕಟ್ಟಡ ಪೂರ್ಣ ಗೊಳಿಸುವ ಭರವಸೆ ಹುಸಿಯಾಗಿದೆ.
ಕೂಡಲೇ ಕಾಮಗಾರಿ ಪುನಾರಂಬಿಸುವಂತೆ ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯ ನಿರ್ವಾಹಕ ಮಹೇಶ್ ಅವರಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೂರವಾಣಿಯಲ್ಲಿ ಸೂಚಿಸಿದರು.
ಜಿತೋ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಸ್ಟಾರ್ ಏರ್ ಲೈನ್ಸ್ ಮಾಲೀಕ ಶ್ರೀ ಸಂಜಯ್ ಗೋದಾವತ್ ಮೈಸೂರಿನಲ್ಲಿ ಅವರ ವಿಮಾನ ಸೇವೆಯನ್ನು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಪೂರ್ಣಗೊಂಡ ಬಳಿಕ ಒದಗಿಸಲಾಗುವುದು ಎಂದು ತಿಳಿಸಿದ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಇತು.
ಇದಕ್ಕೆ ಪ್ರಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು ವಿಮಾನಗಳ ಸದ್ಭಳಕೆ ದಿಕ್ಕಿನಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಸೂಕ್ತ ಪ್ರಚಾರ ಮಾಡಬೇಕೆಂದರು.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya11 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ
-
Hassan14 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ